ಬೆಳಗಾವಿ: ಜಿಲ್ಲೆಯಲ್ಲಿ ಪೂರ್ಣ ಪ್ರಮಾಣ ಮನೆ ಬಿದ್ದವರಿಗೆ 24 ಗಂಟೆ ಒಳಗೆ ಪರಿಹಾರದ ಹಣ ಕೊಡಲಾಗುತ್ತಿದೆ. ರಾಜ್ಯದಲ್ಲೇ ಇದು ಅತ್ಯಂತ ವೇಗವಾಗಿ ನಡೆದ ಕೆಲಸ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ವಿಧಾನ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, 2019ರಲ್ಲಿ 46,959 ಮನೆಗಳಿಗೆ ₹ 828.67 ಪರಿಹಾರ ಕೊಟ್ಟಿದ್ದೇವೆ. 2019ರಲ್ಲಿ₹ 120.05 ಕೋಟಿ ಕೊಟ್ಟಿದ್ದೇವೆ. ಇಷ್ಟು ಪ್ರಮಾಣದಲ್ಲಿ ಪರಿಹಾರವನ್ನು 75 ವರ್ಷದಲ್ಲಿ ಯಾರೂ …
Read More »‘ಸಂಕಷ್ಟದಲ್ಲೂ ಸಮಚಿತ್ತದ ಆಲೋಚನೆ ಮಾಡಿ’
ಬೆಳಗಾವಿ: ನಮ್ಮಲ್ಲಿನ ಸಮಚಿತ್ತದ ಯೋಚನೆಗಳು ಆತ್ಮಹತ್ಯೆಯ ವಿಚಾರಗಳನ್ನು ದೂರಗೊಳಿಸುತ್ತವೆ ಎಂದು ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ಅಭಿಪ್ರಾಯ ಪಟ್ಟರು. ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮಾನಸಿಕ ರೋಗ ಚಿಕಿತ್ಸಾ ವಿಭಾಗ ಹಾಗೂ ನರ್ಸಿಂಗ್ ಸೈನ್ಸ್ ವಿಭಾಗದ ಸಹಯೋಗದಲ್ಲಿ ‘ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ’ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ಕ್ಷಣ ಮಾತ್ರದ …
Read More »ಜಿಲ್ಲಾಮಟ್ಟದ ಕ್ರೀಡಾಕೂಟಗಳ ಗುಂಪು ಕ್ರೀಡೆ ಹಾಗೂ ಆಟೋಟಗಳನ್ನು ಸೆ.30ರೊಳಗಾಗಿ ಮುಗಿಸಬೇಕು : ಬಸವರಾಜ ನಾಲತವಾಡ
ಬೆಳಗಾವಿ: ಈ ಬಾರಿಯ ಜಿಲ್ಲಾಮಟ್ಟದ ಕ್ರೀಡಾಕೂಟಗಳ ಗುಂಪು ಕ್ರೀಡೆ ಹಾಗೂ ಆಟೋಟಗಳನ್ನು ಸೆ.30ರೊಳಗಾಗಿ ಮುಗಿಸಬೇಕು ಎಂದು ಕ್ರೀಡಾ ಹಾಗೂ ಯುವ ಸಬಲೀಕರಣ ಇಲಾಖೆ ಉಪನಿರ್ದೇಶಕ ಬಸವರಾಜ ನಾಲತವಾಡ ತಿಳಿಸಿದರು. ಈ ಸಂಬಂಧ ನಗರದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವ ಯಾವ ತಾಲ್ಲೂಕಿನಲ್ಲಿ ಗುಂಪು ಆಟಗಳನ್ನು ಆಯೋಜಿಸಬೇಕು ಎಂದು ಈಗಲೇ ನಿರ್ಧರಿಸಬೇಕು. ಎಲ್ಲ ಕ್ರೀಡೆಗಳನ್ನೂ ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದು ಸೂಚಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ …
Read More »ಇಂಚಿಂಚಿಗೂ ಸಮಸ್ಯೆ ಮೂಲಸೌಕರ್ಯ ಮತ್ತು ಸ್ವಚ್ಛತೆಯಲ್ಲಿ ಇನ್ನೂ ಹಿಂದೆ ಬಿದ್ದಿದೆ ಇಂಚಲ ಗ್ರಾಮ
ಬೈಲಹೊಂಗಲ: ಶೈಕ್ಷಣಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನದೆಯಾದ ಕೊಡುಗೆ ನೀಡುವಲ್ಲಿ ಜಿಲ್ಲೆಯಲ್ಲಿ ಹೆಸರು ಮಾಡಿದ ಊರು ಇಂಚಲ. ಆದರೆ, ಮೂಲಸೌಕರ್ಯ ಮತ್ತು ಸ್ವಚ್ಛತೆಯಲ್ಲಿ ಇನ್ನೂ ಹಿಂದೆ ಬಿದ್ದಿದೆ. ಈ ಗ್ರಾಮದಲ್ಲಿ 10 ಸಾವಿರ ಜನಸಂಖ್ಯೆ ಇದೆ. 300ಕ್ಕೂ ಅಧಿಕ ಶಿಕ್ಷಕರು ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸೇವೆಯಲ್ಲಿದ್ದಾರೆ. ತಾಲ್ಲೂಕಿನಲ್ಲಿ ಅತಿ ಹೆಚ್ಚು ಶಿಕ್ಷಕರನ್ನು ಹೊಂದಿದ ಗ್ರಾಮ ಎಂಬ ಖ್ಯಾತಿ ದಶಕಗಳಿಂದಲೂ ಈ ಊರಿಗೆ ಇದೆ. ಶಿಕ್ಷಣ ಮಾತ್ರವಲ್ಲದೇ ಸರ್ಕಾರದ ಎಲ್ಲ …
Read More »ಯಶಸ್ಸು ಗಳಿಸಲು ಸರಳ ಶಿಸ್ತು ಸಾಕು’
ಬೆಳಗಾವಿ: ಯಶಸ್ಸು ಎನ್ನುವುದು ಕೆಲವು ಸರಳ ಶಿಸ್ತುಗಳಿಗಿಂತ ಕೂಡಿರುತ್ತದೆ. ಅದು ಹೆಚ್ಚೇನೂ ಇಲ್ಲ, ಪ್ರತಿದಿನ ಅಭ್ಯಾಸ ಹಾಗೂ ಸತತ ಪ್ರಯತ್ನದ ಫಲವಾಗಿ ಅದನ್ನು ಗಳಿಸಲು ಸಾಧ್ಯವೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎಂಬಿಎ ವಿಭಾಗದ ಅಧ್ಯಕ್ಷ ಪ್ರೊ.ತ್ಯಾಗರಾಜ ಹೇಳಿದರು. ಕೆಎಲ್‍ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ 2021-2022ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಕ್ರೀಡಾ- ಸಾಂಸ್ಕೃತಿಕ ಚಟುವಟಿಕೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಂಗಳವಾರ ಮುಖ್ಯ ಅತಿಥಿಯಾಗಿ ಮಾತನಾಡಿದರು. …
Read More »ಕೇಂದ್ರ ಸರ್ಕಾರದ ಒತ್ತಾಯ ಪೂರ್ವಕ ಹಿಂದಿ ದಿವಸ ವಿರೋಧಿಸಿ ಇಂದು ಕರವೇ ಪ್ರೊಟೆಸ್ಟ್ :ದೀಪಕ ಗುಡಗನಟ್ಟಿ
ಕೇಂದ್ರ ಸರ್ಕಾರ ಒತ್ತಾಯ ಪೂರ್ವಕವಾಗಿ ಹಿಂದಿ ಭಾಷೆಯನ್ನು ಹೇರಲು, ಹಿಂದಿ ದಿವಸ ಆಚರಣೆ ಮಾಡುತ್ತಿರುವದನ್ನು ವಿರೋಧಿಸಿ,ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ನಾಳೆ ಬುಧವಾರ ದಿನಾಂಕ 14-9-2022 ರಂದು ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯ ರೇಲ್ವೆ ನಿಲ್ಧಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದೆ. ರೇಲ್ವೆ ನಿಲ್ಧಾಣದ ವೃತ್ತದಿಂದ ರೇಲ್ವೆ ನಿಲ್ದಾಣದ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಮಾದ್ಯಮ ಪ್ರತಿನಿಧಿಗಳು ಆಗಮಿಸಬೇಕೆಂದು ಕೋರುತ್ತೇನೆ.
Read More »ಆಲಮಟ್ಟಿ ಜಲಾಶಯದಿಂದ ಅಪಾರ ನೀರು ಬಿಡುಗಡೆ
ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಘಟಪ್ರಭಾದಿಂದ ಹೆಚ್ಚು ನೀರು ಹರಿದು ಬರುತ್ತಿರುವ ಕಾರಣ ವಿಜಯಪುರ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಅಪಾರಪ್ರಮಾಣದ ನೀರು ಹರಿದುಬರುತ್ತಿದೆ. ಜಲಾಶಯದ 26 ಕ್ರಸ್ಟ್ ಗೇಟ್ಗಳ ಮೂಲಕ ಸೋಮವಾರ ಸಂಜೆಯಿಂದ 1,25000 ಕ್ಯುಸೆಕ್ ನೀರನ್ನು ನದಿ ತಳಪಾತ್ರಕ್ಕೆ ಹರಿಸಲಾಗುತ್ತಿದೆ. ಕಳೆದ 20 ದಿನಗಳಿಂದ ಶಾಂತವಾಗಿದ್ದ ಕೃಷ್ಣಾನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು. ಇದು ತಾತ್ಕಾಲಿ ಎನ್ನಲಾಗುತ್ತಿದೆ. ನಿನ್ನೆ ಬೆಳಗ್ಗೆ 16 …
Read More »ಅಕ್ಟೋಬರ್ 9 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ: ಅಶೋಕ ದುಡಗುಂಟಿ ಸಭೆ
ಅಕ್ಟೋಬರ್ 9 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮನಿಸಲಾಯಿತು. ಬೆಳಗಾವಿ ಜಿಲ್ಲೆಯಲ್ಲಿ ಪ್ರತೀವರ್ಷ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡುತ್ತಾ ಬಂದಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಈ ಆಚರಣೆಗೆ ಕೋವಿಡ್‍ನಿಂದಾಗಿ ಬ್ರೇಕ್ ಹಾಕಲಾಗಿತ್ತು. ಆದರೆ ಈ ಬಾರಿ ಎಲ್ಲಾ ಸಮುದಾಯಗಳ ಮುಖಂಡರು ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧಾರ ಮಾಡಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ …
Read More »ಗಣೇಶ ಹುಕ್ಕೇರಿ, ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಸರಳವಾಗಿ ಜರುಗಿದ ಗಣಹೋಮ
ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪ್ರತಿ ವರ್ಷ ಅದ್ದೂರಿಯಾಗಿ ಜರುಗುತ್ತಿದ್ದ ಗಣಹೋಮವು ಈ ವರ್ಷ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಸಹೋದರ ಕೇದಾರಿ ಹುಕ್ಕೇರಿ ನಿಧನ ಹೊಂದಿದ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಗಣಹೋಮ ಜರುಗಿತು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಹನುಮಾನ ಗಣೇಶ ಮಂಡಳ ವತಿಯಿಂದ ಶಾಸಕ ಗಣೇಶ ಹುಕ್ಕೇರಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಪ್ರತಿವರ್ಷ ಗಣಹೋಮ ಅದ್ದೂರಿಯಾಗಿ ಜರಗುತಿತ್ತ. ಆದರೆ ಈ ಬಾರಿ …
Read More »ದುಪ್ಪಟ್ಟು ಪ್ರಯಾಣಿಕರ ತುಂಬಿದ್ದ ವಾಹನಗಳಿಗೆ ಬೆಳಗಾವಿ ಪೊಲೀಸರ ದಂಡಾಸ್ತ್ರ
ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಸಂಚಾರ ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರನ್ನು ಕುರಿ ಮಂದೆಯಂತೆ ತುಂಬುವುದರ ವಿರುದ್ಧ ಪೆÇಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲ ಖಾಸಗಿ ವಾಹನದವರು ಅನುಮತಿಗಿಂತ ದುಪ್ಪಟ್ಟು ಪ್ರಯಾಣಿಕರನ್ನು ತುಂಬುತ್ತಾರೆ. ಇದರಿಂದ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇವೆ. ಹೀಗಾಗಿ ಮಂಗಳವಾರ ಪೆÇಲೀಸರು ಅನುಮತಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 45 ವಾಹನಗಳನ್ನು ಹಿಡಿದು 9000 ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ಅನುಮತಿಗಿಂತ ಹೆಚ್ಚು …
Read More »
Laxmi News 24×7