ಬೆಳಗಾವಿ: ಅರಣ್ಯ ಸಚಿವರಾಗಿದ್ದ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ. ಕೆ. ಸುಧಾಕರ್, ಮುನಿರತ್ನ ಭೈರತಿ ಬಸವರಾಜ ಸೇರಿದಂತೆ ಹಲವು ಗಣ್ಯರು ಬೆಲ್ಲದ ಬಾಗೇವಾಡಿಯ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ಉಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಗಣ್ಯರು, ಉಮೇಶ್ ಕತ್ತಿ ಅವರ ಪತ್ನಿ …
Read More »ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಆಗ್ರಹ
ಬೆಳಗಾವಿ: ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶವನ್ನು ಬೇಗನೇ ನೀಡಬೇಕು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ …
Read More »‘ಸೈನಿಕರ ಸಾಹಸ ಯುವಕರಿಗೆ ಪ್ರೇರಣೆ’
ಸವದತ್ತಿ: 1965ರ ಸೆಪ್ಟೆಂಬರ್‌ನಲ್ಲಿ ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಆಧೀನಕ್ಕೊಳಪಟ್ಟ ಮಹಾರಾಜ ಕೆ ಗ್ರಾಮವನ್ನು ಯುದ್ಧದಿಂದ ಮರಳಿ ಪಡೆಯುವ ಸಂದರ್ಭದಲ್ಲಿ ಕರ್ನಲ್ ಹನಬರಲಾಲ್ ಮೆಹ್ತಾ, ಸುಬೇದಾರ ನಂಬಿಯಾರ್, ಸಿಪಾಯಿ ಕನ್ನನ್, ಸಿ.ಬಿ. ಪಾಟೀಲ ಸೇರಿ ಹುತಾತ್ಮರಾದ ಯೋಧರಿಗೆ ಗುರುವಾರ ನವಿಲುತೀರ್ಥದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಾಲ್ಕನೇ ಮದ್ರಾಸ್ ಬಟಾಲಿಯನ್‍ದಲ್ಲಿ ಸೇವೆ ಸಲ್ಲಿಸಿದ 55 ಮಾಜಿ ಸೈನಿಕರು ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಕಾರ್ಗಿಲ್, ಪಂಜಾಬ ಸುವರ್ಣ ಸೌಧದಲ್ಲಿ …
Read More »ಪರೀಕ್ಷೆ ಅಕ್ರಮ| ಎಲೆಕ್ಟ್ರಾನಿಕ್ ಉಪಕರಣ ಮಾರುತ್ತಿದ್ದ ಬೆಂಗಳೂರಿನ ಆರೋಪಿ ಬಂಧನ
ಬೆಳಗಾವಿ: ಜಿಲ್ಲೆಯ ಗೋಕಾಕ ನಗರದಲ್ಲಿ ಈಚೆಗೆ ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ, ಎಲೆಕ್ಟ್ರಾನಿಕ್ ಡಿವೈಸ್ ಹಾಗೂ ಸ್ಮಾರ್ಟ್ ವಾಚ್ ಪೂರೈಸಿದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ರಾಜ್ಯದ ವಿವಿಧ ಪರೀಕ್ಷೆಗಳಲ್ಲೂ ಅಕ್ರಮ ಎಸಗಲು ಅವಕಾಶ ಮಾಡಿಕೊಟ್ಟ ಪ್ರಕರಣಗಳಿಗೂ ಸಾಕ್ಷ್ಯ ಸಿಕ್ಕಂತಾಗಿದೆ. ಬೆಂಗಳೂರಿನ ದೇವಸಂದ್ರದ ನಿವಾಸಿ, ಎಸ್ಪಿ ರಸ್ತೆಯಲ್ಲಿ ‘ಸ್ಪೈ ಜೋನ್’ ಎಂಬ ಎಲೆಕ್ಟ್ರಾನಿಕ್ ಮಳಿಗೆ ಇಟ್ಟುಕೊಂಡ ಮಹಮ್ಮದ್ ಅಜೀಮುದ್ದೀನ್ (37) ಬಂಧಿತ …
Read More »ನೀಟ್‌ನಲ್ಲಿ ದೇಶಕ್ಕೆ 4ನೇ ರ್‍ಯಾಂಕ್: ಬೆಳಗಾವಿ ತಾಲ್ಲೂಕಿನ ರುಚಾ ಪಾವಶೆ ಸಾಧನೆ
ಬೆಳಗಾವಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ತಾಲ್ಲೂಕಿನ ಉಚಗಾವಿಯ ರುಚಾ ಪಾವಶೆ ದೇಶಕ್ಕೆ 4ನೇ ಮತ್ತು ರಾಜ್ಯಕ್ಕೆ 2ನೇ ರ್‍ಯಾಂಕ್ ಗಳಿಸಿದ್ದಾರೆ. ‘ನಾನು ಅಗ್ರ 10 ಸ್ಥಾನದೊಳಗೆ ರ್‍ಯಾಂಕ್ ಗಳಿಸುತ್ತೇನೆಂಬ ವಿಶ್ವಾಸವಿರಲಿಲ್ಲ. ‘ನಾನು ಅಗ್ರ 10 ಸ್ಥಾನದೊಳಗೆ ರ್‍ಯಾಂಕ್ ಗಳಿಸುತ್ತೇನೆಂಬ ವಿಶ್ವಾಸವಿರಲಿಲ್ಲ. ಆದರೆ, ಉತ್ತಮ ರ್‍ಯಾಂಕ್ ಸಿಗುವ ನಿರೀಕ್ಷೆಯಿತ್ತು. ಈಗ ನಿರೀಕ್ಷಿಸಿದ್ದಕ್ಕಿಂತ ಅತ್ಯುತ್ತಮ ಫಲಿತಾಂಶ ಬಂದಿರುವುದಕ್ಕೆ ಸಂತಸದೊಂದಿಗೆ ಅಚ್ಚರಿಯೂ ಆಗಿದೆ’ ಎಂದು ರುಚಾ …
Read More »ಈ ಗಣೇಶ ಮಂಡಳಿಯ ಒಂದು ತೆಂಗಿನಕಾಯಿ 2.65 ಲಕ್ಷ ರೂ.ಗೆ ಹರಾಜು!
ಬೆಳಗಾವಿ/ಮೂಡಲಗಿ: ಸಾರ್ವಜನಿಕ ಗಣೇಶ ಮಂಡಳಿಯ ಟೆಂಗಿನಕಾಯಿಗಳ ಹರಾಜು ಅಬ್ಬಬ್ಬಾ ಎಂದರೆ 1, 2, 5 ಸಾವಿರ ರೂ. ವರೆಗೆ ಆಗುವುದು ಸಹಜ. ಆದರೆ ಈ ಗಣಪತಿ ಎದುರು ಇಟ್ಟಿರುವ ತೆಂಗಿನಕಾಯಿ ಬರೋಬ್ಬರಿ 2.65 ಲಕ್ಷ ರೂ.ಗೆ ಹರಾಜು ಆಗುವ ಮೂಲಕ ಅಚ್ಚರಿಗೆ ಕಾರಣವಾಗಿದೆ. ಮೂಡಲಗಿ ಪಟ್ಟಣದ ವಿಜಯ ನಗರದ ಶ್ರೀ ಗಜಾನನ ಯುವಕ ಮಂಡಳಿಯ 7ನೇ ದಿನದ ಗಣಪತಿ ವಿಸರ್ಜನೆ ವೇಳೆ ಹರಾಜು ಪ್ರಕ್ರಿಯೆ ನಡೆಯಿತು. ಗಣಪತಿ ಮೂರ್ತಿ ಎದುರು …
Read More »ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ: ಸಂಜಯ ಪಾಟೀಲ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ನಾನು ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ನಾನು 10 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಶಾಸಕನಾಗಬೇಕು ಎಂಬ ಆಸೆಯಿದೆ. ಆ ಪ್ರಕಾರ …
Read More »ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ
ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು. ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್ ವಿತರಿಸಿ, ಮಾತನಾಡಿದ ಅವರು, ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …
Read More »ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …
Read More »ಬೆಳಗಾವಿ: ತಾಯಿಗೆ ಹೊಡೆದು ಗಾಯಗೊಳಿಸಿದ ತಂದೆಯನ್ನು ಮಚ್ಚಿನಿಂದ ಕೊಲೆಗೈದ ಪುತ್ರ
ಬೆಳಗಾವಿ: ತಾಯಿಯ ಮೇಲೆ ಮನಬಂದಂತೆ ಥಳಿಸಿ ಗಾಯಗೊಳಿಸಿದ ತಂದೆಯನ್ನು ಮಗ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ರುದ್ರಪ್ಪ ತಳವಾರ (55) ಕೊಲೆಯಾದ ವ್ಯಕ್ತಿ. ಸಂತೋಷ ರುದ್ರಪ್ಪ ತಳವಾರ (30) ಆರೋಪಿಯಾಗಿದ್ದಾನೆ. ಕ್ಷುಲ್ಲಕ ಕಾರಣಗಳಿಗಾಗಿ ಪತ್ನಿಯೊಂದಿಗೆ ಜಗಳವಾಡಿದ್ದ ರುದ್ರಪ್ಪ, ಪತ್ನಿ ಮಹಾದೇವಿ ಮೇಲೆ ಮನಬಂದಂತೆ ಹಲ್ಲೆಗೈದು ಗಾಯಗೊಳಿಸಿದ್ದಾನೆ. ತಂದೆ-ತಾಯಿ ಜಗಳ ಕೇಳಿ ಹೊರಹೋಗಿದ್ದ ಮಗ ಸಂತೋಷ ಮನೆಗೆ ಬಂದಿದ್ದಾನೆ. …
Read More »
Laxmi News 24×7