ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ ಮಾಡಿದ್ದಾರೆ. ಆರೋಪಿಗಳು ಪರಾರಿಯಾಗಿರುವ ಘಟನೆ ಜೋಯ್ಡಾ ತಾಲೂಕಿನ ಉಸೋಡ ಬಳಿ ನಡೆದಿದೆ. ಹೌದು GA 07 C 9384 ನಂಬರಿನ ಸಫಾರಿ ವಾಹನದಲ್ಲಿ ಅಕ್ರಮವಾಗಿ ಸಾಗವಾನಿ ಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. …
Read More »ಬಿಜೆಪಿಯವ್ರು ಚಂಬಲ್ ಕಣಿವೆ ಡಕಾಯಿತರಿಗಿಂತ ದೊಡ್ಡ ಡಕಾಯಿತರು:
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಚಂಬಲ್ ಕಣಿವೆಯ ಡಕಾಯಿತರಿಗಿಂತ ದೊಡ್ಡ ಡಕಾಯಿತವಾಗಿದೆ. ಜಿಎಸ್‍ಟಿ ಹೆಸರಲ್ಲಿ ಜನಸಾಮಾನ್ಯರಿಂದ ದೊಡ್ಡ ಪ್ರಮಾಣದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ ಕುಡಚಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಶಾಸಕ ರಮೇಶ ಕುಡಚಿ ಈಗಾಗಲೇ ಜಿಎಸ್‍ಟಿ ಬಗ್ಗೆ ದೇಶದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿಯೂ ಜಿಎಸ್‍ಟಿ ಇತ್ತು. ಇವತ್ತು ಇದೆ. ಆದರೆ ಕಾಂಗ್ರೆಸ್ ಎಷ್ಟು ಜಿಎಸ್‍ಟಿ ಹಾಕಬೇಕು ಎಂದು …
Read More »ಬೈಲಹೊಂಗಲ: ದರ್ಗಾದಲ್ಲಿಯೇ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪ್ರತಿಬಾರಿಯಂತೆ ಈ ವರ್ಷವೂ ಪಟ್ಟಣದ ದರ್ಗಾದಲ್ಲಿ ಹಿಂದೂ ಮುಸ್ಲಿಮರು ಸೇರಿಕೊಂಡು ವಿಘ್ನನಿವಾರಕನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಪಟ್ಟಣದ ಕಂಠಿ ಗಲ್ಲಿಯಲ್ಲಿರುವ ಆಲಕಟ್ಟಿ ಫಕ್ಕೀರಸ್ವಾಮಿ ದರ್ಗಾ ಕೋಮು ಸೌಹಾರ್ದಕ್ಕೆ ಸಾಕ್ಷಿಯಾಗಿ ನಿಂತಿದೆ. ಸಂಪ್ರದಾಯದಂತೆ ಬುಧವಾರ ಗಣಪನ ಮೂರ್ತಿಯನ್ನು ಹಿಂದೂ ಮುಸ್ಲಿಮ್ ಯುವಕರು ಮೆರವಣಿಗೆ ಮೂಲಕ ತಂದು ದರ್ಗಾದಲ್ಲಿ ಪ್ರತಿಸ್ಥಾಪನೆ ಮಾಡಿದರು. ಮುಸ್ಲಿಮರು ಗಣಪನಿಗೆ ಹೂವು ಮಾಲೆ ಹಾಕಿ, ಕಾಯಿ, ಕರ್ಪೂರ ಬೆಳಗಿದರು, ಹಿಂದೂಗಳು ಆರತಿ ಮಾಡಿ, ನೈವೇದ್ಯ …
Read More »K.S.R.T.C. ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ 8ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಬಳಿ ಸಂಭವಿಸಿದೆ. 17 ಜನ ಪ್ರಯಾಣಿಕರು ಈ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಏಕಾಏಕಿ ಬಸ್ ರಸ್ತೆ ಬಿಟ್ಟು ಕೆಳಗೆ ಇಳಿಯುತ್ತಿದ್ದಂತೆ ಪ್ರಯಾಣಿಕರು ತುಂಬಾ ವಿಚಲಿತರಾದರು. ಈ ವೇಳೆ ಬಸ್‍ನಲ್ಲಿ ಹ್ಯಾಂಡಲ್, ಕಿಡಕಿ ಆಂಗಲ್ ಬಡಿದು 8 ಪ್ರಯಾಣಿಕರಿಗೆ ಗಾಯವಾಗಿದೆ. ಓರ್ವ ಪ್ರಯಾಣಿಕರ ಕೈ ಮುರಿದಿದ್ದು, ಇನ್ನುಳಿದ ಪ್ರಯಾಣಿಕರಿಗೆ ಸಣ್ಣ …
Read More »ಸತೀಶ್ ಜಾರಕಿಹೊಳಿ ಯಾವ ಕ್ಷೇತ್ರ ದಿಂದ ಸ್ಪರ್ಧೆ ಮಾಡ್ತಾರೆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ
ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿ ಆಯಾ ಕ್ಷೇತ್ರದಲ್ಲಿ ಜನಪ್ರಿಯತೆ, ಆಕರ್ಷಣಿಯ ವ್ಯಕ್ತಿತ್ವ ಹೊಂದಿರಬೇಕು. ಒಳ್ಳೆಯ ಕೆಲಸ ಮಾಡಿರಬೇಕು. ಎಲ್ಲಾ ಪಕ್ಷಗಳ ಟಿಕೆಟ್ ಅಂತಿಮವಾದ ಮೇಲೆ ಕೊನೆಯ ಸರ್ವೇ ಮಾಡಿ ನಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಎರಡು ಕ್ಷೇತ್ರಗಳಿಂದ ಸತೀಶ ಜಾರಕಿಹೊಳಿ ಸ್ಪರ್ಧಿಸಬೇಕು ಎಂಬ ಬೆಂಬಲಿಗರ ಒತ್ತಾಯದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗೋಕಾಕ್‍ನಲ್ಲಿ ಉತ್ತರಿಸಿದ ಸತೀಶ ಜಾರಕಿಹೊಳಿ ಆ ರೀತಿ ಇರಬಹುದು, …
Read More »ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ.: ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ: ಭಾಸ್ಕರ್‍ರಾವ್
ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ. ಬಾಂಬೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಇರಿಸಿ, ಅವರ ವಿಡಿಯೋ ಮಾಡಿ ಬ್ಲಾಕ್‍ಮೇಲ್ ಮಾಡಿ ಇವರು ಅಧಿಕಾರಕ್ಕೆ ಬಂದಿದ್ದಾರೆ. ಕೆಂಪು ಕೋಟೆ ಮೇಲೆ ನಿಂತು ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ. ನಾನು ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆದರೆ ಇಷ್ಟೆಲ್ಲಾ ಭ್ರಷ್ಟಾಚಾರ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್‍ರಾವ್ ಆರೋಪಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ …
Read More »ಅದ್ದೂರಿ ಗಣೇಶೋತ್ಸವ ಮಾಡುತ್ತೇವೆ, ಡಿಜೆ ಬಳಕೆ ಮಾಡುತ್ತೇವೆ. ವಿದ್ಯುತ್ ಶುಲ್ಕ ಪಾವತಿ ಮಾಡಲ್ಲ:ಯತ್ನಾಳ್
ಅಥಣಿ, : ಇತರೆ ರಾಜ್ಯಗಳಂತೆ ಕರ್ನಾಟಕದಲ್ಲೂ ಅಪ್ಪ ಮಕ್ಕಳಿಗೆ ಟಿಕೆಟ್ ನೀಡಬಾರದೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯಲ್ಲಿ ಕುಟುಂಬಕ್ಕೆ ಒಂದೇ ಟಿಕೆಟ್ ಎಂದು ನಿಯಮ ಜಾರಿಯಾಗಿದೆ. ಈ ಕುರಿತು ನಾನು ಕೂಡ ಕರ್ನಾಟಕದಲ್ಲಿ ತ್ವರಿತವಾಗಿ ಈ ನಿಯಮ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅಪ್ಪ ಮಕ್ಕಳಿಗೆ ಹಾಗೂ ಕುಟುಂಬ ರಾಜಕೀಯಕ್ಕೆ …
Read More »500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿ,.
500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟಪ್ರಭಾದ ಬಾರ್ ನಲ್ಲಿ ಮಂದ ಬೆಳಕಿನಲ್ಲಿ ಕ್ಯಾಷಿಯ್ ಗೆ ಈ ನಕಲಿ ನೋಟುಗಳನ್ನು ಕೊಡಲು ಆರೋಪಿಗಳು ಮುಂದಾಗಿದ್ದರು. 500 ರೂಪಾಯಿ ಮುಖಬೆಲೆಯ ಈ ನೋಟುಗಳ ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಅಂತಾ ಇತ್ತು. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು …
Read More »ಲಕ್ಷ್ಮಣ ಸವದಿ ಕಾರು ಅಪಘಾತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ …
Read More »ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಸಜ್ಜು
ಬೆಳಗಾವಿ: ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ವಿಘ್ನ ನಿವಾರಕನನ್ನು ಬುಧವಾರ ಜನರು ಅದ್ದೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. 1905ರಿಂದ ಇಲ್ಲಿ ಪ್ರತಿವರ್ಷ ಸಾರ್ವಜನಿಕ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ. ಕಳೆದ ಎರಡು ವರ್ಷ ‘ಚೌತಿ’ ಮೇಲೆ ಕೋವಿಡ್-19 ಬರೆ ಎಳೆದಿತ್ತು. ಈ ಬಾರಿ ಕೊರೊನಾ ಉಪಟಳ ಇಲ್ಲದೇ ಹಬ್ಬದ ಸಂಭ್ರಮ ಇಮ್ಮಡಿಗೊಂಡಿದೆ. ಸರ್ವಭಾಷಿಕರು ಮತ್ತು ಸರ್ವಧರ್ಮೀಯರು ಸಡಗರದಿಂದ ಗಣೇಶ ಚತುರ್ಥಿ ಆಚರಣೆಗೆ ತಯಾರಿ ನಡೆಸಿದ್ದಾರೆ. 378 ಕಡೆ ಸಾರ್ವಜನಿಕ ಗಣೇಶ: …
Read More »