ಅಥಣಿ: ತಾಲ್ಲೂಕಿನ ಹಲ್ಯಾಳ ದೂರು ಸೇತುವೆ ಬಳಿ ಕೃಷ್ಣಾ ನದಿಯಲ್ಲಿ ಶುಕ್ರವಾರ ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನದಿ ನೀರಿನಲ್ಲಿ ತೇಲಿಹೋಗಿದ್ದಾರೆ. ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ನೀರುಪಾಲಾದ ಯುವಕ. ದೇವರ ಪೂಜೆಗೆ ನದಿಯಿಂದ ನೀರು ಒಯ್ಯಲು ಬಂದಿದ್ದರು. ಸ್ನಾನ ಮಾಡಿ ಹೋಗಬೇಕು ಎಂದು ನದಿಗೆ ಇಳಿದರು. ಮರಳಿ ಬಂದಿಲ್ಲ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ …
Read More »ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು …
Read More »ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು..
ಇಂದು ಸನ್ಮಾನ್ಯ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ರವರು ಖಾನಾಪೂರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು.. ತಾಲೂಕಿನ _ಮುಗಳಿಹಾಳ್_ ಗ್ರಾಮದ ಪ್ರೌಢಶಾಲೆ ಹಾಗೂ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ್ಯ ಶಾಸಕರು ಸ್ವತಃ ಹೋಗಿ ಭವಿಷ್ಯದ ಭಾರತದ ಬೆಳಕು ಮುದ್ದು ವಿದ್ಯಾರ್ಥಿಗಳಿಗೆ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ …
Read More »ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು
ಇಂದು ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಸುರೇಶ್ ಪಾಟೀಲರು ಮಾತನಾಡಿ ಈ ಭಾಗದ ಜನತೆಯ ಮೂಲಭೂತ ಸೌಲಭ್ಯ ಒದಗಿಸಿ ಕೊಡುವಂತಹ ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕರು ದೊರಕಿರುವುದು ನಮ್ಮೆಲ್ಲರ ಸೌಭಾಗ್ಯವೆಂದರು ಜನತೆಯ ಪರವಾಗಿ ಶ್ರೀ ರಮೇಶಣ್ಣಾ ಜಾರಕಿಹೊಳಿಯವರಿಗೆ ಅಭಿನಂದನೆ ಸಲ್ಲಿಸಿದರು ಇದೇ ಸಂದರ್ಭದಲ್ಲಿ ಮಲ್ಲಾಪುರ್ ಪಿ.ಜಿ. ಶ್ರೀ ವಿಠ್ಠಲ್ …
Read More »ಮಹಾನಿಂಗ ನಂದಗಾವಿ ಬೆಳಗಾವಿ ಹೆಚ್ಚುವರಿ S.P. ಆಗಿ ಮುಂದುವರಿಕೆ
ಮಹಾನಿಂಗ ನಂದಗಾವಿ ಅವರನ್ನೇ ಬೆಳಗಾವಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಮುಂದುವರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇತ್ತಿಚಿಗೆ ಐಪಿಎಸ್‍ಗೆ ಬಡ್ತಿ ಹೊಂದಿದ್ದ ಮಹಾನಿಂಗ ನಂದಗಾವಿ ಅವರನ್ನು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಸರ್ಕಾರ ಮುಂದುವರಿಸಿದೆ. ಅದೇ ರೀತಿ ವಿವಿಧ ಪೊಲೀಸ್ ಅಧಿಕಾರಿಗಳನ್ನು ಅದೇ ಸ್ಥಾನದಲ್ಲಿ ಮುಂದುವರಿಸಿ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.
Read More »ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!
ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …
Read More »ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ. ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ …
Read More »ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿತ
ಬೆಳಗಾವಿ (ಆ.25): ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿಸಿ, ಮೆರವಣಿಗೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಬಸವನಕುಡಚಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ವಿಶಾಲ್ ಕಲ್ಲಪ್ಪ ಪಟಾಯಿ (28) ಮೃತ ವ್ಯಕ್ತಿ. ವಿಶಾಲ ಪಟಾಯಿ ಮಾನಸಿಕ ಅಸ್ವಸ್ಥನಾಗಿದ್ದ. ಈ ವಿಚಾರ ಗ್ರಾಮಸ್ಥರಿಗೂ ಗೊತ್ತಿತ್ತು. ಈತ ಆಗಾಗ ಗ್ರಾಮದವರ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. …
Read More »ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದೆ
ಬೆಳಗಾವಿ : ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್ವಾಚ್ ಬಳಸಿ ಪರೀಕ್ಷೆ ಬರೆದು ಸಿಕ್ಕಿಹಾಕಿಕೊಂಡಿದ್ದರು. ಪ್ರಕರಣ ಸಂಬಂಧ ಈಗಾಗಲೇ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಎಸ್ಪಿ ಡಾ ಸಂಜೀವ್ ಪಾಟೀಲ್ ನೇತೃತ್ವದ ತಂಡದಿಂದ ಮತ್ತೆ …
Read More »ಪ್ಲಾಸ್ಟಿಕ್ ಕವರ್ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ತಾಯಿ
ಬೆಳಗಾವಿ: ಪ್ಲಾಸ್ಟಿಕ್ ಕವರ್ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ …
Read More »
Laxmi News 24×7