Breaking News

ಬೆಳಗಾವಿ

ಬೆಳಗಾವಿಯಲ್ಲಿ ಚಿರತೆಗಾಗಿ ಇನ್ನು 1 ವಾರ ಕಾರ್ಯಾಚರಣೆ:ಡಿಎಫ್‍ಓ ಡಾ.ಅಂಟೋನಿ

ನಮ್ಮ ಅಂದಾಜಿನ ಪ್ರಕಾರ ಬೆಳಗಾವಿಯ ಗಾಲ್ಫ ಮೈದಾನದಲ್ಲಿ ಪತ್ತೆಯಾಗಿದ್ದ ಚಿರತೆ ಅರಣ್ಯ ಪ್ರದೇಶಕ್ಕೆ ಹೋಗಿರುವ ಸಾಧ್ಯತೆಯಿದೆ. ಆದರೆ ಅದು ಮರಳಿ ಬರಬಹುದು ಅಥವಾ ಮತ್ತೆ ಕಾಣಿಸಿಕೊಳ್ಳಬಹುದು ಎಂಬ ಹಿನ್ನೆಲೆ ನಾವು ಕಾರ್ಯಾಚರಣೆ ಮುಂದುವರಿಸಿದ್ದೇವೆ ಎಂದು ಡಿಎಫ್‍ಓ ಡಾ.ಅಂಟೋನಿ ಮರಿಯಂ ಸ್ಪಷ್ಟಪಡಿಸಿದ್ದಾರೆ. ಹೌದು ಬೆಳಗಾವಿಯ ಗಾಲ್ಫ ಮೈದಾನದಲ್ಲಿ ಚಿರತೆ ಪತ್ತೆಯಾಗಿರುವ ಹಿನ್ನೆಲೆ ಕುಂದಾನಗರಿ ಜನ ತೀವ್ರ ಭಯಭೀತರಾಗಿದ್ದರು. ಇನ್ನು ಅರಣ್ಯ ಇಲಾಖೆ ಕೂಡ ಸತತ ಕಾರ್ಯಾಚರಣೆ ನಡೆಸಿದರೂ ಚಿರತೆ ಮಾತ್ರ ಸೆರೆಯಾಗಿರಲಿಲ್ಲ. …

Read More »

ಪಾಲಿಕೆ ಸದಸ್ಯರಿಗೆ ಸಿಗದ ಧ್ವಜಾರೋಹಣ ಭಾಗ್ಯ

ಬೆಳಗಾವಿ: ಸ್ವಾತಂತ್ರ್ಯ ಮಹೋತ್ಸವದ ಈ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಲೆ ರಾಷ್ಟ್ರ ಧ್ವಜಾರೋಹಣ ಮಾಡುವ ಸೌಭಾಗ್ಯ ಪಾಲಿಕೆಯ ಸದಸ್ಯರಿಗೆ ಒಲಿದು ಬರಲಿಲ್ಲ. ಈ ವಿಷಯದಲ್ಲಿ ಸರಕಾರ ಮತ್ತು ಸ್ಥಳೀಯ ಬಿಜೆಪಿ ಶಾಸಕರ ಭರವಸೆ ಮತ್ತೂಮ್ಮೆ ಹುಸಿಯಾಗಿದೆ.   ಶಾಸಕರ ಮಾತು ನಂಬಿ ಮೇಯರ್‌ ಅಗುವ ಮೂಲಕ ದ್ವಜಾರೋಹಣ ಮಾಡುವ ಕನಸು ಕಂಡಿದ್ದ ಸದಸ್ಯರಿಗೆ ನಿರಾಸೆಯಾಗಿದೆ. ಜೊತೆಗೆ ಈ ನಿರಾಸೆಯ ಬೆನ್ನಲ್ಲೇ ಬಿಜೆಪಿ ಸದಸ್ಯರಲ್ಲಿ ಶಾಸಕರ ನಡೆಯ ಬಗ್ಗೆ ಅಸಮಾಧಾನ …

Read More »

ಸ್ವಾತಂತ್ರ್ಯ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರ ಮರೆತ ತಾಲೂಕಾಡಳಿತ; ದಲಿತ ಸಂಘನೆಗಳ ಆಕ್ರೋಶ

ಚಿಕ್ಕೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯ ವೇಳೆ ಚಿಕ್ಕೋಡಿ ತಾಲೂಕಾಡಳಿತ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮರೆತಿದ್ದ ಹಿನ್ನಲೆ ದಲಿತ ಸಂಘಟನೆಗಳು ತಾಲೂಕಾಡಳಿತ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕೋಡಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ ಸಂದರ್ಭ ಚಿಕ್ಕೋಡಿ ತಾಲೂಕಾಡಳಿತ ಮಹಾತ್ಮಾ ಗಾಂಧೀಜಿಯವರ ಒಂದೇ ಪೋಟೋ ಇಟ್ಟು ಯಡವಟ್ಟು ಮಾಡಿಕೊಂಡಿದೆ.   ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಬಿಟ್ಟು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ …

Read More »

ಶಾಸಕ ಅಭಯ ಪಾಟೀಲ್ ವಿರುದ್ಧ ಪರೋಕ್ಷ ಕಿಡಿ ಕಾರಿದ :ಕಾರಜೋಳ

ಚಿರತೆ ಪತ್ತೆಗೆ ಮುಧೋಳ ನಾಯಿ ತರೋಣ: ಬೆಳಗಾವಿ ಜಿಲ್ಲೆಯಲ್ಲಿ ಚಿರತೆ ಹಾವಳಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಬೆಳಗಾವಿ ನಗರದಲ್ಲಿ ಪ್ರತ್ಯೇಕ್ಷವಾಗಿರುವ ಚಿರತೆ ಸೆರೆ ಹಿಡಿಯಲು 8 ಕಡೆಗಳಲ್ಲಿ ಬೋನ್ ಇಟ್ಟು ಕಾಯುತ್ತಿದ್ದಾರೆ. 50 ಜನ ಸಿಬ್ಬಂದಿ ನೇಮಕ ಮಾಡಲಾಗಿದೆ. ತಜ್ಞರನ್ನು ಸಹ ನೇಮಕ ಮಾಡಿದೆ. ಇಷ್ಟಕ್ಕೂ ಸೆರೆ ಸಿಗದಿದ್ದರೇ ಮುಧೋಳ ನಾಯಿಯನ್ನು ತಂದು ಚಿರತೆ ಸೆರೆ ಹಿಡಿಯಲಾಗುವುದು ಎಂದರು. ಶಾಸಕ ಅಭಯ ಪಾಟೀಲ್ ವಿರುದ್ಧ ಪರೋಕ್ಷ ಕಿಡಿ ಜಿಲ್ಲಾ ಉಸ್ತುವಾರಿ …

Read More »

ವಿಟಿಯು “ಜ್ಞಾನ ಸಂಗಮ”ದಲ್ಲಿ ಗಮನ ಸೆಳೆದ 100 ಮೀಟರ್ ತಿರಂಗಾ ರ್ಯಾಲಿ

ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ‌ತಾಂತ್ರಿಕ ವಿಶ್ವವಿದ್ಯಾಲಯ “ಜ್ಞಾನ ಸಂಗಮ”ದಲ್ಲಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ 76ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ವಿ ತಾ ವಿ ಯ ಕುಲಪತಿಗಳಾದ ಪ್ರೋ. ಕರಿಸಿದ್ದಪ್ಪ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಲ್ ದೀಪಕ ಕುಮಾರ ಗುರುಂಗ ಆಗಮಿಸಿದ್ದರು. ಧ್ವಜಾರೋಹಣ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ ಕರ್ನಲ್ ದೀಪಕ ಗುರುಂಗ, ಕನ್ನಡ ನಾಡನ್ನು ಆಳಿದ ರಾಜಮನೆತನಗಳ ಕೊಡುಗೆಗಳನ್ನು, ಸಂಗೀತ, …

Read More »

ಕುಟುಂಬ ಸಮೇತ ತಾಯಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಂತೋಷ್ ಜಾರಕಿಹೊಳಿ ಅವರು

ಸವದತ್ತಿ: ಸವದತ್ತಿ ಯಲ್ಲಮ್ಮ ನಮ್ಮ ಬೆಳಗಾವಿಯ ಆರಾಧ್ಯ ದೇವತೆ ಸದಾ ಭಕ್ತಿ ಭಾವ ಸಾಮಾಜಿಕ ಚಟುವಟಿಕೆ ಗಳಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂದು ಕುಟುಂಬ ಸಮೇತ ತಾಯಿ ಯಲ್ಲಮ್ಮನ ಗುಡ್ಡಕ್ಕೆ ಪ್ರಯಾಣ ಬೆಳೆಸಿದ್ದರು. ಇಂದು 75ನೆಯ ಸ್ವತಂತ್ರ ಮಹೋತ್ಸವ ಅಂಗವಾಗಿ ಸವದತ್ತಿ ಕ್ಷೇತ್ರಕ್ಕೆ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಪತ್ನಿ ಹಾಗೂ ಮಗ ಸೂರ್ಯ ಶ್ರೇಷ್ಠ ಅವರ್ ಜೊತೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು. ಶ್ರಾವಣ ಮಾಸದಲ್ಲಿ …

Read More »

ಬೆಳಗಾವಿ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಆಗಿತ್ತು. ಮಹಾತ್ಮ ಗಾಂಧಿ ಅಧ್ಯಕ್ಷರಾಗಿದ್ದ ಕಾಂಗ್ರೆಸ್ ಮಹಾ ಅಧಿವೇಶನದಲ್ಲಿ ಗಾಂಧಿ ಅವರು ಸ್ವಾತಂತ್ರ್ಯ ಕಹಳೆ ಮೊಳಗಿಸಿದ್ದರು.

ಬೆಳಗಾವಿ: ಭಾರತವು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ದೇಶದ ಮನೆ ಮನೆಗಳ ಮೇಲೂ ತಿರಂಗಾ ಧ್ವಜ ಹಾರಾಡುತ್ತಿದೆ. ಸ್ವಾತಂತ್ರ್ಯ ಸಂಗ್ರಾಮ, ಹೋರಾಟಗಾರರ ಸ್ಮರಣೆ ಆಗುತ್ತಿದೆ. ಈ ಹೊತ್ತಿನಲ್ಲಿ ಬೆಳಗಾವಿಯನ್ನು ಮರೆಯುವಂತಿಲ್ಲ. ಖಾದಿ ಗ್ರಾಮೋದ್ಯೋಗ ಸಂಸ್ಥೆ: ಜಿಲ್ಲೆಯ ಗೋಕಾಕ್ ತಾಲೂಕಿನ ಹುದಲಿ ಗ್ರಾಮ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಆಗಿತ್ತು. ಮಹಾತ್ಮ ಗಾಂಧಿ ಅವರ ಸ್ಫೂರ್ತಿಯೊಂದಿಗೆ ಇಲ್ಲಿ ಆರಂಭವಾದ ಖಾದಿ ಗ್ರಾಮೋದ್ಯೋಗ ಸಂಸ್ಥೆ ಇಂದಿಗೂ ಕಾರ್ಯನಿರ್ವಹಿಸುತ್ತಿದೆ. ದೇಶದ ವಿವಿಧ ನಗರಗಳಿಗೆ ಇಲ್ಲಿಂದ ಖಾದಿ ಬಟ್ಟೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ. ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ ರ್ಯಾಲಿ.

          ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್‍ದಲ್ಲಿ ಚಾಲನೆ ನೀಡಲಾಯಿತು.   ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನೂರಾರು ರೈತರು …

Read More »

ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಶಾಸಕ ಸತೀಶ್ ಜಾರಕಿಹೊಳಿ

ದೇಶಕ್ಕೆ ಸ್ವಾತಂತ್ರೋತ್ಸವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ದೊಡ್ಡದಿದೆ. ಆದರೆ ಬಿಜೆಪಿಯವರು ಈಗ ಬಂದು ಜಂಡಾ ಹಾರಿಸಿ ಎಂದು ಕುಳಿತಲ್ಲೇ ಕುಳಿತು ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.  ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ಸರಕಾರದ ಹರ್ ಘರ್ ತಿರಂಗಾ ಕಾರ್ಯಕ್ರಮ ಕುರಿತಂತೆ ವ್ಯಂಗ್ಯವಡಿದ್ದಾರೆ. ದೇಶಕ್ಕೆ ಸ್ವಾತಂತ್ರö್ಯವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ತುಂಬಾ …

Read More »

ಅರಣ್ಯ ಇಲಾಖೆ ಕಾರ್ಯಾಚರಣೆ : ಉಡಗಳನ್ನು ಬೇಟೆಯಾಡಿದ ಆರೋಪಿ ಸೆರೆ

ಖಾನಾಪುರ ತಾಲೂಕಿನ ಗೋಲಿಹಳ್ಳಿ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಬರುವ ತಾವರಗಟ್ಟಿ ಗ್ರಾಮದ ಸಮೀಪ ಉಡಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಉಡದ ಸಮೇತ ಬಂಧಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಗೋಲಿಹಳ್ಳಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಗೋದೊಳ್ಳಿ ಉಪವಲಯ ಅರಣ್ಯ ಅಧಿಕಾರಿಯ ಕಾರ್ಯ ಕ್ಷೇತ್ರದ ತಾವರಗಟ್ಟಿ ಗ್ರಾಮದ ಸಮೀಪದಲ್ಲಿ ಅಕ್ರಮವಾಗಿ ಉಡಾ ಬೇಟೆಯಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತ ತಾವರಗಟ್ಟಿ ಗ್ರಾಮದ ಆರೋಪಿ ಮೈಕಲ್ ಮರೆಪ್ಪ ಅಂಬೇವಾಡ್ಕರ್(34) …

Read More »