Home / ಜಿಲ್ಲೆ / ಬೆಳಗಾವಿ (page 227)

ಬೆಳಗಾವಿ

ಕಾಂಗ್ರೆಸ್ ಪಕ್ಷದಿಂದಜಯಶ್ರೀ ಮಾಳಗಿ ಹಾಗೂಜಯರಾಜ ಹಲಗೆಕರ್ ಉಚ್ಛಾಟನೆ

ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. 12ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯಶ್ರೀ ಮಾಳಗಿ ಹಾಗೂ 29ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯರಾಜ ಹಲಗೆಕರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.

Read More »

ಬೆಳಗಾವಿ ಪಾಲಿಕೆ ಚುನಾವಣೆ: ಬಿಜೆಪಿ ಘಟಾನುಘಟಿ ನಾಯಕರಿಂದ ಪ್ರಚಾರ, ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ

ಬಹಿರಂಗ ಪ್ರಚಾರಕ್ಕೆ ಮಂಗಳವಾರ (ಆಗಸ್ಟ್ 31) ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಚುರುಕಿನ ಪ್ರಚಾರ ನಡೆಸಿದರು. ಬಿಜೆಪಿ ಮತ್ತು ಕಾಂಗ್ರೆಸ್​ ಪಕ್ಷಗಳ ಹಲವು ಹಿರಿಯ ನಾಯಕರು ನಗರದಲ್ಲಿ ಸಂಚರಿಸಿ, ಮತಭಿಕ್ಷೆ ಕೇಳಿದರು. ಬೆಳಗಾವಿ: ಬಿಜೆಪಿ ಮತ್ತು ಕಾಂಗ್ರೆಸ್ ಹುರಿಯಾಳುಗಳ ನಡುವೆ ಜಿದ್ದಾಜಿದ್ದಿ ಹೋರಾಟಕ್ಕೆ ಸಾಕ್ಷಿಯಾಗಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಸೆ.3ರಂದು ಮತದಾನ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ಮಂಗಳವಾರ (ಆಗಸ್ಟ್ 31) ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಚುರುಕಿನ ಪ್ರಚಾರ ನಡೆಸಿದರು. ಬಿಜೆಪಿ …

Read More »

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜನರು ಚಿರಂಜೀವಿಗಳಾಗಿದ್ದರಾ?: ಈಶ್ವರಪ್ಪ

ಬೆಳಗಾವಿ: ಉಚಿತ ಶವಸಂಸ್ಕಾರ ಮಾಡುವ ಬಿಜೆಪಿ ಪ್ರಣಾಳಿಕೆ ಬಗ್ಗೆ ವ್ಯಂಗವಾಡಿರುವ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜನರು ಚಿರಂಜೀವಿಗಳಾಗಿದ್ದರಾ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಇದ್ದಾಗ ದೇಶದಲ್ಲಿ ಯಾರು ಸತ್ತೇ ಇಲ್ಲ, ಶವಸಂಸ್ಕಾರ ಮಾಡಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರದಲ್ಲಿ ಸಾವು ಖಚಿತ ಅಂತಾ ಡಿ.ಕೆ.ಶಿವಕುಮಾರ್ ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತ …

Read More »

ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ 7 ಜನರನ್ನು ಪಕ್ಷದಿಂದ ಉಚ್ಛಾಟನೆ

– ಬೆಳಗಾವಿ :ಮಹಾನಗದರ ಪಾಲಿಕೆ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ 7 ಜನರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.                     ಬಿಜೆಪಿ ಮಹಾನಗರ ಅಧ್ಯಕ್ಷ ಶಶಿಕಾಂತ ಪಾಟೀಲ ಈ ಕುರಿತು ಪ್ರಕಟಣೆ ನೀಡಿದ್ದಾರೆ. 7 ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದ್ದಾರೆ. ಉಚ್ಛಾಟನೆಗೊಂಡವರ ವಿವರ ಇಲ್ಲಿದೆ –  ವಾರ್ಡ್ ನಂ.41ರ ದೀಪಕ್ ಜಮಖಂಡಿ, …

Read More »

ಈ ಬಾರಿ ಬಿಜೆಪಿಗೆ ಜನರಿಂದ ತಕ್ಕ ಪಾಠ.!ಸತೀಶ್ ಜಾರಕಿಹೊಳಿ

ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಜನರ ಸಮಸ್ಯೆ ಕೇಳಲು ಬಾರದೆ ಇದೀಗ ಚುನಾವಣೆ ಪ್ರಚಾರಕ್ಕೆ ಜನರ ಬಳಿ ಓಡೋಡಿ ಹೋಗುತ್ತಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಿಲ್ಲೆಯಿಂದ 4 ಮಂದಿ ಸಚಿವರಿದ್ದಾರೆ. ಆದ್ರೆ ಇವರೆಲ್ಲರೂ ಕೋವಿಡ್ ಹಾಗೂ ಪ್ರವಾಹ ವೇಳೆ ಸಮಸ್ಯೆಗಳ ನಿರ್ವಹಣೆ ಬಗ್ಗೆ ಒಂದು ಸಭೆಯನ್ನೂ ನಡೆಸಲಿಲ್ಲ. ಕನಿಷ್ಟಪಕ್ಷ ಜನರಿಗೆ …

Read More »

ಮೂಡಲಗಿ ಅತ್ಯಾಚಾರ ಪ್ರಕರಣ ಕುರಿತು ಜೈ ಭೀಮ್ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ವಾಣಿ ವತಿಯಿಂದ ಅತ್ಯಾಚಾರ ಮಾಡಿದ ಆರೋಪಿಗಳಿಗೆ ಕ್ರಮ ಕೈಗೊಳ್ಳುವ ಮನವಿ

ಈ ಮೇಲಿನ ವಿಷಯದಂತೆ ನಾವು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಜುಲೈ-2021 ತಿಂಗಳಲ್ಲಿ 16 ವರ್ಷದ ಅಪ್ರಾಪ್ತ ಪರಿಶಿಷ್ಟ ಜಾತಿಯ ಬಾಲಕಿ ಮೇಲೆ 5 ಜನ ಅನ್ಯಜನಾಂಗದ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಮಾಡಿರುತ್ತಾರೆ. ಬಳಿಕ ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು ಬಿಡುವುದಿಲ್ಲ ಅಂತಾ ಜೀವ ಬೆದರಿಕೆ ಹಾಕಿದ್ದ ಕಾಮುಕರನ್ನು ಈಗಾಗಲೇ 4 ಜನ ಕಾಮುಕರನ್ನು ಘಟಪ್ರಭಾ ಪೊಲೀಸರು ಬಂಧಿಸಿರುತ್ತಾರೆ. ಇನ್ನುಳಿದ ಕಾಮುಕನನ್ನು ತಕ್ಷಣವೇ ಬಂಧಿಸುವುದಾಗಲೆ …

Read More »

500 ರೂ. ಗೆ ಐಫೋನ್‍ ನಕಲಿ ಬ್ಯಾಕ್ ಕೇಸ್ ಮಾರುತ್ತಿದ್ದವರು ಅರೆಸ್ಟ್

ಆಯಪಲ್ ಕಂಪನಿಯ ಐಫೋನ್ ಇರಿಸಿಕೊಳ್ಳುವುದು ಪ್ರತಿಷ್ಠೆಯ ವಿಷಯವಾಗಿ ಬಹಳ ದಿನಗಳಾಗಿವೆ. ಅಷ್ಟೇ ದೊಡ್ಡ ಪ್ರತಿಷ್ಠೆ ಐಫೋನ್‍ಗಳಿಗೆ ಬ್ಯಾಕ್ ಕೇಸ್ ಹಾಕಿಸುವುದು. ಕಂಪನಿಯದ್ದೇ ಒರಿಜಿನಲ್ ಕೇಸ್‍ನ ಬೆಲೆ 4500 ರೂ. ನಿಂದ ಆರಂಭವಾಗುತ್ತದೆ. ಆದರೆ ಇದರ ನಕಲಿ ರೂಪ ಕೆಲವೆಡೆ ಸಿಗುತ್ತದೆ. ಅದರ ಬೆಲೆಯೇನು ಕಡಿಮೆ ಇಲ್ಲ, ಸುಮಾರು 500 ರೂ. ಇಂಥದ್ದೇ ನಕಲಿ ಬ್ಯಾಕ್ ಕೇಸ್‍ಗಳನ್ನು ಮಾರುತ್ತಿದ್ದ ಚೆನ್ನೈನ ಅಮಿನ್‍ಜಿಕರೈನ ಇಬ್ಬರು ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ.   ಇವರ ಬಳಿಯಿಂದ …

Read More »

ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ: ಗೋವಿಂದ ಕಾರಜೋಳ

ಬೆಳಗಾವಿ: ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಬೆಳಗಾವಿ ನಗರಕ್ಕೆ ಮಹತ್ವ ಇದೆ ಎಂದು ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸೆ. 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಗೆ 58 ವಾರ್ಡ್‍ಗಳ ಪೈಕಿ 56 ವಾರ್ಡ್‍ಗಳಲ್ಲಿ ಸ್ಪರ್ಧೆಯಾಗುತ್ತಿದೆ. ಬೆಳಗಾವಿ ಸುತ್ತಮುತ್ತ ನಾಲ್ಕು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಯಾಗಬೇಕು. ಒಂದೂವರೆ ವರ್ಷದೊಳಗಾಗಿ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸುತ್ತೇವೆ. ರಾಜ್ಯದಲ್ಲಿ …

Read More »

ಮತ ಕೇಳಲು ಯಾವ ಪಕ್ಷದ ಅಭ್ಯರ್ಥಿಯೂ ತಮ್ಮ ಗಲ್ಲಿಯಲ್ಲಿ ಬರುವಂತಿಲ್ಲ ವಾರ್ಡ್ ನಂ. 54ರ ರಹವಾಸಿಗಳ ಚುನಾವಣೆ ಬಹಿಷ್ಕರಿಸಿ, ಆಕ್ರೋಶ

ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ ನಂ. 54ರ ರಹವಾಸಿಗಳು ಚುನಾವಣೆ ಬಹಿಷ್ಕರಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 1995 ರಿಂದ ಇಲ್ಲಿನ ಚನ್ನಮ್ಮ ನಗರದ ಸ್ವಾಮಿನಾಥ್ ಕಾಲನಿ ಮತ್ತು ಸುತ್ತಲ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.1995ರಿಂದಲೂ ಮಹಾನಗರ ಪಾಲಿಕೆಗೆ ನಿಯಮಿತವಾಗಿ ತೆರಿಗೆ ಕಟ್ಟುತ್ತ ಬರಲಾಗುತ್ತಿದೆ. ಹೀಗಿದ್ದಾಗೂ ನೀರು, ವಿದ್ಯುತ್, ರಸ್ತೆ, ಒಳಚರಂಡಿ ಸೇರಿದಂತೆ ಯಾವ ಸೌಲಭ್ಯವನ್ನು ನೀಡಲು ಪಾಲಿಕೆ ಮುಂದಾಗಿಲ್ಲ ಎಂದು ನಾಗರಿಕರು …

Read More »

ಸಾಹುಕಾರ ನೀಗೆ ಸಿಕ್ಕಿದೆ ಹೊಸ ಅಸ್ತ್ರ ಗೇಮ್ ಒಂದೇ ಬಾಕಿ…!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಮುನ್ನವೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ತರೆಳಿರುವ ಮಾಜಿ ಸಚಿವ ರಮೇಶ್​​ ಜಾರಕಿಹೊಳಿ, ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ. ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ರಮೇಶ್​​ ಜಾರಕಿಹೊಳಿ ಠಿಕಾಣಿ ಹೂಡಿದ್ದರು. ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಪಾಲಿಕೆ …

Read More »