Breaking News
Home / ಜಿಲ್ಲೆ / ಬೆಳಗಾವಿ (page 229)

ಬೆಳಗಾವಿ

ಬೀದಿ ನಾಯಿಗಳ ಹಾವಳಿಯಿಂದ ಆಡು ಕುರಿ ಸೇರಿ ಒಟ್ಟು ಹದಿನೆಂಟು ಸಾವು

    ಅಥಣಿ: ತಾಲೂಕಿನ ಹುಳಗಬಾಳಿ ಗ್ರಾಮದ ರೈತನಾದ “ರಾಹು ಸಖಾರಾಮ್ ಖಾರೆ ” ವೆಂಬುವರ ಒಟ್ಟು ಇಪ್ಪತೈದು ಆಡು ಮತ್ತು ಕುರಿಗಳನ್ನ ರಾತ್ರಿ ಸಮಯದಲ್ಲಿ ಸೇಡ್ಡಿನಲ್ಲಿ ಕಟ್ಟಲಾಗಿತ್ತು. ನಿನ್ನೆ ರಾತ್ರಿ ಸುಮಾರು 11:30 ನಂತರ ಬೀದಿ ನಾಯಿಗಳ ಹಾವಳಿಯಿಂದ ಹದಿನೆಂಟು ಆಡು ಮತ್ತು ಕುರಿಗಳು ಪ್ರಾಣ ಕಳೆದುಕೊಂಡಿವೆ. ಇನ್ನು ಆರರಿಂದ ಏಳು ಆಡುಗಳು ಜಕಂ ಗೊಂಡು ಸಾವು ಬದುಕಿನ ಮದ್ಯ ಹೋರಾಡುತ್ತಿವೆ.         ಸುದ್ದಿ …

Read More »

ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

ಸೆಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸುವ ಮೂಲಕ ಚುನಾವಣೆ ವೇಳೆ ಶಾಂತತೆ ಕಾಪಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.     ಹೌದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಂಬಂಧ ಮಂಗಳವಾರ ಸಂಜೆ ಆರು ಗಂಟೆ …

Read More »

ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಠದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‌ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿತರಿಸಿದರು. ಮಂಗಳವಾರದಂದು ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಲೋಳಸೂರ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿ.ಜಿ, ಮಸಗುಪ್ಪಿ …

Read More »

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು : ಓರ್ವನ ಶವಪತ್ತೆ, ಮತ್ತೋರ್ವನ ಮೃತದೇಹಕ್ಕೆ ಹುಡುಕಾಟ

ಗೋಕಾಕ : ಘಟಪ್ರಭಾ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ವಾಹನ ಚಾಲಕ ಅಶೋಕ ಶ್ರೀಶೈಲ ಡಬ್ಬನ್ನವರ (26), ಪಾಮಲದಿನ್ನಿ ಗ್ರಾಮದ ಕ್ಲೀನರ್ ನಾಗಪ್ಪ ಕಾಡಪ್ಪ ಅಂಗಡಿ (38) ಮೃತರು. ಕಾಲುವೆಯ ಪಕ್ಕದಲ್ಲಿ ಖಾಸಗಿ ಹಾಲಿನ ಡೈರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು. ಹಾಲಿನ ವಾಹನ ಚಾಲಕ ನೀರು ತರಲು …

Read More »

ಸೈಲೆಂಟಾಗಿ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹಾದಿ ಹಿಡಿದ್ರಾ ಆನಂದ್ ಸಿಂಗ್​?

ಖಾತೆ ಹಂಚಿಕೆಯಾಗಿ 20 ದಿನಗಳೇ ಕಳೆದ್ರೂ, ಸಚಿವ ಆನಂದ ಸಿಂಗ್ ಮಾತ್ರ ಅಧಿಕೃತವಾಗಿ ಇಲಾಖೆಯ ಚಾರ್ಚ್ ತೆಗೆದುಕೊಳ್ಳದೆ ಹೊಸಪೇಟೆಯಲ್ಲಿ ಬೀಡು ಬಿಟ್ಟು ವೈಲೆಂಟ್​ ಸಚಿವ ಸೈಲೆಂಟ್​ ಆಗಿದ್ದಾರೆ. ಆರಂಭದಲ್ಲಿ ಖಾತೆ ಕ್ಯಾತೆ ತೆಗೆದು ಗದ್ದಲ ಎಬ್ಬಿಸಿದ್ದ ಸಚಿವರು ಸದ್ಯ ಸೈಲೆಂಟ್​ ಆಗಿದ್ದು, ಶಾಸಕ ರಮೇಶ್ ಜಾರಕಿಹೊಳಿ ಹಿಡಿದ ಹಾದಿ ತುಳಿತ್ತಿದ್ದಾರಾ? ಎಂಬ ಅನುಮಾನಗಳು ಶುರುವಾಗಿವೆ. ಸರ್ಕಾರಿ ಕಾರು ಬಳಸದೆ ತಮ್ಮ ಖಾಸಗಿ ಕಾರಿನಲ್ಲಿ ಓಡಾಟ ಮಾಡ್ತಿರೋ ಸಚಿವ ಆನಂದ ಸಿಂಗ್, …

Read More »

ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ: ಉಮೇಶ್ ಕತ್ತಿ

ಚಿಕ್ಕೋಡಿ: ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ ಎಂದು ವಿದ್ಯಾರ್ಥಿಗಳಲ್ಲಿ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳಿಂದ ಇಂದಿನಿಂದ ಶಾಲಾ ಕಾಲೇಜುಗಳನ್ನ ಆರಂಭಿಸಲಾಗಿದ್ದು, ಯಾವುದೇ ಭಯ, ಆತಂಕವಿಲ್ಲದೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕು. ಇಂದಿನಿಂದ ಶಾಲಾ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಗುಡಸ್ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬುವ ಕಾರ್ಯ ಮಾಡಿದರು. ಕೊರೊನಾ ಕುರಿತು ಸಕಲ ಮುನ್ನೆಚ್ಚರಿಕೆ …

Read More »

ಗೋವಾದಲ್ಲಿ ಆಲ್ಕೋಹಾಲ್‌ ಮ್ಯೂಸಿಯಂ!

ಪಣಜಿ: ಪ್ರವಾಸಿ ರಾಜ್ಯ ಗೋವಾದಲ್ಲಿ ಮೊದಲ ಆಲ್ಕೋಹಾಲ್‌ ಮ್ಯೂಸಿಯಂ ತೆರೆಯಲಾಗಿದೆ. ಸ್ಥಳೀಯ ವಿಶೇಷ ಮದ್ಯವೆನಿಸಿಕೊಂಡಿರುವ ಫೆನ್ನಿಯ ಪ್ರಸಿದ್ಧತೆಯನ್ನು ದೇಶ ವಿದೇಶಕ್ಕೆ ಹರಡಿಸುವ ಉದ್ದೇಶದೊಂದಿಗೆ ಈ ಮ್ಯೂಸಿಯಂ ತೆರೆಯಲಾಗಿದೆ. ಉದ್ಯಮಿ ನಂದನ್‌ ಕುಡcಡ್ಕರ್‌ “ಆಲ್‌ ಎಬೌಟ್‌ ಆಲ್ಕೋಹಾಲ್‌’ ಹೆಸರಿನ ಮ್ಯೂಸಿಯಂ ತೆರೆದಿದ್ದಾರೆ. ಕಾಂಡೋಲಿಮ್‌ ಬೀಚ್‌ ಗ್ರಾಮದ ಬಳಿ ಈ ಮ್ಯೂಸಿಯಂ ಇದೆ. ಇದರಲ್ಲಿ ವಿಶೇಷವಾಗಿ ಪೆನ್ನಿಗೆ ಸಂಬಂಧಪಟ್ಟ ಸಾಮಗ್ರಿಗಳನ್ನು ಪ್ರದರ್ಶಿಸಲಾಗುವುದು. ಹಿಂದಿನ ಕಾಲದಲ್ಲಿ ಪೆನ್ನಿಯನ್ನು ಸಂಗ್ರಹಿಸುಡುತ್ತಿದ್ದ ಬೃಹದಾಕಾರದ ಹೂಜಿಗಳು, ಪೆನ್ನಿಗೆ ಸಂಬಂಧಿಸಿದ …

Read More »

ನಡುರಾತ್ರಿ ರಂಗೇರಿದ ಬೆಳಗಾವಿ ರಾಜಕೀಯ: ಪಾಲಿಕೆ ಚುನಾವಣೆಗೆ ಕೈ-ಕಮಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಳಗಾವಿ: ಬೆಳಗಾವಿಯ ಮಹಾನಗರ ಪಾಲಿಕೆಯ ಚುನಾವಣೆಯ ಕಾವು ರಂಗೇರುತ್ತಿದೆ. ಸೆಪ್ಟೆಂಬರ್ 3 ರಂದು 58 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ನಡುರಾತ್ರಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿವೆ. ಬಿಜೆಪಿಯಿಂದ ರಾತ್ರಿ ತುರ್ತು ಸುದ್ದಿ ಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಾಸಕ ಅಭಯ್ ಪಾಟೀಲ್, ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ 21 ಜನರ ಅಭ್ಯರ್ಥಿಗಳ ಮೊದಲ ಹಂತದ ಮೊದಲ …

Read More »

ಬೆಳಗಾವಿ :ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ 28 ಜನರ ಬಂಧನ ನಗದು ಜಪ್ತಿ: ಡಿಸಿಪಿ ವಿಕ್ರಂ ಅಮಟೆ

ಬೆಳಗಾವಿ–  ಮೂರು ಕಡೆಗಳಲ್ಲಿ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 28 ಜನರನ್ನು ಬಂಧಿಸಿದ್ದಾರೆ. ಈ ಕುರಿತು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾ್ರೆ. ದಿ. 21/08/2021 ರಂದು ರಾತ್ರಿ  ಅಂಬೇಡ್ಕರ ನಗರದ ಸಾವ೯ಜನಿಕ ಸ್ಥಳದಲ್ಲಿ ಕುಳಿತುಕೊಂಡು  ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಣಕ್ಕೆ ಕಟ್ಟಿ ಅಂದರ ಬಾಹರ್ ಅನ್ನುವ ಜುಗಾರ ಆಟ ಆಡುತ್ತಿರುವವರ ದಾಳಿ ಮಾಡಿದ್ದು, ದಾಳಿ ಕಾಲಕ್ಕೆ 10 ಜನ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ.  ಅವರಿಂದ  …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕಾಂಗ್ರೆಸ್ ಪಟ್ಟಿ ರಾತ್ರೋ ರಾತ್ರಿ ಬಿಡುಗಡೆ, ಇಲ್ಲಿದೆ ಅಭ್ಯರ್ಥಿ ಗಳ ಡೀಟೇಲ್ಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ವಾರ್ಡ್ ನಂ 1– ಇಕ್ರಾ ಮುಲ್ಲಾ IQra mulla ವಾರ್ಡ್ ನಂ 2– ಮುಜಮ್ಮಿಲ್ಲ್ ಡೋಣಿ Mujammil doni ವಾರ್ಡ್ ನಂ– 3 ಜ್ಯೋತಿ ಕಡೋಲ್ಕರ್ Jyoti kadolkar ವಾರ್ಡ್ 4–ಲಕ್ಷ್ಮಣ ಬುರುಡ Laxman burud ವಾರ್ಡ್ ನಂ 5 ಅಫ್ರೋಜ್ ಮುಲ್ಲಾ Afroz mulla ವಾರ್ಡ್ ನಂ 6 ಮಹ್ಮದ ರಸೂಲ ಪೀರಜಾದೆ Mohmed rasool peerzade ವಾರ್ಡ್ ನಂ 7 ಗುಂಡು ಕುಕ್ಕಡೆ …

Read More »