ಬೆಳಗಾವಿ, : ಮುಸ್ಲಿಮರಿಲ್ಲದ ಮೊಹರಂ ಆಚರಣೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ?. ಮುಸಲ್ಮಾನರ ಸಂಖ್ಯೆಯೇ ಇಲ್ಲದ ಬೆಳಗಾವಿಯ ಹಳ್ಳಿಯೊಂದು ಈ ಹಬ್ಬವನ್ನು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ. ಬೆಳಗಾವಿಯ ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ. ಮೊಹರಂ, ರಂಜಾನ್ ನಂತರ ಎರಡನೇ ಪವಿತ್ರ ಹಬ್ಬವಾಗಿದೆ ಇಸ್ಲಾಮಿಕ್ ಕ್ಯಾಲೆಂಡರ್‌ನ ಮೊದಲ ತಿಂಗಳು ಬರುತ್ತದೆ. ಈ ವರ್ಷ ಜುಲೈ 31 ರಂದು ಪ್ರಾರಂಭವಾಗಿ ಆಗಸ್ಟ್ …
Read More »ಬೆಳಗಾವಿಯಲ್ಲಿ ಮಳೆ ಅಬ್ಬರಕ್ಕೆ ಮನೆ ಕುಸಿತ; ಮಹಿಳೆಗೆ ಗಂಭೀರ ಗಾಯ, ನಾಲ್ಕು ವಾಹನಗಳು ಜಖಂ
ಬೆಳಗಾವಿ: ಜಿಲ್ಲೆಯಾದ್ಯಂತ ಸುರಿಯುತ್ತಿವ ಭಾರಿ ಮಳೆಯಿಂದಾಗಿ ಮನೆಯೊಂದು ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ತಾಲೂಕಿನ ವಡಗಾಂವಿ ಪ್ರದೇಶದಲ್ಲಿ ನಡೆದಿದೆ. ವಡಗಾವಿಯ ಭಾರತ ನಗರದ ಎಡರನೇ ಕ್ರಾಸ್ನಲ್ಲಿ ಆನಂದ ಕಲ್ಲಪ್ಪ ಬಿರ್ಜೆ ಎಂಬುವವರಿಗೆ ಸೇರಿದ ಮನೆ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ನೆಲಸಮವಾಗಿದೆ. ಮನೆಯಲ್ಲಿ ಯಾರೂ ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಸಂಜೆಯಷ್ಟೇ ಮನೆಯಲ್ಲಿದ್ದ ಏಳು ಜನ ಕುಟುಂಬ ಸದಸ್ಯರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿತ್ತು. ಮನೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ …
Read More »ಬೆಳಗಾವಿ ಸ್ಮಾರ್ಟಸಿಟಿ ಪಟ್ಟಿಗೆ ಸೇರಿದ ನಂತರ ಇದರ ಚಿತ್ರಣವೇ ಬದಲ: ಆಕ್ರೋಶಗೊಂಡ ಜನ
ಬೆಳಗಾವಿ ಸ್ಮಾರ್ಟಸಿಟಿ ಪಟ್ಟಿಗೆ ಸೇರಿದ ನಂತರ ಇದರ ಚಿತ್ರಣವೇ ಬದಲಾಗುತ್ತದೆ ಎಂದು ಜನ ಬಯಸಿದ್ದರು. ಆದರೆ ಜನರ ಬಯಕೆ ಹುಸಿಯಾಗಿದೆ. ಕುಂದಾನಗರಿಯ ಹಳೆ ಗಾಂಧಿ ನಗರ ಲಕ್ಷ್ಮೀ ಗಲ್ಲಿ ಅವ್ಯವಸ್ಥೆಯ ಆಗರವಾಗಿದೆ. ಇದರಿಂದ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿ ನಿಂತಿರುವ ದೊಡ್ಡ ಪ್ರಮಾಣದ ನೀರು..ಕಟ್ ಆಗಿ ಜೋತಾಡುತ್ತಿರುವ ವಿದ್ಯುತ್ ತಂತಿ…ರಸ್ತೆ ಪಕ್ಕ ಪಾರ್ಕಿಂಗ್ ಮಾಡಿರುವ ಲಾರಿ..ನೀರಿನಲ್ಲಿಯೇ ನಿಂತು ಪ್ರತಿಭಟನೆ ಮಾಡುತ್ತಿರುವ ನಿವಾಸಿಗಳು..ಹೌದು ನೀವು …
Read More »ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ
ಬೆಳಗಾವಿ – ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಖಾನಾಪುರ ತಾಲೂಕಿನ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಡಿಡಿಪಿಐ ಬಸವರಾಜ ನಾಲತವಾಡ ಪ್ರಗತಿವಾಹಿನಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ತಾಲೂಕಿನ 22 ಶಾಲೆಗಳಿಗೆ ಈಗಾಗಲೆ ರಜೆ ಘೋಷಿಸಲಾಗಿತ್ತು. ಈಗ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಕಳೆದ ರಾತ್ರಿಯಿಂದ …
Read More »ಎಲ ಹಳ್ಳಿಗಳಲ್ಲೂ ಜೆಜೆಎಂ ಕಾಮಗಾರಿ ಪ್ರಗತಿ: ಯಾದವಾಡ
ರಾಮದುರ್ಗ: ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿವ ನೀರು ಕಲ್ಪಿಸಬೇಕೆಂಬ ಉದ್ದೇಶದೊಂದಿಗೆ ಮೊದಲ ಆದ್ಯತೆ ನೀಡಿ ಕೋಟ್ಯಾಂತರ ಅನುದಾನ ನೀಡಿದ್ದು, ತಾಲೂಕಿನಲ್ಲಿ ಎಲ್ಲ ಹಳ್ಳಿಗಳಲ್ಲಿಯೂ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ಹೊಸಕೇರಿ ಗ್ರಾಮದಲ್ಲಿ ಗ್ರಾಮೀಣ ಕುಡಿವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆ 99.47 ಲಕ್ಷ ರೂ. ಅನುದಾನದಲ್ಲಿ ಮನೆ- ಮನೆಗೆ ನಲ್ಲಿ ಜೋಡಣೆ ಕಾಮಗಾರಿಗೆ ಹಾಗೂ ಶಾಸಕರ ಪ್ರದೇಶಾಭಿವೃದ್ಧಿಯ 10 …
Read More »ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಅಪಘಾತಕ್ಕೀಡಾದ ಘಟನೆ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನಡೆದಿದೆ. ಹೌದು ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಬೆಳಗಾವಿ ಹಿರೇಬಾಗೇವಾಡಿ ಮಧ್ಯೆ ಕಮಕಾರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಬಸ್ ಪಲ್ಟಿಯಾಗಿದೆ.. ಸರಕಾರಿ ಬಸ್ ಕೊಲ್ಹಾಪೂರದಿಂದ ರಾಣೇಬೆನ್ನೂರಿಗೆ ಪ್ರಯಾಣ ಬೆಳೆಸಿತ್ತು. ಇದರಲ್ಲ್ಲಿ ಒಟ್ಟು ೩೫ ಜನ ಪ್ರಯಾಣ ಮಾಡುತ್ತಿದ್ದರು. ಜಿಟಿ ಜಿಟಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ …
Read More »ಬೆಳಗಾವಿಯಲ್ಲಿ ಇನ್ನೂ ಪತ್ತೆಯಾಗದ ಚಿರತೆ: ಹೊರಗೆ ಬಾರದ ಜನ
ಬೆಳಗಾವಿ: ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ನುಗ್ಗಿದ ಚಿರತೆ 24 ತಾಸುಗಳ ನಂತರವೂ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ನಿರಂತರ ಶೋಧ ನಡೆಸಿದ್ದಾರೆ. ಇನ್ನೊಂದೆಡೆ, ಚಿರತೆ ಭಯದಿಂದಾಗಿ ಈ ಪ್ರದೇಶದಲ್ಲಿ ಜನರು ಮನೆಯಿಂದ ಹೊರಬಂದಿಲ್ಲ. ಪ್ರತಿ ದಿನ ವಾಯು ವಿಹಾರಿಗಳಿಂದ ತುಂಬಿರುತ್ತಿದ್ದ ಇಲ್ಲಿನ ಜಾಧವ ನಗರ, ಹನುಮಾನ್ ನಗರ, ಸಹ್ಯಾದ್ರಿ ನಗರ, ಟಿ.ವಿ ಸೆಂಟರ್ ಮುಂತಾದ ಪ್ರದೇಶದ ರಸ್ತೆಗಳು ಶನಿವಾರ ಬೆಳಿಗ್ಗೆ ಬಿಕೋ ಎನ್ನುತ್ತಿದ್ದವು. ಶಾಲೆ, …
Read More »ಬಿಜೆಪಿ ಶಾಸಕರಿಗೆ ಗೌನ್ ಉಡುಗೊರೆ- ಶಾಸಕ ಸತೀಶ್ ಜಾರಕಿಹೊಳಿ
ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಮೇಯರ್, ಉಪಮೇರ್ ಆಗಿರುವ ಸ್ಥಳೀಯ ಬಿಜೆಪಿ ಶಾಸಕರಿಗೆ ಆ.9 ರಂದು ಕಾಂಗ್ರೆಸ್ ನಿಂದ ಗೌನ್ ಉಡುಗರೆ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. : ಇಂದು ಶನಿವಾರ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ರವರು, ವಿಧಾನ ಸಭೆಯ ಚುನಾವಣೆ ಮುಗಿಯುವವರೆಗೂ ಮೇಯರ್, ಉಪಮೇಯರ್ ಆಯ್ಕೆಯಾಗುವುದಿಲ್ಲ. ಈಗಾಗಲೇ ಅನಧಿಕೃತವಾಗಿ ಬೆಳಗಾವಿಯ …
Read More »600 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಿಂದ ರಸ್ತೆ, ಒಳಚರಂಡಿ ನಿರ್ಮಾಣ ಮಾಡಿದರೂ ಅದು ಸರಿಯಾಗಿಲ್ಲ:A.A.P.
ಬೆಳಗಾವಿ ಸ್ಮಾರ್ಟ್ ಸಿಟಿಯು ಮಹತ್ವದ ವಿಶ್ವಸಂಸ್ಥೆ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅರ್ಬನ್ ಅಫೆಸ್ 9 ಏರ್ಪಡಿಸಿದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿರುವುದು ಯಾವ ಮಾನದಂಡದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ತಂಡವನ್ನು ಬೆಳಗಾವಿಗೆ ಕಳುಹಿಸಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಪರಿಶೀಲನೆ ನಡೆಸಬೇಕು ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಆಗ್ರಹಿಸಿದ್ದಾರೆ. ಶನಿವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್‍ಕುಮಾರ್ ಟೋಪಣ್ಣವರ್ ರವರು, …
Read More »ಬ್ಯಾಂಕಿಂಗ್ ವ್ಯವಹಾರದಲ್ಲಿ ಗ್ರಾಹಕರಿಗೆ ತಿಳುವಳಿಕೆ ನೀಡುವುದು ಅತ್ಯವಶ್ಯ- ಕರ್ನಾಟಕ ಬ್ಯಾಂಕ್ ಎಂ.ಡಿ ಮಹಾಬಳೇಶ್ವರ್..!!
ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಕುರಿತು ಗ್ರಾಹಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ಕಾರ್ಯಮಾಡುತ್ತಿದೆ ಎಂದು ಬ್ಯಾಂಕ್‍ನ ಎಂಡಿ ಮಹಾಬಳೇಶ್ವರ್ ರವರು ತಿಳಿಸಿದ್ದಾರೆ. : ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. …
Read More »
Laxmi News 24×7