Breaking News
Home / ಜಿಲ್ಲೆ / ಬೆಳಗಾವಿ (page 230)

ಬೆಳಗಾವಿ

ಕಬ್ಬಿನ ಗದ್ದೆಯಲ್ಲಿ ಮಹಿಳೆಯೋರ್ವರ ಶವ ಪತ್ತೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಕೂಕಿನ ಕೋಳಿಗುಡ್ಡ ಗ್ರಾಮದ ಬಳಿ ಕಬ್ಬಿನ ಗದ್ದೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಗೋಕಾಕ್—ಅಥಣಿ ರಾಜ್ಯ ಹೆದ್ದಾರಿ 31 ರ ಹತ್ತಿರ ಇರುವ ಕಬ್ಬಿನ ಗದ್ದೆಯಲ್ಲಿ ಸುಮಾರು 35 ವರ್ಷದ ಮಹಿಳೆ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ತಂದ್ದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹಾರೂಗೇರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಮಹಿಳೆ ಯಾರು ಎಂದು ಗುರುತು ಪತ್ತೆಯಾಗಿಲ್ಲ. …

Read More »

ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು.

ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಶ್ರೀ ಸಂತೋಷ  ಜಾರಕಿಹೊಳಿ

Read More »

ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಕ್ರಮ: ಬಸವರಾಜ ಬೊಮ್ಮಾಯಿ

ಬೆಳಗಾವಿ: ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿ ಕೇಂದ್ರವನ್ನಾಗಿ ಮಾಡಲು ಸರಕಾರ ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೌಧವನ್ನು ಶಕ್ತಿಕೇಂದ್ರವನ್ನಾಗಿ ಮಾಡಲು ತಕ್ಷಣವೇ ಸಕ್ಕರೆ ಆಯುಕ್ತಾಲಯವನ್ನು ಬೆಳಗಾವಿಗೆ ಸ್ಥಳಾಂತರ ಮಾಡಲು ಆದೇಶ ನೀಡಲಾಗುವುದು ಎಂದು ಹೇಳಿದರು. ಇದಲ್ಲದೆ ಮಹತ್ವದ ಸರಕಾರಿ ಕಚೇರಿಗಳನ್ನು ಸಹ ಸುವರ್ಣ ಸೌಧಕ್ಕೆ …

Read More »

*ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ, * ಸುವರ್ಣ ಸೌಧ ಆಡಳಿತದ ಶಕ್ತಿ ಕೇಂದ್ರ ಬದ್ಧ.

ಬೆಳಗಾವಿ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯಲ್ಲಿ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಈ ಸಭೆಯಲ್ಲಿ ಬ್ಲ್ಯಾಕ್ ‌ಫಂಗಸ್ ಸೋಂಕಿತರು ಮನೆಗೆ ತೆರಳಿದ ಬಳಿಕವೂ ವಯಲ್ ಗಳನ್ನು ಪೂರೈಸಲು ಸರಕಾರ ‌ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನ ಸಿಎಂ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. * ಕೋವಿಡ್ ನಿರ್ವಹಣೆಗೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆಸ್ಪತ್ರೆ, ಆಕ್ಸಿಜನ್, ಔಷಧಿ ಮತ್ತಿತ್ತರ ವ್ಯವಸ್ಥೆ ಮಾಡಲಾಗಿದೆ. ಗಡಿ‌ …

Read More »

ಜೈಲಿನಿಂದ ಹೊರ ಬಂದ ಬಳಿಕ ಮೊದಲ ಪ್ರತಿಕ್ರಿಯೆ,ಜೈಲಿಗೆ ಬಂದು ಸಾಕಷ್ಟು ಓದುವುದನ್ನು ಕಲಿತೆ : ವಿನಯ್ ಕುಲಕರ್ಣಿ

ಬೆಳಗಾವಿ: ಬರೋಬ್ಬರಿ 9 ತಿಂಗಳ ಜೈಲು ವಾಸದ ಬಳಿಕ ಮಾಜಿ ಸಚಿವ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದು, ಆದೇಶ ಪ್ರತಿ ತಲುಪಿದ ಹಿನ್ನೆಲೆ ಇಂದು ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನಾನು ನಿರ್ದೋಷಿಯಾಗಿ ಹೊರಗೆ ಬರುತ್ತೇನೆ ಎಂದು ಈ ಹಿಂದೆಯೇ ಹೇಳಿದ್ದೆ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಈ ಹೋರಾಟದಿಂದ ಹೊರಗೆ ಬರುತ್ತೇನೆ. ರಾಜಕೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, …

Read More »

ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆ

ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದು, ಮಾಜಿ ಸಚಿವನಿಗೆ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. …

Read More »

ಸುವರ್ಣ ವಿಧಾನಸೌಧವನ್ನು ಶಕ್ತಿ ಕೇಂದ್ರವನ್ನಾಗಿಸಿ: ಅಶೋಕ ಪೂಜಾರಿ ಒತ್ತಾಯ

ಬೆಳಗಾವಿ: ‘ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯ ಮುಂದಾಲೋಚನೆಯಿಂದ ನಿರ್ಮಿಸಿರುವ ಇಲ್ಲಿನ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಕೈಗೊಳ್ಳಬೇಕು’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಒತ್ತಾಯಿಸಿದರು. ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಮಟ್ಟದ ಪ್ರಮುಖ ಕಚೇರಿಗಳು ಇಲ್ಲಿಗೆ ಬಂದರೆ ಹಾಗೂ ವಿಧಾನಮಂಡಲ ಅಧಿವೇಶನವನ್ನು ನಿಯಮಿತವಾಗಿ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರೆ ಮಾತ್ರ ಈ …

Read More »

ಇನ್ನೂ ಬಾರದ ಜಾಮೀನು ಆದೇಶ ಪ್ರತಿ: ಇನ್ನೊಂದು ದಿನ ಜೈಲಲ್ಲೇ ವಿನಯ್ ಕುಲಕರ್ಣಿ ವಾಸ್ತವ್ಯ

ಬೆಳಗಾವಿ: ಜಿ.ಪಂ ಸದಸ್ಯನ ಕೊಲೆ‌ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಶುಕ್ರವಾರವೂ ಬಿಡುಗಡೆ ಭಾಗ್ಯ ಸಿಗಲಿಲ್ಲ. ಜಾಮೀನು ಸಿಕ್ಕರೂ ಆದೇಶ ಪ್ರತಿ ಬಾರದ ಕಾರಣ ಇನ್ನೊಂದು ದಿನ‌ ಜೈಲಿನಲ್ಲಿ ಉಳಿಯಬೇಕಾದ ಅನಿವಾರ್ಯತೆ ಒದಗಿ ಬಂದಿದೆ. ಸುಪ್ರೀಂ ಕೋರ್ಟ್ ಮತ್ತು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದರೂ ಇನ್ನೊಂದು ದಿನ ಜೈಲಿನಲ್ಲಿ ಉಳಿಯಬೇಕಾಗಿದೆ.‌ ವರಮಹಾಲಕ್ಷ್ಮೀ ಹಬ್ಬದಂದು ಶುಕ್ರವಾರ ಬಿಡುಗಡೆ ಆಗಲಿಲ್ಲ. ಹಿಂಡಲಗಾ ಜೈಲಿನಿಂದ ಬಿಡುಗಡೆ …

Read More »

ಬೆಳಗಾವಿ, ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ, ಆದರು ಕಳೆದ 11 ವರ್ಷಗಳಿಂದ ಮೊಹರಂ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ.

ಬೆಳಗಾವಿ, ಆಗಸ್ಟ್ 20: ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ, ಆದರು ಕಳೆದ 11 ವರ್ಷಗಳಿಂದ ಮೊಹರಂ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಇಂತಹ ಧಾರ್ಮಿಕ ಸಾಮರಸ್ಯ ಕಂಡುಬಂದಿದ್ದು, ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಹರ್ಲಾಪುರ ಗ್ರಾಮದಲ್ಲಿ. ಇಲ್ಲಿ ಧಾರ್ಮಿಕ ಸಾಮರಸ್ಯದ ವಿಶಿಷ್ಟತೆಯನ್ನು ಗುರುತಿಸಬಹುದು. ಇಲ್ಲಿ ಹಿಂದೂ ಕುಟುಂಬಗಳು ನಿಧಿ ಸಂಗ್ರಹಿಸುವ ಮೂಲಕ 11 ವರ್ಷಗಳ ಹಿಂದೆ “ಫಕೀರ್ ಸ್ವಾಮಿ’ ದರ್ಗಾವನ್ನು ನಿರ್ಮಿಸಿದ್ದಾರೆ. ಪ್ರತಿವರ್ಷ ಹರ್ಲಾಪುರ ಗ್ರಾಮಸ್ಥರು ಹೊಸ ಇಸ್ಲಾಮಿಕ್ ವರ್ಷವನ್ನು …

Read More »

ಕುಡಚಿ ಪೋಲಿಸರ ನವರಂಗಿ ಆಟ, ಎಗ್ಗಿಲ್ಲದೇ ನಡೆಯುತ್ತಿದೆ ಮಟ್ಕಾ ಓಟ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ರಮ ಮಟ್ಕಾ ದಂಧೆ ಎಗ್ಗಿಲ್ಲದೆ ಸಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಗೋಕಾಕ್, ರಾಯಬಾಗ, ಘಟಪ್ರಭಾ, ಮೂಡಲಗಿ, ಕುಡಚಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಮಟಕಾ ಹಾವಳಿ ಮಿತಿ ಮೀರಿದೆ. ಈ ಮಟ್ಕಾ ದಂಧೆಗೆ ಬೀಟ್ ಪೊಲೀಸರ ಮುಖಾಂತರ ಪಿಎಸ್ಐ ಲೆವೆಲ್ ಅಧಿಕಾರಿಗಳು ಬುಕ್ಕಿಗಳ ಸಂಗ ಬೆಳೆಸಿದ್ದು, ಎಂಜಲ ಕಾಸಿಗಾಗಿ ಪೊಲೀಸರ ಕರಿ ನೆರಳಲ್ಲೇ ಈ ಅಕ್ರಮ ಮಟ್ಕಾ ದಂಧೆ ನಡೆಯುತ್ತಿದೆ. ಇನ್ನು ರಾಯಬಾಗ ತಾಲೂಕಿನ …

Read More »