ರಾಜ್ಯ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ.ನಾವು ಯಾರು ತೀರ್ಮಾನ ಮಾಡಕ್ಕಾಗಲ್ಲ.ನಮ್ಮ ನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನನ್ನ ಅಭಿಪ್ರಾಯ ಹೇಳೋದು ತಪ್ಪೇನಿಲ್ಲಲ್ಲ.ನಮ್ಮ ಸಂವಿಧಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು, ಯಾರೇ ಇದ್ರು ಬಾಯಿ ಮುಚ್ಚಿಕೊಂಡು ಕೆಲಸ …
Read More »ನನ್ನ ಅಶ್ಲೀಲ ವೀಡಿಯೊಗಳನ್ನು ಖಾಸಗಿ ವೆಬ್‍ಸೈಟ್‍ವೊಂದಕ್ಕೆ ರಾಜಕುಮಾರ್ ಟಾಕಳೆ ಮಾರಿಕೊಂಡಿದ್ದಾನೆ
ರಾಜಕುಮಾರ್ ಟಾಕಳೆ ನನ್ನನ್ನು ಮದುವೆಯಾಗಿ ನನ್ನೊಂದಿಗಿನ ಏಕಾಂತದಲ್ಲಿನ ವೀಡಿಯೋ ಮಾಡಿ ಅವನ್ನು ವೆಬ್‍ಸೈಟ್‍ವೊಂದಕ್ಕೆ ಮಾರಿಕೊಂಡಿರುವ ಬಗ್ಗೆ ನನಗೆ ಮಾಹಿತಿ ಇದೆ. ಆತನಿಂದ ನನಗೆ ಹನಿಟ್ರ್ಯಾಪ್ ಆಗಿದೆ. ಇದರಿಂದ ನನ್ನ ಹಣ ಹಾಗೂ ಗೌರವ ಹಾನಿಯಾಗಿದೆ ಎಂದು ನವ್ಯಶ್ರೀ ರಾವ್ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ನವ್ಯಶ್ರೀ ರಾವ್ ಸಾಮಾಜಿಕ ಜಾಲತಾಣದಲ್ಲಿ ಅವರ ಅಶ್ಲೀಲ ವಿಡಿಯೋ, PHOTO ವೈರಲ್ ಆದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದರು. ನಾನು ಭಾರತದಲ್ಲಿ ಇಲ್ಲದೇ ಇರೋ …
Read More »ನಮ್ಮ ಪಕ್ಷದ ಬಾಹುಬಲಿ ಜಮೀರ್: ಸತೀಶ ಜಾರಕಿಹೊಳಿ
ನಮ್ಮ ಪಕ್ಷದ ಉನ್ನತ ನಾಯಕ ಜಮೀರ್ ಅಹ್ಮದ್‌ಖಾನ್. ಅವರನ್ನು ನೀವು ಎಲ್ಲ ರೀತಿಯಿಂದ ಬೆಳಸಬೇಕು.ಅವರು ನಮ್ಮ ಪಕ್ಷದ ಬಾಹುಬಲಿ. ತಮ್ಮದೇ ಆದ ಶಕ್ತಿಯನ್ನು ಹೊಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ 3ರಂದು ಸಿದ್ದರಾಮಯ್ಯನವರ ಹುಟ್ಟು ಹಬ್ಬ ದಾವಣಗೆರೆಯಲ್ಲಿ ಮಾಡ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ ನಮ್ಮ ನಾಯಕ ಸಿದ್ದರಾಮಯ್ಯ ನವರ ಹುಟ್ಟು ಹಬ್ಬ ಆಚರಣೆ …
Read More »ಬೆಳಗಾವಿ: ಪ್ರೇಯಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ, ಕಾರಣ?
ಬೆಳಗಾವಿ: ಯುವಕನೋರ್ವ ಪ್ರೇಯಸಿಯ ಕೊಂದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬಸವ ಕಾಲೋನಿಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮದ್ಲೂರು ಗ್ರಾಮದ ರೇಣುಕಾ ಎಂಬುವಳನ್ನು ಬೂದಿಗೊಪ್ಪ ಗ್ರಾಮದ ರಾಮಚಂದ್ರ ತೆಣಗಿ (29) ಎಂಬಾತ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇತ್ತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಮಚಂದ್ರ ತೆಣಗಿ ರಾಜ್ಯಶಾಸ್ತ್ರದಲ್ಲಿ ಉನ್ನತ ಪದವಿ ವ್ಯಾಸಂಗ ಮಾಡುತ್ತಿದ್ದ. ಕೊಲೆಯಾದ ರೇಣುಕಾ …
Read More »ಈಶ್ವರಪ್ಪಗೆ ಕ್ಲೀನ್‌ಚಿಟ್: ನ್ಯಾಯ ಸಿಗುವವರೆಗೆ ಹೋರಾಟ; ಸಂತೋಷ್ ಸಹೋದರ ಪ್ರಶಾಂತ
ಬೆಳಗಾವಿ: ‘ಸಂತೋಷ್ ಪಾಟೀಲ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಸಹವರ್ತಿಗಳ ಮೊಬೈಲ್ ಸಂಭಾಷಣೆಯ ದಾಖಲೆಗಳನ್ನು ಪಡೆದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುತ್ತೇವೆ’ ಎಂದು ಸಂತೋಷ್ ಅವರ ಹಿರಿಯ ಸಹೋದರ ಪ್ರಶಾಂತ ಪಾಟೀಲ ತಿಳಿಸಿದರು. ಗುತ್ತಿಗೆದಾರ ಸಂತೋಷ್ ಪಾಟೀಲ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪ ಹೊತ್ತಿದ್ದ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್‌ಚಿಟ್ ನೀಡಿದ ಹಿನ್ನೆಲೆಯಲ್ಲಿ, ಅವರು ಗುರುವಾರ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರು. ‘ಆರೋಪಿ …
Read More »ಭಿಕ್ಷಾಟಣೆ ಮಾಡುತ್ತಿದ್ದ 8 ಜನ ಹೆಣ್ಣು ಮಕ್ಕಳು 2 ಜನ ಗಂಡು ಮಕ್ಕಳು ಹಾಗೂ 12 ಜನ ಮಹಿಳೆ ವಶಕ್ಕೆ
ಬೆಳಗಾವಿ ನಗರದ ಮಹಿಳಾ ಪೊಲೀಸ್ ಠಾಣೆಯ ಮಾನವ ಕಳ್ಳಸಾಗಾಣಿಕೆ ನಿಗ್ರಹ ಪಡೆ (AHTU) ಹಾಗೂ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098, ಕಾರ್ಮಿಕ ಇಲಾಖೆ, ಯೋಜನಾ ನಿರ್ದೇಶಕರು ಬಾಲ ಕಾರ್ಮಿಕ ಯೋಜನೆ ಬೆಳಗಾವಿ ಮತ್ತು ಸಮಾಲೋಚಕರ ಸಹಯೋಗದೊಂದಿಗೆ ಬೆಳಗಾವಿ ನಗರದ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕ ರಸ್ತೆಗಳ ಮೇಲೆ ಸಂಚರಿಸುವ ವಾಹನಗಳ ಸಿಗ್ನಲ್ ಹತ್ತಿರ ಭಿಕ್ಷಾಟಣೆ ಮಾಡುತ್ತಿದ್ದ 8 ಜನ ಹೆಣ್ಣು ಮಕ್ಕಳು 2 …
Read More »ಸಂಕೇಶ್ವರ : ಟಿಪ್ಪರ್ ಢಿಕ್ಕಿ ಹೊಡೆದು 50ಕ್ಕೂ ಹೆಚ್ಚು ಕುರಿಗಳ ಸಾವು
ಸಂಕೇಶ್ವರ : ಟಿಪ್ಪರ್ ವಾಹನವೊಂದು ಹಾಯ್ದು 50ಕ್ಕೂ ಅಧಿಕ ಕುರಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾಯ್ದು ವಾಹನ ಪಲ್ಟಿಯಾಗಿದೆ ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಮ್ಮಣಗಿ ಗ್ರಾಮದ ಕುರಿಗಾಯಿ ಹಾಲಪ್ಪ ಸಿದ್ದಪ್ಪ ಹೆಗಡೆ ಎಂಬುವವರಿಗೆ ಸೇರಿದ ಕುರಿಗಳು ಇದಾಗಿವೆ. ಘಟನಾ ಸ್ಥಳಕ್ಕೆ ಸಂಕೇಶ್ವದ ಪೋಲಿಸರು ಭೇಟಿ ನೀಡಿ ಪರಿಶೀಲನೆ …
Read More »ರಾಷ್ಟ್ರಪತಿ ಚುನಾವಣೆ:ಬಿಜೆಪಿ ಮಹಾನಗರ ಹಾಗೂ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ
ಬೆಳಗಾವಿ-: ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಗುರುವಾರ ಬೆಳಗಾವಿ ಗ್ಯಾಂಗವಾಡಿ ಮರಗಾಯಿದೇವಿ ಮಂದಿರದ ಬಳಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಬಿಜೆಪಿ ಪದಾದಿಕಾರಗಳ ಜೊತೆಗೆ ವಿಜಯೋತ್ಸವ ಆಚರಿಸಿ ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಸಿದರು. ಈ ವೇಳೆ ಮಾತನಾಡಿ ಶಾಸಕ …
Read More »ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ :ಕಾಂಗ್ರೆಸ್
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ …
Read More »ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್; ಕೆ.ಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.
Read More »
Laxmi News 24×7