Breaking News

ಬೆಳಗಾವಿ

ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು

ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.   ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು.   ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ.   ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.

Read More »

ಖಾನಾಪುರ ತಾಲೂಕಿನಲ್ಲಿ ರಸ್ತೆ ಮೇಲೆ ಬಿದ್ದ ಮರ: ತೆರವುಗೊಳಿಸದ ಅಧಿಕಾರಿಗಳ ನಿರ್ಲಕ್ಷ

ಖಾನಾಪುರ ತಾಲೂಕಿನ ಕಡತನ ಬಾಗೇವಾಡಿಯಿಂದ ಬೇಕವಾqಗೆÀ ಹೋಗುವ ರಸ್ತೆ ಮೇಲೆ ಪಕ್ಕದ ಗಿಡ ಮರಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅರಣ್ಯ ಇಲಾಖೆಯ ಈ ನಿರ್ಲಕ್ಷ್ಯ ಧೋರಣೆ ಹಾಗೂ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.ಹೌದು ಜೂನ್ ತಿಂಗಳಿನಿಂದ ಅಗಸ್ಟ್ ತಿಂಗಳವರೆಗೆ ಅತಿ ಹೆಚ್ಚು ಮಳೆಗಾಲದ ದಿನಗಳು, ಈ ದಿನಗಳಲ್ಲಿ ರಸ್ತೆ ಪಕ್ಕದಲ್ಲಿರುವ ಮರಗಳು ರಸ್ತೆಯ ಮೇಲೆ ಬಿದ್ದು ಸಾರ್ವಜನಿಕರಿಗೆ ತೊಂದರೆಗಳಾಗುವುದು ಜಾಸ್ತಿ. ಆದರೆ ಈ ರೀತಿ ಆಗಬಹುದಾದ …

Read More »

ಗೋಕಾಕ ತಾಲೂಕಿನ ಶಿಂಗಳಾಪುರ ಸೇತುವೆ ಮುಳುಗಡೆ

ಗೋಕಾಕ: ಮಳೆಯ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಮಟ್ಟ ಮೀರಿ ಹರಿಯುತ್ತಿದೆ. ಈ ಮಧ್ಯೆ ಶಿಂಗಳಾಪುರ ಸೇತುವೆ ಶನಿವಾರ ಮುಳುಗಡೆಯಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೇತುವೆ ಮೇಲಿನಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು ಜನ ಸಂಚರಿಸದಂತೆ ಎಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಗೋಕಾಕ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು ಸುರಕ್ಷತೆ ಬಗ್ಗೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.

Read More »

ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

    ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಆಗ್ರಹಿಸಿದರು.   ನಗರದ ಕಾಂಗ್ರೆಸ್‌ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ …

Read More »

ಆಲೂರು ವೆಂಕಟರಾವ ಕುರಿತ ಪುಸ್ತಕ ಬಿಡುಗಡೆಗೊಳಿಸಿದ ಅಶೋಕ ಚಂದರಗಿ

ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ಕಕವನ್ನು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಚಂದರಗಿ ಉದ್ಘಾಟಿಸಿದರು. ಶುಕ್ರವಾರ ಸಂಜೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಪ್ರಕಟಿಸಿರುವ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ತಕವನ್ನು ಅಶೋಕ ಚಂದರಗಿ ಲೋಕಾರ್ಪಣೆಗೊಳಿಸಿದರು. ಸಮಾರಂಭದಲ್ಲಿ ಸಾಹಿತಿ ಯ.ರು.ಪಾಟೀಲ, ಮಾಜಿ ಮೇಯರ್ ಹುಚ್ಚಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

200 ರೂದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ ಗೊಡಚಿನಮಲ್ಕಿ ದರ್ಶನ

ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ.   ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …

Read More »

ವಿದ್ಯುತ್ ಟಿಸಿ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸ್ ಫಾರ್ಮರ್‌ನಲ್ಲಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್‌ (ಟಿ.ಸಿ) ದುರಸ್ಥಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (38) ಟ್ರಾನ್ಸ್ ಫಾರ್ಮರ್‌ ಮೇಲೆಯೇ ಸಾವನ್ನಪಿದು.   ಎಲ್ಲವನ್ನೂ ಸರಿಯಾಗಿ ಚಕ್ ಮಾಡಿಕೊಂಡೆ ಕೆಲಸ ಶುರು ಮಾಡಿದ್ದ ಲೈನ್ ಮ್ಯಾನ್, …

Read More »

ಬೆಳಗಾವಿಯ ಬಿಮ್ಸ್​​ ರಾಜ್ಯಕ್ಕೆ ಪ್ರಥಮ.. ದೇಶದಲ್ಲಿ ಎಷ್ಟನೇ ಸ್ಥಾನ?

ಬೆಳಗಾವಿ: ಕಳೆದ ಎರಡು ವರ್ಷಗಳ ಹಿಂದಷ್ಟೇ ಅವ್ಯವಸ್ಥೆ ಸೇರಿ ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಿದ್ದ ಬೆಳಗಾವಿ ಬಿಮ್ಸ್‌ ಇದೀಗ ಉತ್ತಮ ಮೂಲಸೌಕರ್ಯ, ಆಡಳಿತ ಹಾಗೂ ರೋಗಿಗಳಿಗೆ ಉತ್ತಮ ಸೌಲಭ್ಯ ಒದಗಿಸಿದ್ದಕ್ಕಾಗಿ ದೇಶದ 270ಕ್ಕೂ ಅಧಿಕ ಸರ್ಕಾರಿ ಆಸ್ಪತ್ರೆಗಳ ಪೈಕಿ 12ನೇ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ಪಾತ್ರವಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಲ್ಲಾಸ್ಪತ್ರೆ) ಕೋವಿಡ್ ಸೇರಿದಂತೆ ಇತರ ಸಂದರ್ಭದಲ್ಲಿ ಅವ್ಯವಸ್ಥೆ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗುತ್ತಿತ್ತು. ಆದರೀಗ ಹದಗೆಟ್ಟ …

Read More »

ಬೆಳಗಾವಿಯಲ್ಲಿ ನಿರಂತರ ಮಳೆ ಮನೆಗಳು ಜಲಾವೃತ

ಬೆಳಗಾವಿ: ಪಶ್ಚಿಮಘಟ್ಟ ಸೇರಿ ಕುಂದಾನಗರಿ ಬೆಳಗಾವಿಯಲ್ಲಿ ನಿರಂತರ ಮಳೆಯಿಂದ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಮನೆಗಳು ಜಲಾವೃತಗೊಂಡ ನಿವಾಸಿಗಳು ಪರದಾಡುವಂತೆ ಆಗಿದೆ. ಅಲ್ಲದೇ, ನೀರು ಹೊರಗೆ ಹಾಕಲು ಹರಸಾಹಸ ಪಡುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೇಶವ ನಗರ, ಅನ್ನಪೂರ್ಣೇಶ್ವರಿ ನಗರದ ಮನೆಗಳಿಗೆ ನೀರು ನುಗ್ಗಿದೆ. ಕೇಶವ ನಗರದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಬಡಾವಣೆಗಳಲ್ಲಿ ಸರಿಯಾದ ಒಳ ಚರಂಡಿ ವ್ಯವಸ್ಥೆ ಮಾಡದ …

Read More »