Breaking News

ಬೆಳಗಾವಿ

ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ 30 ಡೆಸ್ಕ್ ಗಳನ್ನು ವಿತರಿಸಿದರ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ನಗರ ಪ್ರದೇಶದ ಶೈಕ್ಷಣಿಕ ವ್ಯವಸ್ಥೆಗೆ ಸರಿಸಮಾನ ಸೌಕರ್ಯಗಳನ್ನು ಗ್ರಾಮೀಣ ಭಾಗದ ಶಾಲೆಗಳೂ ಹೊಂದಿದಾಗ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಹೋಗಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ 30 ಡೆಸ್ಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿ ಶೈಕ್ಷಣಿಕ ವ್ಯವಸ್ಥೆಗಳನ್ನು ಸಬಲೀಕರಿಸಬೇಕಾದುದು ಅತ್ಯಗತ್ಯ. ಈ …

Read More »

ಜನವರಿ ನಂತರ ಸವದತ್ತಿಯಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸ್ಪಷ್ಟ ನಿರ್ಧಾರ: ಸತೀಶ ಜಾರಕಿಹೊಳಿ

ಸವದತ್ತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೇಳಲು ಆಗಲ್ಲ. ಜನವರಿ ನಂತರ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದು ಸ್ಪಷ್ಟವಾಗಲಿದೆ. ಜನವರಿ ನಂತರ ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯ ಡಿಸಿ ಕಚೇರಿ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಸವದತ್ತಿಯಲ್ಲಿ ಯಾವುದೇ ಗೊಂದಲ ಇಲ್ಲ, ಎಲ್ಲಾ ಕ್ಲಿಯರ್ ಇದೆ. ಸವದತ್ತಿಯಲ್ಲಿ ಗ್ರೌಂಡ್ ಸಿದ್ಧಪಡಿಸುತ್ತಿದ್ದೇವೆ. ಸ್ಥಳೀಯರು ಮತ್ತು …

Read More »

51.46 ಲಕ್ಷ ರೂಗಳ ಸಮುದಾಯ ಭವನ ಕಾಮಗಾರಿಗೆ ಶಾಸಕ ಕುಮಠಳ್ಳಿ ಚಾಲನೆ

ಯಾವುದೇ ಒಂದು ಕೆಲಸದ ಹಿಂದೆ ಹಲವಾರು ಜನರ ಪ್ರತ್ಯಕ್ಷ, ಅಪ್ರತ್ಯಕ್ಷ ಶ್ರಮವು ಇರುತ್ತದೆ, ಎಲ್ಲರ ಶ್ರಮದಿಂದ ಯಲಿಹಡಲಗಿ ಗ್ರಾಮದಲ್ಲಿ ಆದಿಬಣಜಿಗ ಸಮಾಜದ ಈ ಬೃಹತ್ ಸಮುದಾಯ ಭವನ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರು ಹೇಳಿದರು. ಅವರು ತಾಲೂಕಿನ ಯಲಿಹಡಲಗಿ ಗ್ರಾಮದಲ್ಲಿ ಸುಮಾರು 51.46 ಲಕ್ಷ ರೂಗಳ ಆದಿ ಬಣಜಿಗ ಸಮಾಜದ ಸಮುದಾಯ ಭವನದ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ ಆದಿ ಬಣಜಿಗ ಸಮಾಜದ ಜೊತೆ …

Read More »

ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿಕೊಠಡಿಗೆ ನುಗ್ಗಿ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ

ಬೆಳಗಾವಿ: ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕನೊಬ್ಬ ಬಸ್ ಸಂಚಾರ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ವಿಚಾರಣೆ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ‌ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಅಧಿಕಾರಿ ಮತ್ತು ಪ್ರಯಾಣಿಕ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ …

Read More »

ಬೆಳಗಾವಿ ಅತೀ ದೊಡ್ಡ ಜಿಲ್ಲೆಯಾಗಿರೋದರಿಂದ ನನಗೆ ಇಲ್ಲಿ ಸೇವೆ ಮಾಡಿದ್ದು ತೃಪ್ತಿ: S,P,ಲಕ್ಷ್ಮಣ್ ನಿಂಬರಗಿ

ಬೆಳಗಾವಿಯಲ್ಲಿ ನಿರ್ವಹಿಸಿದ ಸೇವೆ ನನಗೆ ನಿಜಕ್ಕೂ ಸಂತೋಷವನ್ನು ತಂದಿದೆ. ಈ ವೇಳೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಹಕರಿಸಿದ ಎಲ್ಲರಿಗೂ ವಿಶೇಷವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬೆಳಗಾವಿ ನಿರ್ಗಮಿತ ಎಸ್‍ಪಿ ಲಕ್ಷ್ಮಣ್ ನಿಂಬರಗಿ ಹೇಳಿದ್ದಾರೆ. ಬೆಳಗಾವಿಯಿಂದ ವರ್ಗಾವಣೆಗೊಂಡ ಎಸ್‍ಪಿ ಲಕ್ಷ್ಮಣ್ ನಿಂಬರಗಿ ನೂತನ ಎಸ್‍ಪಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಡಾ. ಸಂಜೀವ್ ಪಾಟೀಲ್‍ಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ …

Read More »

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ರಿಗೆ ಅಧಿಕಾರ ಹಸ್ತಾಂತರಿಸಿದರ ಲಕ್ಷ್ಮಣ ನಿಂಬರಗಿ

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ನಿರ್ಗಮಿತ ಎಸ್‍ಪಿ ಲಕ್ಷ್ಮಣ ನಿಂಬರಗಿ ಅಧಿಕಾರ ಹಸ್ತಾಂತರಿಸಿದರು. ಹೌದು ನಾಲ್ಕು ದಿನಗಳ ಹಿಂದೆ ಡಾ.ಸಂಜೀವ್ ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ನಿಕಟಪೂರ್ವ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರು ನೂತನ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಡಾ. ಸಂಜೀವ್ …

Read More »

ಬೆಳಗಾವಿಯಲ್ಲೊಂದು ಪೈಶಾಚಿಕ ಕೃತ್ಯಸ್ವಂತ ಮಗಳ ಮೇಲೆರಗಿದ ತಂದೆ; ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ…!

ಕುಂದಾನಗರಿ ಬೆಳಗಾವಿಯಲ್ಲೊಂದು ಪೈಶಾಚಿಕ ಕೃತ್ಯ ನಡೆದಿದ್ದು ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ ಐದು ವರ್ಷದ ಮಗಳ ಕೆನ್ನೆ ಮತ್ತು ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ಮಗಳ ಮೇಲೆಯೇ ತಂದೆಯೊಬ್ಬ ೫ ವರ್ಷದ ಮಗಳ ಕೆನ್ನೆ ಹಾಗೂ ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ತಂದೆ ಕಾಕಾತಿ ಪಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಆರ್‌ಎಂಪಿ ವೈದ್ಯನಾಗಿ …

Read More »

ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ.

ಬೆಳಗಾವಿಯ ಕೋಟೆ ಹಿಂದಿನ ಸಮರ್ಥ ನಗರದ ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತ ದೇಹ ಪತ್ತೆಯಾಗಿದೆ. ಹೌದು ಬೆಳಗಾವಿಯ ಕೋಟೆ ಹಿಂದೆ ಸಮರ್ಥನಗರದ ರೈಲು ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಮೃತ ಹುಸೇನ್‌ಗೆ ಎರಡು ಮಕ್ಕಳಿದ್ದಾರೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈತ ಮನೆಯಲ್ಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು …

Read More »

ಬೆಳಗಾವಿ ನಗರದ ಈ ಏರಿಯಾಗಳಲ್ಲಿ ಈ ರವಿವಾರ ದಿನಾಂಕ ೩ ರಂದು ಕರೆಂಟ್ ಇರಲ್ಲ

ಬೆಳಗವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವುದರಿಂದ ನೆಹರು ನಗರದ ವಿದ್ಯುತ್ ಪರಿವರ್ತಕ ಕೇಂದ್ರದಿ0ದ ಹೊರಡುವ ಪರಿವರ್ತಕಗಳ ಮೇಲೆ ಬರುವ ಸ್ಥಳಗಳಲ್ಲಿ ದಿನಾಂಕ ೦೩-೦೭-೨೦೨೨ ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕೆಲಸ ಕೈಗೊಳ್ಳುತ್ತಿರುವುದರಿಂದ ನೆಹರು ನಗರದ ೧೧೦/೩೩/೧೧ ಕೆವಿ ವಿದ್ಯುತ್‌ವಿತರಣಾ ಕೇಂದ್ರದಿ0ದ ಹೊರಡುವ ಸದರಿ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ ವಿದ್ಯುತ್ ದಿನಾಂ ೦೩-೦೭-೨೦೨೨ರಂದು ರವಿವಾರ ಮುಂಜಾನೆ ೧೦ ಗಂಟೆಯಿAದ ಸಾಯಂಕಾಲ …

Read More »

ಸುವರ್ಣ ವಿಧಾನ ಸೌಧಕ್ಕೆ ಕಚೇರಿ ಸ್ಥಳಾಂತರವಾಗಬೇಕು ಎಂದು ಹೋರಾಟ ನಡೆಸುತ್ತಿದ್ದೇವೆ. : ಅಶೋಕ ಚಂದರಗಿ

ಕಳೆದ ಹಲವಾರ ವರ್ಷಗಳಿಂದ ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಬೆಂಗಳೂರಿನಲ್ಲಿರುವ ಕಚೇರಿ ಸ್ಥಳಾಂತರವಾಗಬೇಕೆಂದು ಗಡಿಭಾಗದ ಕನ್ನಡಿರು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇದರ ನಡುವೆ ಬಿಜೆಪಿ ರಾಜ್ಯ ವಕ್ತಾರ ಮಹೇಶ ಸೌಧಕ್ಕೆ ಕಚೇರಿ ಸ್ಥಳಾಂತರವಾದರೆ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂಬ ಹೇಳಿಕೆಯನ್ನು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಖಂಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿಯ ಸುವರ್u ಸೌಧಕ್ಕೆ ಸರಕಾರಿ ಕಚೇರಿಗಳು ಸ್ಥಳಾಂತರವಾದರೆ ಮಾತ್ರ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂದು …

Read More »