: ಯಲ್ಲಮ್ಮನ ಗುಡ್ಡದಲ್ಲಿ ಸಡನ್ ಜೆಸಿಬಿ ದಾಳಿ ಎಲ್ಲ ಮನೆ ಗಳು ಧ್ವಂಸ ಸವದತ್ತಿ: ಸುಮಾರು ವರ್ಷ ಗಳಿಂದ ವಾಸಿಸುತ್ತಿದ್ದ ಲಂಬಾಣಿ ಜನರು ಅಲ್ಲಿ ಶೆಡ್ಡು ಗಳನ್ನ ನಿರ್ಮಿಸಿ ವಾಸಿಸುತ್ತಿದ್ದ ಜನರಿಗೆ ಇವಾಗ ಬಿಗ್ ಶಾಕ್ ಆಗಿದೆ ಜಿಸಿಬಿ ಹಿಂದ ಎಲ್ಲ ಶೆಡ್ಡು ಗಳಾನ ತೆರವು ಗೊಳಿಸಿ ಅವರಿಗೆ ಆಶ್ರಯ ಇಲ್ಲದಂತಾಗಿದೆ ಯಾಕೆ ಏಕಾ ಏಕಿ ಖಾಲಿ ಮಾಡಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಕೊಡದೆ ಲಾಟಿ ರುಚಿ ತೋರಿಸುವ ಮೂಲಕ …
Read More »‘ಆರ್‌ಎಸ್‍ಎಸ್ ನಪುಂಸಕ ಅಲ್ಲ. ಇಡೀ ದೇಶದ ಜನರೇ ಕಾಂಗ್ರೆಸ್ ಅನ್ನು ನಪುಂಸಕ ರೀತಿ ಮಾಡಿಟ್ಟಿದ್ದಾರೆ
ಬೆಳಗಾವಿ: ‘ತಮ್ಮ ಅಧಿಕಾರದ ಅವಧಿಯಲ್ಲಿ ಎಂದೂ ರೈತರ ಅಭಿವೃದ್ಧಿಗಾಗಿ ಶ್ರಮಿಸದ ಕಾಂಗ್ರೆಸ್, ಗೋಹತ್ಯೆ ಮಾಡುವವರಿಗೆ ಬೆಂಬಲ ನೀಡಿದೆ. ಹಾಗಾಗಿಯೇ ರೈತರ ಶಾಪ ತಟ್ಟಿದ್ದು, ಮುಂಬರುವ ದಿನಗಳಲ್ಲಿ ಆ ಪಕ್ಷ ಅಧಿಕಾರಕ್ಕೆ ಬಾರದು’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರಿಗೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರೂಪಿಸಿತ್ತು. …
Read More »ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 319ನೇ ರ್‍ಯಾಂಕ್
ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 319ನೇ ರ್‍ಯಾಂಕ್ ಗಳಿಸಿದ್ದಾರೆ. 2019ನೇ ಸಾಲಿನ ಪರೀಕ್ಷೆಯಲ್ಲಿ ಅವರು 663ನೇ ರ್‍ಯಾಂಕ್ ಗಳಿಸಿದ್ದರು. ಭಾರತೀಯ ಅಂಚೆ ಸೇವಾ ಇಲಾಖೆಯಲ್ಲಿ ದೆಹಲಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ನಡುವೆಯೂ ಪ್ರಯತ್ನ ಮುಂದುವರಿಸಿ ಫಲಿತಾಂಶ ಸುಧಾರಿಸಿಕೊಂಡಿದ್ದಾರೆ. ಹೋದ ಬಾರಿ ಐದನೇ ಸಲ ಪರೀಕ್ಷೆ ಬರೆದಿದ್ದರು. 6ನೇ ಬಾರಿಗೆ ಹೆಚ್ಚಿನ ಸಾಧನೆ ತೋರಿದ್ದಾರೆ. ಐಎಎಸ್ ಅಥವಾ ಐಪಿಎಸ್ ನಿರೀಕ್ಷೆಯಲ್ಲಿದ್ದಾರೆ.
Read More »ಜನರ ದಾರಿ ತಪ್ಪಿಸಬೇಕು ಎಂಬುದುR.S.S. ಅವರ ಹಿಡನ್ ಅಜೆಂಡಾ : ಲತೀಫ್‍ಖಾನ್ ಪಠಾಣ
ದಕ್ಷಿಣ ಕಾಶಿ ಎಂದು ನಮ್ಮ ಬೆಳಗಾವಿಯ ಕಪಿಲೇಶ್ವರ ಮಂದಿರಕ್ಕೆ ಪ್ರತೀತಿ ಇದೆ. ಅಷ್ಟು ದೊಡ್ಡ ದೇವಾಲಯ ಒಂದು ಸಣ್ಣ ದೇವಾಲಯವಾಗಿ ಉಳಿಯಲು ಕಾರಣ ಏನು..? ಆ ದೇವಸ್ಥಾನ ಕೆಡವಿ ಏನು ಕಟ್ಟಿದರು ಎಂದು ಎಂಐಎಂ ಪಕ್ಷದ ಮುಖಂಡ ಲತೀಫ್‍ಖಾನ್ ಪಠಾಣ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂಐಎಂ ಮುಖಂಡ ಲತೀಫ್‍ಖಾನ್ ಪಠಾಣ ಈಗಾಗಲೇ ಸಾಕಷ್ಟು ಬಾರಿ ನಾನು ಹೇಳಿದ್ದೇನೆ. 25-30 ವರ್ಷಕ್ಕಿಂತ ಮೊದಲು ಆರ್‍ಎಸ್‍ಎಸ್‍ನವರು ಇಡೀ …
Read More »ಪೊಲೀಸರ ಸೋಗಿನಲ್ಲಿ ಬಂದು ಬಂಗಾರ ಕದ ಖದೀಮರು!!
ಗೋಕಾಕ ನಗರದ ನವೀನ್ ಪೆಗ್ ಬಾರ್ ವಿದ್ಯಾ ನಗರದಲ್ಲಿ ಹಾಡು ಹಗಲೇ ಖದೀಮರ ತಂಡವೊಂದು ಮಹಿಳೆಯನ್ನು ಅಡ್ಡಹಟ್ಟಿ ನಾವು ಪೊಲೀಸರಿದ್ದಿವಿ.. ನಿಮಗೆ ಎಷ್ಟು ಕೂಗಿದರೂ ಸಹ ನೀವು ಕೇಳಲಿಲ್ಲ. ನೀವು ಹೆಮ್ಮೆಟ್ ಯಾಕೆ ಹಾಕಿಲ್ಲ ಅಂತ ಮಹಿಳೆಯನ್ನು ಮಾತಿಗೆಳೆದು ಮೈ ಮೇಲೆ ಈ ರೀತಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಆಕೆಗೆ ಬುದ್ದಿವಾದ ಹೇಳಿದಂತೆ ಮಾಡಿತ್ತಲೇ ಇನ್ನೊಂದು ಬೈಕ್ ಮೇಲೆ ಬಂಗಾರದ ಆಭರಣ ಹಾಕಿಕೊಂಡು ಬಂದ ಕಳ್ಳರ ಗುಂಪಿನ …
Read More »ಮೂಡಲಗಿ: ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ
ಮೂಡಲಗಿ: ‘ರಡ್ಡಿ ಸಮುದಾಯದ ಜನರು ದೇವಸ್ಥಾನದ ಜೊತೆಗೆ ಶಾಲೆ, ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸಮುದಾಯ ಭವನಗಳನ್ನು ನಿರ್ಮಿಸುವ ಮೂಲಕ ಸಮಗ್ರ ಸಮಾಜದ ಹಿತಕಾಯಬೇಕು’ ಎಂದು ಶಾಸಕ ರಾಮಲಿಂಗಾರಡ್ಡಿ ಅವರು ಹೇಳಿದರು. ತಾಲ್ಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ, ಕಳಸಾರೋಹ ಸಮಾರಂಭದಲ್ಲಿ ಮಾತನಾಡಿದ ಅವರು, ರಡ್ಡಿ ಸಮಾಜಕ್ಕೆ ದೊರಕಬೇಕಾದ ಸೌಲಭ್ಯ, ಅವಕಾಶಗಳ ಪಡೆಯುವ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಒಗ್ಗಟ್ಟಿನ ಮೂಲಕ ಮಾಡಬೇಕು ಎಂದರು. …
Read More »ಕಾಂಗ್ರೆಸ್‌ನಿಂದ ಎಷ್ಟು ಮಂದಿ ಬರ್ತಾರೆ ಕಾದು ನೋಡಿ: ಕಟೀಲ್
ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬಿಟ್ಟು ಬಹಳಷ್ಟು ಮಂದಿ ನಮ್ಮೊಂದಿಗೆ ಬರಲಿದ್ದಾರೆ. ಎಷ್ಟು ಜನ ಬರುತ್ತಾರೆ ಎನ್ನುವುದನ್ನು ಕಾದು ನೋಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು. ‘ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯವರಿಗೆ ಅಭ್ಯರ್ಥಿ ಇರಲಿಲ್ಲ’ ಎಂಬ ಶಿವಕುಮಾರ್ ಹೇಳಿಕೆಗೆ ಮೇಲಿನಂತೆ ಇಲ್ಲಿ ಗುರುವಾರ ಪ್ರತಿಕ್ರಿಯಿಸಿದರು. ಪಠ್ಯಕ್ರಮ ಪರಿಷ್ಕರಣೆ ವಿರೋಧಿಸಿ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, …
Read More »ಹಿಂದೂ ದೇವಸ್ಥಾನಗಳನ್ನು ಕೆಡವಿ ಅದರ ಮೇಲೆ ಕಟ್ಟಿರುವ ಒಂದೇ ಒಂದು ಮಸೀದಿಯನ್ನೂ ಬಿಡುವುದಿಲ್ಲ: ಈಶ್ವರಪ್ಪ
ಚಿಕ್ಕೋಡಿ: ಹಿಂದೂ ದೇವಸ್ಥಾನಗಳನ್ನು ಕೆಡವಿ ಅದರ ಮೇಲೆ ಕಟ್ಟಿರುವ ಒಂದೇ ಒಂದು ಮಸೀದಿಯನ್ನೂ ಬಿಡುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳಲಿ ಮಸೀದಿ ಒಂದೇ ಅಲ್ಲ. ದೇಶದಲ್ಲಿ 36 ಸಾವಿರ ದೇವಸ್ಥಾನಗಳನ್ನ ಪುಡಿ ಮಾಡಿ ಮಸೀದಿಗಳನ್ನು ನಿರ್ಮಿಸಲಾಗಿದೆ. ದೇವಸ್ಥಾನಗಳ ಮೇಲೆ ಕಟ್ಟಿರುವ ಒಂದೇ ಒಂದು ಮಸೀದಿಯನ್ನೂ ಬಿಡುವುದಿಲ್ಲ. ಅಂತಹ ಮಸೀದಿಗಳನ್ನು ಒಡೆದು 36 ಸಾವಿರ ದೇವಸ್ಥಾನವನ್ನು ಮತ್ತೆ …
Read More »ಪ್ರವಾಹ ನಿರ್ವಹಣೆ: ಸಿಎಂ ವಿಡಿಯೋ ಸಂವಾದ
ಜಲಾಶಯ ನೀರು ಬಿಡುಗಡೆ- ಮಹಾರಾಷ್ಟ್ರದ ಜತೆ ಸಮನ್ವಯ, ಮಾಹಿತಿ ವಿನಿಮಯಕ್ಕೆ ಸಿಎಂ ಬೊಮ್ಮಾಯಿ ಸೂಚನೆ ಬೆಳಗಾವಿ, ಮೇ 21(ಕರ್ನಾಟಕ ವಾರ್ತೆ): ಎಲ್ಲೆಡೆ ಮಳೆಯಾಗುತ್ತಿರುವುದರಿಂದ ನೆರೆಯ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಸಾಧ್ಯತೆ ಇರುತ್ತದೆ. ಆದ್ದರಿಂದ ಆ ರಾಜ್ಯದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಇಟ್ಟುಕೊಳ್ಳಬೇಕು. ಅಲ್ಲಿನ ಮಳೆಯ ಪ್ರಮಾಣ, ಜಲಾಶಯಗಳ ಸಂಗ್ರಹ ಮತ್ತಿತರ ವಿಷಯಗಳ ಕುರಿತು ನಿರಂತರವಾಗಿ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
Read More »ನೇಮಕಾತಿಗೆ ಗ್ರಹಣ, ಅಭ್ಯರ್ಥಿಗಳು ಹೈರಾಣ
ಬೆಳಗಾವಿ: ‘ನೇಮಕ ಪ್ರಕ್ರಿಯೆ ಆರಂಭಗೊಂಡು ನಾಲ್ಕು ವರ್ಷ ಕಳೆದರೂ ಮುಗಿಯುವ ಸೂಚನೆಗಳಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರೆ ನಿಖರವಾಗಿ ಮಾಹಿತಿಯನ್ನೂ ನೀಡುತ್ತಿಲ್ಲ. ದಿಕ್ಕೇ ತೋಚದಂತಾಗಿದೆ…’ -ಇದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಲ್ಲಿ (ಕೆಎಸ್‌ಆರ್‌ಟಿಸಿ) ಖಾಲಿ ಇರುವ ತಾಂತ್ರಿಕ ಸಹಾಯಕರು ಹಾಗೂ ಭದ್ರತಾ ರಕ್ಷಕ ಹುದ್ದೆಗಳಿಗೆ ಪರೀಕ್ಷೆ ಬರೆದಿರುವ ಉದ್ಯೋಗ ಆಕಾಂಕ್ಷಿಗಳ ಅಳಲು. ಕೋವಿಡ್-19 ಸಂಕಷ್ಟದಿಂದಾಗಿ ಉಂಟಾಗಿರುವ ಆರ್ಥಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕವಾಗಿ …
Read More »
Laxmi News 24×7