Breaking News
Home / ಜಿಲ್ಲೆ / ಬೆಳಗಾವಿ (page 270)

ಬೆಳಗಾವಿ

ಕೊರೊನಾ ವಿಶೇಷ ಪ್ಯಾಕೇಜ್​ ಗೆ ರಾಜ್ಯ ರೈತ ಸಂಘದ ಆಕ್ರೋಶ

ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಜೀವನ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವಿಶೇಷ ಆರ್ಥಿಕ ಪ್ಯಾಕೇಜ್​ ಬಗ್ಗೆ ರಾಜ್ಯ ರೈತ ಸಂಘ ಅಸಮಾಧಾನ ಹೊರಹಾಕಿದೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಈ ಆರ್ಥಿಕ ಪ್ಯಾಕೇಜ್​ ಮೂಲಕ ಸಿಎಂ ಯಡಿಯೂರಪ್ಪ ಬಡವರ ಕಣ್ಣೊರೆಸುವ ತಂತ್ರ ಮಾಡಿದ್ದಾರೆ ಎಂದು ಹೇಳಿದ್ರು. ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯಾವುದೇ ಅಂಶ ಈ ಪ್ಯಾಕೇಜ್​ನಲ್ಲಿಲ್ಲ. ಯಡಿಯೂರಪ್ಪ ಘೋಷಣೆ ಮಾಡಿದ ಈ …

Read More »

ತ್ಯಾಜ್ಯ ವಿಲೇವಾರಿಗೆ ನಿರ್ಲಕ್ಷ್ಯ

ಎಂ.ಕೆ. ಹುಬ್ಬಳ್ಳಿ : ಇಲ್ಲಿ ತ್ಯಾಜ್ಯ ವಿಲೇವಾರಿಗೆ ನಿರ್ಲಕ್ಷ್ಯ ವಹಿಸಿರುವುದು ನಿವಾಸಿಗಳಿಗೆ ತೊಂದರೆಯಾಗಿ ಪರಿಣಮಿಸಿದೆ. ತ್ಯಾಜ್ಯ ವಿಲೇವಾರಿ ಘಟಕ ಇಲ್ಲದಿರುವುದೂ ತೊಡಕಾಗಿದೆ. ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳು ಕಸದಿಂದ ತುಂಬಿವೆ. ಅದರಿಂದ ಹೊರಸೂಸುತ್ತಿರುವ ದುರ್ನಾತ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಬೆಳಗಾವಿಯಿಂದ ಧಾರವಾಡ ಕಡೆಯ 1, 2, 3 ಮತ್ತು 4ನೇ ವಾರ್ಡ್‌ಗೆ ಒಳಪಡುವ ಗಾಂಧಿ ನಗರ, ಬಸವ ನಗರ, ಚನ್ನಮ್ಮ …

Read More »

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …

Read More »

ಅಭಯ ಪಾಟೀಲ, ಅನಿಲ ಬೆನಕೆಯಿಂದ ಸ್ಥಳ ಪರಿಶೀಲನೆ

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ವಿನಂತಿ ಮೇರೆಗೆ ಎಲ್ & ಟಿ ಕಂಪನಿಯವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ. ಅಭಯ ಪಾಟೀಲ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ  ಆನಿಲ ಬೆನಕೆ ಇಂದು ಎಲ್ & ಟಿ ಕಂಪನಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಈ ಆಕ್ಷಿಜನ್ ಘಟಕ  ಸ್ಥಾಪನೆಯಾದಲ್ಲಿ ಸುಮಾರು 50 …

Read More »

ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿ

ಬೆಳಗಾವಿ – ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಕಳೆದ 15 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೋಯುಸಿರೆಳೆದರು. ಹನುಮಾನ್ ನಗರ ನಿವಾಸಿಯಾಗಿದ್ದ ಅವರಿಗೆ ತಂದೆ, ತಾಯಿ, ಪತ್ನಿ, ಮಗ, ಮಗಳು ಇದ್ದಾರೆ.

Read More »

ಗೋಕಾಕದಲ್ಲಿ ಭೀಕರ ಸರಣಿ ಅಪಘಾತ: ಮೂವರಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ …

Read More »

ಮೂಡಲಗಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ವ್ಯವಸ್ಥೆ: ತಹಶೀಲ್ದಾರ್ ಮೋಹನಕುಮಾರ್

ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …

Read More »

ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್

ಬೆಳಗಾವಿ: ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್ ನೀಡಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಪರಿಶೀಲನೆ ನಡೆಸಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆ ಪರಾಜಿತ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ನೇತೃತ್ವದಲ್ಲಿ ಪುಂಡರು ಬಿಮ್ಸ್ ಆಸ್ಪತ್ರೆಗೆ ನುಗ್ಗಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ನಿರುಪಯುಕ್ತ ಬೆಡ್‍ಗಳ ಬಳಿ ನಿಂತು ವೀಡಿಯೋ ಮಾಡಿಕೊಂಡು ಪೋಸ್ ನಿಡಿದ್ದಾರೆ. ಎಂಇಎಸ್ ಪುಂಡ ಶುಭಂ ಶೆಲ್ಕೆ …

Read More »

ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…

ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …

Read More »

ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕ ಜೀವನ್ಮರಣ ಹೋರಾಟ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದೆ. ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕನೊಬ್ಬ ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವ ಯುವಕ. ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ ಕುಲಾಲಿ ಮೇ 5ರಂದು ಕೋವಿಡ್ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ದೃಢವಾಗಿತ್ತು. ಕೋವಿಡ್ ದೃಢಪಡುತ್ತಿದ್ದಂತೆಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುಕನನ್ನು …

Read More »