Breaking News
Home / ಜಿಲ್ಲೆ / ಬೆಳಗಾವಿ (page 290)

ಬೆಳಗಾವಿ

ಕ್ಷೇತ್ರ ಮರಳಿ ಪಡೆಯಲು ಅವಕಾಶ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಇಪ್ಪತ್ತು ವರ್ಷಗಳ ಹಿಂದೆ ಕಳೆದುಕೊಂಡ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಮರಳಿ ಪಡೆಯುವುದಕ್ಕೆ ಈ ಉಪ ಚುನಾವಣೆ ಮೂಲಕ ಒಳ್ಳೆಯ ಅವಕಾಶ ಬಂದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಸ್ಪರ್ಧಿಸಲು ಆಸಕ್ತಿ ಇಲ್ಲವೆಂದು ಹೇಳುವುದಕ್ಕೆ ನಾನು ದೆಹಲಿಗೆ ಹೋಗಿರಲಿಲ್ಲ. ಬೇರೆ ಬೇರೆ ವಿಚಾರಗಳನ್ನು ಹೇಳಲು ತೆರಳಿದ್ದೆ. ನಾನೇ ಸ್ಪರ್ಧಿಸಬೇಕು ಎನ್ನುವುದು ಪಕ್ಷದ ನಿರ್ಧಾರ. …

Read More »

ಸುರೇಶ್‌ ಅಂಗಡಿ ಸಾವನ್ನು ಅರಗಿಸಿಕೊಳ್ಳಲು ಈಗಲೂ ಕಷ್ಟಪಡುತ್ತಿರುವ ಅವರ ಪತ್ನಿ ಮಂಗಳಾ ಅಂಗಡಿ

ಬೆಳಗಾವಿ:  ಸುರೇಶ್‌ ಅಂಗಡಿ ಸಾವನ್ನು ಅರಗಿಸಿಕೊಳ್ಳಲು ಈಗಲೂ ಕಷ್ಟಪಡುತ್ತಿರುವ ಅವರ ಪತ್ನಿ ಮಂಗಳಾ ಅಂಗಡಿ ಅವರು ಈಗ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ. ಪತಿ ಇಲ್ಲದ ಚುನಾವಣೆಯನ್ನು ನಿರೀಕ್ಷಿಸಿರಲಿಲ್ಲ ಎನ್ನುವ ಅವರು, ಸುರೇಶ್‌ ಅಂಗಡಿ 20 ವರ್ಷಗಳ ಕಾಲ ಮಾಡಿದ ಜನಸೇವೆ, ಜನಪರ ಕಾರ್ಯಕ್ರಮಗಳಿಂದಲೇ ತನಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಆಶೀರ್ವಾದವೇ ಶ್ರೀರಕ್ಷೆ ಎಂದುಜತೆ ಮಾತನಾಡುತ್ತಾ ಹೇಳಿಕೊಂಡಿದ್ದಾರೆ. – ಸುರೇಶ್‌ ಅಂಗಡಿ ಅವರಿಲ್ಲದ …

Read More »

ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು;

ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್​ 17ರಂದು ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯಿಂದ ಮಾಜಿ ಸಚಿವ ಸುರೇಶ್​ ಅಂಗಡಿ ಪತ್ನಿ ಮಂಗಳಾ ಅವರಿಗೆ ಟಿಕೆಟ್​ ಪಕ್ಕಾ ಆಗಿದೆ. ಹಾಗೇ ಕಾಂಗ್ರೆಸ್​​ನಿಂದ ಸತೀಶ್​ ಜಾರಕಿಹೊಳಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಈ ಉಪಚುನಾವಣೆಯ ಮೇಲೆ ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಕರಿನೆರಳು ಬಿದ್ದಿದೆ. ಸಿಡಿಗೆ ಸಂಬಂಧಪಟ್ಟಂತೆ ನಿನ್ನೆಯವರೆಗೂ ರಮೇಶ್​ ಜಾರಕಿಹೊಳಿಯವರ ಹೆಸರಷ್ಟೇ ಪ್ರಮುಖವಾಗಿ ಕೇಳುತ್ತಿತ್ತು. ಆದರೆ ನಿನ್ನೆಯಿಂದ ಕೆಪಿಸಿಸಿ ಅಧ್ಯಕ್ಷ …

Read More »

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ : ಬೆಳಗಾವಿ ಗಡಿ ರಸ್ತೆಗಳು ಬಂದ್!

ಬೆಳಗಾವಿ : ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಗ್ರಾಮಗಳಿಂದ ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿಸಲಾಗುತ್ತಿದೆ.   ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಗಡಿಜಿಲ್ಲೆಯ ಗ್ರಾಮಗಳಿಂದ ಜನರು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದಾರೆ. ಹೀಗಾಗಿ ಇದನ್ನು ತಪ್ಪಿಸಲು ಚಿಕ್ಕೋಡಿ ಹಾಗೂ ಅಥಣಿ ತಾಲೂಕಿನ ಅಧಿಕಾರಿಗಳೇ ರಸ್ತೆ ಬಂದ್ ಮಾಡಿಸಿದ್ದಾರೆ. …

Read More »

ವೈರಲ್ ಆಡಿಯೋ, ಎಫ್‌ಐಆರ್‌ಗೆ ಹೆದರಲ್ಲ ಎಂದ ರಮೇಶ್ ಜಾರಕಿಹೊಳಿ

ಬೆಂಗಳೂರು, ಮಾರ್ಚ್ 26: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಪೂರಕವಾಗಿ ಇಂದು ಆಡಿಯೋ ಸಂಭಾಷಣೆಯೊಂದು ಹೊರ ಬಂದಿದೆ. ಸಿಡಿಯಲ್ಲಿರುವ ಯುವತಿ ತಮ್ಮ ವಕೀಲ ಜಗದೀಶ್ ಕುಮಾರ್ ಮೂಲಕ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ಹಾಕಿದ್ದಾರೆ. ಈ ಪ್ರಕರಣದ ಎಲ್ಲಾ ಬೆಳವಣಿಗೆ ಬಗ್ಗೆ ಮೂರು ಬಾರಿ ಮಾಧ್ಯಮಗಳ ಮುಂದೆ ಬಂದ ರಮೇಶ್ ಅವರು ಸಂಜೆ ವೇಳೆಗೆ ಆಡಿಯೋ ಹಾಗೂ …

Read More »

ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಕೋವಿಡ್-೧೯ ಮತ್ತೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೆರೆಯ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆಯ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿಯನ್ನು ನೀಡಬೇಕು ಎಂದು …

Read More »

ಹೊಳಿ ದಿನವೇ ನಾಮಪತ್ರ, ಜನಸಾಮಾನ್ಯರ ಸಮಸ್ಯೆಗಳೇ ಚುನಾವಣೆ ಅಜೆಂಡಾ: ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ

ನನ್ನ ಮೇಲೆ ನಂಬಿಕೆ ಇರಿಸಿ ಎಐಸಿಸಿ ವರಿಷ್ಠರು ಲೋಕಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದ್ದಾರೆ. ಸೋಮವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ ಸೇರಿದಂತೆ ನಮ್ಮ ರಾಜ್ಯದ ನಾಯಕರು ಈ ವೇಳೆ ಹಾಜರಿರಲಿದ್ದಾರೆ. ಸಿಡಿ ಕೇಸಗೂ ನಮಗೂ ಸಂಬಂಧವಿಲ್ಲ, ನಮ್ಮ ಗೆಲುವಿಗೆ ಯಾವ ಅಡೆತಡೆಗಳೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾಜಿ ಸಚಿವ …

Read More »

ರಾಜ್ಯ ಕಾಂಗ್ರೆಸ್ ನಾಯಕರು ಚುನಾವಣೆಗೆ ಸ್ಪರ್ಧಿಸಲು ನನ್ನ ಹೆಸರನ್ನೇ ಹೈಕಮಾಂಡ್ ಗೆ ಕಳಿಸಲಿಲ್ಲ: ಪ್ರಕಾಶ ಹುಕ್ಕೇರಿ ಅಸಮಾಧಾನ

ಬೆಳಗಾವಿ : “ಬಿಜೆಪಿಯಿಂದ ಸುರೇಶ ಅಂಗಡಿ ಕುಟುಂಬದ ಯಾರಿಗೇ ಟಿಕೆಟ್ ನೀಡಲಿ, ನಾನು ಅವರ ಪರವಾಗಿ ಕ್ಷೇತ್ರದಲ್ಲೆಲ್ಲ ಸುತ್ತಾಡಿ ಪ್ರಚಾರ ಮಾಡುತ್ತೇನೆ. ನನ್ನ ಮಗನ ಚುನಾವಣೆಗೆ ಕೆಲಸ ಮಾಡಿದ ರೀತಿಯಲ್ಲೇ ಮಾಡುತ್ತೇನೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಏನ್ ಮಾಡುತ್ತೋ ಮಾಡ್ಕೊಳ್ಳಿ ನೋಡೋಣ” ಎಂದು ಸವಾಲೆಸೆದಿದ್ದ ಮಾಜಿ ಸಂಸದ, ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಇದೀಗ ಮಂಗಲಾ ಅಂಗಡಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರ  ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈಗ ತರಾತುರಿಯಲ್ಲಿ …

Read More »

ಮಾಧ್ಯಮ ಕಣ್ಗಾವಲು ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಭೇಟಿ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಸುದ್ದಿ ಮತ್ತು ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರಿಶ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ “ವಾರ್ತಾಭವನ” ದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಕಣ್ಗಾವಲು ಕೇಂದ್ರ(ಮೀಡಿಯಾ ಮಾನಿಟರಿಂಗ್ ಸೆಲ್)ಕ್ಕೆ ಗುರುವಾರ(ಮಾ.25) ಭೇಟಿ ನೀಡಿ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಪಕ್ಷ …

Read More »

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ನಾಯಕರ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಉಪಚುನಾವಣಾ ಅಖಾಡ ರಂಗೇರುತ್ತಿದ್ದು, ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಂದಾನಗರಿ ಬೆಳಗಾವಿಗೆ ಆಗಮಿಸಲಿದ್ದಾರೆ. ಮರುದಿನ, ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಮಾರ್ಚ್ 28ರಿಂದ ಉತ್ತರ ಕರ್ನಾಟ ಭಾಗದಲ್ಲಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ರಾಯಚೂರು ಹಾಗೂ …

Read More »