Breaking News

ಬೆಳಗಾವಿ

ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!

ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ …

Read More »

ವಡಗಾಂವ ನೇಕಾರ ಸಮಾಜದ ಮೂವರು ಆತ್ಮಹತ್ಯೆ: ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಕನ್ನಡ ಸಾಹಿತ್ಯ ಚುನಾವಣೆ ಗೋಕಾಕದಲ್ಲಿ ರಂಗೇರಿದೆ..   ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ, ಮೃತರ ಕುಟುಂಬಕ್ಕೆ ಪರಿಹಾರ ಕಲ್ಪಿಸುವುದಾಗಿ ಭರವಸೆ ..! ಬೆಳಗಾವಿ: ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ ಸಮಾಜ ಮೂವರು ಮೃತ ಕುಟುಂಬಸ್ಥರ ಮನೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು.   ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ …

Read More »

ಬಲೂನ್ ಸ್ಲೈಡ್‌ನಲ್ಲಿ ರಮೇಶ್ ಕತ್ತಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಳಗಾವಿ: ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಮಕ್ಕಳಂತೆ ಆಟವಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ರಮೇಶ್ ಕತ್ತಿ ಮಕ್ಕಳಂತೆ ಕುಣಿದು ಕುಪ್ಪಳಿಸಿ ಸಂತೋಷಪಟ್ಟಿದ್ದಾರೆ. ಬಲೂನ್ ಸ್ಲೈಡ್‌ನಲ್ಲಿ ಮಕ್ಕಳಂತೆ ಜಾರಿ ಆಟವಾಡಿದ ಮಾಜಿ ಸಂಸದ ರಮೇಶ್ ಕತ್ತಿಯವರ ಹುಡುಗಾಟಿಕೆಯನ್ನು ಕಂಡು ಸಾರ್ವಜನಿಕರು ನಕ್ಕು ನಲಿದಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ …

Read More »

ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟ, ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ  ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಶನಿವಾರ ಮನವಿ ಸಲ್ಲಿಸಲಾಯಿತು. ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟವಾಗಿದೆ. ನಿನ್ನೆ ನಂದಗಡದಲ್ಲಿ ಬೆಳೆ ನಷ್ಟದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೆಲ್ಲ ಉಲ್ಲೇಖಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರಿಗೆ ಮನವಿ …

Read More »

ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.

– ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. 5ನೇ ದಿನ ಪಕ್ಷೇತರ ಅಭ್ಯರ್ಥಿಯಾಗಿ ರಾಮದುರ್ಗ ತಾಲೂಕಿನ ಲಖನಾಯಕನಕೊಪ್ಪದ ಸಂಗಮೇಶ ನಾಗಪ್ಪ ಚಿಕ್ಕನರಗುಂದ ಎನ್ನುವವರ ನಾಮಪತ್ರ ಸಲ್ಲಿಸಿದ್ದಾರೆ. ಈವರೆಗೂ ಯಾವುದೇ ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ. ನ.23 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಬಿಜೆಪಿಯಿಂದ ಮಹಾಂತೇಶ ಕವಟಗಿಮಠ, ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಖಚಿತವಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

Read More »

ಸುವರ್ಣ ವಿಧಾನಸೌಧದಲ್ಲಿ ಡಿ.13ರಿಂದ ಚಳಿಗಾಲದ ಅಧಿವೇಶನ

ಬೆಂಗಳೂರು,ನ.20- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಸುವರ್ಣವಿಧಾನಸೌಧದಲ್ಲಿ ಉಭಯ ಸದನಗಳು ಸಮಾವೇಶಗೊಳ್ಳುವಂತೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯಪಾಲ ತಾವರ್‍ಚಂದ್ ಗೆಲ್ಹೋಟ್ ಅವರು ನಿನ್ನೆ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್‍ನ ಅಧಿವೇಶನಗಳನ್ನು ಕರೆದಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಒಂದು ಅಧಿವೇಶನವನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸಲಾಗಿತ್ತು. ಆನಂತರ ಈವರೆಗೂ ಅಧಿವೇಶನ ನಡೆಸಿಲ್ಲ. ಕಳೆದೆರಡು ವರ್ಷಗಳಿಂದ …

Read More »

ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,

*ಚಿಕ್ಕೋಡಿ ಬ್ರೇಕಿಂಗ್*   ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,   ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಕತೆ ರಮೇಶ್ ಚರ್ಚೆ,   ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ವಿವೇಕರಾವ್ ಪಾಟೀಲ್, ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಭೇಟಿ ನೀಡಿ ಮಾತುಕತೆ,   ಬಿಜೆಪಿಗೆ ಬರುವಂತೆ ವಿವೇಕ್ ಬಳಿ ಮನವಿ ಮಾಡಿರುವ ರಮೇಶ್ ಜಾರಕಿಹೊಳಿ,   ಸ್ವತಂತ್ರ ಸ್ಪರ್ಧೆಯ ಬಗ್ಗೆ ಇನ್ನೂ …

Read More »

ಲಖನ್ ಜಾರಕಿಹೊಳಿ ಅವರಿಗೆB.J.P. ಟಿಕೆಟ್ ನೀಡಿಲ್ಲ, ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ..?

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ 25 ಸ್ಥಾನಗಳಲ್ಲಿ 20 ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿಲ್ಲ. ಮಹಂತೇಶ್ ಕವಟಗಿಮಠ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಲಖನ್ ಜಾರಕಿಹೊಳಿಯವರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಟಿಕೆಟ್ ಕೈ ತಪ್ಪಿದೆ. …

Read More »

RTE ಶುಲ್ಕ ಮರುಪಾವತಿ’ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನ

ಬೆಂಗಳೂರು: 2021-22ನೇ ಸಾಲಿನ ಆರ್ ಟಿ ಇ ಶುಲ್ಕ ( RTE Seat School Fee ) ಮರುಪಾವತಿಗೆ ಬೇಡಿಕೆ ಸಲ್ಲಿಸಲು ತಂತ್ರಾಂಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ( School Education Department ) ಬಿಡುಗಡೆ ಮಾಡಿದೆ. ಈ ತಂತ್ರಾಂಶದಡಿ ಶಾಲಾ ಮುಖ್ಯಸ್ಥರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು, ಕ್ರಮ ಕೈಗೊಳ್ಳುವಂತೆ ತಿಳಿಸಿದೆ.   ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಹಕ್ಕು …

Read More »

ವಿಧಾನ ಪರಿಷತ್‌ ಚುನಾವಣೆ ಬೆನ್ನಲ್ಲೇ ರಮೇಶ ಜಾರಕಿಹೊಳಿ-ಕಾಗೆ ಭೇಟಿ: ಕುತೂಹಲ

ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ, ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಅವರು ಕಾಗವಾಡದ ಕಾಂಗ್ರೆಸ್‌ ನಾಯಕ ಭರಮಗೌಡ (ರಾಜು) ಕಾಗೆ ಅವರನ್ನು ಗುರುವಾರ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. ಹಲವು ಚರ್ಚೆಗಳಿಗೆ ಗ್ರಾಸವಾಗಿದೆ. ‌ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್‌ ಪಟ್ಟಣದ ನಿವಾಸದಲ್ಲಿ ಕಾಗೆ ಅವರನ್ನು ರಮೇಶ ಭೇಟಿಯಾದರು. ‘ಸಹೋದರ ಲಖನ್‌ ಜಾರಕಿಹೊಳಿ ವಿಧಾನಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು ನೀವು ಬೆಂಬಲ ಕೊಡಬೇಕು’ ಎಂದು ಕೋರಿದ್ದಾರೆ ಎನ್ನಲಾಗುತ್ತಿದೆ. ಬಳಿಕ …

Read More »