ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಪುನಾರಚನೆಯದ್ದೇ ಸದ್ದು. ಅದರಲ್ಲೂ ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಮತ್ತೊಂದು ಮಂತ್ರಿಗಿರಿ ಸಿಗುತ್ತಾ ಎಂಬ ಚರ್ಚೆ ಈಗ ಗಲ್ಲಿಯಿಂದ ದಿಲ್ಲಿಯವರೆಗೆ ಹಬ್ಬಿದೆ. ಸದ್ಯ ಜಿಲ್ಲೆಯ ಇಬ್ಬರು ಪ್ರಭಾವಿ ನಾಯಕರು ಸಚಿವ ಸಂಪುಟದಲ್ಲಿದ್ದರೂ, ಮತ್ತೊಂದು ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರಲ್ಲಿ ತೀವ್ರ ಪೈಪೋಟಿ ಆರಂಭವಾಗಿದೆ. ಐವರು ಶಾಸಕರಿಂದ ಹೈಕಮಾಂಡ್ ಮಟ್ಟದಲ್ಲಿ ಲಾಬಿ ಸದ್ಯ ಬೆಳಗಾವಿ ಜಿಲ್ಲೆಯಿಂದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. …
Read More »ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಬೆಳಗಾವಿ: ಬೆಳಗಾವಿಯ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿನ ಸ್ಟೀಮ್ ಹೆಚ್ ತರಬೇತಿ ಮತ್ತು ಸಂಶೋಧನಾ ಪ್ರತಿಷ್ಠಾನದ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ಸುಶಾಂತ ಲಕ್ಕಪ್ಪ ಬಂಡಿವಡ್ದರ ಹಾಗೂ ವಿಠ್ಠಲ ಮಲ್ಲಿಕಾರ್ಜುನ ಗದಗ ಎಂಬ ಇಬ್ಬರು ವಿದ್ಯಾರ್ಥಿಗಳು ಮಾರ್ಚ್ 11 ಮತ್ತು 12 ರಂದು ಬೆಂಗಳೂರಿನ ಗೀತಂ ವಿಶ್ವವಿದ್ಯಾಲಯದಲ್ಲಿ ಜರುಗಿದ ರಾಷ್ಟ್ರಮಟ್ಟದ ಕೊಡವಿಯರ್ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಸ್ಥಾನ ಗಳಿಸಿ ಅಂತರಾಷ್ಟ್ರೀಯ …
Read More »ಬೆಳಗಾವಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಯುವಕ ಸಾವು
ಬೆಳಗಾವಿ : ಕಟ್ಟಡಕ್ಕೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದ ಯುವಕನಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಮರ್ಪಕ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾನೆ ಎಂಬ ಗಂಭೀರ ಆರೋಪಿಸಲಾಗಿದೆ. ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ನಿವಾಸಿ ಶಿವು ಕಮ್ಮಾರ (22) ಮೃತ ದುರ್ದೈವಿ. ಯುವಕ ಬ್ರಹ್ಮನಗರದಲ್ಲಿರುವ ಕಟ್ಟಡಕ್ಕೆ ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಮೇಲ್ಬಾಗದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಬಿದ್ದ ತಕ್ಷಣವೇ ಸ್ಥಳೀಯರು ಅವನನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಗೆ …
Read More »ಬೆಳಗಾವಿಯಲ್ಲಿ ಏಪ್ರಿಲ್ 16ರಂದು “ಸ್ಪಂದನ ಮೆಲೋಡೀಸ್” ಸಂಗೀತ ಸಂಭ್ರಮ
ಲಿಂಗಾಯತ ಮಹಿಳಾ ಸಮಾಜ, ಕನ್ನಡ ಭವನ ಬೆಳಗಾವಿ ಇವರ ಸಹಯೋಗದಲ್ಲಿ “ಸ್ಪಂದನ ಮೆಲೋಡೀಸ್” ವತಿಯಿಂದ ಏಪ್ರಿಲ್ 16ರಂದು “ಜಾನೆ ಕಹಾಂ ಗಯೇ ವೋ ದಿನ್” (ಕಪೂರ್ ಕುಟುಂಬದ ಹಾಡುಗಳು) ಎಂಬ ವೈವಿಧ್ಯಮಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ಕನ್ನಡ ಭವನದಲ್ಲಿ ಸಂಜೆ 5.30ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಹಳೆಯ ಬಾಲಿವುಡ್‌ನ ಜನಪ್ರಿಯ ಹಾಡುಗಳ ಸವಿನೆನಪುಗಳನ್ನು ಸಂಗೀತಾಸಕ್ತರಿಗೆ ನೀಡಲಾಗುತ್ತದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೆಎಲ್ಇ ಸ್ಕೂಲ್ ಆಫ್ ಮ್ಯೂಸಿಕ್ ಕೋ-ಆರ್ಡಿನೇಟರ್ ಡಾ. ರಾಜೇಂದ್ರ …
Read More »ವಿಶ್ವದಲ್ಲಿ ಭಾರತ ನಿಂತಿರುವುದಕ್ಕೆ ಸಂವಿಧಾನದ ಆಶಯಗಳೇ ಕಾರಣ
ಬೆಳಗಾವಿ:ವಿಶ್ವದಲ್ಲಿ ಸದೃಢ ಪ್ರಜಾಪ್ರಭುತ್ವ ದೇಶವಾಗಿ ಭಾರತ ನಿಂತಿರುವುದಕ್ಕೆ ಸಂವಿಧಾನದ ಆಶಯಗಳೇ ಬಹುಮುಖ್ಯ ಕಾರಣ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಭಾರತೀಯನಿಗೆ ಸಾಮಾಜಿಕ ಸಮಾನತೆ ಸಿಗಬೇಕು. ಭ್ರಾತೃತ್ವ, ಸಹೋದರತ್ವದಿಂದ ಬಾಳಬೇಕು ಎಂಬ ವೈವಿದ್ಯಮಯ ಚಿಂತನೆಗಳಿಂದ ಕೂಡಿದ ಸಂವಿಧಾನವನ್ನು ಬಾಬಾ ಸಾಹೇಬ್‌ರು ನಮಗೆ ನೀಡಿದ್ದಾರೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ …
Read More »ಬೆಳಗಾವಿಯಲ್ಲಿ ಮರ್ಯಾದಾ ಹತ್ಯೆ ಪ್ರಕರಣ !!! ಬೇರೆ ರಾಜ್ಯದಲ್ಲಿ ಶವ ಸುಟ್ಟು ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪ್ರಕರಣವನ್ನು ಬೇಧಿಸಿದ ಸಿಪಿಐ ಜಾವೀದ್ ಮುಶಾಪುರೆ
ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಮರ್ಯಾದಾ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿದ್ದಾಳೆಂಬ ಕಾರಣಕ್ಕೆ ಸ್ವಂತ ಕುಟುಂಬದವರೇ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣವನ್ನು ಯಮಕನಮರ್ಡಿ ಸಿಪಿಐ ಜಾವೀದ್ ಮುಶಾಪುರೆ ಅವರು ಬೇಧಿಸಿದ್ದಾರೆ. ಪ್ರೀತಿ ಹಾಗೂ ಕುಟುಂಬದ ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಕ್ರೌರ್ಯಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಂತಾಗಿದೆ. ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸತ್ಯವ್ವ …
Read More »ಕೆರೂರ ಗ್ರಾಮದಲ್ಲಿ 110 ಕೆ.ವಿ. ಸ್ಟೇಶನ್ ಕಾಮಗಾರಿಗೆ 19 ಕೋಟಿ ರೂ. ಮಂಜೂರು – ಪ್ರಕಾಶ ಹುಕ್ಕೇರಿ
ಸಾರ್ವಜನಿಕರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಮತ್ತು ಶಾಸಕರಾದ ಗಣೇಶ ಹುಕ್ಕೇರಿ ಅವರು ಗ್ರಾಮದ ಅಭಿವೃದ್ಧಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಕೆರೂರ ಗ್ರಾಮದಲ್ಲಿ ಸುಸಜ್ಜಿತ 110 ಕೆ.ವಿ. ವಿದ್ಯುತ್ ಉಪಕೇಂದ್ರದ ಕಾಮಗಾರಿಗಾಗಿ ಬರೋಬ್ಬರಿ 19 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿಸುವಲ್ಲಿ ತಂದೆ ಹಾಗೂ ಮಗನ ಜೋಡಿ ಯಶಸ್ವಿಯಾಗಿದೆ. ಈ ಮಹತ್ವದ ಯೋಜನೆಯ ಅಧಿಕೃತ ಕಾಮಗಾರಿ …
Read More »ತರುಣ ಭಾರತ ದಿನಪತ್ರಿಕೆ ವಿರುದ್ಧ ಅಂಬೇಡ್ಕರ ಅಭಿಮಾನಿಗಳ ಆಕ್ರೋಶ
ತರುಣ ಭಾರತ ದಿನಪತ್ರಿಕೆ ಬೆಳಗಾವಿ ಈ ಪತ್ರಿಕೆಯಲ್ಲಿ ಇವತ್ತು ಬಾಬಾ ಸಾಹೇಬ ಅಂಬೇಡ್ಕರ ರವರಿಗೆ ಜಯಂತಿ ಶುಭಾಶಯ ಕೋರುವ ಬದಲು ಶ್ರದ್ಧಾಂಜಲಿ ಅಂತ ತರುಣ ಭಾರತ ಪತ್ರಿಕೆಯ ಮುಂಗಡ ಪೇಜ್ ನಲ್ಲಿ ಹಾಕಿದ್ದು ಇವತ್ತು ಬಾಬಾ ಸಾಹೇಬರ ಎಲ್ಲಾ ಅನುಯಾಯಿಗಳಿಗೆ ಹಾಗೂ ಅಭಿಮಾನಿಗಳಿಗೆ ದೇಶ ಪ್ರೇಮಿಗಳಿಗೆ ಅಗೌರವ ತೋರಿ ಅವಮಾನಿಸುವ ಪ್ರಯತ್ನ ಮಾಡಿದ್ದನ್ನು ಖಂಡಿಸಿ ಇವತ್ತು ತರುಣ ಭಾರತ ದಿನಪತ್ರಿಕೆ ಕಚೇರಿಗೆ ನುಗ್ಗಿ ಪತ್ರಿಕೆಯ ಸಂಪಾದಕರಿಗೆ ಮಾಲೀಕನಾದ ಕಿರಣ್ ಠಾಕೂರ್ …
Read More »ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದಕ್ಕಾಗಿ ಶಾಸಕ ಆಸಿಫ್ ರಾಜು ಸೆಟ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಚಾವಟಗಲ್ಲಿ ನಿವಾಸಿಗಳು
ಬೆಳಗಾವಿ ಬೆಳಗಾವಿ ಉತ್ತರ ಮತಕ್ಷೇತ್ರದ ಚಾವಟಗಲ್ಲಿ ರೇಹಿವಾಸಿಗಳು ತಮಗೆ ಕುಡಿಯುವ ನೀರಿನ ಸೌಲಭ್ಯ ನೀಡಿದ್ದಕ್ಕಾಗಿ ಹಾಗು ಬಹಳ ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಹದಿಗೊಟ್ಟು ಇರುವ ಕಾರಣದಿಂದಾಗಿ ಚಾವುಟದಲ್ಲಿ ನಿವಾಸಿಗಳಿಗೆ ಕುಡಿಯುವ ನೀರಿಗಾಗಿ ಪರದಾಟ ಮಾಡುವ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್ ರಾಜು ಸೇಟ್ ಗಮನಿಸಿ ಚವಟಗಲ್ಲಿ ನಿವಾಸಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದಕ್ಕಾಗಿ ಅಲ್ಲಿ ಮಹಿಳಾ ಸಂಘಟನೆ ಹಾಗೂ ವಿವಿಧ ನಾಗರಿಕರು ಬೆಳಗಾವಿ ಉತ್ತರ ಮತಕ್ಷೇತ್ರದ …
Read More »ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ ಮಾಡಲು “ಬುದ್ಧ, ಬಸವ, ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಡಾ.ಬಾಬಾಸಾಹೇಬ್ ಜನ್ಮದಿನಾಚರಣೆ ಅಂಗವಾಗಿ ನಗರದ ಡಾ.ಅಂಬೇಡ್ಕರ್ ಉದ್ಯಾನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶದಲ್ಲೇ ಮೊದಲ …
Read More »
Laxmi News 24×7