ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗಿದೆ. ವೀಕೆಂಡ್ ಕರ್ಪ್ಯೂ (Weekend Curfwe) ಹಿನ್ನೆಲೆ ನಿನ್ನೆ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಬಂದ್ ಘೋಷಿಸಲಾಗಿದೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ತರಕಾರಿ, ಹೂವು ಹಣ್ಣು, ಹಾಲು, ಮದ್ಯದಂಗಡಿ, ದಿನಸಿ ಅಂಗಡಿ ತೆರೆಯಬಹುದಾಗಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2ಗಂಟೆ ವರೆಗೆ ಮಾತ್ರ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ನೀಡಿದ್ದು, ಉಳಿದಂತೆ ಎಲ್ಲಾ …
Read More »ಮನೆ ಸೋರುತ್ತಿರುವುದರಿಂದ ನೆರವು ಕೇಳಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಅಜ್ಜಿಯ ನೋವಿಗೆ ಸ್ಪಂದಿಸಲು ಸ್ವತಃ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಭೆ ಬಿಟು ಅಜ್ಜಿ ನೋವಿಗೆ ಸ್ಪಂದಿಸಿದ ಬೆಳಗಾವಿ ಡಿಸಿ
ಬೆಳಗಾವಿ: ಮನೆ ಸೋರುತ್ತಿರುವುದರಿಂದ ನೆರವು ಕೇಳಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಅಜ್ಜಿಯ ನೋವಿಗೆ ಸ್ಪಂದಿಸಲು ಸ್ವತಃ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಗುರುವಾರ ಸಭೆ ಬಿಟ್ಟು ಬಂದು ಮನವಿ ಆಲಿಸಿ ಕೂಡಲೇ ಕ್ರಮಕ್ಕೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿ ಮಾನವೀಯತೆ ಮೆರೆದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಇದ್ದರು. ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕಚೇರಿಯ ಹೊರ ಭಾಗದಲ್ಲಿ ಗಣಪತಿ ಗಲ್ಲಿಯ …
Read More »ಗೋಕಾಕ್ ತಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳ ತೆರವು
ಘಟಪ್ರಭಾ : ಧುಪದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಿ.ಸ.ನಂ-120 ರಲ್ಲಿ ನೀರಾವರಿ ನಿಗಮಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣವಾಗಿ ನಿರ್ಮಿಸಿದ್ದ ಮನೆಗಳನ್ನು ಶುಕ್ರವಾರದಂದು ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪನವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ನೀರಾವರಿ ನಿಗಮದ ಕಛೇರಿ ಹಿಂದುಗಡೆ ಇರುವ ರಿ.ಸ.ನಂ-120 ರಲ್ಲಿ ಇರುವ ನೀರಾವರಿ ಇಲಾಖೆಗೆ ಸೇರಿದ 82 ಎಕರೆ ಜಮೀನಿನ ಪೈಕಿ ಸುಮಾರು 30 ಎಕರೆ ಜಮೀನು ಅತಿಕ್ರಮಣವಾಗಿತ್ತು. ಸುಮಾರು 30ಕ್ಕೂ ಹೆಚ್ಚು ಅನಧಿಕೃತ ಮನೆಗಳು ತೆರವುಗೊಳಿಸುವ ಕಾರ್ಯ ಮುಂದುವರೆದಿದ್ದು, …
Read More »ಬಿಜೆಪಿ ಅಧಿಕಾರದಲ್ಲಿರೋವರೆಗೂ ಕೇಂದ್ರದಿಂದ ಅನುದಾನ ಬರಲ್ಲ,ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಸಾಧ್ಯವಿಲ್ಲ
ಬೆಳಗಾವಿ: ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರೇ, ಈಗ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನಾವು ನೋಡಿದ್ದೇವೆ. ಹೀಗಾಗಿ, ಈಗ ಅಧಿಕಾರ ಸ್ವೀಕರಿಸಿರುವ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು. ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು, ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಪಂದಿಸಿರಲಿಲ್ಲ. ಕೊರೊನಾ …
Read More »ಜಿಲ್ಲೆಯಲ್ಲಿ ಪ್ರವಾಹದಿಂದ 7,800 ಕೋಟಿ ರೂಪಾಯಿ ಹಾನಿ: ವಿವರ ನೀಡಿದ ಗೋವಿಂದ ಕಾರಜೋಳ
ಬೆಳಗಾವಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಪ್ರವಾಹದಿಂದ 7800 ಕೋಟಿ ರೂಪಾಯಿ ಹಾನಿ ಆಗಿದೆ ಎಂದು ನೆರೆಪರಿಹಾರ ಕಾಮಗಾರಿ, ಕೊವಿಡ್ ನಿರ್ವಹಣೆ ಪರಿಶೀಲನೆ ಸಭೆ ಬಳಿಕ ಇಂದು (ಆಗಸ್ಟ್ 6) ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಈ ಬಾರಿ 51 ಕಾಳಜಿ ಕೇಂದ್ರಗಳಲ್ಲಿ 38 ಸಾವಿರ ಜನ ಆಶ್ರಯ ಪಡೆದಿದ್ದಾರೆ. ನೆರೆ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಜನರು, ಜಾನುವಾರುಗಳಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಎಂಟು ಹತ್ತು ದಿನ …
Read More »ಬೆಳಗಾವಿ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿ
ಬೆಂಗಳೂರು – ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಜ್ಞರ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ …
Read More »ಇಂದು 27 ಜನರಿಗೆ ಕೊರೋನಾ ಸೋಂಕು ಬೆಳಗಾವಿಯಲ್ಲಿ ಇಂದು ಮೂವರು ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಇಂದು 27 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವಿಗೀಡಾಗಿದ್ದಾರೆ. ರಾಯಬಾಗದ ಇಬ್ಬರು ಹಾಗೂ ಸವದತ್ತಿಯ ಓರ್ವರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನಲ್ಲಿ 11, ಚಿಕ್ಕೋಡಿಯಲ್ಲಿ 8, ಗೋಕಾಕಲ್ಲಿ 2, ಅಥಣಿ, ಬೈಲಹೊಂಗಲ, ಹುಕ್ಕೇರಿ, ಖಾನಾಪುರ, ರಾಯಬಾಗಗಳಲ್ಲಿ ತಲಾ ಒಬ್ಬರು ಹಾಗೂ ಇತರೇ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
Read More »ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ …
Read More »ಅನೇಕ ವರ್ಷಗಳಿಂದ ಒಂದೇ ಕಡೆ ಇದ್ದವರಿಗೆ ಬಿಗ್ ಶಾಕ್: 1817 ಪೊಲೀಸ್ ಸಿಬ್ಬಂದಿ ಎತ್ತಂಗಡಿ
ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದಾರೆ. ಒಂದೇ ಕಡೆ ಇದ್ದು ಹಿಡಿತ ಸಾಧಿಸಿದವರನ್ನು ಎತ್ತಂಗಡಿ ಮಾಡಲಾಗಿದೆ. 1817 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. 127 ಪಿಎಸ್‌ಐ, 130 ಎಸ್‌ಎಸ್‌ಐ, 999 ಹೆಡ್ ಕಾನ್ಸ್ಟೇಬಲ್, 561 ಕಾನ್ಸ್ಟೇಬಲ್ ಸೇರಿದಂತೆ 1817 ಸಿಬ್ಬಂದಿಯನ್ನು …
Read More »ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ
ಬೆಂಗಳೂರು: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಮದುವೆಯಾಗಿ ಹುಟ್ಟೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರು. ಪ್ರಾಣಕ್ಕೆ ಪ್ರಾಣ ಕೊಡುವಂತಿದ್ದ ಗೆಳೆಯನ ಮನೆಯಲ್ಲೇ ತನ್ನ ಪತ್ನಿ ಜತೆಗೆ ಗಂಡ ತಂಗಿದ್ದ. ಆದರೀಗ ಆತ ದುರಂತ ಅಂತ್ಯಕಂಡಿದ್ದಾನೆ… ಈ ಸಾವಿನ ಜಾಡು ಹಿಡಿದು ಹೊರಟ ಪೊಲೀಸರ ಮುಂದೆ ಬೆಚ್ಚಿಬೀಳಿಸೋ ಚೆಂದುಳ್ಳಿ ಚೆಲುವೆಯ ಅಸಲಿ ಮುಖ ಅನಾವರಣಗೊಂಡಿದೆ. ಇದು ಲವ್ ಮ್ಯಾರೆಜ್ ಮಾಡಿಕೊಂಡು ಹುಟ್ಟೂರು ಬಿಟ್ಟು ಬೆಂಗಳೂರಿಗೆ ಬಂದವಳ ಎರಡನೇ ಲವ್ ಸ್ಟೋರಿಗೆ ಅಮಾಯಕ ಬಲಿಯಾದ ದುರಂತ …
Read More »
Laxmi News 24×7