Breaking News

ಬೆಳಗಾವಿ

ಕಾಗವಾಡ, ಕುಗನೊಳ್ಳಿ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ, ಎಸ್‌ಪಿ ಭೇಟಿ

ಚಿಕ್ಕೋಡಿ : ಮಹಾರಾಷ್ಟ್ರದಿಂದ ಬೆಳಗಾವಿ‌ ಮೂಲಕ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ …

Read More »

ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.

ಗೋಕಾಕ : ಯುಕ್ರೇನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಿನಿಪುಟ್ ಬಾಲ್ ಸ್ಪರ್ಧೆಯಲ್ಲಿ ಇಂಡಿಯನ್ ಟೀಂ ಗೆ ಆಯ್ಕೆಯಾದ ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಸೂಚನೆಯಂತೆ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ ನೀಡಿ, …

Read More »

ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಹಿರಣ್ಯಕೇಶಿ ನದಿ ಪ್ರವಾಹದಿಂದ ಮನೆ ಕುಸಿದು ಬಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಗ್ರಿ ಕೊಚ್ಚಿಕೊಂಡು ಹೋಗಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ನಿಸರ್ಗ ದೇಸಾಯಿ ಎಂಬ ಎಂಟು ವರ್ಷದ ಬಾಲಕಿ ಪುಸ್ತಕ, ಆಟಿಕೆ ಸಾಮಾಗ್ರಿ, ಟಿವಿ ಕಳೆದುಕೊಂಡು ಕಣ್ಣೀರಿಟ್ಟಿದ್ದಳು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬಾಲಕಿಗೆ ಪುಸ್ತಕ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಡುವಂತೆ ಸಿಎಂ …

Read More »

ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.  

*ದಿನಾಂಕ 01:08:21 ರಿಂದ 10:08:21 ರ ವರೆಗೆ* ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.   *ಇ-ಕೆವೈಸಿ ಎಂದರೇನು?* ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ನ ಜೋಡಣೆಯ ಉದ್ದೇಶದಿಂದ ಪಡೆಯುವ ಬೆರಳಚ್ಚು ಆಗಿದೆ.   *ಇ-ಕೆವೈಸಿ ಏಕೆ ಮಾಡಿಕೊಳ್ಳಬೇಕು?* ಒಂದು ವೇಳೆ ಇ-ಕೆವೈಸಿ ಆಗದ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕುವ ಅಥವಾ ಪಡಿತರ ನಿಲ್ಲಿಸುವ ಸಂಭವವಿರುವುದರಿಂದ …

Read More »

ಯಾವುದೇ ಸಂಘದ ಅಭಿವೃದ್ಧಿಯಲ್ಲಿ ಅಧ್ಯಕ್ಷರು, ಅಧಿಕಾರಿಗಳ ಪಾತ್ರ ಪ್ರಮುಖವಾಗಿರುತ್ತದೆ: ಸತೀಶ ಜಾರಕಿಹೊಳಿ

        ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು.   ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳು ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು.   ಯಾವುದೇ ಸಂಘ …

Read More »

ಚಿಕ್ಕೋಡಿ: ಕಾಲೇಜು ಕಾಂಪೌಂಡ್​ ಗೋಡೆಗೆ ಅಳವಡಿಸಿದ್ದ ಗೇಟ್​​ ಆಕಸ್ಮಿಕವಾಗಿ ಬಿದ್ದ ಕಾರಣ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವು

ಚಿಕ್ಕೋಡಿ: ಕಾಲೇಜು ಕಾಂಪೌಂಡ್​ ಗೋಡೆಗೆ ಅಳವಡಿಸಿದ್ದ ಗೇಟ್​​ ಆಕಸ್ಮಿಕವಾಗಿ ಬಿದ್ದ ಕಾರಣ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಚಿಕ್ಕೋಡಿಯ ಆರ್.ಡಿ ಕಾಲೇಜಿನಲ್ಲಿ ನಡೆದಿದೆ. ಚಿಕ್ಕೋಡಿ ನಗರದ ಇಂದಿರಾನಗರ ನಿವಾಸಿಯಾಗಿದ್ದ ಸೂಫಿಯಾನ್ ರಾಜು ಮುಲ್ಲಾ (10) ಮೃತ ದುರ್ದೈವಿ. ಬಾಲಕ ಗೇಟ್ ದಾಟಿ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.

ಬೆಳಗಾವಿ – ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು ತಿಳಿಸಿದ್ದಾರೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೊರೋನಾ ಏರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಳಗಾವಿಯಲ್ಲಿ ಸಧ್ಯ 567 ಸಕ್ರೀಯ ಪ್ರಕರಣಗಳಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿಯಲ್ಲಿ ಕೊರೋನಾ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಮುಂದುವರೆದ ಮಳೆಯ ಅಬ್ಬರ; ಬೆಳಗಾವಿ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 60 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿಯಲ್ಲಿ 3.70 ಲಕ್ಷ ಕ್ಯುಸೆಕ್ ಹೊರ ಹರಿವು ಉಂಟಾಗಿದೆ. ಈಗಾಗಲೇ‌ 105 ಟಿಎಂಸಿ ಸಾಮರ್ಥ್ಯದ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯ 90 ಟಿಎಂಸಿ ಭರ್ತಿಯಾಗಿದ್ದು, ಮಳೆ ಮುಂದುವರೆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಕೃಷ್ಣಾ ನದಿಗೆ ಬಿಡುವ ಸಾಧ್ಯತೆ ಇದೆ. ಇದರಿಂದ ಬೆಳಗಾವಿ ಜಿಲ್ಲೆಯ …

Read More »

ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನ

ಬೆಳಗಾವಿ – ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದಾಗಿ ಅವರು ಬೆಳಗಾವಿಯ ವಿಶ್ವೇಶ್ವರ ನಗರದ ನಿವಾಸದಲ್ಲಿ ಕೊನೆಯುಸಿರೆಳೆದರು. ನಿವೃತ್ತ ಶಿಕ್ಷಕರಾಗಿರುವ ಅವರಿಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣುಕ್ಕಳಿದ್ದಾರೆ. ಬೆಳಗಾವಿಯ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.

Read More »

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವೃದ್ಧ.

      ಬೆಳಗಾವಿ : ಬೆಳಗಾವಿಯ ಹಳೆ ಗಾಂಧಿನಗರದ ಬಳಿಯಿರುವ ರೈಲು ಹಳಿಯ ಮೇಲೆ ವೃದ್ಧನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.     ಬೆಳಗಾವಿಯ ಹಳೆ ಗಾಂಧಿನಗರ ಹೈವೆ ಸೇತುವೆ ಹತ್ತಿರ ಇರುವ ರೈಲು ಹಳಿಯ ಮೇಲೆ ಆ ವೃದ್ಧ ಬೆಳಿಗ್ಗೆಯಿಂದ ಕುಳಿತಿದ್ದನಂತೆ, ಮಧ್ಯಾಹ್ನ 3:15 ರ ವೇಳೆಗೆ ಬೆಳಗಾವಿ – ಶೇಡಬಾಳ ರೈಲು ಸಾಂಬ್ರಾ ಕಡೆಯಿಂದ ಬರುತ್ತಿದ್ದಂತೆಯೇ ತಕ್ಷಣ ಹಳಿಯ …

Read More »