Home / ಜಿಲ್ಲೆ / ಬೆಳಗಾವಿ (page 33)

ಬೆಳಗಾವಿ

ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.:C.M.

ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿಬರಲಿ ಎಂದು ಹಾರೈಸುತ್ತೇನೆ.

Read More »

ಕುಡಿಯಲು ಹಣ ನೀಡುವಂತೆ ಮನೆಯವರಿಗೆ ಪೀಡಿಸುತ್ತಿದ್ದ ಯುವಕನ ಹೊಡೆದು ಕೊಂದ ತಂದೆ, ಸಹೋದರ!

ಚಿಕ್ಕೋಡಿ: ಕುಡಿತದ ಚಟಕ್ಕೆ ದಾಸನಾಗಿ ಕುಟುಂಬಸ್ಥರನ್ನು ಪೀಡಿಸುತ್ತಿದ್ದ ಯುವಕನನ್ನು ಸ್ವಂತ ತಂದೆ ಮತ್ತು ಅಣ್ಣನೇ ಹೊಡೆದು ಸಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಸೋಮಯ್ಯ ಮಹಾಲಿಂಗಯ್ಯ ಹಿರೇಮಠ (24) ಮೃತ ದುರ್ದೈವಿ. ಆರೋಪಿಗಳಾದ ಮಹಾಲಿಂಗಯ್ಯ ಗುರುಸಿದ್ದಯ್ಯ ಹಿರೇಮಠ, ಬಸಯ್ಯ ಹಿರೇಮಠ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾರುಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ : ಜುಲೈ 10ರಂದು ಸೋಮಯ್ಯ ಮದ್ಯಪಾನ ಮಾಡಲು ಹಣ …

Read More »

ದೇಗುಲದ ಗರ್ಭಗುಡಿ ಮೇಲೆ ಕೋಳಿ ಮರಿಗಳನ್ನು ಹಾರಿಸಿ ಹರಕೆ ತೀರಿಸುವ ವಿಶಿಷ್ಟ ಪದ್ಧತಿ

ಬೆಳಗಾವಿ : ಜಾತ್ರೆಗಳಲ್ಲಿ ನಡೆಯುವ ರಥೋತ್ಸವಗಳಲ್ಲಿ ಸಾಮಾನ್ಯವಾಗಿ ಬಾಳೆಹಣ್ಣು, ಉತ್ತತ್ತಿ ಮುಂತಾದವುಗಳನ್ನು ದೇವರಿಗೆ ಎಸೆಯುವುದನ್ನು ನಾವು ನೋಡಿದ್ದೇವೆ. ಆದರೆ, ಬೆಳಗಾವಿಯಲ್ಲಿ ನಡೆಯುವ ಜಾತ್ರೆಯೊಂದರಲ್ಲಿ ಗರ್ಭಗುಡಿ ಮೇಲೆ ಕೋಳಿ ಮರಿಗಳನ್ನು ಎಸೆಯುವ ವಿಶಿಷ್ಟ ಪದ್ಧತಿಯಿದೆ. ವಡಗಾವಿ ಆರಾಧ್ಯ ದೇವಿ ಮಂಗಾಯಿದೇವಿ ಜಾತ್ರೆಯಲ್ಲಿ ಕೋಳಿ ಮರಿಗಳನ್ನು ಗರ್ಭಗುಡಿ ಮೇಲೆ ಎಸೆಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ಬಳಿಕ ಬರುವ ಮಂಗಳವಾರದಿಂದ ಮಂಗಾಯಿ ದೇವಿ ಜಾತ್ರೆ ಪ್ರಾರಂಭವಾಗುತ್ತದೆ. ಅದ್ಧೂರಿ …

Read More »

ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಹಿಳೆಯೊಬ್ಬರು ಮಗಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಇಂಚಲ (34) ಮತ್ತು ಚಾಂದಿನಿ ಇಂಚಲ (7) ಆತ್ಮಹತ್ಯೆ ಮಾಡಿಕೊಂಡವರು. ಸಹೋದರ ಹಾಗೂ ನಾದಿನಿಯ ಕಿರುಕುಳದಿಂದ ಬೇಸತ್ತ ಗೃಹಿಣಿ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸೈನಿಕನೊಂದಿಗೆ ಮಹಾದೇವಿ ವಿವಾಹವಾಗಿದ್ದರು. ಏಳು ವರ್ಷಗಳ ಹಿಂದೆ ಅವರ ಪತಿ ಅಕಾಲಿಕ ಮರಣ ಹೊಂದಿದ್ದರು. ಹೀಗಾಗಿ ಈ …

Read More »

14 ದಿನ ಜೈನಮುನಿ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ

ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಡಿವೈಎಸ್ಪಿ ಬಸವರಾಜ ಯಲಿಗಾರ ಸಿಪಿಐ ಆರ್.ಆರ್.ಪಾಟೀಲ್ ಅವರ ತಂಡ ಹಿಂಡಲಗಾ ಜೈಲಿನಿಂದ ವಶಕ್ಕೆ ಪಡೆದಿದೆ. ಆರೋಪಿಗಳ ಆರೋಗ್ಯವನ್ನು ಚಿಕ್ಕೋಡಿ ತಾಲೂಕಾ ಆಸ್ಪತ್ರೆಯಲ್ಲಿ ಪರೀಕ್ಷಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು 14 ದಿನಗಳ ಕಸ್ಟಡಿಗೆ ಕೋರಲಾಗಿದೆ. ಜುಲೈ 5 ರಂದು ಇಡೀ ರಾಜ್ಯವಷ್ಟೇ ಅಲ್ಲ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕೋಡಿ ತಾಲೂಕಿನ ಜೈನ ಮುನಿ …

Read More »

ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ನೀರಲ್ಲಿ ಕೊಚ್ಚಿ ಹೋದ ಇಬ್ಬರು

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಕರು ಕೊಚ್ಚಿ ಹೋಗಿರುವ ಘಟನೆ ಮೂಡಲಗಿ ತಾಲೂಕಿನ ಅವರಾದಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ಬಿದ್ದಿದ್ದು, ಅವರಾದಿ ಗ್ರಾಮದ ಚನ್ನಪ್ಪ ಹರಿಜನ(30), ದುರ್ಗವ್ವ ಹರಿಜನ(25) ಕೊಚ್ಚಿಹೋದ ಸಂಬಂಧಿಗಳು ಎಂದು ಗುರುತಿಸಲಾಗಿದೆ.   ಅವರಾದಿ ಗ್ರಾಮದಿಂದ ಮಹಾಲಿಂಗಪುರ ಪಟ್ಟಣಕ್ಕೆ ಇಬ್ಬರು ಹೊರಟಿದ್ದರು. ಈ ವೇಳೆ, ನಿಯಂತ್ರಣ ತಪ್ಪಿ ಬೈಕ್, ಸೇತುವೆ ಮೇಲಿಂದ ನೀರಿನಲ್ಲಿ ಬಿದ್ದಿದೆ.‌ ಬ್ರಿಡ್ಜ್ …

Read More »

ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದ ಗೃಹ ಸಚಿವ ಜಿ.ಪರಮೇಶ್ವರ

ಚಿಕ್ಕೋಡಿಯ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ರಾಜ ಮಹಾರಾಜರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಜೈನ್ ಮುನಿಗಳಿಗೆ, ಜೈ‌ನ್ ಬಸದಿಗಳಿಗೆ ಸರ್ಕಾರ ರಕ್ಷಣೆ ನೀಡುವಂತೆ ಆಗ್ರಹಿಸಿ ಸಲ್ಲೇಖನ ವ್ರತ ಕೈಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರು ನವಗ್ರಹ ಕ್ಷೇತ್ರಕ್ಕೆ ಭೇಟಿ ಕೊಟ್ಟು ಜೈನ್ ಮುನಿಗಳಿಗೆ ರಕ್ಷಣೆ ನೀಡುವ ಭರವಸೆ ನೀಡಿದರು. …

Read More »

ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಬಿಜೆಪಿ ನಾಯಕರಿಗೆ ಟಾಂಗ್

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಮುಳುಗಡೆ ಸಂತ್ರಸ್ತರಿಗೆ 5 ಸಾವಿರ ಕೋಟಿ ರೂ ಅಲ್ಲ, 5 ಪೈಸೆಯೂ ಪರಿಹಾರ ಕೊಟ್ಟಿಲ್ಲ ಎಂದು ಬಿಜೆಪಿ ನಾಯಕರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಟಾಂಗ್ ಕೊಟ್ಟಿದ್ದಾರೆ. ಕೃಷ್ಣಾ ತೀರದ ಜನರಿಗೆ ಬಜೆಟ್ ನಲ್ಲಿ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂಬ ಮಾಜಿ ಸಚಿವ ಮುರುಗೇಶ ನಿರಾಣಿ ಆರೋಪಕ್ಕೆ ಇಂದು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಐದು ಸಾವಿರ …

Read More »

ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸುತ್ತಿದ್ದೇವೆ- ಬೆಳಗಾವಿ ಎಸ್ಪಿ

ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಭೀಕರ ಕೊಲೆ ಪ್ರಕರಣವನ್ನು ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ್​ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದಲ್ಲಿ ಶ್ರೀಗಳ ಮೃತದೇಹಗಳ ಅಂತಿಮ ಕಾರ್ಯಗಳ ಸಕಲ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳ ಪಾರ್ಥಿವ ಶರೀರವನ್ನು ಬೆಳಗಾವಿಯಲ್ಲಿ ಪರೀಕ್ಷೆ ನಡೆಸಿ …

Read More »

ಕಾಮಕುಮಾರ​ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಬಿಜೆಪಿ‌ ಶಾಸಕ ಅಭಯ ಪಾಟೀಲ್​ ಸರ್ಕಾರವನ್ನು ಒತ್ತಾಯ

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈ‌ನ‌ ಮುನಿಗಳಾದ ಕಾಮಕುಮಾರ​ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಆಗ್ರಹಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುನಿಗಳು ಹಣಕಾಸಿನ ವ್ಯವಹಾರ ಮಾಡಿದ್ದಾರೆ ಎಂದು ಪೊಲೀಸರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಜೈನ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ. ಪ್ರಕರಣದ ತನಿಖೆ ಅನುಮಾನ ಮೂಡಿಸುವಂತಿದೆ. ಹಾಗಾಗಿ ಸಿಬಿಐಗೆ …

Read More »