Breaking News

ಬೆಳಗಾವಿ

ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು ಅಭಿವೃದ್ಧಿಯತ್ತ …

Read More »

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:   ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ …

Read More »

ಪುಟಾಣಿ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಬೆಳಗಾವಿ; ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಉಣಿಸಿ ಕೊಂದ ತಂದೆಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಂಗ್ರಾಳಿ ಕೆ.ಹೆಚ್. ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅನಿಲ್ ಚಂದ್ರಕಾಂತ್ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ, ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಕ್ಕಳಾದ 8 ವರ್ಷದ ಅಂಜಲಿ ಹಾಗೂ 4 ವರ್ಷದ ಅನನ್ಯಾ ಮೃತಪಟ್ಟಿದ್ದು, ತಂದೆ ಅನಿಲ್ ಸ್ಥಿತಿ ಗಂಭೀರವಾಗಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು …

Read More »

ಮಹಾರಾಷ್ಟ್ರ ಕಡೆಯಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ಪ್ರವೇಶ

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಆ ರಾಜ್ಯಗಳಿಂದ ಬರುವ ವಾಹನಗಳನ್ನು ತಡೆದು‌ ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಇರುವವರಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ. ಇಲ್ಲವಾದಲ್ಲಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಾಗವಾಡ ಹಾಗೂ ಕೊಗನೋಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ನಸುಕಿನಲ್ಲಿ ಕೆಲವು ಖಾಸಗಿ ಬಸ್‌ಗಳನ್ನು ವಾಪಸ್ ಕಳುಹಿಸಲಾಗಿದೆ. ಅವರ ಬಳಿ …

Read More »

ಬೆಳಗಾವಿ: ಅಗ್ನಿಶಾಮಕ ದಳದವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಬೆಳಗಾವಿ: 2015ರಿಂದ 2020ರ ಅವಧಿಯಲ್ಲಿ ಶ್ಲಾಘನೀಯ ಕಾರ್ಯನಿರ್ವಹಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿಗೆ ಮುಖ್ಯಮಂತ್ರಿಯವರ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಮಂಗಳವಾರ ಪ್ರದಾನ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲಿನಲ್ಲಿ ಸಮಾರಂಭದಲ್ಲಿ, ಇಲ್ಲಿನ ಅಗ್ನಿಶಾಮಕ ಠಾಣೆಯ ಪ್ರಕಾಶ್ ಶಿಂಧೆ, ರಾಜ್ಯ ವಿಪತ್ತು ಸ್ಪಂದನಾ ಪಡೆ ‘ಸಿ’ ಕಂಪನಿಯ ಅಜಿತ ದುಂಡಪ್ಪ ಹಾಗೂ ಕಿರಣ ಕುರಬೇಟ ಪದಕಕ್ಕೆ …

Read More »

ತಂದೆಯ ಪಾರ್ಥಿವ ಶರೀರವನ್ನು ಯೊಧನ ಮಗ ಸೇನೆಯ ಸಮವಸ್ತ್ರ ಧರಿಸಿ ಸ್ವಾಗತಿಸಿದ್ದಾನೆ.

ಬೆಳಗಾವಿ: ನಾಗಾಲ್ಯಾಂಡ್​ನಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಅಪಘಾತವಾಗಿ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರ ಇಂದು (ಜುಲೈ 13) ಸ್ವಗ್ರಾಮಕ್ಕೆ ಆಗಮಿಸಿದೆ. ತಂದೆಯ ಪಾರ್ಥಿವ ಶರೀರವನ್ನು ಯೊಧನ ಮಗ ಸೇನೆಯ ಸಮವಸ್ತ್ರ ಧರಿಸಿ ಸ್ವಾಗತಿಸಿದ್ದಾನೆ. ಜಿಲ್ಲೆಯ ಗೋಕಾಕ್ ತಾಲೂಕಿನ ಶಿವಾಪುರ ಗ್ರಾಮದ ಮಂಜುನಾಥ ಗೌಡನ್ನವರ ಮೃತ ಯೋಧ. ಗ್ರಾಮಕ್ಕೆ ಪಾರ್ಥಿವ ಶರೀರ ಬರುತ್ತಿದ್ದಂತೆ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದ್ದು, ಪಾರ್ಥಿವ ಶರೀರ ಬರುವ ದಾರಿಯಲ್ಲಿ ಹೂವನ್ನು ಹಾಕಿ, ಕೈಯಲ್ಲಿ ದೇಶದ ಭಾವುಟ …

Read More »

ಅಂಬರೀಷ್ ಅವರ ಅಂತಿಮ ಸಂಸ್ಕಾರದ ಸಲುವಾಗಿ ವೆಚ್ಚ ಮಾಡಿರುವ ಹಣ ಎಷ್ಟು ಎಂಬುದು ಸರ್ಕಾರದ ಬಳಿ ಮಾಹಿತಿ ಇಲ್ಲ: ಭೀಮಪ್ಪ ಗಡಾದ

ಬೆಳಗಾವಿ : ಮಾಜಿ ಸಚಿವ ದಿ. ಅಂಬರೀಷ್ ಅವರ ಅಂತಿಮ ಸಂಸ್ಕಾರದ ಸಲುವಾಗಿ ವೆಚ್ಚ ಮಾಡಿರುವ ಹಣ ಎಷ್ಟು ಎಂಬುದು ಸರ್ಕಾರದ ಬಳಿ ಮಾಹಿತಿ ಇಲ್ಲ. ಈ ಮಾಹಿತಿ ಯಾರ ಬಳಿ ಇದೆ ಎಂಬುದೂ ಮುಖ್ಯ ಕಾರ್ಯದರ್ಶಿಯವರ ಕಚೇರಿಯವರಿಗೆ ಗೊತ್ತಿಲ್ಲ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದ್ದಾರೆ. ಅಂಬರೀಷ್ ಅವರ ವೈದ್ಯಕೀಯ ಉಪಚಾರಕ್ಕಾಗಿ ಸರ್ಕಾರದಿಂದ ವೆಚ್ಚ ಮಾಡಿದ ಹಣ, ಹಾಗೂ ಅಂತಿಮ ಸಂಸ್ಕಾರಕ್ಕೆ ವೆಚ್ಚ ಮಾಡಿರುವುದು ಹಾಗೂ …

Read More »

ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ

ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ ತಿಂದಿದ್ದಾನೆ. ಚಿಕ್ಕೋಡಿ ಗ್ರೇಡ್ 2 ತಹಸಿಲ್ದಾರ ಜಮಾದಾರ ಎನ್ನುವಾತ ಮಾನಗೇಡಿ ಕೃತ್ಯ ಮಾಡಿದಾತ. ತಾಲೂಕಿನ ಮಹಿಳೆಯೊಬ್ಬಳ ಪತಿ ಕೊರೋನಾದಿಂದ ಸಾವಿಗೀಡಾಗಿದ್ದಾರೆ. ಹಾಗಾಗಿ ತನಗೆ ವಿಧವಾ ಮಾಸಾಶನ ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದಾಳೆ. ಆಕೆಯ ಪುತ್ರ ಈ ಸಂಬಂಧ ಹಲವು ಬಾರಿ ತಹಸಿಲ್ದಾರ ಕಚೇರಿಗೆ ಬಂದಿದ್ದಾನೆ. ಆದರೆ ಕೆಲಸ ಮಾಡಿಕಕೊಡದ ಜಮಾದಾರ, ತಾಯಿಯನ್ನು ಕಚೇರಿಗೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ ನಿಂದ ಸಕ್ಕರೆ ವಿತರಣೆ ಕಾರ್ಯಕ್ರಮ

ಗೋಕಾಕ: ಸೌಭಾಗ್ಯ ಲಕ್ಷ್ಮೀ ಶುಗರ್ಸ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ನಾವು ರೈತ ಬಾಂಧವರಿಗೆ ತಿಳಿಸುವುದು ಏನೆಂದರೆ ಈ ವರ್ಷ ನಾವು ನಮ್ಮ ಕಾರ್ಖಾನೆಗೆ ಕಬ್ಬು ಕಳುಹಿಸಿದ ಎಲ್ಲಾ ರೈತ ಬಾಂಧವರಿಗೆ ಪ್ರತಿ ಟನ್ ಗೆ ಅರ್ಧ ಕೇಜಿಯಂತೆ ಸಕ್ಕರೆ ವಿತರಿಸುವ ಕಾರ್ಯಕ್ರಮವನ್ನಾ ಯರಗಟ್ಟಿ, ಗೋಕಾಕ, ಹಾಗೂ ಮಮದಾಪೂರ ಈ ರೀತಿ ಮೂರು ವಿಭಾಗಗಳಾಗಿ ವಿಂಗಡಿಸಿ ಈ ಮೂರು ಝೋನ್ ಗಳಲ್ಲಿ ಸಕ್ಕರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. …

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಯೋಧನ ಅಂತ್ಯಕ್ರಿಯೆ

ಗೋಕಾಕ : ಕಳೆದ ನಾಲ್ಕೈದು ದಿನಗಳ ಹಿಂದೆ ನ್ಯಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಪಘಾತದಲ್ಲಿ ಅಸುನೀಗಿದ್ದ ಗೋಕಾಕ ತಾಲ್ಲೂಕಿನ ವೀರಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಜರುಗಿತು.   ಶಿವಾಪುರ ಗ್ರಾಮದ ಯೋಧ ಮಂಜುನಾಥ ಗೌಡಣ್ಣವರ (38) ಯೋಧ ಅಫಘಾತದಲ್ಲಿ ಸಾವನ್ನಪ್ಪಿದ್ದರು. ಮೃತ ಯೋಧನ ಪಾರ್ಥಿವ ಶರೀರ ಬೆಂಗಳೂರಿನಿಂದ ಇಂದು ಬೆಳಿಗ್ಗೆ 7 ಗಂಟೆಗೆ ಯೋಧನ‌ ಸ್ವಗ್ರಾಮ ಗೋಕಾಕ್ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಕರೆತರಲಾಯಿತು.   …

Read More »