Breaking News

ಬೆಳಗಾವಿ

ಸೌಭಾಗ್ಯ ಲಕ್ಷ್ಮೀ ಶುಗರ್ಸ ನಿಂದ ಸಕ್ಕರೆ ವಿತರಣೆ ಕಾರ್ಯಕ್ರಮ

ಗೋಕಾಕ: ಸೌಭಾಗ್ಯ ಲಕ್ಷ್ಮೀ ಶುಗರ್ಸ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ನಾವು ರೈತ ಬಾಂಧವರಿಗೆ ತಿಳಿಸುವುದು ಏನೆಂದರೆ ಈ ವರ್ಷ ನಾವು ನಮ್ಮ ಕಾರ್ಖಾನೆಗೆ ಕಬ್ಬು ಕಳುಹಿಸಿದ ಎಲ್ಲಾ ರೈತ ಬಾಂಧವರಿಗೆ ಪ್ರತಿ ಟನ್ ಗೆ ಅರ್ಧ ಕೇಜಿಯಂತೆ ಸಕ್ಕರೆ ವಿತರಿಸುವ ಕಾರ್ಯಕ್ರಮವನ್ನಾ ಯರಗಟ್ಟಿ, ಗೋಕಾಕ, ಹಾಗೂ ಮಮದಾಪೂರ ಈ ರೀತಿ ಮೂರು ವಿಭಾಗಗಳಾಗಿ ವಿಂಗಡಿಸಿ ಈ ಮೂರು ಝೋನ್ ಗಳಲ್ಲಿ ಸಕ್ಕರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. …

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಯೋಧನ ಅಂತ್ಯಕ್ರಿಯೆ

ಗೋಕಾಕ : ಕಳೆದ ನಾಲ್ಕೈದು ದಿನಗಳ ಹಿಂದೆ ನ್ಯಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಪಘಾತದಲ್ಲಿ ಅಸುನೀಗಿದ್ದ ಗೋಕಾಕ ತಾಲ್ಲೂಕಿನ ವೀರಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಜರುಗಿತು.   ಶಿವಾಪುರ ಗ್ರಾಮದ ಯೋಧ ಮಂಜುನಾಥ ಗೌಡಣ್ಣವರ (38) ಯೋಧ ಅಫಘಾತದಲ್ಲಿ ಸಾವನ್ನಪ್ಪಿದ್ದರು. ಮೃತ ಯೋಧನ ಪಾರ್ಥಿವ ಶರೀರ ಬೆಂಗಳೂರಿನಿಂದ ಇಂದು ಬೆಳಿಗ್ಗೆ 7 ಗಂಟೆಗೆ ಯೋಧನ‌ ಸ್ವಗ್ರಾಮ ಗೋಕಾಕ್ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಕರೆತರಲಾಯಿತು.   …

Read More »

ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವನ್ನು ಬದಲಾಯಿಸುವಂತೆ ಒತ್ತಾಯಿಸಿ ಕರ್ನಾಟಕ ನವನಿರ್ಮಾಣ ಸೇನೆ :ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ – ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವನ್ನು ಬದಲಾಯಿಸುವಂತೆ ಕರ್ನಾಟಕ ನವನಿರ್ಮಾಣ ಸೇನೆಯ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಬೆಳಗಾವಿ ನಗರ ಪೋಲಿಸ ಆಯುಕ್ತರಿಗೆ ಸೋಮವಾರ ಮನವಿ ಸಲ್ಲಿಸಿದರು.ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವು ಮಳೆ, ಗಾಳಿಗೆ ನಾಶಗೊಳುತ್ತಿದೆ. ಈ ಕಾರಣದಿಂದ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಕೂಡಲೇ ಎಚ್ಚೆತುಕೊಂಡು ಬಾವುಟ ಬದಲಾವಣೆ‌ ಮಾಡಬೇಕು. ಬಾವುಟ ನಾಶಗೊಳ್ಳುತ್ತಿರುವುದರಿಂದ ಬೆಳಗಾವಿ ಸಮಸ್ತ ಕನ್ನಡಿಗರ ಭಾವನೆಗೆ ದಕ್ಕೆ ಉಂಟಾಗುತ್ತಿದೆ. …

Read More »

ನೀರಾವರಿ ಯೋಜನೆಯಿಂದ ರೈತರ ಅಭಿವೃದ್ಧಿ-ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ – ನಿಪ್ಪಾಣಿ ತಾಲೂಕಿನ ಸಮಗ್ರ ಅಭಿವೃದ್ಧಿ ಜೊತೆಗೆ ರೈತರ ಅಭಿವೃದ್ಧಿಗೆ ಕೂಡ ಆದ್ಯತೆ ನೀಡಲಾಗಿದೆ. ಕಳೆದ ೩೦-೩೫ ವರ್ಷಗಳಿಂದ ನೀರಿಲ್ಲದೆ ಒಣಗುತ್ತಿರುವ ಬರಡು ಭೂಮಿ ನೀರಾವರಿ ಯೋಜನೆಯಿಂದ ಹಸಿರಿಕರಣವಾಗಲಿದೆ. ಗಂಗಾಕಲ್ಯಾಣ ಯೋಜನೆಯಿಂದ ರೈತರ ಆರ್ಥಿಕ ಅಭಿವೃದ್ಧಿ ಆಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.           ಸಮೀಪದ ಸೌಂದಲಗಾ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ೧.೫ ಕೋಟಿ ವೆಚ್ಚದಲ್ಲಿ ಗಂಗಾಕಲ್ಯಾಣ ನೀರಾವರಿ ಯೋಜನೆಯನ್ನು …

Read More »

ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ

ಕಿತ್ತೂರು – ಕ್ಷುಲ್ಲಕ ಕಾರಣಕ್ಕೆ ದಾಬಾ ಮಾಲಿಕನನ್ನು ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ. ಕೊಲೆಯಾಗಿರುವ ಪ್ರಕಾಶ ತನ್ನ ಮುದ್ದಾದ ಮಕ್ಕಳೊಂದಿಗೆ ಇದ್ದ ಚಿತ್ರ                   ಖರೀದಿಸಿದ್ದ ಹೂವಿನ ಹಣ 1500 ರೂಗಳನ್ನು ಹೂವಿನ ವ್ಯಾಪಾರಿಗೆ ಕೊಡು ಎಂದು ಹೇಳಿದ್ದಕ್ಕೆ ಐವರು ಸೇರಿ ದಾಬಾ ಮಾಲಿಕ ಪ್ರಕಾಶ ಬಸವರಾಜ ನಾಗನೂರು (35) ಅವರನ್ನು ಕೊಲೆ ಮಾಡಿದ್ದರು. ಮಹಮ್ಮದಶಫೀ …

Read More »

ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ

  ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಟ್ರ್ಯಾಕ್ಟರ್ ಮಾಲೀಕರು ಹಾಗೂ …

Read More »

ಮುಳ್ಳೂರು ಘಾಟ್‌ ಮಾರ್ಗದಲ್ಲೆ ಪ್ರಯಾಣ: ಆತಂಕ

ರಾಮದುರ್ಗ (ಬೆಳಗಾವಿ ಜಿಲ್ಲೆ): ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಅಪಾಯಕಾರಿಯಾದ ರಸ್ತೆಯಲ್ಲೇ ಸಂಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ‘ಮೃತ್ಯುಕೂಪ’ ಎಂದೇ ಅಪಖ್ಯಾತಿ ಹೊಂದಿದ್ದ ಇಲ್ಲಿನ ಮುಳ್ಳೂರು ಘಾಟ್‌ನಲ್ಲಿ ವಾಹನಗಳಲ್ಲಿ ಹೋಗುವವರು ಕೈಯಲ್ಲಿ ಜೀವ ಹಿಡಿದುಕೊಂಡೆ ಪ್ರಯಾಣಿಸಬೇಕಿತ್ತು. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಘಾಟ್ ಸುಧಾರಣೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಹೊಸ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇತ್ತು. ಹಿಂದಿನ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದಿಂದ ವಿಶೇಷ …

Read More »

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಮುನ್ಸೂಚನೆ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರು

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ. ಜುಲೈ 9ರಿಂದ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ನದಿ ಪಾತ್ರದ ಜುಗುಳ, ಮಂಗಾವತಿ, ಶಹಾಪೂರ ಕುಸನಾಳ, ಮೊಳವಾಡ, ಉಗಾರ್ ಕೆಎಚ್, ಬಣಜವಾಡ ಹಾಗೂ ಕಿತ್ತೂರ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ …

Read More »

ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ. ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್​​ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. …

Read More »

ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಸಿಬ್ಬಂದಿ ಎಸಿಬಿ ಬಲೆಗೆ

ಚಿಕ್ಕೋಡಿ: ಅನಧಿಕೃತ ಪಾನ್‌ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ, ಮಾಲೀಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್‌ ಠಾಣೆಯ ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ಭ್ರಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಗುರುವಾರ ರಾತ್ರಿ ಠಾಣೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೇಬಲ್‌ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ವಶಕ್ಕೆ …

Read More »