Breaking News

ಬೆಳಗಾವಿ

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಕಾಂಗ್ರೆಸ್ ಸೈಕಲ್ ರ‍್ಯಾಲಿ

ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ‍್ಯಾಲಿ  ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ ಜಾರಕಿಹೊಳಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ  ಹಾಗೂ ಇಂಧನ ಬೆಲೆ ಏರಿಕೆ ಕೂಡಲೇ ಕಡಿಮೆ ಮಾಡಬೇಕೆಂದು ಆಗ್ರಹಿಸಿ, …

Read More »

ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ ೧೫ ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.           ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್‌ಡಿಪಿಆರ್ ಇಲಾಖೆಯ ೨೫ ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ …

Read More »

80 ಲಕ್ಷ ರೂ. ವೆಚ್ಚದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ

ಗೋಕಾಕ: ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಮತಕ್ಷೇತ್ರದಲ್ಲಿ ಬುಧವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ …

Read More »

ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್

ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು.   ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …

Read More »

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …

Read More »

ಕಿತ್ತೂರಿನ ಅಮಾಯಕ ಮುದುಕಿಯ ಜಮೀನು ಕಿತ್ತು ಕೊಂಡ್ರ ಪ್ರಭಾವಿ ಗಳು…..? ನ್ಯಾಯ ಕೊಡಿಸಿ ಎಂದು ಅಂಗಲಾಚಿದ ಹಿರಿಯ ಜೀವ…

ಕಿತ್ತೂರ: ಕಿತ್ತೂರು ರಾಣಿ ಚೆನ್ನಮ್ಮನ ಕಿತ್ತೂರ ಇಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ .ಚೆನ್ನಮನ ನಾಡಲ್ಲಿ ಇಂಥದೊಂದು ಘಟನೆ ನಡೆದದ್ದು ಎಲ್ಲರಿಗೂ ಒಂತರ ಆಶ್ಚರ್ಯ ತಂದಿದೆ. ಒಬ್ಬ ಹಿರಿಯ ಜೀವಿಯ ಆಸ್ತಿಯನ್ನ ಕೆಲವೊಂದಿಷ್ಟು ಜನ ಅವರಿಗೆ ಗೊತ್ತಾಗದಂತೆ ದಾಖಲಾತಿ ಗಳನ್ನ ತಿರುಚಿ ತಮ್ಮ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ ಎಂಬ ಆರೋಪ . ಹೌದು ಕಿತ್ತೂರಿನ ನಿವಾಸಿ ಇವರು ಸ್ವಲ್ಪ ಜನ ಕಿರಾತಕ ಜನ ಇವರನ್ನ ಯಾಮಾರಿಸಿ ತಮ್ಮ ಹೆಸರಿನಲ್ಲಿ ಇವರ …

Read More »

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …

Read More »

ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.

ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್‍ಗಳನ್ನು ನಡೆಸಲು 3ಪೇಸ್ …

Read More »

ಬೆಳಗಾವಿ: ಮಾಸಿ, ಹರಿದು ಹೋದ ಕನ್ನಡ ಧ್ವಜ ಬದಲಿಸಿ ಎಂದು ಕರ್ನಾಟಕದಲ್ಲೇ ಪ್ರತಿಭಟನೆ ಮಾಡುವ ಸ್ಥಿತಿ!

ಬೆಳಗಾವಿ: ಬಣ್ಣ ಮಾಸಿ, ಹರಿದು ಹೋಗಿರುವ ಕನ್ನಡ ಧ್ವಜವನ್ನು ಬದಲಿಸಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡಪರ ಸಂಘಟನೆಗಳು ಧರಣಿ ಕೈಗೊಂಡಿವೆ. ಮೂರು ತಿಂಗಳಿಂದ ಮನವಿ ಮಾಡುತ್ತಿದ್ದರೂ ಧ್ಚಜ ಬದಲಾವಣೆ ಮಾಡಿಲ್ಲ. ಉದ್ದೇಶಪೂರ್ವಕವಾಗಿ ಪಾಲಿಕೆ ಹೀಗೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕನ್ನಡ ಧ್ವಜ ಹಾಗೂ ಹಗ್ಗ ತೆಗೆದುಕೊಂಡು ಬಂದಿರುವ ಕನ್ನಡಪರ ಹೋರಾಟಗಾರರು ಕೊರಳಿಗೆ ಹಗ್ಗ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಧ್ವಜಸ್ತಂಭದ ಸುತ್ತ ಬ್ಯಾರಿಕೇಡ್ ಅಳವಡಿಸಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. …

Read More »

ಸಾರ್ವಜನಿಕರಿಂದ ಅತಿಕ್ರಮಣಗೊಂಡಿದ ಸರ್ಕಾರಿ ಜಾಗ ಮರು ವಶಕ್ಕೆ.

ಘಟಪ್ರಭಾ : ಕಳೆದ ಹತ್ತು ಹದಿನೈದು ವರ್ಷಗಳಿಂದ ಸಾರ್ವಜನಿಕರಿಂದ ಆಕ್ರಮಿಸಿಕೊಂಡಿದ್ದ ಸರ್ಕಾರಿ ಭೂಮಿಯನ್ನು ಮರು ವಶಪಡಿಸಿಕೊಂಡ ಘಟನೆ ಪಾಮಲದಿನ್ನಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.   ಪಾಮಲದಿನ್ನಿ ಗ್ರಾಮದಲ್ಲಿ ಸರ್ವೆ ನಂ. 4 ರಲ್ಲಿ ಸುಮಾರು 10 ಎಕರೆ ಭೂಮಿ ಇದ್ದು, ಅದರಲ್ಲಿಯ 2 ಎಕರೆಯಷ್ಟು ಭೂಮಿಯನ್ನು ಸರಕಾರಿ ಪ್ರೌಢಶಾಲೆಗೆ ಬಿಟ್ಟು ಕೊಡಲಾಗಿದೆ. ಇನ್ನುಳಿದ ಜಾಗದಲ್ಲಿ ಸಾರ್ವಜನಿಕರ ಅಭಿವೃದ್ಧಿಯ ಹಿತ ದೃಷ್ಟಿಯಿಂದ ವಿವಿಧ ಇಲಾಖೆಗಳ ಉಪಯೋಗಕೆಂದು ಕಾಯ್ದಿರಿಸಲಾಗಿತ್ತು. ಈಗ ಈ …

Read More »