Home / ಜಿಲ್ಲೆ / ಬೆಳಗಾವಿ (page 349)

ಬೆಳಗಾವಿ

ಬೆಳಗಾವಿಯ ನಿವಾಸಿ ಈಗ ಅಮೇರಿಕಾದ ಸಂಸದ

  ಅಜ್ಜನ ಕಡೆ ಮಾಸ್ಕ್ ಯಾವ ತರಾ ಇದೆ ಈ ವಿಡಿಯೋ ಕೊನೇವರಿಗೆ ನೀವು ನೋಡ್ಲೆ ಬೇಕು…….           ಬೆಳಗಾವಿ- ಬೆಳಗಾವಿಯ ನಿವಾಸಿಯೊಬ್ಬ ಅಮೇರಿಕಾದ ಸಂಸದನಾಗಿ ಆಯ್ಕೆಯಾಗಿದ್ದಾನೆ. ಬೆಳಗಾವಿ ಶಹಾಪೂರ ಪ್ರದೇಶದ ಮೀರಾಪೂರ ಗಲ್ಲಿಯ ನಿವಾಸಿ ಶ್ರೀನಿವಾಸ ಥಾಣೆದಾರ ಈಗ ಅಮೆರಿಕಾ ದೇಶದ ಸೆನೆಟ್ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ. ಚಿಂತಾಮಣರಾವ ಶಾಲೆಯಲ್ಲಿ ಹೈಸ್ಕೂಲ ಕಲೆತಿರುವ ಶ್ರೀನಿವಾಸ ಥಾಣೆದಾರ್ ಅಮೇರಿಕಾದಲ್ಲಿ ಕೆಮಿಕಲ್ ಉದ್ಯಮಿಯಾಗಿದ್ದಾರೆ.

Read More »

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಗಳಿಗೆಬಿ.ಕೆ.ಮಾಡೆಲ್ ಶಾಲೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆ ಚುನಾವಣೆ

ಬೆಳಗಾವಿ : ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದ್ದು , ಜಿಲ್ಲೆಯ ಬಿಜೆಪಿ, ಕಾಂಗ್ರೆಸ್ ನಾಯಕರು ನಡೆಸಿದ ತಂತ್ರಗಾರಿಕೆ ಫಲಿತಾಂಶ ತಿಳಿಯಲಿದೆ ನಗರದ ಬಿ.ಕೆ.ಮಾಡೆಲ್ ಶಾಲೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆ ಚುನಾವಣೆ ನಡೆಯಲಿದೆ. ಈಗಾಗಲೇ ಒಟ್ಟು 16 ಸ್ಥಾನಗಳ ಪೈಕಿ 13 ಸ್ಥಾನಗಳು ಅವಿರೋಧ ಆಯ್ಕೆಯಾಗಿದೆ.  ಎಲ್ಲ ಸ್ಥಾನಗಳನ್ನು ಅವಿರೋಧ ಆಯ್ಕೆ ಗೊಳಿಸಬೇಕೆಂದು ಬಿಜೆಪಿ ನಾಯಕರು ಕಸರತ್ತು ನಡೆಸಿದರು,  ಆದರೆ ಅದು ಸಾಧ್ಯವಾಗಲಿಲ್ಲ. …

Read More »

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೊಸ ಸಿನಿಮಾಗಳತ್ತ ಮುಖ

ಬೆಂಗಳೂರು: ಸಹೋದರ ಚಿರಂಜೀವಿ ಸರ್ಜಾ ಅಗಲಿಕೆಯ ಬಳಿಕ ಇದೀಗ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೊಸ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಇಂದು ಹೊಸ ಸಿನಿಮಾವೊಂದಕ್ಕೆ ಮುಹೂರ್ತ ನೆರವೇರಿಸಿದ್ದಾರೆ. ಹೌದು. ಧ್ರುವ ನಟನೆಯ ಹೊಸ ಸಿನಿಮಾ ‘ದುಬಾರಿ’ಯ ಚಿತ್ರೀಕರಣ ಆರಂಭವಾಗಲಿದೆ. ಇಂದು ಬೆಳಗ್ಗೆ ಬೆಂಗಳೂರಿನ ನವರಂಗ್ ಬಳಿ ಇರುವ ವರಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ಪೂಜೆ ನೆರವೇರಿಸಿದ್ದಾರೆ. ಮುಹೂರ್ತ ಪೂಜೆಯಲ್ಲಿ ನಟ ಧ್ರುವ ಸರ್ಜಾ, ನಿರ್ದೇಶಕ ನಂದಕಿಶೋರ್, ನಟಿ ತಾರಾ, ದೊಡ್ಡಣ್ಣ ಹಾಗೂ …

Read More »

ಹಿಂಡಲಗಾ ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ವಿನಯ್, ಸೊಳ್ಳೆ ಬತ್ತಿಯಾದ್ರೂ ಕೊಡಿ:ವಿನಯ್ ಕುಲಕರ್ಣಿ

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಲ್ಲಿ ರಾತ್ರಿ ಕಳೆದಿದ್ದಾರೆ. ಗುರುವಾರ ಬೆಳಗ್ಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ಬಂಧಿಸಿತ್ತು. 1 ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗಲಾಗಿತ್ತು. ಸದ್ಯ ಹಿಂಡಲಗಾ ಜೈಲಿನ ರೆಡ್ ಝೋನ್ ಸೆಲ್‍ನಲ್ಲಿ ಇರುವ ವಿನಯ್ ಕುಲಕರ್ಣಿ, ಕೋವಿಡ್ ಹಿನ್ನೆಲೆ ಜೈಲು …

Read More »

ನವೆಂಬರ್ 14 ರಿಂದ ನವೆಂಬರ್ 16 ರ ವರೆಗೆ ಆಚರಿಸುವ ದೀಪಾವಳಿ ಹಬ್ಬವನ್ನು ರೋಗಾಣು ಹರಡದಂತೆ ಮುನ್ನೆಚ್ಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ

ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ  ನವೆಂಬರ್ 14 ರಿಂದ ನವೆಂಬರ್ 16 ರ ವರೆಗೆ ಆಚರಿಸುವ ದೀಪಾವಳಿ ಹಬ್ಬವನ್ನು ರೋಗಾಣು ಹರಡದಂತೆ ಮುನ್ನೆಚ್ಚ್ಚರಿಕೆ ವಹಿಸಿ ಸರರ್ಕಾರದ ಮಾರ್ಗಸೂಚಿ ಪ್ರಕಾರ ಆಚರಿಸಲು ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ ಅವರು ಆದೇಶಿಸಿದ್ದಾರೆ. ಮಾರ್ಗಸೂಚಿಗಳು: ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವನಾಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು, ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 1 ರಿಂದ ನವೆಂಬರ್ 12 ರ ವರೆಗೆ ಮಾತ್ರ ತೆರೆದಿರತಕ್ಕದು. ಪರವಾನಿಗೆದಾರರು ಸಂಬಂಧಪಟ್ಟ …

Read More »

ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ.

ಚಿಕ್ಕೋಡಿ: ‘ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ. ರಾಜಯೋಗದ ಮೂಲಕ ಶುದ್ಧ, ಸಕಾರಾತ್ಮಕ, ಶ್ರೇಷ್ಠ, ಶಕ್ತಿಶಾಲಿ ಭಾವನೆಗಳು ಪಸರಿಸಿ ಬೆಳೆಗಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಾತ್ವಿಕ ಆಹಾರವನ್ನು ಪಡೆಯಬಹುದು. ಇದು ಶಾಶ್ವತ ಯೋಗಿಕ ಬೇಸಾಯ ಪದ್ಧತಿಯಿಂದ ಸಾಧ್ಯ’. – ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕರಾದ ಗ್ರಾಮ ವಿಕಾಸ ಬೆಳಗಾವಿ ವಿಭಾಗದ ಸಂಯೋಜಕಿ ಶಾಂತಕ್ಕ ಅವರ ಮಾತಿದು. ‘ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಲಕ್ಷ್ಮಣ ಹೊಳಬಸಪ್ಪ …

Read More »

ಡಿಸಿಸಿ ಬ್ಯಾಂಕ್ ಚುನಾವಣೆ  ಎಂಇಎಸ್ ಮುಖಂಡರಿಗೆ ಬಿಜೆಪಿ  ಬೆಂಬಲ  10 ಬಾರಿ ಯೋಚನೆ ಮಾಡಲಿ: ಸತೀಶ ಜಾರಕಿಹೊಳಿ

ಗೋಕಾಕ: ಡಿಸಿಸಿ ಬ್ಯಾಂಕ್ ಚುನಾವಣೆ  ಎಂಇಎಸ್ ಮುಖಂಡರಿಗೆ ಬಿಜೆಪಿ  ಬೆಂಬಲ  ನೀಡುತ್ತಿರುವ ವಿಚಾರವಾಗಿ  ಕೆಪಿಸಿಸಿ  ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಪ್ರತಿಕ್ರಿಯಿಸಿದ್ದು, ಸತತವಾಗಿ ಕರ್ನಾಟಕದ ವಿರುದ್ದ ಹೋರಾಟ ಮಾಡುವವರಿಗೆ ಬೆಂಬಲ ನೀಡುವ ಮುನ್ನ 10 ಬಾರಿ ಯೋಚನೆ ಮಾಡಲಿ ಎಂದು  ಹೇಳಿದ್ದಾರೆ. ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾತನಾಡಿದ ಅವರು,  ಕರ್ನಾಟಕ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆಯಲ್ಲಿ ಭಾಗಿಯಾಗುವ  ವಿರೋಧಿಗಳಿಗೆ   ಒಂದು ರಾಜಕೀಯ ಪಕ್ಷ ಆಹ್ವಾನ ನೀಡಲು …

Read More »

ಬಿಜೆಪಿ ನಾಯಕರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಶಾಕ್

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿ ಮಾರ್ಪಟ್ಟಿದೆ. ಎಂಇಎಸ್ ನಾಯಕನಿಗೆ ಬಹಿರಂಗವಾಗಿಯೇ ಬೆಂಬಲ ನೀಡಿದ್ದ ಬಿಜೆಪಿ ನಾಯಕರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಶಾಕ್ ನೀಡಿದ್ದಾರೆ. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರತಿಸ್ಪರ್ಧಿ ಎಂಇಎಸ್ ನಾಯಕ ಅರವಿಂದ ಪಾಟೀಲ ಅವರಿಗೆ ಜಿಲ್ಲೆಯ ಪ್ರಭಾವಿ ಬಿಜೆಪಿ ನಾಯಕರು ಬೆಂಬಲ ಸೂಚಿಸಿದ್ದರು. ಬಹಿರಂಗವಾಗಿಯೇ ಹೇಳಿಕೆ ನೀಡಿದ ನಾಯಕರು ಅರವಿಂಧ ಗೆಲ್ಲಿಸುವ ಪ್ರಯತ್ನ ನಡೆಸಿದ್ದರು. ಡಿಸಿಎಂ ಲಕ್ಷ್ಮಣ ಸವದಿ, ಸಂಸದ …

Read More »

ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ‌ಖಂಡನೀಯ.:ರಮೇಶ ಜಾರಕಿಹೊಳಿ

ಬೆಂಗಳೂರು –  ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ‌ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು ಎಂದು ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗವಾಗಿದ್ದು ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ  ಎಂದಿದ್ದಾರೆ. ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. …

Read More »

ಸುಣಧೋಳಿ ಜಡಿಸಿದ್ದೇಶ್ವರ ಮಠದ ಬಿಕ್ಕಟ್ಟನ್ನು ಬಗೆ ಹರಿಸಿದ ಶೂನ್ಯ ಸಂಪಾದನ ಮಠ ಶ್ರೀಗಳು ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ.

. ಗೋಕಾಕ: ಕಳೆದ ಆರೇಳು ತಿಂಗಳಿನಿಂದ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ಮಠದಲ್ಲಿ ಎರಡು ಗುಂಪುಗಳ ಮಧ್ಯ ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ ಅಲ್ಲಿನ ಪೀಠಾಧಿಕಾರಿಗಳಿಗೆ ಸೇವೆಯನ್ನು ನಿರ್ವಹಿಸಲು ತೊಂದರೆಯಾಗುತ್ತಿರುವದನ್ನು ಮನಗಂಡು ಗೋಕಾಕ ಶೂನ್ಯ ಸಂಪಾದನಾಮಠದ ಸ್ವಾಮಿಜೀ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರುಗಳು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ರಾತ್ರಿ ನಗರದ ಶೂನ್ಯ ಸಂಪಾದನಮಠದಲ್ಲಿ ಮುರುಘರಾಜೇಂದ್ರ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಭಕ್ತರ ಸಭೆಯಲ್ಲಿ ಮಠದ ಆಸ್ತಿ ವ್ಯವಹಾರಕ್ಕೆ …

Read More »