Breaking News

ಬೆಳಗಾವಿ

ಗೋಕಾಕದಲ್ಲಿ ಭೀಕರ ಸರಣಿ ಅಪಘಾತ: ಮೂವರಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ …

Read More »

ಮೂಡಲಗಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ವ್ಯವಸ್ಥೆ: ತಹಶೀಲ್ದಾರ್ ಮೋಹನಕುಮಾರ್

ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …

Read More »

ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್

ಬೆಳಗಾವಿ: ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್ ನೀಡಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಪರಿಶೀಲನೆ ನಡೆಸಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆ ಪರಾಜಿತ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ನೇತೃತ್ವದಲ್ಲಿ ಪುಂಡರು ಬಿಮ್ಸ್ ಆಸ್ಪತ್ರೆಗೆ ನುಗ್ಗಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ನಿರುಪಯುಕ್ತ ಬೆಡ್‍ಗಳ ಬಳಿ ನಿಂತು ವೀಡಿಯೋ ಮಾಡಿಕೊಂಡು ಪೋಸ್ ನಿಡಿದ್ದಾರೆ. ಎಂಇಎಸ್ ಪುಂಡ ಶುಭಂ ಶೆಲ್ಕೆ …

Read More »

ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…

ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …

Read More »

ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕ ಜೀವನ್ಮರಣ ಹೋರಾಟ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದೆ. ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕನೊಬ್ಬ ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವ ಯುವಕ. ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ ಕುಲಾಲಿ ಮೇ 5ರಂದು ಕೋವಿಡ್ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ದೃಢವಾಗಿತ್ತು. ಕೋವಿಡ್ ದೃಢಪಡುತ್ತಿದ್ದಂತೆಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುಕನನ್ನು …

Read More »

ಬೆಳಗಾವಿ: ಕೆಎಲ್‌ಇ ಮಹಿಳಾ ಘಟಕದಿಂದ ಐಸೊಲೇಷನ್‌ ಕೇಂದ್

ಬೆಳಗಾವಿ: ಕೊರೊನಾ ಸೋಂಕಿನ ವಿರುದ್ಧದ ಸಮರಕ್ಕೆ ಇಲ್ಲಿನ ಕೆಎಲ್‌ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ಕೈ ಜೋಡಿಸಿದ್ದು, ಕೋವಿಡ್ ರೋಗಿಗಳ ಆರೈಕೆಗಾಗಿ ನಗರದ ಲಿಂಗರಾಜ ಕಾಲೇಜು ಕ್ಯಾಂಪಸ್‌ನಲ್ಲಿ ಐಸೊಲೇಷನ್‌ ಕೇಂದ್ರ ತೆರೆದಿದೆ. ‘ಜಿಲ್ಲೆಯಲ್ಲಿ ಕೋವಿಡ್ ಉಲ್ಬಣಗೊಂಡಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಅಭಾವ ಕಾಡುತ್ತಿದೆ. ಸೋಂಕಿನ ಕಡಿಮೆ ಗುಣಲಕ್ಷಣವುಳ್ಳವರನ್ನು ಐಸೊಲೇಷನ್‌ಗೆ ಒಳಪಡಿಸಲು (ಪ್ರತ್ಯೇಕವಾಗಿ ಇರಿಸಲು) ಕೂಡ ಸಮಸ್ಯೆ ಆಗುತ್ತದೆ. ಇದನ್ನು ಮನಗಂಡು ಘಟಕವು 50 ಹಾಸಿಗೆಗಳ ಕೇಂದ್ರ ಪ್ರಾರಂಭಿಸಿದೆ’ ಎಂದು ಪ್ರಕಟಣೆ …

Read More »

ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಬದ್ಧ

ಬೆಳಗಾವಿ: ಕೋವಿಡ್‌-19 ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶನಿವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್‌ ಚಿಕಿತ್ಸೆಯಲ್ಲಿ ನಿರತ ವೈದ್ಯರ ಜೊತೆ ವರ್ಚುವಲ್‌ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಕಾರ್ಯದ ಒತ್ತಡದ ಮಧ್ಯೆಯೂ ನಿರಂತರವಾಗಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್‌ ಸೇರಿದಂತೆ ಎಲ್ಲ ವೈದ್ಯಕೀಯ ಸಿಬ್ಬಂದಿ ನಮ್ಮ ಅಮೂಲ್ಯ ಆಸ್ತಿ. ಇಂತಹ ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಸರ್ಕಾರ …

Read More »

ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.

ಬೆಳಗಾವಿ – ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ. ಜನರಲ್ ವಾರ್ಡ್, ವೆಂಟಿಲೇಟರ್ ಬೆಡ್, ಆಕ್ಸಿಜನ್ ರಹಿತ ಬೆಡ್, ಆಕ್ಸಿಜನ ಸಹಿತ ಬೆಡ್, ವ್ಯಾಕ್ಸಿನೇಶನ್ ವಿವರ ಎಲ್ಲವೂ ಇಲ್ಲಿ ಒಂದೇ ಕಡೆ ಲಭ್ಯವಿದೆ. ಈ ಕೆಳಗಿನ ಲಿಂಕ್ ಓಪನ್ ಮಾಡಿ ಎಲ್ಲ ಮಾಹಿತಿ ಪಡೆಯಬಹುದು. ಆಸ್ಪತ್ರೆಯಿಂದ ಆಸ್ಪತ್ರೆಗೆ ಸೋಂಕಿತರು ಸುತ್ತಾಡುವ ಬದಲು ಇಲ್ಲಿನ ಮಾಹಿತಿ ತಿಳಿದುಕೊಂಡು ಹೋಗುವುದು ಉತ್ತಮ. …

Read More »

ಖಾನಾಪುರ ತಾಲೂಕಲ್ಲಿ ಅಜ್ಜಿ ಮೊಮ್ಮಗ ಸಾವು

ಬೆಳಗಾವಿ –  ಭಾನುವಾರ ಮೇ.16ರಂದು ಮುಂಜಾನೆ 9 ಗಂಟೆ ಸಮಯದಲ್ಲಿ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಮನೆ ಗೋಡೆ ಕುಸಿದ ಪರಿಣಾಮ ದೊಡ್ಡವ್ವ ರುದ್ರಪ್ಪ ಪಟ್ಟೆದ (55) ಮತ್ತು ಅವರ ಮೊಮ್ಮಗ ಅಭಿಷೇಕ ಸುರೇಶ ಪಟ್ಟೆದ (3)  ಮೃತಪಟ್ಟಿದ್ದಾರೆ. ಶನಿವಾರ ರಾತ್ರಿಯಿಂದ ಗ್ರಾಮದಲ್ಲಿ ಸುರಿಯುತ್ತಿರುವ ಮಳೆ-ಗಾಳಿಗೆ ಇವರು ವಾಸವಿದ್ದ ಮನೆಯ ಗೋಡೆ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂದಗಡ  ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ …

Read More »

ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿ ಆಯಂಬುಲೆನ್ಸ್‌ಗೆ ಕರೆ ಮಾಡಿದರೂ ಸ್ಥಳಕ್ಕೆ ಬಾರದ ಆಯಂಬುಲೆನ್ಸ್‌

ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …

Read More »