Breaking News

ಬೆಳಗಾವಿ

ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, : ಅಭಯ್ ಪಾಟೀಲ್

ಬೆಳಗಾವಿ: ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, ಸನಾತನ ಹಿಂದೂ ಸಂಸ್ಕೃತಿ, ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಹೀಗಾಗಿ ಇದೀಗ ಕೊರೊನಾ ಎಲ್ಲ ಕಡೆ ಹೆಚ್ಚಾಗಿದ್ದರಿಂದ ನಮ್ಮ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿ ಗಲ್ಲಿಯಲ್ಲಿ ಆಯಾ ಭಾಗದ ಯುವಕ ಮಂಡಳಿ, ಮಹಿಳಾ ಸಂಘಗಳು ಹಾಗೂ ಅಲ್ಲಿನ ಪ್ರಮುಖರು ತಮ್ಮ ಮನೆ, ಗಲ್ಲಿಗಳಲ್ಲಿ ಹೋಮ ಮಾಡಬೇಕಿದೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.   ಹೊಸೂರಿನಲ್ಲಿ ಸುಮಾರು 50 …

Read More »

ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ – ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ. ಫ್ರುಟ್ ಮಾರ್ಕೆೆಟ್ ನಲ್ಲಿ 8 ಹಣ್ಣಿನ ಅಂಗಡಿ, ನಾವಿಗಲ್ಲಿಯಲ್ಲಿ 1 ಚಿಕನ್ ಸೆಂಟರ್, ಆಝಾದ್ ನಗರದಲ್ಲಿ ಒಂದು ಮಠನ್ ಶಾಪ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾಳ ಮಾರುತಿ ಮತ್ತು ಶಹಾಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

Read More »

ಜೂನ್ 7 ರ  ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ

ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ  ಜೂನ್ 7 ರ  ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್‌ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ  ಮೇ.12ರ ರಾತ್ರಿ 9 ಗಂಟೆಯಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಮೇ.24 ರ …

Read More »

15 ದಿನಗಳಲ್ಲಿ 9 ಜನರಲ್ಲಿ ಬ್ಲ್ಯಾಕ್ ಫಂಗಸ್; ಇಬ್ಬರಲ್ಲಿ ವೈಟ್ ಫಂಗಸ್

ಬೆಳಗಾವಿ: ಬೆಳಗಾವಿಯಲ್ಲಿ ಕೊರೊನಾ ಆರ್ಭಟದ ನಡುವೆ ಇದೀಗ ಬ್ಲ್ಯಾಕ್ ಫಂಗಸ್ ಹಾಗೂ ವೈಟ್ ಫಂಗಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 15 ದಿನಗಳಲ್ಲಿ ಜಿಲ್ಲೆಯಲ್ಲಿ 9 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದರೆ, ಇಬ್ಬರಲ್ಲಿ ವೈ ಫಂಗಸ್ ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಶಶಿಕಾಂತ, ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವ 9 ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ವೈಟ್ ಫಂಗಸ್ ಪತ್ತೆಯಾದ ಇಬ್ಬರೂ ಸಾವನ್ನಪ್ಪಿದ್ದಾರೆ. …

Read More »

ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶ್ರೀದೇವಿ ಹುದಲಿ ಸರಕಾರಿ ಶಾಲೆಯಶಿಕ್ಷಕಿ ಕೋವಿಡ್ ಗೆ ಬಲಿ

ಬೆಳಗಾವಿ: ಬೆಳಗಾವಿಯಲ್ಲಿ ಕೋವಿಡ್ ಅಟ್ಟಹಾಸಕ್ಕೆ ಮತ್ತೋರ್ವ ಶಿಕ್ಷಕಿ ಬಲಿಯಾಗಿದ್ದಾರೆ. ಹುದಲಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಮೃತ ಶಿಕ್ಷಕಿ 32 ವರ್ಷದ ಶ್ರೀದೇವಿ ಹುಕ್ಕೇರಿ ಎಂದು ತಿಳಿದುಬಂದಿದೆ. ಹುದಲಿ ಸರಕಾರಿ ಶಾಲೆಯ ಕನ್ನಡ ಭಾಷೆ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದ ಶ್ರೀದೇವಿಯವರು, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ಬರಹಗಾರರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.   ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶ್ರೀದೇವಿ ಅವರು ಕೆಲದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. …

Read More »

ಅನುಮತಿ ಇಲ್ಲದೆ ವಿವಾಹ ಆಯೋಜನೆ- 25 ಸಾವಿರ ದಂಡ

ಚಿಕ್ಕೋಡಿ/ಬೆಳಗಾವಿ: ಅನುಮತಿ ಪಡೆಯದೇ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮದುವೆ ಸಮಾರಂಭದ ಆಯೋಜಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿ ಕುಟಂಬಕ್ಕೆ 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮದಲ್ಲಿ ನಡೆದಿದೆ. ಕಮತನೂರು ಗ್ರಾಮದ ವರ ಕಾಶಿನಾಥ ಕಾಡಿ ಹಾಗೂ ಅವರಗೋಳ ಗ್ರಾಮದ ವಧು ಕಾಂಚನಾ ಬಾಳಾಜಿ ಅವರ ಮದುವೆಯನ್ನು ಶುಕ್ರವಾರ ಕಮತನೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಆದರೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿರಲಿಲ್ಲ. …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …

Read More »

ಬೆಳಗಾವಿ: ಸಂಪೂರ್ಣ ಲಾಕ್‌ಡೌನ್: ಜನರಿಂದ ಉತ್ತಮ ಸ್ಪಂದನೆ

ಬೆಳಗಾವಿ: ಕೊರೊನಾ ಸೋಂಕಿನ ಸರಪಳಿ ತುಂಡರಿಸುವ ಉದ್ದೇಶದಿಂದ ಜಿಲ್ಲಾಡಳಿತ ಘೋಷಿಸಿರುವ ಸಂಪೂರ್ಣ ಲಾಕ್‌ಡೌನ್‌ಗೆ ಮೊದಲ ದಿನವಾದ ಶನಿವಾರ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶನಿವಾರ ಬೆಳಿಗ್ಗೆ 6ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಅದರಂತೆ ಪೊಲೀಸರು ಅನುಷ್ಠಾನಕ್ಕೆ ಕ್ರಮ ಕೈಗೊಂಡರು. ಬ್ಯಾರಿಕೇಡ್‌ಗಳನ್ನು ಹೆಚ್ಚಿಸಿ ಸಂಚಾರ ನಿರ್ಬಂಧಿಸಿದರು. ಬಹುತೇಕರು ಮನೆಗಳಲ್ಲೇ ಉಳಿದು ಸಹಕರಿಸಿದ್ದರಿಂದ ಜಿಲ್ಲೆಯು ಸ್ತಬ್ಧವಾಗಿತ್ತು. ಆಸ್ಪತ್ರೆಗಳಿಗೆ, ಮೆಡಿಕಲ್ …

Read More »

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಹಿರಿಯ ಅಧಿಕಾರಿಗಳೇ ಕಾರ್ಯಾಚರಣೆಗಿಳಿದಿದ್ದಾರೆ.

ಬೆಳಗಾವಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು, ಇಂದಿನಿಂದಲೇ ಕಠಿಣ ರೂಲ್ಸ್ ಗಳು ಜಾರಿಗೆ ಬಂದಿವೆ. ಕಟ್ಟುನಿಟ್ಟಿನ ಲಾಕ್ ಡೌನ್ ಗೆ ಸಿಎಂ ಯಡಿಯೂರಪ್ಪ ಸೂಚಿಸಿದ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಳಗಾವಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಸಂಪೂರ್ಣ  ಲಾಕ್ ಡೌನ್ ಜಾರಿಯಾಗಿದ್ದು, ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದಕ್ಕೂ ಅವಕಾಸ ನೀಡಲಾಗಿಲ್ಲ. ಆಸ್ಪತ್ರೆಗೆ ತೆರಳುವವರು ಮಾತ್ರ ರಸ್ತೆಗೆ ಇಳಿಯಲು …

Read More »

ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ

ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ     ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …

Read More »