Breaking News
Home / ಜಿಲ್ಲೆ / ಬೆಳಗಾವಿ (page 358)

ಬೆಳಗಾವಿ

ಅದಕ್ಕಾಗಿಯೇ ಅವರನ್ನು ಕ್ಷೇತ್ರದ ಜನ ಅಂಜಲಿ “ತಾಯಿ’ ಅಂತಾರೆ…!!!

ಬೆಳಗಾವಿ- ಖಾನಾಪೂರ ಶಾಸಕಿ ಡಾ ಅಂಜಲಿ ಹೇಮಂತ್ ನಿಂಬಾಳ್ಕರ್ ಅವರು ಜಗನ್ಮಾತೆ ದುರ್ಗಾ ದೇವಿಗೆ ಹರಕೆ ಹೊತ್ತಿದ್ದಾರೆ. ಕ್ಷೇತ್ರದ ಜನತೆಯ ಸಕಲ ಶ್ರೇಯಸ್ಸಿಗೆ ವಿಶೇಷವಾದ,ವಿಶಿಷ್ಟವಾದ ,ಕಠಿಣ ಆಚರಣೆಯ ಹರಕೆ ಹೊತ್ತಿರುವ ಅವರು ನವರಾತ್ರಿಯ 9 ದಿನಗಳ ಕಾಲ ಬರಿಗಾಲಿನಲ್ಲಿದ್ದು 9 ದಿನಗಳ ಕಾಲ ಊಟ ಮಾಡದೇ ಕೇವಲ ಹಣ್ಣು ಹಂಪಲಗಳನ್ನ ಮಾತ್ರ ಸೇವಿಸುವ ಹರಕೆ ಹೊತ್ತ ಸೇವಾ ಶಾರದೆಯ ಜನಪರ ಕಾಳಜಿ ಪ್ರಶಂಸಾರ್ಹ. ಈ ಹಿಂದೆಯೂ ಶಾಸಕಿ ಅಂಜಲಿ ನಿಂಬಾಳ್ಕರ್ …

Read More »

ಬಿಜೆಪಿ ಶಿಸ್ತಿನ ಪಕ್ಷ ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ: ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …

Read More »

ಬೆಳಗಾವಿ ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ

ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ ಬೆಳಗಾವಿ ೧೯:ಹಾಸನದ ಮಾಣಿಕ್ಯ ಪ್ರಕಾಶನ ನೀಡುವ ಕಾವ್ಯ ಮಾಣಿಕ್ಯರಾಜ್ಯಪ್ರಶಸ್ತಿಗೆ ಬೆಳಗಾವಿಯ ಯುವ ಕವಿ ನದೀಮ ಸನದಿ ಅವರ ಪ್ರಥಮ ಕೃತಿ ಹುಲಿಯ ನೆತ್ತಿಗೆ ನೆರಳು ಕವನ ಸಂಕಲನ ಆಯ್ಕೆಯಾಗಿದೆ. ನಿನ್ನೆ ರವಿವಾರ ದಿ.೧೮ ರಂದು ಹಾಸನದ ಸಂಸ್ಕೃತ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಅವರು ನದೀಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ನದೀಮ ಸನದಿ ಬಿ.ಇ, ಎಂ.ಟೆಕ್.ಪದವೀಧರರಾಗಿದ್ದು,ಸಧ್ಯ …

Read More »

ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ

ಬೆಳಗಾವಿ- ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಅಷ್ಟೇ ಗ್ರಾಮದ ಪಕ್ಕದಲ್ಲಿರುವ ಚಂದಗಡ ಗ್ರಾಮದಲ್ಲಿ ನಡೆದಿದೆ. ಕೃಷ್ಣಾ ಕಾಲಕುಂದ್ರಿ30 ಹತ್ಯೆಯಾದ ದುರ್ದೈವಿಯಾಗಿದ್ದಾನೆ ಇತನ ತಮ್ಮ ಮಿಥುನ ಶಿವಾಜಿ ಕಾಲಕುಂದ್ರಿ ಕೊಲೆ ಮಾಡಿದ ಆರೋಪಿಯಾಗಿದ್ದು ಮಾರಿಹಾಳ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಿಥುನ ಕಾಲಕುಂದ್ರಿ ಪ್ರತಿದಿನ ಕುಡಿದ ಅಮಲಿನಲ್ಲಿ ಮನೆಯವರ ಜೊತೆ ನಿತ್ಯ ಜಗಳಾಡುತ್ತಿದ್ದ ಇವತ್ತು ಅಣ್ಣನ ಜೊತೆ ಜಗಳಕ್ಕಿಳಿದು ಅಣ್ಣನಿಗೆ …

Read More »

ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ಜೊಲ್ಲೆ, ಹುಕ್ಕೇರಿ ನಡುವೆ ಬಿಗ್ ಫೈಟ್!

ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ನಿರ್ದೇಶಕರ ಸ್ಥಾನಕ್ಕೆ ಅ.22ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ನ.6ಕ್ಕೆ ನಡೆಯುವ ಚುನಾವಣೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಜಿಲ್ಲೆಯ ಹತ್ತು ತಾಲ್ಲೂಕಿನಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ. ಚಿಕ್ಕೋಡಿಯಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕ ಗಣೇಶ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆದಿದೆ. ಡಿಸಿಎಂ ಲಕ್ಷ್ಮಣ ಸವದಿ ಮತ್ತು …

Read More »

ಚಿಕ್ಕೋಡಿ ಪುರಸಭೆಗೆ  ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ

ಚಿಕ್ಕೋಡಿ: ಚಿಕ್ಕೋಡಿ ಪುರಸಭೆಗೆ  ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರರ ಸುಭಾಷ ಸಂಪಗಾವಿ ಕಾರ್ಯನಿರ್ವಹಿಸಿದರು. 23 ಸದಸ್ಯರ ಬಲದ ಪುರಸಭೆಯಲ್ಲಿ 13 ಬಿಜೆಪಿ ಬೆಂಬಲಿತ ಹಾಗೂ 10 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ …

Read More »

ಬೆಳಗಾವಿ ಉತ್ತರ ಕ್ಷೇತ್ರದ ಹಲವೆಡೆ ಮನೆ ಕಳೆದುಕೊಂಡ ಹಲವರ ಹೆಸರು ಪಟ್ಟಿಯಲ್ಲಿ ಇಲ್ಲ:

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಅತಿವೃಷ್ಟಿ/ ಪ್ರವಾಹ ಸ್ಥಿತಿಗತಿ, ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಬೆಳಗಾವಿ ಉತ್ತರ ಕ್ಷೇತ್ರದ ಹಲವೆಡೆ ಮನೆ ಕಳೆದುಕೊಂಡ ಹಲವರ ಹೆಸರು ಪಟ್ಟಿಯಲ್ಲಿ ಇಲ್ಲ. ಹಾಗೂ ನನ್ನ ಮತಕ್ಷೇತ್ರದಲ್ಲಿ ಕಳೆದ ಮಳೆಗಾಲದಲ್ಲಿ ಬಿದ್ದ ಮನೆಗಳನ್ನು ಕಟ್ಟಲು 2ನೇ ಅನುದಾನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಂಭಂದಿಸಿದ ಅಧಿಕಾರಿಗಳು ಇದನ್ನು ಸರಿಪಡಿಸಲು ಕೂಡಲೇ ಕ್ರಮ …

Read More »

ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ(ಅ.19) ನಡೆದ ಪ್ರಗತಿ …

Read More »

ಮನೆ ನಿರ್ಮಾಣ, ಪರಿಹಾರ ಬಿಡುಗಡೆಗೆ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ(ಅ.19) ನಡೆದ ಪ್ರಗತಿ …

Read More »

ಗೋಕಾಕ್ ತಾಲ್ಲೂಕಿನ ಸಂಗನಕೇರಿಯಲ್ಲಿ ಭೀಕರ ಅಪಘಾತ : 5 ಜನರಿಗೆ ಗಂಭೀರ ಗಾಯ

ಗೋಕಾಕ : ತಾಲ್ಲೂಕಿನ ಸಂಗನಕೇರಿ ಸಮೀಪದಲ್ಲಿ ಟ್ರ್ಯಾಕ್ಟರ್ , ಮಿನಿ ಲೆಗ್ಜರಿ ವಾಹನ ನಡುವೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರವಷ್ಟೇ ಸಂಗಕೇರಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ , ಬೈಕ್ ನಡುವೆ ಅಪಘಾತ ಸಂಭಿಸಿ, ಮಗು, ಪತಿ, ಪತ್ನಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದರು. ನೋವು ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭಿಸಿದ್ದು, ಜನರನ್ನು ಬೆಚ್ಚಿ ಬಿಳಿಸಿದೆ.     …

Read More »