ಯರಗಟ್ಟಿ: ಪಟ್ಟಣ ಹಾಗೂ ಸುತ್ತಲಿನ ಭಾಗದ ಹೊಲಗಳಲ್ಲಿ ಮೋಟರ್, ಪಂಪ್, ಕೇಬಲ್ ಕಳ್ಳತನ ಪ್ರತಿದಿನ ಹೆಚ್ಚುತ್ತಿದೆ. ಈ ಕುರಿತು ಹಲವಾರು ಬಾರಿ ಪೊಲೀಸರಿಗೆ ದೂರು ನೀಡಿದರೂ, ಕಳ್ಳತನ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ರೆತರು, ಸಾರ್ವಜನಿಕರು ಬುಧವಾರ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಇಲ್ಲಿಯವರೆಗೆ ಬಹಳಷ್ಟು ರೈತರ ಮೋಟಾರ್, ಪಂಪ್, ಕೇಬಲ್ ಕಳವಾಗಿರುವ ತನವಾಗಿರುವ ಉದಾಹರಣೆಗಳಿವೆ. ಎರಡು ದಿನಗಳ ಹಿಂದೆ ಗೋಪಾಲ ದೇವರಡ್ಡಿ, ಮಂಜುನಾಥ ದೇವರಡ್ಡಿ, ರಾಜೇಂದ್ರಗೌಡ ಪಾಟೀಲ, ವಿಠ್ಠಲ ಕಳ್ಳಿಗುದ್ದಿ, ಚಂದ್ರಪ್ಪ …
Read More »ಪಾಲಿಕೆಯ 92.32. ಲಕ್ಷ ರೂ. ಉಳಿತಾಯ ಬಜೆಟ್ ಮಂಡನೆ
ಬೆಳಗಾವಿ :ಇಲ್ಲಿನ ಮಹಾನಗರ ಪಾಲಿಕೆಯು 2026-27ನೇ ಸಾಲಿನಲ್ಲಿ 92.32. ಲಕ್ಷ ರೂ. ಉಳಿತಾಯ ಬಜೆಟ್ ಮಂಡಿಸಿದೆ. ಒಟ್ಟು 442.54 ಕೋಟಿ ರೂ. ಆದಾಯ ನಿರೀಕ್ಷಿಸಿದ್ದು, ಅಭಿವೃದ್ಧಿಗಾಗಿ 441.62 ಕೋಟಿ ರೂ. ವೆಚ್ಚ ಮಾಡಲಿದೆ. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಮೇಯರ್ ಮಂಗೇಶ ಪವಾರ್ ಕರೆದಿದ್ದ ವಿಶೇಷ ಪರಿಷತ್ ಸಭೆಯಲ್ಲಿ ವಾರ್ಷಿಕ ಬಜೆಟ್ ಮಂಡಿಸಿದ ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಹೂಗಾರ ವಿವಿಧ ತೆರಿಗೆ ಆದಾಯ. 15 ಮತ್ತು 16ನೇ ಹಣಕಾಸು …
Read More »ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವಿಶ್ವಾಸ ವೈದ್ಯ
ಸವದತ್ತಿ: ೇತ್ರದ ಪ್ರತಿಯೊಂದು ರಸ್ತೆ ಅಭಿವೃದ್ಧಿಯ ಸಂಕಲ್ಪ ಕೈಗೊಂಡಿದ್ದು, ಸಾರ್ವಜನಿಕರಿಗೆ ಉತ್ತಮ ಸಂಚಾರ ಸೌಲಭ್ಯ ಒದಗಿಸುವುದು ಮುಖ್ಯ ಗುರಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಪಟ್ಟಣದ ರಾಜ್ಯ ಹೆದ್ದಾರಿ&201ರಿಂದ ಮಹಾಮುನಿ ಕೆರೆವರೆಗೆ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕರ್ನಾಟಕ ಸರ್ಕಾರ ಹಾಗೂ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 2025&26ನೇ ಸಾಲಿನ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 50 ಲ ರೂ. ವೆಚ್ಚದಲ್ಲಿ 800 ಕಿ.ಮೀ …
Read More »ಫೆ.28ರಂದು ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್ ಅಭಿಯಾನ ಜಾಥಾ
ಬೆಳಗಾವಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಡಿಯಲ್ಲಿ ಜಿಲ್ಲೆಯಲ್ಲಿರುವ ಆರೋಗ್ಯ ವಿಜ್ಞಾನ ಕಾಲೇಜು ಸಹಯೋಗದಲ್ಲಿ ಸ್ವಾಸ್ಥೃ ಭಾರತ ಶ್ರೇಷ್ಠ ಭಾರತ ಅಂಗವಗಿ ಯುವ ಶುದ್ಧಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಡಾ.ರವಿ ಪಾಟೀಲ ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.28ರಂದು ಬೆಳಗ್ಗೆ 7.30 ಗಂಟೆಗೆ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ …
Read More »ಅಪಘಾತ ಬ್ಲಾೃಕ್‌ಸ್ಪಾಟ್ ಕುರಿತು ಸುಧಾರಣಾ ಕ್ರಮ ಕೈಗೊಳ್ಳಲು ಸತೀಶ ಜಾರಕಿಹೊಳಿ ಸೂಚನೆ
ಬೆಳಗಾವಿ: ವಾಕರಸಾ ಸಂಸ್ಥೆ ವ್ಯಾಪ್ತಿಯ 6 ಕಂದಾಯ ಜಿಲ್ಲೆಗಳ ಒಟ್ಟು 118 ಅಪಘಾತ ಕಪ್ಪು ಸ್ಥಳಗಳ(ಬ್ಲಾೃಕ್‌ಸ್ಪಾಟ್) ಕುರಿತು ಅಲ್ಪಾವಧಿ ಮತ್ತು ದೀರ್ಘಾವಧಿ ಕಾರ್ಯಯೋಜನೆ ರೂಪಿಸಿ ಅವಶ್ಯಕ ಸುಧಾರಣಾ ಕ್ರಮಗಳನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳುವಂತೆ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ವಾಕರಸಾ ಸಂಸ್ಥೆಯಿಂದ ಗುರುತಿಸಲಾದ ಅಪಘಾತ ಕಪ್ಪು ಸ್ಥಳ/ವಲಯಗಳ ಕುರಿತು ನಗರದ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ಕಚೇರಿಯಲ್ಲಿ ಬುಧವಾರ ಜರುಗಿದ ಸಭೆಯಲ್ಲಿ ಬ್ಲಾೃಕ್ ಸ್ಪಾಟ್ ಕುರಿತಾದ ವರದಿಯನ್ನು ಪರಿಶೀಲಿಸಿದ ಬಳಿಕ …
Read More »ಗೋಕಾಕ: ನಾಪತ್ತೆಯಾಗಿದ್ದ ಆಭರಣ ಕಳ್ಳನ ಬಳಿ ಪತ್ತೆ
ಬೆಳಗಾವಿ: ಅಡ ಇಟ್ಟ ಚಿನ್ನವನ್ನು ಬಿಡಿಸಿಕೊಂಡು ಹೋಗುವಾಗ ಬೈಕ್ ಮುಂದಿನ ಕವರ್‌ನಲ್ಲಿಟ್ಟಿದ್ದ ಚಿನ್ನ ಮಿಸ್ ಆಗಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಓರ್ವ ಕಳ್ಳನನ್ನು ಬಂಧಿಸಿ ಒಟ್ಟು 1.20 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಮಂಟೂರ ಗ್ರಾಮದ ರೇವಪ್ಪ ಹಳ್ಳುರ, ಜ.24ರಂದು ಗೋಕಾಕನ ಭಗವಾನ ಶೆಡಜಿ ಅಂಗಡಿಯಲ್ಲಿ ಅಡ ಇಟ್ಟಿದ್ದ 70 ಸಾವಿರ ರೂ. ಮೌಲ್ಯದ 14.5 ಗ್ರಾಂ. ನಕ್ಲೆಸ್ ಹಾಗೂ 50 ಸಾವಿರ ರೂ. ಮೌಲ್ಯದ …
Read More »ಗ್ರಾಮಗಳಿಗೆ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆದ್ಯತೆ : ರಾಹುಲ್ ಶಿಂಧೆ
ಬೆಳಗಾವಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಕುಂದುಕೊರತೆಗಳ …
Read More »ಎಪಿಎಂಸಿ, ಜೈ ಕಿಸಾನ್ ಮಾರುಕಟ್ಟೆ ವರ್ತಕರ ಸಮಸ್ಯೆ ನಿವಾರಣೆಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆಗೆ ದೇಶದಲ್ಲಿಯೇ ಒಳ್ಳೆಯ ಹೆಸರು ಇದ್ದು, ಈ ಹೆಸರನ್ನು ಉಳಿಸುವ ಜವಾಬ್ದಾರಿ ಎಪಿಎಂಸಿ ಮತ್ತು ಜೈ ಕಿಸಾನ್ ಖಾಸಗಿ ಮಾರುಕಟ್ಟೆ ವರ್ತಕರ ಮೇಲಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗಾವಿ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಮತ್ತು ಜೈ ಕಿಸಾನ್ ಖಾಸಗಿ ಮಾರುಕಟ್ಟೆ ವರ್ತಕರ ವಿವಾದ ಬಗೆಹರಿಸಲು …
Read More »ಅಕ್ರಮವಾಗಿ ಗೋವಾ ಮದ್ಯ ಮಾರಾಟ: ಆರೋಪಿ ವಶಕ್ಕೆ
ಬೆಳಗಾವಿ: ಬೆಳಗಾವಿ ನಗರದ ಉದ್ಯಮಬಾಗದ ಅರುಣ ಇಂಜಿನಿಯರಿಂಗ್ ಫ್ಯಾಕ್ಟರಿ ಎದುರಿಗೆ, ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕಿರುವ ವಿವಿಧ ಕಂಪನಿಯ ರಮ್, ವೋಡಾ, ವಿಸ್ಕಿ ಒಟ್ಟು 16 ಸರಾಯಿ ಬಾಟಲಿಗಳನ್ನು ಕೈಚೀಲದಲ್ಲಿಟ್ಟುಕೊಂಡು ಮಾರಾಟದಲ್ಲಿ ತೊಡಗಿದ್ದಾಗ ಉದ್ಯಮಬಾಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪರಮೇಶ್ವರ ದೇವಪ್ಪ ನಾಯಿಕ (50) ಬಂದಿತ ಆರೋಪಿ. ಉದ್ಯಮಬಾಗ ಪೊಲೀಸ್ ಠಾಣೆಯ ಪಿಎಸ್‌ಐ ಕಿರಣ ಸಿ ಹೊನಕಟ್ಟಿ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ, ಒಟ್ಟು …
Read More »ಸಂಕೇಶ್ವರ: ಹಿಂದೂ ಸಂಘಟನೆ ಕಾರ್ಯಕರ್ತರಿಂದಲೇ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ಕೊಲೆ ಯತ್ನ!
24 ಗಂಟೆಗಳಲ್ಲಿ 7 ಆರೋಪಿಗಳನ್ನು ಬಂಧಿಸಿದ ಸಂಕೇಶ್ವರ ಪೊಲೀಸರು ಹುಕ್ಕೇರಿ: ಸಂಕೇಶ್ವರ ಪಟ್ಟಣದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ನಡೆದ ತಲವಾರ್ ದಾಳಿಯ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಕೇವಲ 24 ಗಂಟೆಗಳೊಳಗಾಗಿ ಬೇಧಿಸಿ ಏಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಕೇಶ್ವರ ಪಟ್ಟಣದ ಸಾಯಿ ಕಾರ್ಯಾಲಯದ ಸಮೀಪ ಸೋಮವಾರ ರಾತ್ರಿ ಅನಾಮಿಕ ಗುಂಪೊಂದು ಕಾರಿನಲ್ಲಿ ಬಂದು ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ದತ್ತಾ ಥೋರವತ್ ಅವರ ಮೇಲೆ ತಲವಾರ್‌ನಿಂದ ಕುತ್ತಿಗೆ …
Read More »
Laxmi News 24×7