Breaking News
Home / ಜಿಲ್ಲೆ / ಬೆಳಗಾವಿ (page 369)

ಬೆಳಗಾವಿ

‘ಅಂಗಡಿ ಕುಂಟುಂಬದವರಿಗೆ ಅನ್ಯಾಯ : ಡಿ ಕೆ ಸಿ ಗೆ ರಮೇಶ ಜಾರಕಿಹೊಳಿ ತಿರುಗೇಟು

ಬೆಳಗಾವಿ: ‘ಅಂಗಡಿ ಕುಂಟುಂಬದವರಿಗೆ ನ್ಯಾಯ ಒದಗಿಸದ ಬಿಜೆಪಿ ಸರ್ಕಾರ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿರುಗೇಟು ನೀಡಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸುರೇಶ ಅಂಗಡಿ ನಿಧನದ ವಿಷಯದಲ್ಲಿ ಅವರೇ ರಾಜಕೀಯ ಮಾಡುತ್ತಿದ್ದಾರೆ. ಕೋವಿಡ್-19 ಮಾರ್ಗಸೂಚಿ ಪ್ರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಂತೆ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲಾಗಲಿಲ್ಲ. ಎಷ್ಟೇ ದೊಡ್ಡವರಿದ್ದರೂ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎನ್ನುವುದು …

Read More »

ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ

ಬೆಳಗಾವಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ಯುವ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅವರು, ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡಲೆ ತಪ್ಪಿತಸ್ಥರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. …

Read More »

ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ

ಬೆಳಗಾವಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ಯುವ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅವರು, ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡಲೆ ತಪ್ಪಿತಸ್ಥರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. …

Read More »

ಮಹಾತ್ಮ ಗಾಂಧೀಜಿ ಅವರು ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಎರಡು ದಿನ ವಾಸ್ತವ್ಯ ಹೂಡಿದ್ದಲ್ಲದೇ, ಪಟ್ಟಣಕ್ಕೂ ಭೇಟಿ ನೀಡಿದ್ದರು.

ಚಿಕ್ಕೋಡಿ: ಮಹಾತ್ಮ ಗಾಂಧೀಜಿ ಅವರು ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಎರಡು ದಿನ ವಾಸ್ತವ್ಯ ಹೂಡಿದ್ದಲ್ಲದೇ, ಪಟ್ಟಣಕ್ಕೂ ಭೇಟಿ ನೀಡಿದ್ದರು. 1934ರ ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಸಂಚಿರಿಸಿದ್ದರು. 1934ರ ಮಾರ್ಚ್‌ 7 ಮತ್ತು 8ರಂದು ತಾಲ್ಲೂಕಿನ ನವಲಿಹಾಳದ ಅಕ್ಕಾಚಂದ್ ಮೆಹತಾ ಎನ್ನುವವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಮನೆ ಇಂದು ಪಾಳು ಬಿದ್ದಿದೆ. ‘ರಾಷ್ಟ್ರಪಿತನ ಪಾದಸ್ಪರ್ಶದಿಂದ ಪಾವನಗೊಂಡಿರುವ ಗ್ರಾಮದಲ್ಲಿ ಗಾಂಧಿ ಸ್ಮಾರಕ ನಿರ್ಮಿಸಬೇಕು’ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ. …

Read More »

ಸ್ಮಶಾನದ ಪರಿಸರದಲ್ಲಿ ಬೆಳೆದಿದ್ದ ಮುಳ್ಳು ಮೊದಲಾದ ಕಳೆ ಗಿಡಗಳನ್ನು ತೆರವುಗೊಳಿಸುವ ಕಾಮಗಾರಿಗೆ ಗ್ರಾಮ ಪಂಚಾಯಿತಿಯಿಂದ ಚಾಲನೆ ನೀಡಲಾಗಿದೆ.

ಮೋಳೆ: ಇಲ್ಲಿನ ಸ್ಮಶಾನದ ಪರಿಸರದಲ್ಲಿ ಬೆಳೆದಿದ್ದ ಮುಳ್ಳು ಮೊದಲಾದ ಕಳೆ ಗಿಡಗಳನ್ನು ತೆರವುಗೊಳಿಸುವ ಕಾಮಗಾರಿಗೆ ಗ್ರಾಮ ಪಂಚಾಯಿತಿಯಿಂದ ಚಾಲನೆ ನೀಡಲಾಗಿದೆ. ಅಲ್ಲಿನ ಅವ್ಯವವ್ಥೆ ಕುರಿತು ‘ಪ್ರಜಾವಾಣಿ’ಯಲ್ಲಿ ‘ಸ್ಮಶಾನಕ್ಕೆ ದಾರಿ ಇಲ್ಲದೆ ತೊಂದರೆ’ ಶೀರ್ಷಿಕೆಯಲ್ಲಿ ಗುರುವಾರ ವರದಿ ಪ್ರಕಟವಾಗಿತ್ತು. ಇದರಿಂದ ಪರಿಣಾಮ ಪಿಡಿಒ ದಾನಮ್ಮ ಸಜ್ಜನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಂಚಾಯಿತಿ ಸಿಬ್ಬಂದಿಗೆ ಸೂಚನೆ ನೀಡಿ, ಜೆಸಿಬಿ ಯಂತ್ರದ ಸಹಾಯದಿಂದ ಮುಳ್ಳಿನ ಗಿಡ ಹಾಗೂ ಕಳೆ ಗಿಡಗಳನ್ನು ತೆರವುಗೊಳಿಸಿದ್ದಾರೆ. ರಾತ್ರಿ ವೇಳೆ …

Read More »

ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ. ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ.ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ …

Read More »

ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ  ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …

Read More »

ಇನ್ನು ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ:

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್​ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ …

Read More »

ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ

ಬೆಳಗಾವಿ: ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ ಬಂದಿದೆ.  ಈ ಬಗ್ಗೆ ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ನಿಜಗುಣಾನಂದ ಸ್ವಾಮೀಜಿ ಜನರ ಜಾಗೃತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾರೋ ಈ ರೀತಿ ಬೆದರಿಕೆಯೊಡ್ಡುತ್ತಿದ್ದಾರೆ ಅಂತಾ ಹೇಳಿದ್ದಾರೆ. ಯಾರು ಏನು ಎಂಬುದರ ಬಗ್ಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ಸಮಾಜದಲ್ಲಿ ನಿಜ ಹೇಳುವವರೆಗೆ ಈ ರೀತಿ ಸಮಸ್ಯೆ ಆಗುತ್ತದೆ. ಮೊದಲು ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಾರೆ. ಕುಗ್ಗದಿದ್ದಾಗ ದೈಹಿಕವಾಗಿ ಕುಗ್ಗಿಸಲು ಯತ್ನಿಸುತ್ತಾರೆ. ಈ …

Read More »

ಅಂಗಡಿ ಕುಟುಂಬ ಹೊರತುಪಡಿಸಿ ಟಿಕೆಟ್ ನೀಡೋದಾದ್ರೆ ಕತ್ತಿಗೆ ನೀಡಿ – ಅಭಿಮಾನಿಗಳ ಆಗ್ರಹ

ಚಿಕ್ಕೋಡಿ(ಬೆಳಗಾವಿ): ಇತ್ತಿಚೆಗೆ ನಿಧನರಾದ ಬೆಳಗಾವಿ ಸಂಸದ ಹಾಗೂ ರಾಜ್ಯ ರೇಲ್ವೆ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ನಿಧನದ ಬೆನ್ನಲ್ಲೇ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಸುರೇಶ್ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಲು ನಳಿನ್ ಕುಮಾರ್ ಭೇಟಿ ನೀಡಿ ಟಿಕೆಟ್ ಸಂಬಂಧಿಸಿದಂತೆ ಅನೌಪಚಾರಿಕ ಸಭೆ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಮುಂಬರುವ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗಾಗಿ ಕಮಲ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಈ ಪೈಕಿ ಹಲವು ನಾಯಕರು …

Read More »