Breaking News
Home / ಜಿಲ್ಲೆ / ಬೆಳಗಾವಿ (page 370)

ಬೆಳಗಾವಿ

ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?

ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ. ಜಿಲ್ಲೆಯ ಬಿಮ್ಸ್‌ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ. ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್‌ನಲ್ಲಿ …

Read More »

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ

ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್‍ಸಿ …

Read More »

ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದುಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ರೈತ

ಬೆಳಗಾವಿ : ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ  ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದು ರೈತ ಮುಖಂಡನೊಬ್ಬ ಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ಘಟನೆ ನಡೆದಿದೆ. ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಂದ್ ಗೆ ಕರೆ ನೀಡಿದ್ದೆವೆ. ಇಂತಹ ಸಂದರ್ಭದಲ್ಲಿ ಬಸ್ ಸಂಚಾರ ವ್ಯವಸ್ಥೆಯನ್ನು ನಡೆಸಿ, ಬಂದ್ ಗೆ ವಿರೋಧ ವ್ಯಕ್ತ ಪಡಿಸಿಬೇಡಿ, ಸಾರ್. ಬಸ್ ಸಂಚಾರ ನಿಲ್ಲಿಸಿ ಎಂದು ರೈತ ಮುಖಂಡ …

Read More »

ಬೆಳಗಾವಿ : ಬಂದ್ ಗೆ ಹಲವು ಸಂಘಟನೆಗಳು ಬೆಂಬಲ

ಬೆಳಗಾವಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಹಾಗೂ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ’ ಎಂದು ಆರೋಪಿಸಿ ರೈತ, ದಲಿತ ಮತ್ತು ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಸೆ. 28ರ ರಾಜ್ಯ ಬಂದ್‌ಗೆ ಇಲ್ಲಿನ ಕನ್ನಡ, ದಲಿತ ಮತ್ತು ರೈತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಪದಾಧಿಕಾರಿಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಭಾಗವಹಿಸುವುದಾಗಿ ತಿಳಿಸಿದರು. …

Read More »

ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು ರೈತ ಪರ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ ನೀಡಬೇಕು: ಈರಣ್ಣ ಕಡಾಡಿ

ಬೆಳಗಾವಿ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ಕೃಷಿಗೆ ಸಂಬಂಧಿಸಿದ ನೀತಿಗಳು ಕೃಷಿಕರ ಪರವಾಗಿವೆ. ಆದರೆ, ವಿರೋಧ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ರೈತರನ್ನು ಎತ್ತಿ ಕಟ್ಟುತ್ತಿವೆ’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿನ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು. ರೈತ ಪರ …

Read More »

ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ

ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.

Read More »

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು. ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು. ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು. ‘ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. …

Read More »

ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ.

ಬೆಂಗಳೂರು: ಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ. ಆಕಾಂಕ್ಷಿಗಳು ಸಂಘದ ಮುಖಂಡರ ನ್ನು ಮತ್ತು ಹೈಕಮಾಂಡ್ ನ್ನು ಸಂಪರ್ಕಿಸುವ ಕೆಲಸ ಶುರು ಮಾಡಿದ್ದಾರೆ. ಈಗಾಗಲೇ ಕೆಲವರ ಹೆಸರು ಓಡಾಡ ತೊಡಗಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಠಾತ್ ನಿಧನದಿಂದ ಬಿಜೆಪಿ ಪಕ್ಷಕ್ಕೆ ಭಾರೀ ಆಘಾತವಾಗಿದೆ. ಮೊದಲ ಮೂರು ಅವಧಿಯಲ್ಲಿ ಕ್ಷೇತ್ರದಲ್ಲಿ ಸುರೇಶ ಅಂಗಡಿ ಜನಪರ …

Read More »

ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕ

ಬೆಳಗಾವಿ: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನೊಬ್ಬ ಹುಚ್ಚಾಟ ಮೆರೆದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದ ಬಳಿ ನಡೆದಿದೆ. ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ, ಸಾರಾಯಿ ತರಲು ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿದ್ದಾನೆ. ಘಟಪ್ರಭಾ ನದಿ ತಟದಲ್ಲಿರುವ ಎರಡು ಗ್ರಾಮಗಳಾದ ಬೆಳಗಾವಿಯ ಢವಳೇಶ್ವರದಿಂದ ಬಾಗಲಕೋಟೆಯ ಢವಳೇಶ್ವರಕ್ಕೆ ಸಾರಾಯಿ ತರಲು ಹೋಗಿದ್ದ. ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕನ ಹುಚ್ಚಾಟ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »