Breaking News

ಬೆಳಗಾವಿ

ಚಿಕ್ಕೋಡಿ ಕ್ಷೇತ್ರದಲ್ಲಿ ಶೈಕ್ಷಣಿಕ ಏಳಿಗೆಗೆ ಆದ್ಯತೆ

ಇಂದು ಚಿಕ್ಕೋಡಿ ನಗರದಲ್ಲಿರುವ ನೂತನ ಕೇಂದ್ರೀಯ ವಿದ್ಯಾಲಯಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಕೊರೊನಾ ಸುರಕ್ಷತಾ ನಿಯಮವನ್ನು ಪಾಲಿಸಿ, ಈ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪುನರಾರಂಭಿಸಲು ಸೂಚಿಸಿದರು. ನಂತರ ಏಪ್ರಿಲ್ ತಿಂಗಳ ಆರಂಭದಿಂದ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ದಾಖಲಾತಿ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ …

Read More »

ಉಪ ಚುನಾವಣೆ ಹೊಸ್ತಿಲಲ್ಲಿ ಲಿಂಗಾಯತ ಮುಖಂಡನ ಸೆಳೆದ ಸತೀಶ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ ಹಾಗೂ ಲಿಂಗಾಯತ ಸಮಾಜದ ಮುಖಂಡ ಅಶೋಕ ಪೂಜಾರಿ ಅವರನ್ನು ಪಕ್ಷದತ್ತ ಸೆಳೆಯುವಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಅವರು ನೀಡಿದ ಆಹ್ವಾನ ಮನ್ನಿಸಿರುವ ಪೂಜಾರಿ, ಕಾಂಗ್ರೆಸ್‌ ಸೇರ್ಪಡೆ ಆಗುವುದಾಗಿ ಪ್ರಕಟಿಸಿದ್ದಾರೆ. ಇಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚಿಸಿದ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ …

Read More »

ಸಿಡಿ ಲೇಡಿ ಪೋಷಕ’ರಿಂದ ‘ಡಿಕೆ ಶಿವಕುಮಾರ್’ ಮೇಲೆ ಗಂಭೀರ ಆರೋಪ :

ಬೆಳಗಾವಿ : ನಮ್ಮ ಮಗಳು ಯಾವುದೇ ತಪ್ಪು ಮಾಡಿಲ್ಲ. ಅವಳಿಂದ ಮಾಡಿಸಿದ್ದಾರೆ. ಇದರ ಹಿಂದೆ ಡಿಕೆ ಶಿವಕುಮಾರ್ ಇದ್ದಾರೆ. ನಮ್ಮ ಮಗಳನ್ನು ಒತ್ತಾಯ ಪೂರ್ವಕವಾಗಿ ಬಂಧನದಲ್ಲಿ ಇಟ್ಟುಕೊಂಡು ಹೇಳಿಕೆ ಕೊಡಿಸ್ತಾ ಇದ್ದಾರೆ. ದಿನಕ್ಕೊಂದು ವೀಡಿಯೋ ಹೇಳಿಕೆಯನ್ನು ಅವರಿಂದ ಕೊಡಿಸ್ತಾ ಇದ್ದಾರೆ. ಡಿಕೆ ಶಿವಕುಮಾರ್ ಅವರೇ ದುಡ್ಡು ಕೊಟ್ಟು, ಗೋವಾ ಸೇರಿದಂತೆ ವಿವಿಧ ಸ್ಥಳಗಳಿಗೆ ತೆರಳೋದಕ್ಕೆ ಕಳುಹಿಸಿದ್ದಾರೆ ಎಂಬುದಾಗಿ ಸಿಡಿ ಲೇಡಿಯ ಪೋಷಕರು ಗಂಭೀರವಾಗಿ ಆರೋಪ ಮಾಡಿದ್ದಾರೆ.   ನಗದಲ್ಲಿ ಸಿಡಿ …

Read More »

ಯುವತಿ ಪತ್ತೆ ಹಚ್ಚಿ, ಜನರಿಗೆ ಸತ್ಯ ತಿಳಿಸಲಿ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಶಾಸಕ ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ. ಪ್ರಕರಣದಿಂದಾಗಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪ್ಲಸ್‌ ಆಗುವುದಿಲ್ಲ. ಬಿಜೆಪಿಗೆ ಮೈನಸ್‌ ಕೂಡ ಆಗುವುದಿಲ್ಲ. ಎರಡೂ ಪಕ್ಷಗಳಲ್ಲೂ ಅವರವರದೆ ಆದ ಕಾರ್ಯಕರ್ತರು ಇದ್ದಾರೆ. ಅವರು ಬೆಂಬಲಿಸುತ್ತಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಿ.ಡಿ. ಕೇಸ್ ಬಗ್ಗೆ ಪೊಲೀಸರು ತನಿಖೆ ನಡೆಸಿ ಹೇಳುವವರೆಗೂ ನಾವು ಏನನ್ನೂ ಹೇಳಲಾಗುವುದಿಲ್ಲ. ಪ್ರಕರಣ ದಿನಕ್ಕೊಂದು …

Read More »

ಶೀಘ್ರವೇ ಅಸಮಾಧಾನ ಶಮನ

ಅಥಣಿ: ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಅಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು. ಇದು ಪಕ್ಷದಲ್ಲಿ ಸಹಜವಾಗಿಯೇ ನಡೆಯುವ ಪ್ರಕ್ರಿಯೆ ಎಲ್ಲವೂ ಸರಿಯಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಕೆಲವರು ಸಹಜವಾಗಿ ರಾಜಕಾರಣದಲ್ಲಿ ಸ್ವಲ್ಪ ಮಟ್ಟಿಗೆ ಅಸಮಾಧಾನ ಮೂಡುವುದು ಸಹಜ. ಶರಣು ಸಲಗರ ಅ ಧಿಕ …

Read More »

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಚಪ್ಪಲಿ ಎಸೆದು ಸ್ವಾಗತ ಸ್ವಾಗತ

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾನುವಾರ ಬೆಳಗಾವಿಗೆ ಆಗಮಿಸಿದರು. ರಾಮಲಿಂಗಾರೆಡ್ಡಿ ಅವರ ಜೊತೆಗೆ ಆಗಮಿಸಿದ ಶಿವಕುಮಾರ ಅವರಿಗೆ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಾಸಕರು ಅದ್ಧೂರಿಯಾಗಿ ಸ್ವಾಗತಕೋರಿದರು. ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ನ ಎಲ್ಲ ಮುಖಂಡರೂ ಸೇರಿ ಒಮ್ಮತದಿಂದ ಅಭ್ಯರ್ಥಿಯನ್ನಾಗಿಸಿದ್ದೇವೆ. ಒಳ್ಳೆಯ …

Read More »

ಸಿಡಿ ವಿಚಾರವಾಗಿ ನೋ ಕಮೇಂಟ್ಸ್ – ಉಮೇಶ್ ಕತ್ತಿ

ಬೆಳಗಾವಿ : ಬೆಳಗಾವಿಯಲ್ಲಿ ಸಚಿವ ಉಮೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಡಿ ಕೇಸ್ ವಿಚಾರವಾಗಿ ಮಾತನಾಡಲು ನಿರಾಕರಿಸಿದ್ದಾರೆ. ಸಿಡಿ ವಿಚಾರವಾಗಿ ನೋ ಕಮೆಂಟ್ಸ್ ಎನ್ನುತ್ತಾ ಹೊರಟು ಹೋಗಿದ್ದಾರೆ. ಇದೇ ವೇಳೆ ಬೆಳಗಾವಿ ಲೋಕಸಭೆ ಉಪ‌ ಚುನಾವಣೆ ಕುರಿತು ಮಾತನಾಡಿದ ಅವರು 3 ಬೈ ಎಲೆಕ್ಷನಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ಲೋಕಸಭೆ ಉಪ‌ ಚುನಾವಣೆಗೆ ಸುರೇಶ್ ಅಂಗಡಿ ಪತ್ನಿ ಮಂಗಲ …

Read More »

ಬೆಳಗಾವಿಗೆ ಬಂದ ಯುವತಿಯ ಪೋಷಕರು; ಪೊಲೀಸ್ ಭದ್ರತೆ

ಬೆಳಗಾವಿ: ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ‌ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ.ಯಲ್ಲಿರುವ ಯುವತಿಯ ಪೋಷಕರನ್ನು ಎಸ್​ಐಟಿ ತಂಡದವರು ಬೆಂಗಳೂರಿನಿಂದ ಬೆಳಗಾವಿಗೆ ಕರೆ ತಂದು ಇಲ್ಲಿನ ಎಪಿಎಂಸಿ ಠಾಣೆಗೆ ಭಾನುವಾರ ಮುಂಜಾನೆ ಹಸ್ತಾಂತರಿಸಿದರು. ಎಸ್‌ಐಟಿ ತಂಡದ ಎಸಿಪಿ ಪರಮೇಶ್ವರ್ ನೇತೃತ್ವದಲ್ಲಿ 16 ಎಸ್‌ಐಟಿ ಸಿಬ್ಬಂದಿಯ ತಂಡ ಎಪಿಎಂಸಿ ಪೊಲೀಸ್ ಠಾಣೆಗೆ ಬಂದು, ಸಂತ್ರಸ್ತೆಯ ಕುಟುಂಬದವರನ್ನು ತಲುಪಿಸಿದರು. ಬಳಿಕ ಪೊಲೀಸರಿಗೆ ಹಸ್ತಾಂತರಿಸಿತು. ಠಾಣೆಯ ಸಿಪಿಐ ದಿಲೀಪ್‌ಕುಮಾರ್ ಒಂದು ಗಂಟೆಗೂ ಹೆಚ್ಚು ಕಾಲ …

Read More »

ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ಶವಯಾತ್ರೆ

ಗೋಕಾಕ : ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ರಮೇಶ್ ಆರೋಪಿಸಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದರು. ಇಲ್ಲಿನ ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿ, ಡಿ.ಕೆ. ಶಿವಕುಮಾರ್ ಅವರ ಅಣುಕು ಶವ ಯಾತ್ರೆ ನಡೆಸಿ, ಕೈಯಲ್ಲಿ ಖಳನಾಯಕ ಡಿ.ಕೆ.ಶಿಗೆ ಶ್ರದ್ಧಾಂಜಲಿ ಎಂಬ ಬ್ಯಾನರ್ ಹಿಡಿದು ಆಕ್ರೋಶ ವ್ಯಕ್ತ …

Read More »

ಡಿಕೆಎಸ್​ ವಿರುದ್ಧದ ಆರೋಪದ ಗಂಭೀರ ತನಿಖೆ ನಡೆಸಬೇಕು- ಪ್ರಹ್ಲಾದ್ ಜೋಶಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿ ಪ್ರಕರಣದ ಸಂತ್ರಸ್ತೆಯ ಯುವತಿಯ ಪೋಷಕರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು.. ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್ ಮೇಲೆ ಮಾಡಿರುವ ಆರೋಪ ವಿಚಾರ ಗಂಭೀರದುದ್ದು. ಈಗಾಗಲೇ ಸಿಡಿ ವಿಚಾರವಾಗಿ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಗೆ ಸಂಪೂರ್ಣವಾಗಿ ಅಧಿಕಾರ ನೀಡಲಾಗಿದೆ. ಎಸ್ ಐ ಟಿ ಡಿ.ಕೆ. ಶಿವಕುಮಾರ್ ವಿರುದ್ಧ …

Read More »