ಬೆಳಗಾವಿ: ಬೆಳಗಾವಿ ಗಡಿ ವಿಷಯದಲ್ಲಿ ಕರ್ನಾಟಕ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ. ಈ ನೆಲ, ಈ ಜಲವನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಣೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ರಕ್ಷಣೆ ಮಾಡುತ್ತದೆ. ಶಿವಸೇನೆ ಪುಂಡಾಟಿಕೆ ನಿಲ್ಲಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಶಿವಸೇನೆ ಪುಂಡಾಟಿಕೆ ನಿರಂತರವಾಗಿ ನಡೆಯುತ್ತಿದೆ. ಕಠಿಣ ಕ್ರಮ ಜರುಗಿಸಿ ನಾವು ನಿಲ್ಲಿಸಬೇಕಿದೆ …
Read More »ಸುಳ್ಳನ್ನು ಹೇಳಿ, ಶಾಸಕ ಅಭಯ ಪಾಟೀಲ ರವರು ಮಾಡಿರುವ ಕೆಲಸದ ಕ್ರೆಡಿಟ್ ತಗೆದುಕೊಳ್ಳುವುದನ್ನು ನಿಲ್ಲಿಸಬೇಕು.: B.J.P.. ದಕ್ಷಿಣ ಅಧ್ಯಕ್ಷೆ ಗೀತಾ ಸುತಾರ್
ಬೆಳಗಾವಿ – ಬೆಳಗಾವಿ ರಿಂಗ್ ರಸ್ತೆಗೆ ಈ ಬಾರಿಯ ಬಜೆಟ್ ನಲ್ಲಿ 140 ಕೋಟಿ ರೂ. ತೆಗೆದಿರಿಸಿರುವುದು ಶಾಸಕ ಅಭಯ ಪಾಟೀಲ ಅವರ ಪ್ರಸ್ತಾವನೆಯ ಅನ್ವಯ ಎಂದು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಶಾಸಕ ಅಭಯ ಪಾಟೀಲ ಸಚಿವರಿಂದ ವಿಧಾನಸಭೆಯಲ್ಲಿ ಲಿಖಿತ ಉತ್ತರ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಬಿಜೆಪಿ ಬೆಳಗಾವಿ ದಕ್ಷಿಣ ಅಧ್ಯಕ್ಷೆ ಗೀತಾ ಸುತಾರ್, ಕೆಲವರು ರಿಂಗ್ ರಸ್ತೆಗೆ ತಾವೇ ಹಣ …
Read More »ಲೋಕಸಭಾ ಉಪ ಚುನಾವಣೆ ವಿವಿಧ ಕಟ್ಟಡಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ನಗರದ ಟಿಳಕವಾಡಿಯ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿರುವ ವಿವಿಧ ಕಟ್ಟಡಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪರಿಶೀಲಿಸಿದರು. ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ಕೊಠಡಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಕೊಠಡಿಗಳನ್ನು ಪರಿಶೀಲಿಸಿ, ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಂಸ್ಥೆಯ …
Read More »ಸಾಹುಕಾರ್ ಸಿಡಿ ಪ್ರಕರಣ – ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಯುವತಿ ಸಹೋದರರು
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಎಸ್ ಐಟಿ ತನಿಖೆ ಚುರುಕುಗೊಂಡಷ್ಟು ಸ್ಫೋಟಕ ಮಾಹಿತಿಗಳು ಹೊರಬರುತ್ತಲೇ ಇದೆ. ಇದೀಗ ಸಿಡಿಯಲ್ಲಿರುವ ಯುವತಿಯ ಸಹೋದರರು ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಾಯ್ಬಿಟ್ಟಿದ್ದಾರೆ. ಯುವತಿಯ ತಂದೆ ತಮ್ಮ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ಎರಡು ದಿನಗಳ ಹಿಂದೆ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಯುವತಿಯ ಮನೆಯವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು 24 ಕೊರೊನಾ ಕೇಸ್ ಪತ್ತೆ..ಸದಾಶಿವನಗರ ಈಗ ಮೈಕ್ರೋ ಕಂಟೇನ್ಮೆಂಟ್ ಪ್ರದೇಶ
ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಜಿಲ್ಲೆಯ್ಲಿ ಇಂದು ಒಟ್ಟು 24 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಇದರಿಂದ ಕುಂದಾನಗರಿ ಜನರಲ್ಲಿ ಆತಂಕ ಮನೆ ಮಾಡಿದೆ. ಹೌದು ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಮಹಾಮಾರಿ ಕೊರೊನಾ ವಕ್ಕರಿಸಿಕೊಂಡಿದೆ. ಇದರಲ್ಲಿ ಸದಾಶಿವನಗರದಲ್ಲಿಯೇ 7 ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿರುವ ಹಿನ್ನೆಲೆ ಸರ್ಕಾರದ ಆದೇಶದಂತೆ ಮೈಕ್ರೋ …
Read More »ಘಟಪ್ರಭಾ ಸಮೀಪದ ಶಿಂದಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ ಸಾರಾಯಿ ಕುಡಿದು ರೋಗಿಗಳಿಗೆ ಚಿಕಿತ್ಸೆ
ಹೆಣ್ಣು ಮಗಳು ಹೆಣ್ಣು ಕುಲಕ್ಕೆ ಮತ್ತು ವೈದ್ಯ ಕುಲಕ್ಕೆ ಅಪಮಾನ ಮಾಡಿದ್ದಾರೆ . ಸಾರಾಯಿ ಕುಡಿದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಾರೆ . ಅಷ್ಟೇ ಅಲ್ಲದೇ ಸಿಗರೇಟ್ ಸೇದಿ ಹೊಗೆ ಕೂಡ ಬಿಟ್ಟಿದ್ದಾರೆ . ಈ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಹೀಗೆ ಸಿಗರೇಟ್ ಸೇರಿ ಹೊಗೆ ಬಿಡುತ್ತಿರುವ, ಸಾರಾಯಿ ಕುಡಿಯುತ್ತಿರುವ ಈ ಮಹಿಳೆಯರು ಗೋಕಾಕ್ ತಾಲೂಕಿನ ಘಟಪ್ರಭಾ ಸಮೀಪದ ಶಿಂದಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ ಮತ್ತು ಗ್ರೂಪ್ …
Read More »ಹೈಕಮಾಂಡ್ ಹೇಳಿದರೆ ಸ್ಪರ್ಧೆಗೆ ಸಿದ್ಧ:ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಅಖಾಡ ರಂಗೇರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳ ಲಾಬಿ ಆರಂಭವಾಗಿದೆ. ಈ ನಡುವೆ ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆಗೆ ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಲೋಕಸಭಾ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ನಾನು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ. ಈಗಾಗಲೇ ಮೂರರಿಂದ ನಾಲ್ಕು ಜನರ ಹೆಸರು ಚಾಲ್ತಿಯಲ್ಲಿದೆ ಇದರಲ್ಲಿ ನಾನೂ ಒಬ್ಬ ಎಂದರು. ಟಿಕೆಟ್ ವಿಚಾರವಾಗಿ ಪಕ್ಷದಲ್ಲಿ …
Read More »ಮನಸಾಪೂರ ಗ್ರಾಮದಲ್ಲಿ ದಾಳಿ: ಗಾಂಜಾ ವಶ
ಖಾನಾಪೂರ ತಾಲೂಕಿನ ಮನಸಾಪೂರ ಗ್ರಾಮದಲ್ಲಿ ಗಾಂಜಾ ಗಿಡ ಬೆಳೆಸಿದ್ದ ಓರ್ವ ವ್ಯಕ್ತಿಯನ್ನು ಬಂಧಿಸುವುದರಲ್ಲಿ ಖಾನಾಪೂರ ಪೆÇಲೀಸರು ಯಶಸ್ವಿಯಾಗಿದ್ದಾರೆ. ಫ್ರಾನ್ಸಿಸ್ ಸೂಜ್ ಎಂಬ 29 ವರ್ಷದ ಯುವಕ ಬಂಧಿತ ಆರೋಪಿಯಾಗಿದ್ದು, ಆತನಿಂದ ಒಟ್ಟು 476 ಗ್ರಾಂ ತೂಕದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಿಪಿಐ ಸುರೇಶ್ ಶಿಂಗಿ, ಪಿಎಸ್‍ಐ ಬಸನಗೌಡ ಪಾಟೀಲ್, ಕಂದಾಯ ನಿರೀಕ್ಷಕ ಶಶಿಕಾಂತ ಠಕ್ಕೇಕರ ಸೇರಿದಂತೆ ಇನ್ನಿತರರು ಹಾಜರಿದ್ದರು. ಪಂಚನಾಮೆ ಮಾಡಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಮಾಲೋಚನೆ
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಗುರುವಾರ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳ ಸಭೆ ನಡೆಸಿದರು. ಚುನಾವಣೆ ನೀತಿ ಸಂಹಿತೆ, ಬದಲಾದ ನಿಯಮಗಳು, ಶಾಂತಿ ಸುವ್ಯವಸ್ಥಿತ ಚುನಾವಣೆಗೆ ಸಹಕಾರ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿ, ಅಭಿಪ್ರಾಯ ಪಡೆದುಕೊಂಡರು. ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳ ಸಭೆ ನಡೆಯಿತು. ಈ …
Read More »ಕೊರೋನಾ ತಡೆಗೆ ಜಿಲ್ಲಾದ್ಯಂತ ಕಟ್ಟೆಚ್ಚರ, ಲಸಿಕೆ ಕಾರ್ಯ ಚುರುಕು: ಡಾ.ಶಶಿಕಾಂತ ಮುನ್ಯಾಳ
ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಡಿ ಭಾಗದಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ಲಸಿಕೆ ಕಾರ್ಯಕ್ರಮ ಮುಂದುವರಿದಿದ್ದು, ಫ್ರಂಟ್ ಲೈನ್ ವಾರಿಯರ್ಸ್ ಸೇರಿ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ಮಾತನಾಡಿ, ಬೇರೆ ಬೇರೆ ದೇಶಗಳಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದೆ. ಈ ಅಲೆ ಮಾರ್ಚ್ ಮಧ್ಯಭಾಗದಿಂದ …
Read More »
Laxmi News 24×7