Breaking News

ಬೆಳಗಾವಿ

ಗೋಕಾಕ: ಸಚಿವರ ಕಛೇರಿಯಲ್ಲಿ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನವನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು.

ಗೋಕಾಕ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ತಾಲೂಕಿನ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನ ವಿತರಿಸಿ ಮಾತನಾಡಿದರು. ಸನ್ 2019-20 ಮತ್ತು 2020-21 ರ ಸಾಲಿನ ಎಸ್.ಎಫ್.ಸಿ ಅನುದಾನ ಶೇ 24.10% ರ ಯೋಜನೆಯಡಿಯಲ್ಲಿ ರೂ 2.42 ಲಕ್ಷಗಳ ಅನುದಾನದಲ್ಲಿ 5 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ವರ್ಗದ ಬಿ.ಇ …

Read More »

ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್ (ತಿನಿಸು ಮಾರುಕಟ್ಟೆ) ಆರಂಭಿಸಲಾಗಿದೆ. ಇಲ್ಲಿನ ಗೋವಾ ವೇಸ್ ಬಳಿ ರಾಣಿ ಚೆನ್ನಭೈರಾದೇವಿ ಮಹಿಳಾ ಬಜಾರ ಮತ್ತು ತಿನಿಸು ಕಟ್ಟೆ ಮಳಿಗೆಗಳನ್ನು ನಿರ್ಮಾಣಮಾಡಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮವನ್ನು ರವಿವಾರ ಸಂಜೆ: 5 ಗಂಟೆಗೆ  ರಾಜ್ಯಸಭಾ ಮಾಜಿ ಸದಸ್ಯ, ಕೆ.ಎಲ್‌.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನೆರವೇರಿಸಲಿದ್ದಾರೆ.

Read More »

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ನಿರ್ದೇಶಕ ಸನತ ಜಾರಕಿಹೊಳಿ.

ಗೋಕಾಕ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಕಲ್ಪನಾ ಹೇಳಿದರು. ಶನಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕದಿಂದ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು …

Read More »

ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು

ಬೆಳಗಾವಿ: ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು ಮೂವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗೋಕಾಕ್ ನ ಅರಬಾವಿ ಗ್ರಾಮದ ಸಂತೋಷ್ ಗಂಗಾರಾಮ ವಡ್ಡರ, ವಿಶಾಲ ನರಸಿಂಗ ಹಾಗೂ ಚಿನ್ನದ ವ್ಯಾಪಾರಿ ಚಂದ್ರಕಾಂತ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 18,59,776/-ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಲಾಗಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಕಿತ್ತೂರು ಠಾಣೆ ವ್ಯಾಪ್ತಿಯ 13 ಮನೆ, ಮಾರಿಹಾಳ ಠಾಣಾ ವ್ಯಾಪ್ತಿಯ 2 …

Read More »

ಸೋಯಾಅವರೆ ಪ್ರದೇಶ ವಿಸ್ತರಣೆಗೆ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಸಲಹೆ

ಬೆಳಗಾವಿ: ‘ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಸಂಕಲ್ಪದಂತೆ ಸ್ಥಾಪನೆಯಾಗಿರುವ ಕೃಷಿ ವಿಜ್ಞಾನ ಕೇಂದ್ರವು ನೂತನ ಕೃಷಿ ತಂತ್ರಜ್ಞಾನಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸುವ ಮೂಲಕ ಕೃಷಿಕರಿಗೆ ನೆರವಾಗುತ್ತಿದೆ’ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಹೇಳಿದರು. ಬಾಗಲಕೋಟೆ ರಸ್ತೆಯಲ್ಲಿರುವ ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ಹಾಗೂ ಇಂದೋರ್‌ನ ಐಸಿಎಆರ್-ಭಾರತೀಯ ಸೋಯಾಅವರೆ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಕೊರವಿಕೊಪ್ಪದ ಈಶ್ವರ ನಾ. ಏಣಗಿ ಅವರ ಜಮೀನಿನಲ್ಲಿ ಈಚೆಗೆ …

Read More »

ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ

ಗೋಕಾಕ: ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಶನಿವಾರದಂದು ನಡೆಯಲಿರುವ     ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ ಬಸವಣ್ಣೆಪ್ಪ ಹೊಸಮನಿ ವೇದಿಕೆ.

Read More »

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವ

ಗೋಕಾಕ: ನಗರದ ಶೂನ್ಯ ಸಂಪಾದನ ಮಠದಿಂದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭವು ಮಾ-1 ರಿಂದ 4ರವರೆಗೆ ಅತೀ ವಿಜೃಂಭನೆಯಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿವೇಕ ಜತ್ತಿ ಹೇಳಿದರು. ಅವರು ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ …

Read More »

ಲೋಕಸಭಾ ಕ್ಷೇತ್ರಕ್ಕೆ ಇಂದೇ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ರಾಜ್ಯದ ಮೂರು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಇಂದೇ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಲಿದ್ದು, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಹಾಗೂ ಪುದುಚೆರಿ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.ಇನ್ನು ರಾಜ್ಯದ 3 ವಿಧಾನಸಭಾ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಚುನಾವಣೆಗೂ ಮುಹೂರ್ತ ಫಿಕ್ಸ್ …

Read More »

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!

ಗೋಕಾಕ್: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಫೆ.೨೭ ರಿಂದ ಮಾ.೨ ರ ವರಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೨೭ ರಂದು ೧೦ ಗಂಟೆಗೆ ನಗರದ ಎನ್‌ಇಎಸ್ ಶಾಲಾ ಆವರಣದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಂಜೆ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.೨೮ ರಂದು ಗೋಕಾಕ ತಾಲೂಕಿನ ಜಮನಾಳ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಹತ್ತಿರ ಆಣೆಕಟ್ಟು ಸ್ಥಳ …

Read More »

1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ

ಗೋಕಾಕ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ ಅವರು, ಮನೆ ಮನೆಗೆ ಗಂಗೆ ಎಂಬ ವಿನೂತನ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಇದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು. ಈಗಾಗಲೇ ಜಲಜೀವನ …

Read More »