Breaking News

ಬೆಳಗಾವಿ

ಮೊಸಳೆಗಳಿವೆ ಎಚ್ಚರಿಕೆ!

ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು ಕಡಿಮೆ ಆದ ಕೂಡಲೇ ಆಹಾರ ಅರಸಿ ದಡಕ್ಕೆ ಬರುವ ಮೊಸಳೆಗಳನ್ನು ಅಲ್ಲಿಯ ಜನರು ಏನು ಮಾಡುತ್ತಾರೆ? ನದಿಯಿಂದ ದಡಕ್ಕೆ ಮೊಸಳೆ ಬಂದಿದೆ ಎನ್ನುವ ಸುದ್ದಿ ಹರಡುತ್ತಿದ್ದಂತೆ ದೊಡ್ಡ ಗುಂಪೇ ಸೇರುತ್ತದೆ. ಹೊರ ಬಂದ ಮೊಸಳೆಯನ್ನು ಭಯದಿಂದಾಗಿ ಕಲ್ಲು, ಬಡಿಗೆಗಳಿಂದ ಹೊಡೆದು ಇಲ್ಲವೆ ಟ್ರ್ಯಾಕ್ಟರ್‌ ಹಾಯಿಸಿ ಕೊಂದ ಉದಾಹರಣೆಗಳು ಇವೆ. ಆದರೆ, ಈಗ ಪರಿಸ್ಥಿತಿ …

Read More »

ಖಾನಾಪುರ: ಪ್ರವಾಸಿ ತಾಣವಾಗಲಿ ಸಣ್ಣಹೊಸೂರಿನ ದೊಡ್ಡ ಕೆರೆ, ಬರಗಾಲದಲ್ಲೂ ಜಲಪೂರಣ

ಖಾನಾಪುರ: ತಾಲ್ಲೂಕಿನ ಹಲವೆಡೆ ಮಳೆಯ ಕೊರತೆಯ ಪರಿಣಾಮ ಈ ಸಲದ ಬೇಸಿಗೆಯಲ್ಲಿ ಎಲ್ಲೆಡೆ ಜಲಕ್ಷಾಮ ತಲೆದೋರಿದೆ. ಪ್ರಾಣಿ- ಪಕ್ಷಿಗಳು, ಜಲಚರಗಳಿಗೂ ಕುಡಿಯುವ ನೀರಿನ ತೊಂದರೆ ಉದ್ಭವಿಸಿದೆ. ಆದರೆ ಪಟ್ಟಣದಿಂದ 8 ಕಿ.ಮೀ ದೂರದಲ್ಲಿರುವ ಸಣ್ಣ ಹೊಸೂರು ಗ್ರಾಮದ ವಿಶಾಲವಾದ ಕೆರೆ ನೀರಿನಿಂದ ತುಂಬಿ ಕಂಗೊಳಿಸುತ್ತಿದೆ. ಇದನ್ನು ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣ ಮಾಡಬೇಕಾದ ಅವಶ್ಯಕತೆ ಇದೆ. ಈ ಕೆರೆಯಲ್ಲಿ ನೀರಿನ ಸಂಗ್ರಹದ ಪರಿಣಾಮ ಅಂಚಿನಲ್ಲಿ ನೂರಾರು ಬಿಳಿ ಕೊಕ್ಕರೆ, ರಾಜಹಂಸ, ಪಾರಿವಾಳ, …

Read More »

ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ

ಬೆಳಗಾವಿ: ಹುಬ್ಬಳ್ಳಿಯ ನೇಹಾ ಹತ್ಯೆಯ ಪ್ರಕರಣದ ಪ್ರಮುಖ ಕೇಂದ್ರವಾಗಿರುವ ಸವದತ್ತಿ ತಾಲೂಕಿನ ಮುನವಳ್ಳಿ ಮತ್ತೊಂದು ಆಘಾತಕಾರಿ ಪ್ರಕರಣದಿಂದ ಸುದ್ದಿಯಾಗಿದ್ದು, ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದ ಹಿಂದೆ ಲವ್ ಜಿಹಾದ್ ಪ್ರಯತ್ನದ ಆರೋಪ ಸಹ ಕೇಳಿಬಂದಿದೆ. ಮತಾಂತರಕ್ಕೆ ಯತ್ನಿಸಿದ ಪ್ರಮುಖ ಅರೋಪಿ ರಫೀಕ್ ಬೇಪಾರಿ ಹಾಗೂ ಆತನ ಪತ್ನಿಯನ್ನು ಬಂಧಿಸಲಾಗಿದೆ. ಇದಲ್ಲದೆ ಇವರಿಗೆ ಸಾಥ್ ನೀಡಿದ ಆರೋಪದ ಮೇಲೆ ಇನ್ನೂ ಐದು ಜನರ …

Read More »

ಚಿಕ್ಕೋಡಿ: ಎಂದೂ ಬತ್ತದ ರಾಮಲಿಂಗೇಶ್ವರ ಬಾವಿ

ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ ಜಿಲ್ಲೆಯಲ್ಲಿ ಭೀಕರ ಬರದಿಂದ ಜಲಕ್ಷಾಮ ಉಂಟಾಗಿದೆ. ನದಿ, ಹಳ್ಳ, ಕೊಳ್ಳಗಳು ಬತ್ತಿವೆ. ಆದರೆ, ಇಲ್ಲಿನ ರಾಮಲಿಂಗೇಶ್ವರ 20 ಅಡಿ ಬಾವಿಯಲ್ಲಿ ಮಾತ್ರ ನಿರಂತರ ಜಲ ಪೂರಣವಾಗಿದೆ. ಗ್ರಾಮದಿಂದ 3 ಕಿ.ಮೀ ದೂರದಲ್ಲಿರುವ ಈ ಬಾವಿ ಎಂಥದ್ದೇ ಬಿರು ಬೇಸಿಗೆಯಲ್ಲೂ, ಬರದಲ್ಲೂ ಬತ್ತಿದ ಉದಾಹರಣೆ ಇಲ್ಲ. ಬೆಟ್ಟ ಗುಡ್ಡಗಳ ನಡುವೆ ತಲೆ ಎತ್ತಿನಿಂತ ದೇವಸ್ಥಾನದಲ್ಲಿ …

Read More »

ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು ಎಂಬುದು ಅವರಿಗೆ ಗೊತ್ತಿದೆ. ಹತ್ತು ವರ್ಷಗಳ ಆಡಳಿತದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ವಿಶ್ವದ ಆರ್ಥಿಕ ಮುಂಚೂಣಿಯ …

Read More »

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ರಾಹುಲ ಜಾರಕಿಹೊಳಿ

ರಾಯಬಾಗ: ‘ಕಾಂಗ್ರೆಸ್‌ ಸರ್ಕಾರ ಕೊಟ್ಟ ಭರವಸೆಯನ್ನು ಈಡೇರಿಸಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರೊಂದಿಗೆ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿದೆ. ಬಿಜೆಪಿ ಮಾತ್ರ ಸುಳ್ಳು ಹೇಳಿಕೊಂಡೇ ಬಂದಿದೆ’ ಎಂದು ರಾಹುಲ ಜಾರಕಿಹೊಳಿ ಹೇಳಿದರು. ಪಟ್ಟಣದ ಅರ್ಫಾ ಪ್ಯಾಲೇಸ್‌ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ನಿರ್ಮಲಾ ಪಾಟೀಲ, …

Read More »

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೆ ರ್‍ಯಾಂಕ್‌ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಗೌರಿ ಸಂಜೀವ ಸೂರ್ಯವಂಶಿ ಅವರು 596 ಅಂಕ ಪಡೆದಿದ್ದಾರೆ. ಕನ್ನಡ, ಭೌತವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ ಹಾಗೂ ಗಣಿತ ವಿಷಯಗಳಲ್ಲಿ ನೂರಕ್ಕೆ 100, ಇಂಗ್ಲಿಷ್‌ನಲ್ಲಿ ಮಾತ್ರ 96 ಅಂಕ ಗಳಿಸಿದ್ದಾರೆ. ಇವರ ತಂದೆ ಪಿಡಿಒ, ತಾಯಿ ಶಿಕ್ಷಕಿ ಆಗಿದ್ದಾರೆ. ಇದೇ ಕಾಲೇಜಿನ ಜಿ.ಕೆ.ದಿವ್ಯಾ …

Read More »

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ ಟೀಕೆ ವಾಗ್ದಾಳಿ ನಡೆಸುವುದು ಸಹಜ ಇದೀಗ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ್ದು ದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬರುವುದು ಚಾನ್ಸೇ ಇಲ್ಲ ಎಂದು ಭವಿಷ್ಯ ನಡೆದಿದ್ದಾರೆ.   ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 543 ಸ್ಥಾನಗಳ ಪೈಕಿ ಕಾಂಗ್ರೆಸ್ ಸ್ಪರ್ಧಿಸಿರುವುದು 200 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನವರ ಗ್ಯಾರಂಟಿಯನ್ನು …

Read More »

ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ; ವಿಜಯೇಂದ್ರ

ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದರು ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಹಾವೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ …

Read More »

ಬತ್ತಿದ ಜೀವನದಿ; ಹೆಚ್ಚಿದ ದುಗುಡ

ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; ಜಲಚರಗಳಿಗೂ ಆತಂಕ ಎದುರಾಗಿದೆ. ಚಿಕ್ಕೋಡಿ ಉಪವಿಭಾಗದ ಎಲ್ಲ ಪ್ರದೇಶಗಳಲ್ಲೂ ಕುಡಿಯುವ ನೀರಿಗೆ, ಬಳಕೆಗೆ, ಹೊಲ- ಗದ್ದೆಗಳಿಗೆ, ಜಾನುವಾರುಗಳಿಗೂ ಸಂಕಷ್ಟ ಎದುರಾಗಿದೆ. ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲ್ಲೂಕು ವ್ಯಾಪ್ತಿಯ ನೂರಾರು ಗ್ರಾಮಗಳು ಕೃಷ್ಣಾ ನದಿಯನ್ನು ಅವಲಂಬಿಸಿವೆ. ಉಪ ವಿಭಾಗ ವ್ಯಾಪ್ತಿಯಲ್ಲಿ 10 ಸಣ್ಣ ಪುಟ್ಟ ಬ್ಯಾರೇಜ್‌ಗಳಿದ್ದು, ಇನ್ನು 10 ದಿನಗಳಲ್ಲಿ ಬ್ಯಾರೇಜ್‌ನಲ್ಲಿ ಸಂಗ್ರಹವಾಗಿರುವ …

Read More »