ಮೂಡಲಗಿ : ಮಸಗುಪ್ಪಿ ಮಹಾಲಕ್ಷಿ ದೇವಿ ದೇವಸ್ಥಾನವು ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುವ ಪುಣ್ಯಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸುಮಾರು 5 ಕೋಟಿ ವೆಚ್ಚದಲ್ಲಿ ಮಹಾಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. 2.50 ಕೋಟಿ ರೂ.ವೆಚ್ಚದಲ್ಲಿ ದೇವಸ್ಥಾನದ ಹೊಸ ಕಟ್ಟಡ, 50 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನದ ಸಿಖರ , …
Read More »ಬೆಳಗಾವಿ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರನ ಕುಟುಂಬಕ್ಕೆ ಸಚಿವರ ಸಾಂತ್ವನ
ಬೆಳಗಾವಿ: ನಗರದ ವಡಗಾವಿಯಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರ ಸಿದ್ದಲಿಂಗೇಶ್ವರ ಗಂಗಪ್ಪ ಹೊರಕೇರಿ ಅವರ ಮನೆಗೆ ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬದವರಿಗೆ ತಮ್ಮ ‘ಶ್ರೀಮಂತ ಪಾಟೀಲ ಪ್ರತಿಷ್ಠಾನ’ದಿಂದ ಆರ್ಥಿಕ ನೆರವು ನೀಡಿದರು. ಆದಷ್ಟು ಬೇಗ ಇಲಾಖೆಯಿಂದಲೂ ನೆರವು ಕೊಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಗೂ ಸ್ಥಳೀಯರು ಇದ್ದರು.
Read More »ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ: ಗಡಿಯಲ್ಲಿ ನಿಗಾವಹಿಸುವಂತೆ ಡಿಸಿಎಂ ಸೂಚನೆ
ಬೆಳಗಾವಿ: ಮಹರಾಷ್ಟ್ರ, ಕೇರಳ ರಾಜ್ಯದಲ್ಲಿ ಹೊಸ ಪ್ರಭೇದದ ಕೋವಿಡ್ ಪತ್ತೆ ಹಿನ್ನೆಲೆಯಲ್ಲಿ ಗಡಿಯಲ್ಲಿ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು. ಸಾರ್ವಜನಿಕರು ಹೆಚ್ಚಿನ ಜಾಗೃತಿ ವಹಿಸಿ ಮಾಸ್ಕ್ ಧರಿಸಬೇಕು. ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈಗಾಗಲೇ ಅಂತರರಾಜ್ಯ ಸಾರಿಗೆ ಆರಂಭವಾಗಿದೆ. ಈ ಮೊದಲಿನಂತೆ ಜಾಗೃತಿ ವಹಿಸಲು ಸೂಚನೆ ನೀಡಲಾಗಿದೆ ಎಂದರು. ಇನ್ನು ಪಂಚಮಸಾಲಿ ಸಮುದಾಯ 2ಎಗೆ ಸೇರಿಸಬೇಕು ಎಂಬ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿ, ಸಮಾಜದ ಹೋರಾಟಕ್ಕೆ ನನ್ನ …
Read More »ಪಡಿತರ ಅಕ್ಕಿ ಮಾರಾಟ : ಬೆಳಗಾವಿಯಲ್ಲಿ ಮೂವರ ಬಂಧನ
ಬೆಳಗಾವಿ : ಇಲ್ಲಿನ ಶೆರಿಗಲ್ಲಿಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ವಿತರಿಸುವ ಪಡಿತರ ಅಕ್ಕಿಗಳನ್ನು ಮಾರಾಟ ಮಾಡುತ್ತಿದ್ದ ವೇಳೆ ಖಡೇಬಜಾರ ಠಾಣೆಯ ಪಿಐ ದೀರಜ್ ಶಿಂಧೆ ನೇತೃತ್ವದ ತಂಡ ದಾಳಿ ನಡೆಸಿ, ಮೂವರು ಬಂಧಿಸಿದ್ದಾರೆ. ಬಂಧಿತರಿಂದ ಐಸರ್ ಕಂಪನಿಯ ಗೂಡ್ಸ್ ವಾಹನ, 66375 ಮೌಲ್ಯದ 118 ಅಕ್ಕಿ ಚೀಲ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.
Read More »ಗ್ರಾಮ ವಾಸ್ತವ್ಯ: ಬೈಲವಾಡದಲ್ಲಿ ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಅಧಿಕಾರಿಗಳನ್ನು ಸಂತಸದಿಂದ ಬರಮಾಡಿಕೊಂಡ ಗ್ರಾಮಸ್ಥರು, ಜನರ ಮನವಿಗಳಿಗೆ ಕಿವಿಯಾದ ಅಧಿಕಾರಿಗಳು
ಬೆಳಗಾವಿ: ‘ಅಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಸರ್ಕಾರಿ ಬಸ್ ನಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದರು. ಗ್ರಾಮಸ್ಥರು ಜಿಲ್ಲಾಧಿಕಾರಿ ಸೇರಿ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಸಂತಸದಿಂದ ಬರಮಾಡಿಕೊಂಡರು. ಗ್ರಾಮದ ವರ್ತಿ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸಿದ್ದಾರೆ. ₹ …
Read More »ಮನುವಾದಿಗಳಿಗೆ ಸೆಡ್ಡು ಹೊಡೆದು ಬದುಕುತ್ತೇವೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಮಶಾನ ಭೂಮಿಯಲ್ಲಿ ಅಭಿಮಾನಿಯ ಹೊಸ ಕಾರಿಗೆ ಶಾಸಕ ಚಾಲನೆ
ಬೆಳಗಾವಿ : ‘ ಮನುವಾದಿಗಳಿಗೆ ಹೆದರಿ ಜೀವನ ಮಾಡುವವರು ನಾವಲ್ಲ. ಅವರಿಗೆ ಸೆಡ್ಡು ಹೊಡೆದು ಬದುಕುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಮೂಢನಂಬಿಕೆಯ ವಿರುದ್ಧ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದೇವೆ. ಅದರ ಒಂದು ಭಾಗ ನೂತನ ಕಾರಿಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದರು. ‘ಸಂಕೇಶ್ವರದ ವಿಕ್ರಂ ಎಂಬುವವರು …
Read More »ಖಾಕಿ ರೇಡ್ ಬೆಳಗಾವಿಯಲ್ಲಿ ಅನ್ನಭಾಗ್ಯ ಅಕ್ಕಿ ವಶ
ಬೆಳಗಾವಿ ನಗರದ ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೆರಿಗಲ್ಲಿಯಲ್ಲಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾಗ ರೇಡ್ ಮಾಡಿ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ.- 1, ಸುಹಾಸ ಸುರೇಶ್ ಪಿಳವಕರ, ಸಾ: ವಡಗಾಂವಿ, ಅನಂ-2 ಮಹಾದೇವ ಲಕ್ಷ್ಮಣ ಪಾಟೀಲ್, ಸಾ: ಧಾಮನೆ, ಹಾಗೂ ಆರೋಪಿ-3 ಅಹಮದ ಬಸೀರ ಅಹಮದ, ಸಾ: ವೀರಭದ್ರನಗರ, ಬೆಳಗಾವಿ ರವರನ್ನು ಬಂಧಿಸಲಾಗಿದೆ ಖಡೇಬಜಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ದೀರಜ್ ಬಿ ಶಿಂಧೆ …
Read More »ಅಕ್ರಮ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಜೋಡಿಯನ್ನ ಟ್ರ್ಯಾಕ್ಟರ್ ಗೆ ಕಟ್ಟಿ ಹಾಕಿದ ಗ್ರಾಮಸ್ಥರು
ಬೆಳಗಾವಿ: ವಿವಾಹೇತರ ಸಂಬಂಧ ಹೊಂದಿದ್ದ ಜೋಡಿಯನ್ನ ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು ಟ್ಯಾಕ್ಟರ್ ಗೆ ಕಟ್ಟಿ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಮುರಕಟನಾಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಚುಂಚನೂರ ಗ್ರಾಮದ ಭೀಮಸಿ ಜೆಟ್ಟೆನ್ನವರ್ ಎಂಬಾತ ಮುರಕಟನಾಳದ ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ. ನಿನ್ನೆ ತಡರಾತ್ರಿ ಮನೆಯವರ ಕಣ್ತಪ್ಪಿಸಿ ಹೊರ ಹೊದಾಕೆ ಮುರಕಟನಾಳ ಗ್ರಾಮ ಹೊರವಲಯದ ಹೊಲದಲ್ಲಿ ಪ್ರಿಯಕರನನ್ನು ಭೇಟಿ …
Read More »ಬೈಲವಾಡ ಗ್ರಾಮದಲ್ಲಿ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಧ್ವನಿಯಾದರು,ಈ ಗ್ರಾಮದ ಯುವಕ ಡಿಸಿ ಹಿರೇಮಠ ಅವರನ್ನು ಭೇಟಿಯಾಗಿ,ತಂದೆ ಇಲ್ಲ ತಾಯಿಗೆ ಅನಾರೋಗ್ಯ,ನಾನು ಇರೋದು ಬಾಡಿಗೆ ಮನೆಯಲ್ಲಿ ನನಗೊಂದು ಆಶ್ರಯ ಮನೆ ಕೊಡಿ ಎಂದು ಗ್ರಾಮದ ಬಾಲಕನೊಬ್ಬ ಡಿಸಿಗೆ ಮನವಿ ಅರ್ಪಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಇದೇ ಗ್ರಾಮದಲ್ಲಿ ವಾಸ್ತವ್ಯ ಮಾಡಲಿರುವ ಜಿಲ್ಲಾಧಿಕಾರಿಗಳು ಈ ಬಾಲಕನ ಸಮಸ್ಯೆಗೆ ಸ್ಪಂದನೆ ಮಾಡುತ್ತಾರೆಯೋ ಇಲ್ಲವೋ ಕಾದು ನೋಡೋಣ ಬೆಳಗಾವಿ,-ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ …
Read More »ಗೊಡಚಿನ ಮಲ್ಕಿ ಬಸ್ ಅಪಘಾತ: ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಗೋಕಾಕ ತಾಲೂಕಿನ ಗೊಡಚಿನ ಮಲ್ಲಿ ಸಮೀಪ ರಾಜ ರಸ್ತೆ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಗಾಯಗೊಂಡ ಸುಮಾರು 20ಕ್ಕೂ ಹೆಚ್ಚು ಗಾಯಾಳುಗಳು ನಗರದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಎಲ್ಲಾ ಗಾಯಾಳುಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ಯುವನಾಯಕ ರಾಹುಲ್ ಜಾರಕಿಹೊಳಿ ಅವರು ಭೆಟ್ಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು. ಈ ಅಪಘಾತದಲ್ಲಿ ಗಾಯಗೊಂಡ ಹೆಚ್ಚಿನ …
Read More »
Laxmi News 24×7