ಬೆಳಗಾವಿ: ಶೀಘ್ರದಲ್ಲಿಯೇ ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಈ ತರಬೇತಿಗೆ ಸೇರಬಯಸುವವರು ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ ಬೆಳಗಾವಿ ಪೊಲೀಸ್ ಅಧೀಕ್ಷಕರ (ಸಶಸ್ತ್ರ) ಕಚೇರಿಗೆ ಸಲ್ಲಿಸಬೇಕು. ಅರ್ಜಿ ವಿತರಣಾ ಸ್ಥಳ: ಪೊಲೀಸ್ ಉಪಾಧೀಕ್ಷಕರವರ ಕಛೇರಿ ಅಥಣಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ, ರಾಮದುರ್ಗ. ಅರ್ಜಿ ವಿತರಣೆ …
Read More »ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಡಿವೈ ಎಸ್ ಪಿ ಅವರಿಂದ ಜಾಗೃತಿ .
ಗೋಕಾಕ: ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆಗಾಗಿ ತಗೆದುಕೊಳ್ಳಲು ಪೋಲಿಸ್ ಇಲಾಖೆಯ ವತಿಯಿಂದ ನಗರದಲ್ಲಿ ಸಂಚರಿಸುವ ಆಟೊ ರಿಕ್ಷಾಗಳು, ಬಸ್ಸುಗಳು ಮತ್ತು ಇನ್ನಿತರ ವಾಹನಗಳಿಗೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ ಪಿ ಜಾವೇದ ಇನಾಮದಾರ, ಹುಕ್ಕೇರಿ ಸಿಪಿಐ ರಮೇಶ ಚಾಯಾಗೋಳ, ಪಿಎಸ್ಐಗಳಾದ ಗಣಪತಿ ಕೊಂಗನೊಳಿ, ಎಸ್ ಎಚ್ ಕರನಿಂಗ, ರಮೇಶ್ ಪಾಟೀಲ, ಆರ್ …
Read More »ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ 500 ಟ್ವಿಟರ್ ಖಾತೆಗಳು ಅಮಾನತು
ಬೆಂಗಳೂರು, ಫೆ.10- ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಪ್ರಚೋದನಕಾರಿ ಪೋಸ್ಟ್ ಗಳನ್ನು ಹರಡುತ್ತಿದ್ದ 500 ಖಾತೆಗಳನ್ನು ತಾತ್ಕಾಲಿಕವಾಗಿ ಅಮಾನತು ಪಡಿಸಿರುವುದಾಗಿ ಟ್ವಿಟರ್ ಹೇಳಿದೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರ 500 ಖಾತೆಗಳನ್ನು ಗುರುತಿಸಿದ್ದು ಅವುಗಳನ್ನು ರದ್ದು ಪಡಿಸುವಂತೆ ಟ್ವಿಟರ್ ಸಂಸ್ಥೆಗೆ ಜನವರಿ 31 ಮತ್ತು ಫೆಬ್ರವರಿ 4ರಂದು ಪತ್ರ ಬರೆದಿತ್ತು. ಈ ಖಾತೆಗಳ ಮೂಲಕ ಹಿಂಸೆಗೆ ಪ್ರಚೋದನಕಾರಿಯಾದ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ …
Read More »ಪೊಲೀಸ್ ದಾಳಿಗೆ ಹೆದರಿ ನದಿಗೆ ಹಾರಿದ ಯುವಕರ ಮೃತದೇಹ ಪತ್ತೆ!!
ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ ಪತ್ತೆಯಾಗಿವೆ. ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಬೆಳಗ್ಗೆಯಿಂದ …
Read More »ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ: ಅಭಯ ಪಾಟೀಲ
ಬೆಳಗಾವಿ – ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ ಎಂದು ಶಾಸಕ ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸಂಜೆ ಹಿಂದವಾಡಿಯ ಹಿಂದ್ ಸೋಶಿಯಲ್ ಕ್ಲಬ್ ನಲ್ಲಿ ಬೆಳಗಾವಿಯ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಒಕ್ಕೂಟ (ಎಫ್ಒಎಬಿ) ಸಂಘಟಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಿಂಗ್ ರಸ್ತೆ ಬಹಳ ವರ್ಷದಿಂದ ನನೆಗುದಿಗೆ ಬಿದ್ದಿದೆ. ಈ ಬಗ್ಗೆ ಸಾಕಷ್ಟು ಪ್ರಯತ್ನ …
Read More »ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ
ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.
Read More »ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು
ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ. ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ: ಮತಗಟ್ಟೆಗಳ ತಯಾರಿ ನಡೆಸಿರುವ ಅಧಿಕಾರಿಗಳು
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತಗಟ್ಟೆಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ. ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ ಎನ್ನಲಾಗುತ್ತಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು, ವಿವಿಧ ಸರ್ಕಾರಿ ಶಾಲೆಗಳಿಗೆ ಭಾನುವಾರ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳು ಮತ್ತು ಮತಗಟ್ಟೆಯಾಗಿ ಪರಿವರ್ತಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಸೆ. 23ರಂದು ಕೋವಿಡ್‌ನಿಂದಾಗಿ …
Read More »ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ : ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದಲೂ ಇದೆ. ಆ ವಿಷಯವಾಗಿ ವಾಲ್ಮೀಕಿ ಜಾತ್ರೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಸಹ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ …
Read More »ಲಕ್ಷ್ಮೀನ ಶಿಕ್ಷಣ ಸಂಸ್ಥೆಯಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನೆಯನ್ನು ಸುವರ್ಣಾ ಭೀಮಶಿ ಜಾರಕಿಹೊಳಿ ನೆರವೇರಿಸಿದರು.
ಗೋಕಾಕ: ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ ಎಂದು ಬೆಂಗಳೂಇನ ಕ್ರೀಡೋ ಸಂಸ್ಥೆಯ ಆಯೇಷಾ ಶೇಖ ಹೇಳಿದರು. ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು …
Read More »
Laxmi News 24×7