Breaking News

ಬೆಳಗಾವಿ

ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು. ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು …

Read More »

ಭೀಕರ ಅಪಘಾತದಲ್ಲಿ ಬೆಳಗಾವಿಯ ಮಹಿಳಾ ಪಿಎಸ್ ಐ ಲಕ್ಷ್ಮಿ ನಲವಡೆ (ಪವಾರ್) ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಬೆಳಗಾವಿ: ಬೆಳಗಾವಿಯ ಸವದತ್ತಿ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ಮಹಿಳಾ ಪಿಎಸ್ ಐ ಲಕ್ಷ್ಮಿ ನಲವಡೆ (ಪವಾರ್) ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಇಂದು ಸಂಜೆ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಅಪಘಾತದ ರಭಸಕ್ಕೆ ಕಾರು ಬಸ್ಸಿನ ಅಡಿಗೆ ಸಿಲುಕಿಕೊಂಡಿತ್ತು. ಕ್ರೇನ್ ಮೂಲಕ …

Read More »

ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಶುಕ್ರವಾರದಂದು ಜರುಗಿದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ತಪಸಿ ಗ್ರಾಪಂ. ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ : ಡಾ.ರಾಜೇಂದ್ರ

ಬೆಟಗೇರಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ …

Read More »

ಚಚಡಿ ಗ್ರಾಮದ ಬಳಿ ಭೀಕರ ಅಪಘಾತ : ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಸಚಿವ ಮುರಗೇಶ್ ನಿರಾಣಿ

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಸಚಿವ ಮುರಗೇಶ್ ನಿರಾಣಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.   ಕಾರು -ಬಸ್ ನಡುವೆ ಇಂದು ಭೀಕರ ಅಪಘಾತ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹೊರಟ್ಟಿದ್ದ ಗಣಿ ಮತ್ತು ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಕಾರು ನಿಲ್ಲಿಸಿದ್ದಾರೆ. ಅಪಘಾತ ಸ್ಥಳಕ್ಕೆ ತೆರಳಿ, …

Read More »

ದೆಹಲಿ ಗಣರಾಜ್ಯೋತ್ಸವ ಪೆರೇಡೆಗೆ ಬೈಲಹೊಂಗಲದ ಕೃಷ್ಣಾ ಬಡಿಗೇರ ಆಯ್ಕೆ

ಬೈಲಹೊಂಗಲ : ಪಟ್ಟಣದ ಮೂರುಸಾವಿರ ಮಠದ ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿ ಕೃಷ್ಣಾ ಬಡಿಗೇರ ಇದೇ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಗೆ ಆಯ್ಕೆಯಾಗಿದ್ದಾನೆ. ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಎನ್.ಸಿ.ಸಿ ಘಟಕದಲ್ಲಿ ಸೀನಿಯರ್ ಅಂಡರ್ ಆಫೀಸರ ಇದ್ದಾನೆ. ರಾಜ್ಯದಿಂದ ಒಟ್ಟು 26 ಕೆಡೆಟಗಳು ದೆಹಲಿಯ ಗಣರಾಜ್ಯೋತ್ಸವ ಪರೇಡನಲ್ಲಿ ಭಾಗವಹಿಸುತ್ತಿದ್ದು, ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದ್ದು . 25 ನೇ …

Read More »

ಬೆಳಗಾವಿಯಲ್ಲಿ KSRTC ಬಸ್- ಕಾರು ನಡುವೆ ಭೀಕರ ಅಪಘಾತ : ನಾಲ್ವರು ಸಾವು

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಬೆಳಗಾವಿಯಿಂದ ಇಲಕಲ್ ಗೆ ಹೊರಟ ಬಸ್ ಹಾಗೂ ಯರಗಟ್ಟಿಯಿಂದ ಬೆಳಗಾವಿಗೆ ಬರುತ್ತಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಬಸ್ ನಡುವೆ ಸಿಲುಕಿ ನುಜ್ಜುಗುಜ್ಜಾಗಿದೆ. ಮುರಗೋಡ …

Read More »

ಗೋಕಾಕದಲ್ಲಿ ಟ್ರಾಫಿಕ್ ಸ್ಟೇಷನ್ ಚಾಲನೆಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ನೀಡಿದರು

ಗೋಕಾಕ:  ಗೋಕಾಕ ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಅವಶ್ಯಕತೆ ಇದೆ. ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕನಲ್ಲಿ ಟ್ರಾಫಿಕ್ ಠಾಣೆಗೆ ಬೇಡಿಕೆ ಇಟ್ಟಿದ್ದೇವೆ. ಸರ್ಕಾರದಿಂದ ಅನುಮತಿ ಪಡೆದು ಮುಂದಿನ ದಿನಗಳಲ್ಲಿ ಈ ಎರಡು ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಠಾಣೆ ಆರಂಭಿಸಲಾಗತ್ತೆ ಎಂದು ಹೇಳಿದರು.

Read More »

ಮೂಡಲಗಿಯಲ್ಲಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. …

Read More »

ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ : ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ …

Read More »