Breaking News
Home / ಜಿಲ್ಲೆ / ಬೆಳಗಾವಿ (page 401)

ಬೆಳಗಾವಿ

ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!

ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …

Read More »

ಬುಡರಕಟ್ಟಿಯಲ್ಲಿ ಬಸವೇಶ್ವರ ಮೂರ್ತಿ ಲೋಕಾರ್ಪಣೆ

ಬೈಲಹೊಂಗಲ: ಬುಡರಕಟ್ಟಿ ಗ್ರಾಮದಲ್ಲಿ ಗುರುವಾರ ಜಗಜ್ಯೋತಿ ಬಸವೇಶ್ವರರ ಆಶ್ವಾರೂಢ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಶ್ವಾರೂಢ ಬಸವೇಶ್ವರರ ಮೂರ್ತಿ ಮೆರವಣಿಗೆ ಮಾಡಿ ಗ್ರಾಮದ ಬಸವ ವೃತ್ತದಲ್ಲಿ ನಾಡಿನ ಹಲವು ಶ್ರೀಗಳು, ಗಣ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಂಟದಾರ್ಯ ಮಠದ ತೋಂಟದ ಡಾ. ಸಿದ್ಧರಾಮ ಶ್ರೀಗಳು ಮಾತನಾಡಿ, ಅಸಮಾನತೆ, ಮೌಡ್ಯತೆ, ಶೋಷಣೆಯಿಂದ ನಲುಗಿದ್ದ ಸಮಾಜಕ್ಕೆ ಬೆಳಕಾಗಿ ಬಂದವರು ಬಸವೇಶ್ವರರು. …

Read More »

ಬೆಳಗಾವಿ: ಜಿಲ್ಲೆಯಲ್ಲಿ ಕೊರನಾ ಸೋಂಕಿಗೆ6 ಜನರು ಸಾವಿಗೀಡಾಗಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ಕೊರನಾ ಸೋಂಕಿಗೆ ಬಲಿಯಾಗುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಇಂದು ಕೂಡ 6 ಜನರು ಸಾವಿಗೀಡಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು,ಬೆಳಗಾವಿ, ಹೊಸದಾಗಿ 288 ಮಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ‌. ಹುಕ್ಕೇರಿ ತಾಲೂಕು ಸೇರಿ ಜಿಲ್ಲೆಯಲ್ಲಿ ಆರು ಜನರ ಸಾವನ್ನಪ್ಪಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 113 ತಲುಪಿದೆ. ಒಟ್ಟು 6640 …

Read More »

ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ   ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ

ಅಥಣಿ:  ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ   ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ ನೆರವೇರಿಸಿದರು. ತಾಲೂಕಿನ ಬಡಕಂಬಿತೋಟ, ಸಿಂಡ್ ಫಾರ್ಮ್, ಮುರಗುಂಡಿ, ಮಸರಗುಪ್ಪಿ, ಹೊಸಟ್ಟಿ, ದೇವರಡ್ಡೆರಹಟ್ಟಿ, ಅಥಣಿ ಪಟ್ಟಣದ ಲಿಡಕರ ಕಾಲೋನಿ, ಬಡಚಿ, ಕಟಗೇರಿ, ಬುರ್ಲಟ್ಟಿ, ಗ್ರಾಮಗಳಲ್ಲಿ ಹೆಚ್ಚುವರಿ ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ  ಭೂಮಿಪೂಜೆ ನೆರವೇರಿಸಿ ಗ್ರಾಮಸ್ಥರ ಕುಂದು ಕೊರತೆಗಳ ಆಲಿಸಿದರು. ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 105 ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ …

Read More »

ಬೆಳಗಾವಿ | 288 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 288 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಬಿಮ್ಸ್‌ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹುಕ್ಕೇರಿ ತಾಲ್ಲೂಕಿನ ಮೂವರು, ರಾಯಬಾಗದ ಒಬ್ಬರು ಹಾಗೂ ಬೆಳಗಾವಿ ತಾಲ್ಲೂಕಿನ ಇಬ್ಬರು ಸೇರಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ. 140 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. …

Read More »

ಬೆಳಗಾವಿ: ಸಚಿವ ಶ್ರೀಮಂತ ಕ್ಷಮೆ ಯಾಚನೆಗೆ ಆಗ್ರಹ

ಮೋಳೆ/ಕಾಗವಾಡ: ‘ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಮ್ಮನ್ನು ತರಾಟೆಗೆ ತೆಗೆದುಕೊಂಡ ನೆರೆ ಸಂತ್ರಸ್ತರ ಬಗ್ಗೆ ಜವಳಿ ಸಚಿವ ಶ್ರೀಮಂತ ಪಾಟೀಲ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಜನರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಕಾಗವಾಡದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್‌ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು. ‘ಸಚಿವರು ತಕ್ಷಣವೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಅವರನ್ನು ಸಚಿವ ಸ್ಥಾನದಿಂದ ಕೆಳಗಿಸಳಿಸಬೇಕು’ ಎಂದು ಒತ್ತಾಯಿಸಿದರು. ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸನಗೌಡ …

Read More »

ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು

ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು  ತಗುಲಿರುವುದು ದೃಢಪಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ರಾಜ್ಯದಲ್ಲಿಯೇ ಸುದ್ದಿಯಾಗಿದ್ದ ಮಣಗುತ್ತಿ ಗ್ರಾಮದಲ್ಲಿಯೇ ಪಿಡಿಒಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಇವರು ಈ ಹಿಂದೆ ವಂಟಮೂರಿ ಗ್ರಾಮ ಪಂಚಾಯಿತಿ ಕಾರ್ಯ ನಿರ್ವಹಿಸುತ್ತದ್ದ ಸಂದರ್ಭದಲ್ಲಿ ಕೊರೊನಾ ಸೋಂಕಿತ ಕುಟುಂಬದವರು ಹಲ್ಲೆ ಮಾಡಿದ್ದರು. ಇವರು ತಿಂಗಳ ಹಿಂದಷ್ಟೇ ಮಣಗುತ್ತಿ ಪಂಚಾಯಿತಿಗೆ ವರ್ಗಾವಣೆಗೊಂಡಿದ್ದರು. ಸೋಂಕಿತ ಪಿಡಿಒ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »

ಸತತ ಪ್ರಯತ್ನ ಹಾಗೂ ಓದುವ ಹವ್ಯಾಸ ರೂಪಿಸಿಕೊಂಡೆರೆ   ಯಶಸ್ಸು ಕಟ್ಟಿಟ್ಟ ಬುತ್ತಿ

ಕಾಗವಾಡ :  ಸತತ ಪ್ರಯತ್ನ ಹಾಗೂ ಓದುವ ಹವ್ಯಾಸ ರೂಪಿಸಿಕೊಂಡೆರೆ   ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುವುದನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ನಿರೂಪಿಸಿದ್ದಾಳೆ.  ಇಂಗ್ಲೀಷ ಮಾಧ್ಯಮದಲ್ಲಿ 625 ಕ್ಕೆ 604 ಅಂಕ ಗಳಿಸಿ  ಅಥಣಿ ಕಿತ್ತೂರ ರಾಣಿ ಚನ್ನಮ್ನ ವಸತಿ ಶಾಲೆಗೆ ಪ್ರಥಮ‌ ಸ್ಥಾನ ಪಡೆಯುವ ಮೂಲಕ  ಪೋಷಕರ ಹಾಗೂ  ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ. ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಪೂಜಾ ಎಂಬ …

Read More »

ರಮೇಶ ಜಾರಕಿಹೊಳಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ರೈತ ಸಂಘದ ಕಾರ್ಯಕರ್ತರು

ಗೋಕಾಕ:  ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನೆ ನಡೆಯುತ್ತಿದ್ದ  ಬಸವೇಶ್ವರ ವೃತ್ತದಿಂದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ ಮನವಿ ನೀಡಲು ಮುಂದಾದ  ರೈತರನ್ನು ಪೊಲೀಸರು ಅಲ್ಲಿಯೇ ಘೇರಾವ್ ಹಾಕಿ ತಡೆದರು. ಮುಂಜಾಗೃತಾ ಕ್ರಮವಾಗಿ ಸಚಿವರ ಮನೆಯ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಮಾಡಿದ್ದಾರೆ. ರೈತ ವಿರೋಧಿ …

Read More »

ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆ,,,,,,,,,

ಬೆಂಗಳೂರು – ರಾಜ್ಯದಲ್ಲಿ ಇಂದು 7883 ಜನರಿಗೆ ಕೊರೆನಾ ಸೋಂಕು ದೃಢಪಟ್ಟಿದ್ದು, 113 ಜನರು ಸಾವಿಗೀಡಾಗಿದ್ದಾರೆ. ಇದೇ ವೇಳ 7034 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆಯಾಗಿದೆ. ಸಮಗ್ರ ಮಾಹಿತಿ ಇಲ್ಲಿದೆ. –

Read More »