ಬೆಳಗಾವಿ ಗಡಿಯಲ್ಲಿ ಶಿವಸೇನೆ ಪುಂಡಾಟ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಬೆಳಗಾವಿ ಚಲೋ ಕರೆ ನೀಡಿದ್ದು, ನಾನಾ ಜಿಲ್ಲೆಗಳಿಂದ 30 ವಾಹನಗಳಲ್ಲಿ ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಹಿರೇಬಾಗೇವಾಡಿ ಟೋಲ್ ಗೇಟ್‍ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಗಾರರನ್ನ ಪೆÇಲೀಸರು ತಡೆದಿದ್ದಾರೆ. ಗಡಿಯಲ್ಲಿ ಭಗವಾ ಧ್ವಜ ಹಿಡಿದು ಬೆಳಗಾವಿಯತ್ತ ಹೊರಟಿದ್ದ ಶಿವಸೇನೆ ಕಾರ್ಯಕರ್ತರ ಪುಂಡಾಟ, ಪೊಲೀಸರೊಂದಿಗೆ ನೂಕಾಟ ತಳ್ಳಾಟ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಬೆಳಗಾವಿ ಚಲೋ …
Read More »ಪ್ಲಾಸ್ಟಿಕ್ ರಾಷ್ಟ್ರಧ್ವಜ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಪ್ರತಿಭಟನೆ
ಜನವರಿ 26ರಂದು ಗಣರಾಜ್ಯೋತ್ಸವ ನಿಮಿತ್ಯ ರಾಷ್ಟ್ರಧ್ವಜಕ್ಕೆ ಆಗುವ ಅವಮಾನ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ ಆದೇಶದಂತೆ ಪ್ಲಾಸ್ಟಿಕ್ ಧ್ವಜವನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗುರುವಾರ ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ರಾಷ್ಟ್ರಧ್ವಜವು ರಾಷ್ಟ್ರದ ಗೌರವದ ಪ್ರತೀಕವಾಗಿದೆ. ಆದರೆ ದುರ್ದೈವದ ಸಂಗತಿ ಎಂದರೆ ಹೆಚ್ಚಿನ ಭಾರತೀಯರಿಗೆ ರಾಷ್ಟ್ರಧ್ವಜ ನೆನಪಾಗುವುದು ಆಗಸ್ಟ್ 15 ಹಾಗೂ ಜನವರಿ …
Read More »ಶಿವಸೇನೆ ಪುಂಡಾಟ ಸಹಿಸೋಲ್ಲ, : ಸಚಿವೆ ಶಶಿಕಲಾ ಜೊಲ್ಲೆ
ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಉದ್ಧಟತನ ಮೆರೆಯುತ್ತಿದ್ದು, ಪಾಲಿಕೆ ಮುಂದೆ ಭಗವ ಧ್ವಜಾ ಹಾರಿಸುತ್ತೇವೆ ಎಂದು ಕ್ಯಾತೆ ತೆಗೆದಿದ್ದಾರೆ. ಮಹಾರಾಷ್ಟ್ರದಿಂದ ಶಿವಸೇನೆ ಪುಂಡರು ಬೆಳಗಾವಿ ಗಡಿ ಪ್ರವೇಶಿಸಲು ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ಇನ್ನು ಶಿವಸೇನೆ ಪುಂಡರನ್ನ ತಡೆ ಹಿಡದ ಕರ್ನಾಟಕ ಪೊಲೀಸರು ಲಾಠಿ ಚಾರ್ಜ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಬಗ್ಗೆ ಬೆಳಗಾವಿ ಪ್ರತಿನಿಧಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಸಿದ್ದು, ಶಿವಸೇನೆ ಪುಂಡರ …
Read More »ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ.
ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಉದ್ಧಟತನ ಮೆರೆಯುತ್ತಿದ್ದು, ಪಾಲಿಕೆ ಮುಂದೆ ಹಾರಿಸಿರುವ ಕನ್ನಡ ಧ್ವಜಾವನ್ನ ತೆರವುಗೊಳಿಸಿ, ಭಗವ ಧ್ವಜಾ ಹಾರಿಸುತ್ತೇವೆ ಎಂದು ಕ್ಯಾತೆ ತೆಗೆದಿದ್ದಾರೆ. ಹಾಗಾಗಿ ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಪುಂಡರನ್ನ ಪೊಲೀಸರು ತಡೆದಿದ್ದಾರೆ. ಬೆಳಗಾಮಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗುತ್ತಿದ್ದು, ಶಿವಸೇನಾ ಪುಂಡರನ್ನ ಬೆಳಗಾವಿ ಗಡಿ ಪ್ರವೇಶಿಸದಂತೆ ಪೊಲೀಸರು ತಡೆಯಿಡಿದ್ದಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯ …
Read More »ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ
ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ …
Read More »ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ : ಸಚಿವ ಉಮೇಶ್ ಕತ್ತಿ
ಬೆಂಗಳೂರು :ಖಾತೆ ಹಂಚಿಕೆ ಬೆನ್ನಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ರಾಜ್ಯದ ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯದ ಮಂತ್ರಿಯಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಬಿಪಿಎಲ್ ಪಡಿತರದಾರರಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ. ಪಡಿತರ ಚೀಟಿ ದಾರರಿಗೆ ಜೋಳ, ರಾಗಿ, ದೊರೆಯುವಂತೆಯೂ ಮಾಡುತ್ತೇನೆ ಎಂದು ಹೇಳಿದ್ದಾರೆ. …
Read More »ನೋ ಪ್ರೊಟೆಸ್ಟ್ ನಥಿಂಗ ಡಿಸಿಪಿ ವಿಕ್ರಂ ಅಮಟೆ ಖಡಕ್ ಎಚ್ಚರಿಕೆ ಪ್ರತಿಭಟನೆ ಕೈ ಬಿಟ್ಟ ಎಂಇಎಸ್
ಬೆಳಗಾವಿ – ಯಾವುದೇ ಕಾರಣದಿಂದ ಪ್ರತಿಭಟನೆಗೆ ಅವಕಾಶವಿಲ್ಲ. ಹಾಗೊಮ್ಮೆ ಪ್ರತಿಭಟನೆಗಿಳಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಡಿಸಿಪಿ ವಿಕ್ರಂ ಅಮಟೆ ನೀಡಿದ ಗಂಭೀರ ಎಚ್ಚರಿಕೆಗೆ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಬಾಲ ಮುದುಡಿಕೊಂಡಿದೆ. ಗುರುವಾರ ಬೆಳಗಾವಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಪ್ರತಿಭಟನೆ ಕೈ ಬಿಟ್ಟಿವೆ. ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಕನ್ನಡ ಧ್ವಜ ಹಾಕಿರುವುದನ್ನು ಪ್ರತಿಭಟಿಸಿ ಎಂಇಎಸ್ ಗುರುವಾರ ಬೃಹತ್ ಪ್ರತಿಭಟನೆ ಮಾಡುವುದಾಗಿ ಹೇಳಿತ್ತು. ಇದಕ್ಕಾಗಿ ಎಲ್ಲ ಕಡೆ ಸಿದ್ಧತೆ …
Read More »ಕಾಕತಿ ವ್ಯಾಪ್ತಿಯಲ್ಲಿ ಬಿಂದಾಸ್ ಕಳ್ಳತನ..!
ಬೆಳಗಾವಿಯಲ್ಲಿ ಕಳ್ಳರ ಕೈಚಳಕ ಮತ್ತಷ್ಟು ಬಲಗೊಳ್ಳುತ್ತಿದೆ. ಮನೆಗಳ್ಳತನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದರಲ್ಲೂ ಕಾಕತಿ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಕಳ್ಳರು ಮಾತ್ರ ಬಿಂದಾಸ್ ಆಗಿ ಕಳ್ಳತನ ಮಾಡುತ್ತಿದ್ದಾರೆ. ಯಾಕೆಂದರೆ ಬಹುಶಃ ಇಲ್ಲಿಯವರೆಗೆ ಆಗಿರುವ ಕಳ್ಳತನಗಳಲ್ಲಿ ಒಂದೇ ಒಂದು ಕಳ್ಳತನ ಪ್ರಕರಣವನ್ನು ಅಲ್ಲಿನ ತನಿಖಾಧಿಕಾರಿಗಳು ಪತ್ತೆ ಹಚ್ಚಿಲ್ಲ. ಹೀಗಾಗಿ ಬಹುಶಃ ಕಳ್ಳರು ಇಲ್ಲಿ ಬಿಂದಾಸಾಗಿ ಹಾಡಹಗಲೇ ಮನೆಗಳಿಗೆ ಕನ್ನ ಹಾಕಿ ದೊಚುತ್ತಿದ್ದಾರೆ. ನಿನ್ನೆ (ಮಂಗಳವಾರ 19) ಮಧ್ಯಾಹ್ನ 12 ಗಂಟೆ ಸುಮಾರಿಗೆ …
Read More »ಬೆಳಗಾವಿಯ 19 ವರ್ಷದ ಯುವತಿ ಕಾಣೆ
ಬೆಳಗಾವಿ : ಅನಗೋಳ ನಿವಾಸಿಯಾದ 19 ವರ್ಷದ ಸ್ವಾತಿ ಸದಾನಂದ ಕಮ್ಮಾರ ಜ.4 ರಂದು ಕಾಣೆಯಾಗಿದ್ದಾಳೆ. ಪಾಂಗೂಳ ಗಲ್ಲಿಯಲ್ಲಿರುವ ಸಾಯಿ ಲಕ್ಷ್ಮಿ ಇಂಡೋಲಿಯನ್ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದಳು. ಸಂಜೆ 4 ಗಂಟೆಗೆ ಮಾಲೀಕರಿಂದ 1400 ರೂಪಾಯಿ ಹಣ ಪಡೆದು ಕೆಲಸಕ್ಕೆ ಬರುವುದಿಲ್ಲವೆಂದು ಮರಳಿದ್ದಾಳೆ. ಆದರೆ ಮನೆಗೆ ಬಾರದೆ ಕಾಣೆಯಾಗಿದ್ದು, ಬೆಳಗಾವಿ ಮಾರ್ಕೇಟ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ ಸದಾನಂದ ಕಮ್ಮಾರ 5 ಪೂಟ 1 ಇಂಚು ಎತ್ತರವಿದ್ದು, …
Read More »ಆಸ್ತಿ ವಿವಾದ : ಬೆಳಗಾವಿಯಲ್ಲಿ 4 ವರ್ಷದ ಬಾಲಕನ ಕೊಲೆಗೈದ ಪಾಪಿ
ಬೆಳಗಾವಿ : ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ನ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ. ಮಾರುತಿ ವಿರೇಶ್ ಸಂಕಣ್ಣವರ ಹತ್ಯೆಯಾದ ಬಾಲಕ. ಈರಪ್ಪ ಬಸಪ್ಪ ಸಂಕಣ್ಣ(35) ಕೊಲೆ ಆರೋಪಿಯಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತನಿಖೆ ನಡೆಸಿದ್ದಾರೆ.
Read More »
Laxmi News 24×7