Breaking News
Home / ಜಿಲ್ಲೆ / ಬೆಳಗಾವಿ (page 403)

ಬೆಳಗಾವಿ

ಬೆಳಗಾವಿ | ಕುಸಿದ ಹಳೆ ಮನೆ: 12 ಮಂದಿ ರಕ್ಷಣೆ

ಬೆಳಗಾವಿ: ಇಲ್ಲಿನ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ ಹಳೆ ಮನೆಯೊಂದು ಪಕ್ಕದ ಮನೆಯ ಮೇಲೆ ದಿಢೀರ್‌ ಕುಸಿದು ಬಿದ್ದಿದ್ದರಿಂದ, ಒಳಗೆ ಸಿಲುಕಿದ್ದ ಬಾಲಕ ಮತ್ತು ಬಾಲಕಿ ಸೇರಿದಂತೆ 12 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುತ್ತಮುತ್ತಲಿನ ಮನೆಗಳವರು ಆತಂಕಗೊಂಡಿದ್ದರು. ಡಾ.ಕೋಟೂರು ಎನ್ನುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಹಳೆಯದಾಗಿದ್ದ ಆ ಕಟ್ಟಡ ಸತತ ಮಳೆಯಿಂದಾಗಿ ಮತ್ತಷ್ಟು ಶಿಥಿಲಗೊಂಡಿತ್ತು. ಅದಕ್ಕೆ ಹೊಂದಿಕೊಂಡಂತೆ ಇದ್ದ ಗೋಡೆಯು ನಗರಪಾಲಿಕೆ ಮಾಜಿ ಸದಸ್ಯೆ ಶಶಿಕಲಾ ಸುರೇಕರ ಅವರ ಮನೆಯ …

Read More »

ಮನೆಯ ಮೇಲೆ ಕುಸಿದ ಗೋಡೆ- ನಾಲ್ವರ ರಕ್ಷಣೆ

ಬೆಳಗಾವಿ: ಮನೆಯ ಮೇಲೆ ಗೋಡೆ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರನ್ನು ರಕ್ಷಣೆ ಮಾಡಿರುವ ಘಟನೆ ಬೆಳಗಾವಿಯ ಗೋಂದಳಿ ಗಲ್ಲಿಯಲ್ಲಿ ನಡೆದಿದೆ.ಡಾಕ್ಟರ್ ಕೋಟೂರು ಎಂಬವರಿಗೆ ಸೇರಿದ ಹಳೆಯ ಮನೆ ನಿರಂತರ ಮಳೆಯಿಂದಾಗಿ ಮತ್ತಷ್ಟು ಶಿಥಿಲಾವಸ್ಥೆಗೊಂಡಿತ್ತು. ಶನಿವಾರ ಬೆಳಗ್ಗೆಯಿಂದ ಸುರಿದ ನಿರಂತರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದಿದ್ದರಿಂದ ಮನೆಯಲ್ಲಿಯೇ ನಾಲ್ಕಕ್ಕೂ ಹೆಚ್ಚು ಜನರು ಸಿಲುಕಿದ್ದರು.   ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್‍ಡಿಆರ್‍ಎಫ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮನೆಯಲ್ಲಿದ್ದ ಎಲ್ಲರನ್ನೂ ರಕ್ಷಿಸಿದ್ದಾರೆ. ಅದೃಷ್ಟವಶಾತ್ …

Read More »

‘ಲಾಕ್‌ಡೌನ್‌ನಿಂದ ಜನರ ಪ್ರಾಣ ರಕ್ಷಣೆ’

ಸವದತ್ತಿ: ‘ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಲಾಕ್‌ಡೌನ್ ಘೋಷಿಸಿದ್ದರಿಂದಾಗಿ ಜನರ ಜೀವ ರಕ್ಷಿಸಲು ಸಾಧ್ಯವಾಯಿತು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು. ತಾಲ್ಲೂಕು ಆಡಳಿತದಿಂದ ಇಲ್ಲಿನ ಎಸ್‌ಕೆ ಪ್ರೌಢಶಾಲೆ ಮೈದಾನದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ಲಾಕ್‌ಡೌನ್‌ದಿಂದ ಜನಸಾಮಾನ್ಯರು ಸೇರಿದಂತೆ ಸರ್ಕಾರದ ರಾಜಸ್ವ ಸಂಗ್ರಹಕ್ಕೂ ತೊಂದರೆಯಾಗಿದೆ. ಆದರೂ ಸರ್ಕಾರಗಳು ಎದೆಗುಂದಿಲ್ಲ. ನಿರಂತರ ಸಭೆ ನಡೆಸಿ ಕೋವಿಡ್ ಹತೋಟಿಯಲ್ಲಿಡಲಾಗಿತ್ತು. ದುರ್ದೈವದಿಂದ ಸಮುದಾಯಕ್ಕೆ ಹರಡಿದ್ದು …

Read More »

ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಲಕ್ಕ್ಷ್ಮಣ ನಿಂಬರಗಿ ಕೋವೀಡ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದೆ

ಬೆಳಗಾವಿ- ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಕೋವೀಡ್ ಟೆಸ್ಟ್ ಮಾಡಿಸಿಕೊಂಡಿದ್ದು ಅವರ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಸ್ವತಹ ಅವರೇ ಮಾಹಿತಿ ಹಂಚಿಕಡಿದ್ದಾರೆ. ಬೆಳಗಾವಿ ಪೋಲೀಸ್ ಆ್ಯಂಡ್ ಮೀಡಿಯಾ ವ್ಯಾಟ್ಸಪ್ ಗ್ರೂಪ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ನನ್ನ ರಿಪೋರ್ಟ್ ಪಾಸಿಟಿವ್ ಬಂದಿದೆ ನನ್ನ ಸಂಪರ್ಕಕ್ಕೆ ಬಂದವರು ಕೇರ್ ತೆಗೆದುಕೊಳ್ಳಿ ಎಂದು ಎಸ್ ಪಿ ನಿಂಬರಗಿ ಗ್ರೂಪ್ ನಲ್ಲಿ ಪೋಸ್ಟ್ ಮಾಡಿದ್ದಾರೆ. Superintendent …

Read More »

ಕೊಯ್ನಾ ಜಲಾನಯನ ಪ್ರದೇಶದಲ್ಲಿ ಭೂಕಂಪನ- ಕೃಷ್ಣಾ ನದಿ ತೀರದಲ್ಲಿ ಆತಂಕ

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಇಂದು ಮುಂಜಾನೆ 10.22 ಕ್ಕೆ ಭೂ ಕಂಪನವಾಗಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆಯು 2.9 ರಷ್ಟು ದಾಖಲಾಗಿದೆ.ಭೂ ಕಂಪನದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಬಿಡುವ ಸಾಧ್ಯತೆ ಇದೆ.     ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣವು ಕೊಯ್ನಾ-136 ಮಿ.ಮೀ , ನವಜಾ-82 ಮಿ.ಮೀ, ಮಹಾಬಳೇಶ್ವರ-156ಮಿ.ಮೀ, …

Read More »

ರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಘಟಪ್ರಭಾ: ಇಂದಿನಿಂದ ಭಾರತ ದೇಶಕ್ಕಾಗಿ ಹಿರಿಯರು  ಕಂಡಂತಹ ಕನಸನ್ನು ನನಸು ಮಾಡುವ  ನಿಟ್ಟಿನಲ್ಲಿ ನಾವು  ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಸೇವಾದಳ ಕಚೇರಿಯಲ್ಲಿ ಧ್ವಜಾರೋಹನ ಬಳಿಕ ಮಾತನಾಡಿದ ಅವರು, ಹಿರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶ ಹೇಗಿರಬೇಕು ಎಂದು ಹಿರಿಯರು ಕಂಡಂತಹ ಕನಸನ್ನು  ನನಸು ಮಾಡುವುದಾಗಿ ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ. ದೇಶದ …

Read More »

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಒಬ್ಬ ಒಳ್ಳೆಯ ಶಾಸಕ. ಆತನಿಗೆ ಅನ್ಯಾಯ ಆಗಬಾರದಾಗಿತ್ತು: ರಮೇಶ ಜಾರಕಿಹೊಳಿ

ಬೆಳಗಾವಿ: ಬೆಂಗಳೂರು ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ  ನಡೆದದ್ದು, ಕಾಂಗ್ರೆಸ್ ಗಲಾಟೆ ಅದಕ್ಕೂ ನಮಗೂ ಸಂಬಂಧವಿಲ್ಲ  ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಸತ್ಯಶೋಧನಾ ಸಮಿತಿ ರಚಿಸಿದ್ದಾರೆ. ಅದರಿಂದಲೇ ಸಂತ್ಯಾಂಶ ಹೊರ ಬರಲಿದೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಒಬ್ಬ ಒಳ್ಳೆಯ ಶಾಸಕ. ಆತನಿಗೆ ಅನ್ಯಾಯ …

Read More »

ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ:ರಮೇಶ ಜಾರಕಿಹೊಳಿ

ಬೆಳಗಾವಿ: ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹರಾಜರ ಮೂರ್ತಿ ವಿಚಾರವಾಗಿ ಶಾಸಕಿ ನಿಂಬಾಳ್ಕರ್ ಹೇಳಿಕೆ ನೀಡಿದ್ದು, ತಪ್ಪು. ಅವರಿಗೆ ಭಾಷಾ ಸಮಸ್ಯೆಯಿದೆ. ಹೀಗಾಗಿ  ಅವರಿಂದ  ತಪ್ಪಾಗಿದೆ. ಅವರಿಗೆ ಬುದ್ದಿ ಹೇಳುತ್ತೇವೆ ಎಂದರು.

Read More »

ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ: ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಬಳಿಕ ಮಾದ್ಯಮಗೋಷ್ಠಿ ನಡೆಸಿದ ಅವರು,ಮುಂದಿನ ವರ್ಷ ಬೆಳಗಾವಿ ಜಿಲ್ಲಾ ಕ್ರೀಡಾಂಗಣದ ಲೀಜ್ ಅವಧಿ ಮುಗಿಯುತ್ತದೆ ಮುಂದಿನ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಎಲ್ಲಿ ನಡೆಯುತ್ತದೆ ಎಂದು ಮಾದ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ …

Read More »

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹ:

ಚಿಕ್ಕೋಡಿ : ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಜತೆಗೆ ಗ್ರಾಮಗಳನ್ನು ಸ್ಥಳಾಂತರಕ್ಕೆ ಒತ್ತಾಯಿಸಿ ಶುಕ್ರವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ ಅವರಿಗೆ ಮನವಿ ಸಲ್ಲಿಸಿದರು. ಕಳೆದ ವರ್ಷ ಪ್ರವಾಹ ಬಂದಾಗ ನೆರೆ ಸಂತ್ರಸ್ತರಿಗೆ ಸರಕಾರ ಕೇವಲ 10 ಸಾವಿರ ರೂ.ಪರಿಹಾರಧನ ನೀಡಿ ಕೈ ತೊಳೆದುಕೊಂಡಿದೆ. ಅದು ಸಹ ಕೆಲವರಿಗೆ ಮುಟ್ಟಿಲ್ಲ. ಹೀಗಾಗಿ ಪ್ರವಾಹ ಸಂತ್ರಸ್ತರ ಕುಟುಂಬಗಳಿಗೆ ಕೂಡಲೇ ಧನ ಸಹಾಯ ಒದಗಿಸಬೇಕು. ಪ್ರವಾಹ ಸಂತ್ರಸ್ತರ ಮನೆ …

Read More »