Breaking News
Home / ಜಿಲ್ಲೆ / ಬೆಳಗಾವಿ (page 404)

ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆ,,,,,,,,,

ಬೆಂಗಳೂರು – ರಾಜ್ಯದಲ್ಲಿ ಇಂದು 7883 ಜನರಿಗೆ ಕೊರೆನಾ ಸೋಂಕು ದೃಢಪಟ್ಟಿದ್ದು, 113 ಜನರು ಸಾವಿಗೀಡಾಗಿದ್ದಾರೆ. ಇದೇ ವೇಳ 7034 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆಯಾಗಿದೆ. ಸಮಗ್ರ ಮಾಹಿತಿ ಇಲ್ಲಿದೆ. –

Read More »

ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ

ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವೀಡ್ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದ್ದು,ರೋಗಿಗಳಿಗೆ ಸುಧಾರಿತ ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ ನೀಡಿದ್ದಾರೆ. ಭೀಮ್ಸ್ ಆಸ್ಪತ್ರೆಯಲ್ಲಿ high flow nasal canuala oxygenation ಯಂತ್ರಗಳ ಖರೀಧಿಗೆ ಶಾಸಕರ ಅನುದಾನ ನೀಡುವಂತೆ ಭೀಮ್ಸ್ ನಿರ್ದೇಶಕರು ಶಾಸಕ ಅಭಯ ಪಾಟೀಲರಿಗೆ ಪತ್ರ ಬರೆದಿದ್ದರು ಭೀಮ್ಸ್ ಮನವಿಗೆ ತಕ್ಷಣ ಸ್ಪಂದಿಸಿರುವ ಶಾಸಕ ಅಭಯ ಪಾಟೀಲ ಉಪ ವಿಭಾಗಾಧಿಕಾರಿಗಳಿಗೆ ಪತ್ರ …

Read More »

ಮೆರವಣಿಗೆ ಪಟಾಕಿ ಏನೂ ಇಲ್ಲಈ ಬಾರಿಯ ಗಣೇಶ ಉತ್ಸವ…..!ಜಿಲ್ಲಾಧಿಕಾರಿಗಳು

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೋವೀಡ್ ಹಾವಳಿ ಹೆಚ್ಚಾಗಿರುವದರಿಂದ ಈ ಬಾರಿಯ ಗಣೇಶ ಉತ್ಸವವನ್ನು ಕಟ್ಟುನಿಟ್ಟಾಗಿ ಆಚರಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಸಾರ್ವಜನಿಕ ಗಣೇಶ ಮಂಡಳಿಗಳು ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡದೇ ಸಮೀಪದ ಮಂದಿರಗಳಲ್ಲಿ ಪ್ರತಿಷ್ಠಾಪನೆ ಮಾಡಬೇಕು,ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶನ ಮೂರ್ತಿ 4 ಫೂಟ್ ಗಿಂತ ಎತ್ತರ ಇರಬಾರದು ಮನೆಯಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶನ ಮೂರ್ತಿ ಎರಡು ಪೂಟ್ ಗಿಂತ ಎತ್ತರ ಇರಬಾರದು,ಗಣೇಶ ಮೂರ್ತಿಯನ್ನು …

Read More »

ಅಂಜಲಿ ನಿಂಬಾಳ್ಕರ್ ಬಹಿರಂಗ ಕ್ಷಮೆಯಾಚಿಸದಿದ್ದರೆ, ಕರವೇ ಕಾರ್ಯಕರ್ತರು ಅವರ ಮನೆ ಎದುರು ಧರಣಿ ಮಾಡಬೇಕಾಗುತ್ತದೆ:ದೀಪಕ ಗುಡಗನಟ್ಟಿ

ಬೆಳಗಾವಿ:  ಮನಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಕುರಿತು ನಡೆದ ಘಟನೆ ಸತ್ಯವನ್ನು ತಿಳಿಯದೆ ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್  ಮಾಡಿದ್ದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್  ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಲ್ಲಿನ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ರ್ಯಾಲಿ ನಡೆಸಿ ಶಾಸಕಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ರಾಜ್ಯ ಸರ್ಕಾರ ಗಡಿಭಾಗದಲ್ಲಿ ಶಿವಾಜಿ ಮಹಾರಾಜರ ಮೂರ್ತಿ …

Read More »

ಡಿಜೆ ಹಳ್ಳಿ ಘಟನೆ| ತ‍ಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸುರೇಶ ಅಂಗಡಿ

ಬೆಳಗಾವಿ: ‘ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿ, ಸಮಾಜದಲ್ಲಿ ಶಾಂತಿ ಕದಡಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಒತ್ತಾಯಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಾಟೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಹಿಂದೆ ಇಲ್ಲಿನ ಬಿಮ್ಸ್‌ ಆಸ್ಪತ್ರೆ ಎದುರು ನಿಂತಿದ್ದ ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿತ್ತು. ಇಂತಹ ಘಟನೆಗಳು ಅತ್ಯಂತ ಖಂಡನೀಯ. ಇವೆಲ್ಲವೂ ದೇಶದ್ರೋಹಿಗಳು ಮಾಡುವ …

Read More »

ಬೀದಿ ದೀಪಗಳನ್ನು ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಅರವಿಂದ್ ಕಾರ್ಚಿ ಅವರು ಉದ್ಘಾಟಿಸಿದರು.

ಬೆಳಗಾವಿ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಬೀದಿ ದೀಪಗಳನ್ನು ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಅರವಿಂದ್ ಕಾರ್ಚಿ ಅವರು ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ ಯಮಕನಮರಡಿ  ಕ್ಷೇತ್ರದ ವಿವಿಧ ಗ್ರಾಮಗಳಾದ ಧರನಟ್ಟಿ, ಭರಮ್ಯಾನಟ್ಟಿ ಮತ್ತು ಕರುವಿನಕುಂಪ್ಪಿ ಗ್ರಾಮಗಳಲ್ಲಿ ಬಹು ವೆಚ್ಚದಲ್ಲಿ ನಿರ್ಮಿಸಲಾದ  ಬೀದಿ ದೀಪ ಗಳಿಗೆ ಕಾರ್ಚಿ ಅವರು ಚಾಲನೆ  ನೀಡಿದ್ದಾರೆ.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಹಾಲಿ ಹಾಗೂ …

Read More »

ಬೆಳಗಾವಿ | ನಿಂಬಾಳ್ಕರ್ ಟ್ವೀಟ್‌ಗೆ ಕರವೇ ಖಂಡನೆ

ಬೆಳಗಾವಿ: ‘ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಮಣಗುತ್ತಿ ಘಟನೆಯ ವಾಸ್ತವ ತಿಳಿಯದೆ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಟೀಕಿಸಿದ್ದಾರೆ. ‘ಸಮಗ್ರ ಮಾಹಿತಿ ಪಡೆದು ಟ್ವೀಟ್ ಮಾಡಬೇಕಿತ್ತು. ಆ ಗ್ರಾಮದಲ್ಲಿ ಸರ್ಕಾರ, ಜಿಲ್ಲಾಡಳಿತ ಅಥವಾ ಕನ್ನಡಿಗರಿಂದ ಶಿವಾಜಿ ಪ್ರತಿಮೆಗೆ ಅವಮಾನವಾಗಿಲ್ಲ. ಪ್ರತಿಷ್ಠಾಪಿಸಿದರೆ ತೆರವುಗೊಳಿಸಿದ್ದಾರೆ. ಆದಾಗ್ಯೂ ಕರ್ನಾಟಕ ಸರ್ಕಾರ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ಮಹಾರಾಷ್ಟ್ರ …

Read More »

ಯೂರಿಯಾ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಮರ್ಪಕವಾಗಿ ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ‘ಸಂಘದಿಂದ ಅವಶ್ಯ ಪ್ರಮಾಣದಲ್ಲಿ ಯೂರಿಯಾ ನೀಡುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಇತರ ಗೊಬ್ಬರಗಳ ಬದಲಿಗೆ ಯೂರಿಯಾವನ್ನೇ ಕೊಡಬೇಕು’ ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ, ವಿಠ್ಠಲ ದೊಡಗೌಡ್ರ, ಬಸಪ್ಪ ದಳವಾಯಿ, ಮಲ್ಲಪ್ಪ ದಳವಾಯಿ, ವಿಠ್ಠಲ …

Read More »

ಬೆಳಗಾವಿ | 575 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 575 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 6ಸಾವಿರದ ಗಡಿ ದಾಟಿದೆ. ಈ ಸೋಂಕಿನ ಕಾರಣದಿಂದ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. 444 ಮಂದಿ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Read More »

ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲು ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್‌ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಶಿಕಲಾ ಜೊಲ್ಲೆ ಹೇಳಿದರು. ಕೋವಿಡ್‌-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಆವರು, ರ್ಯಾಪಿಡ್‌ ಟೆಸ್ಟ್‌ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ತಕ್ಷಣ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ …

Read More »