Breaking News

ಬೆಳಗಾವಿ

ಶಾಹುನಗರದ ಸ್ಮಶಾನ ಭೂಮಿ ಇದನ್ನು ಉಳಿಸಿಕೊಡುವಂತೆ ಡೊಂಬರ ಸಮುದಾಯದ ಆಗ್ರಹ

ಬೆಳಗಾವಿ: ಖಾನಾಪುರ ತಾಲೂಕಿನ ಶಾಹುನಗರದಲ್ಲಿ ಡೊಂಬರ ಸಮುದಾಯದ ಸ್ಮಶಾನ ಭೂಮಿ ಕಬಳಿಸುವ ಹುನ್ನಾರ ನಡೆದಿದ್ದು, ಇದನ್ನು ಉಳಿಸಿಕೊಡುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿಯಲ್ಲಿ ಆಗಮಿಸಿದ ನಿವಾಸಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ರಿಗೆ ಮನವಿ ಸಲ್ಲಿಸಿದರು. ಖಾನಾಪುರ ತಾಲೂಕಿನ ಶಾಹುನಗರದ ಸರ್ವೆ ನಂ 39/ಎ1 ರಲ್ಲಿ ಬರುವ …

Read More »

ಮಲ್ಲಮ್ಮ ಉತ್ಸವ ಹಿನ್ನೆಲೆ ಬೆಳವಡಿಯಲ್ಲಿ ಮದ್ಯ ಮಾರಾಟ ನಿಷೇಧ

ಬೆಳಗಾವಿ: ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಫೆ.28ರಿಂದ ಬೆಳವಡಿ ಮಲ್ಲಮ್ಮ ಉತ್ಸವ ಹಮ್ಮಿಕೊಂಡಿರುವ ಹಿನ್ನೆಲೆ ಫೆ.27ರ ಸಂಜೆ 6ರಿಂದ ಮಾ.2ರ ಬೆಳಗ್ಗೆ 6ರವರೆಗೆ ಬೆಳವಡಿ ಗ್ರಾಮದ ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯ, ಬಾರ್ ಅಂಗಡಿಗಳನ್ನು ಬಂದ್ ಮಾಡಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

Read More »

ಕೆಎಲ್‌ಇ ನೂತನ ಚೇರಮನ್‌ರಾಗಿ ಅಮಿತ ಕೋರೆ ಆಯ್ಕೆ

ಬೆಳಗಾವಿ 20 ಫೆ: ಜಾಗತಿಕ ಸುವಿಖ್ಯಾತ ಶಿಕ್ಷಣ ಸಂಸ್ಥೆಯಾದ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆಯವರು ಆಯ್ಕೆಯಾಗಿದ್ದಾರೆ. ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಮಿತ ಕೋರೆಯವರಿಗೆ ಕೆಎಲ್‌ಇ ಸಂಸ್ಥೆಯ ಸಾರಥ್ಯವನ್ನು ನೀಡಲಾಯಿತು. ಡಾ.ಪ್ರಭಾಕರ ಕೋರೆ ಅವರು ಸುದೀರ್ಘ 42 ವರ್ಷಗಳ ಅವಧಿಗೆ ಚೇರಮನ್‌ರಾಗಿ ಸಂಸ್ಥೆಯನ್ನು ಜಾಗತಿಕವಾಗಿ ವಿಸ್ತರಿಸಿದ್ದರು. ಇಂದು ಆ ಸ್ಥಾನವನ್ನು ಅಮಿತ ಕೋರೆಯವರಿಗೆ ಆಡಳಿತ ಮಂಡಳಿಯು …

Read More »

ಬೆಳಗಾವಿ ಕೈಗಾರಿಕಾ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಬೇಡಿಕೆ ಮುಖ್ಯಮಂತ್ರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಿಂದ ಮನವಿ

ಬೆಳಗಾವಿ: ಬೆಳಗಾವಿ ಪ್ರದೇಶದ ಕೈಗಾರಿಕೆ, ಎಂಎಸ್‌ಎಂಇಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ವಿಶೇಷ ನೆರವು ನೀಡುವಂತೆ ಬೆಳಗಾವಿ ವಾಣಿಜ್ಯೋದ್ಯಮ ಸಂಘದ (Belgaum Chamber of Commerce and Industries) ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮದ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೆಳಗಾವಿ ಉತ್ತರ ಕರ್ನಾಟಕದ ಪ್ರಮುಖ ಕೈಗಾರಿಕಾ ಕೇಂದ್ರವಾಗಿದ್ದು, ಎಂಜಿನಿಯರಿಂಗ್, ಫೌಂಡ್ರಿ, ಹೈಡ್ರಾಲಿಕ್ಸ್, ಪ್ರಿಸಿಷನ್ ಘಟಕಗಳು ಹಾಗೂ ಏರೋಸ್ಪೇಸ್ ಕ್ಷೇತ್ರಗಳಲ್ಲಿ ಮಹತ್ವದ ಸ್ಥಾನ ಹೊಂದಿದೆ ಎಂದು ಉಲ್ಲೇಖಿಸಲಾಗಿದೆ. ಸೂಕ್ತ ಬಜೆಟ್ …

Read More »

ಬೆಳಗಾವಿ ವಿಭಾಗ ಮಟ್ಟದ ಮಹಿಳಾ ರಕ್ಷಣಾ ಪಡೆಗಳಿಗೆ ಕಾರ್ಯಾಗಾರ

ಬೆಳಗಾವಿ: ದೇಶ ಪ್ರಗತಿ ಸಾಧಿಸಲು ಮಹಿಳೆಯ ಪಾತ್ರ ದೊಡ್ಡದು. ಎರಡನೇ ಮಹಾಯುದ್ಧದ ನಂತರ ಜಪಾನ ಮಹಿಳೆಯರು ಕೈ ಕಟ್ಟಿ ಕುಳಿತಿದ್ದರೇ ಆ ದೇಶ  ಇಂದು ಇಷ್ಟು ಪ್ರಗತಿ ಹೊಂದಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ನಮ್ಮ ದೇಶದಲ್ಲೂ ಮಹಿಳೆಯರು ಸ್ವಾವಲಂಬಿಗಳಾಗಿ ಹೆಚ್ಚು ಬೆಳೆಯಬೇಕಿದ್ದು, ಇದಕ್ಕಾಗಿಯೇ ಹೆಣ್ಣು ಮಕ್ಕಳ ಸಂರಕ್ಷಣೆ ಮತ್ತು ಸುರಕ್ಷತೆ ಮಹತ್ವ ನೀಡಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಹೇಳಿದರು. ಜಿಲ್ಲಾಡಳಿತ, ಜಿಪಂ, ಗೃಹ ಇಲಾಖೆ, ಮಹಿಳಾ ಮತ್ತು ಮಕ್ಕಳ …

Read More »

ಫೆ.28ರಂದುಮಹಿಳೆಯರಿಗಾಗಿ ಡಿಜಿಟಲ್ ಮಾರ್ಕೆಟಿಂಗ್

ಬೆಳಗಾವಿ:ಪರಂಪರಾ ಮಹಿಳಾ ವೇದಿಕೆಯಿಂದ ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಫೆ.28ರಂದು ಬೆಳಗ್ಗೆ 10ಕ್ಕೆ ಮಹಿಳೆಯರಿಗಾಗಿ ಡಿಜಿಟಲ್ ಮಾರ್ಕೆಟಿಂಗ್ ಕುರಿತು ಕುರಿತು ಒಂದು ದಿನದ ಉಚಿತ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಅಧ್ಯಕ್ಷೆ ಪ್ರಿಯಾ ಪುರಾಣಿಕ ತಿಳಿಸಿದರು.  ನಗರದಲ್ಲಿ ಗುರುವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಉದ್ಯಮಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ನಿರ್ವಹಣೆ ಕುರಿತ ವಿವಿಧ ವಿಷಯಗಳನ್ನು ಕಾರ್ಯಾಗಾರದಲ್ಲಿ ಪರಿಚಯಿಸಲಾಗುವುದು. ತಮ್ಮ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುವುದು ಮತ್ತು ಡಿಜಿಟಲ್ …

Read More »

ಸೇತುವೆ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಚಾಲನೆ

ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ ಹಾಗೂ ಬೆನಕನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಗುರುವಾರ ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು. ಸುಮಾರು 30 ಲಕ್ಷ ರೂ,ಗಳ ವೆಚ್ಚದಲ್ಲಿ ಸೇತುವೆ ನಿರ್ಮಾಣಗೊಳ್ಳಲಿದೆ, ಜನರ ಬಹುದಿನದ ಬೇಡಿಕೆಯಾಗಿದ್ದ ಈ ಸೇತುವೆ ನಿರ್ಮಾಣದಿಂದ ಸಂಚಾರ ವ್ಯವಸ್ಥೆ ಸುಗಮವಾಗಲಿದ್ದು, ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. …

Read More »

ಮಚ್ಚೆ ಗ್ರಾಮದ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

ಬೆಳಗಾವಿ:  ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದಿದ್ದಾರೆಂಬ ಆರೋಪ ಕೇಳಿ ಬಂದಿದ್ದು,  ಸ್ಥಳದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು ರಾಯಣ್ಣ ಮೂರ್ತಿಗೆ ಮೊದಲು  ಕಪ್ಪು ಬಣ್ಣವೇ ಇತ್ತು. ಅದರ ಮೇಲೆಯೇ ಮತ್ತೆ ಕರಿ ಮಸಿ ಸುರಿದಿದ್ದಾರೆಂದು ತಡರಾತ್ರಿ ತಿಳಿದು ಬಂದಿದ್ದು, ಕೆಲಕಾಲ ಯಾರೂ ಇದನ್ನು ಗಮನಿಸಿರಲಿಲ್ಲ. ರಾತ್ರಿ ಗ್ರಾಮದ ಕೆಲವು ಯುವಕರ ಗಮನಕ್ಕೆ ಬಂದಿದೆ. ಕೆಲವೇ ನಿಮಿಷಗಳಲ್ಲಿ ಹಲವರು ಸ್ಥಳದಲ್ಲಿ ಸೇರಿ …

Read More »

ಇನ್ನೂ 10 ವರ್ಷ ರಾಜಕೀಯದಲ್ಲಿ ಇರುತ್ತೇನೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಉದ್ದಿಮೆ ಜೊತೆಗೆ ರಾಜಕೀಯದಲ್ಲಿ ಇದ್ದುಕೊಂಡು 30 ವರ್ಷದಿಂದ ಸಮಾಜಸೇವೆ ಮಾಡುತ್ತಿದ್ದೇನೆ. ಈ ವೇಳೆ ಹಲವು ಏಳು-ಬೀಳು ಕಂಡಿದ್ದೇನೆ. ಕನಿಷ್ಠ 10 ವರ್ಷ ರಾಜಕೀಯದಲ್ಲಿದ್ದು ನಾಡಿನ ಅಭಿವೃದ್ಧಿಗೆ ಇನ್ನಷ್ಟು ಪೂರಕವಾಗಿ ಕೆಲಸ ಮಾಡುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರು ಪ್ರೆಸ್‌ಕ್ಲಬ್​​​ನಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಜೊತೆ 25 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಈ ವೇಳೆ ಶೋಷಿತರಿಗೆ ಸಾಮಾಜಿಕ …

Read More »

“ಮಾರ್ಚ್ 11 ರಿಂದ 15 ವರೆಗೆ ನಿಪ್ಪಾಣಿಯಲ್ಲಿ ಅದ್ದೂರಿ ಕೃಷಿ ಉತ್ಸವ”

ನಿಪ್ಪಾಣಿ: ನಗರದ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅವರಣರದಲ್ಲಿ ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೋಸಾಯಿಟಿ ಲಿ.,ಯಕ್ಸಂಬಾ (ಮಲ್ಟಿ – ಸ್ಟೇಟ್) ಹಾಗೂ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿಯಮಿತ.,(ಬಹು -ರಾಜ್ಯ) ಸಂಯುಕ್ತಾಶ್ರಯದಲ್ಲಿ ಮಾರ್ಚ 11 ರಿಂದ 15 ವರೆಗೆ 5 ದಿನಗಳ ಕಾಲ ನಡೆಯಲಿರುವ ಬೃಹತ್ “ಕೃಷಿ ಉತ್ಸವ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆಯನ್ನು ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ,ಸಲಹೆ ಸೂಚನೆಗಳನ್ನು ನೀಡಿದರು. …

Read More »