ಹುಕ್ಕೇರಿ: ತಾಲ್ಲೂಕಿನ ಗುಡಸ್ ಗ್ರಾಮದ ಗಾಯರಾಣ ಪ್ರದೇಶಕ್ಕೆ ಹೊಂದಿಕೊಂಡಿರುವ ಲಕ್ಷ್ಮೀದೇವಿ ಗುಡಿಯ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧ ತುಂಡುಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಹುಕ್ಕೇರಿ ವಲಯದ ಸಿಬ್ಬಂದಿ ಕಾರೊಂದನ್ನು ಬೆನ್ನತ್ತಿ ಹಿಡಿದು ನಿಲ್ಲಿಸಿದಾಗ, ತಕ್ಷಣಕ್ಕೆ ಕತ್ತಲಾಗಿದ್ದರಿಂದ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ವಾಹನ ಸಮೇತ ₹4 ಲಕ್ಷ ಮೌಲ್ಯದ (40.605 ಕೆ.ಜಿ.) ಶ್ರೀಗಂಧದ ತುಂಡುಗಳನ್ನು ಇಲಾಖೆಯವರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ …
Read More »ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು.; ಜಿಪಂ ಸಿಇಒ ರಾಹುಲ್ ಶಿಂಧೆ
ಬೆಳಗಾವಿ : ಬೆಳಗಾವಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಗಳನ್ನು ಪರಿಷ್ಕರಣೆ ಮಾಡಬೇಕು. ವಯಸ್ಕರ ಮತದಾರರ ಪಟ್ಟಿಗಳ ಮಾಹಿತಿ ಸಂಗ್ರಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು. ಚಿಕ್ಕೋಡಿ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಫೆ.20) ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ನಡೆದ ಪೂರ್ವ ಸಿದ್ಧತೆಯ ಸಭೆಯಲ್ಲಿ ಅವರು ಮಾತನಾಡಿದರು. ಮತಗಟ್ಟೆಗಳನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಒಂದು …
Read More »ರಾಯ ಬಾಗ ನಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣಾ ಸಭೆ
ಮುಂಬರುವ ಚಿಕ್ಕೋಡಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ರಾಯಬಾಗ ಪಟ್ಟಣದಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣಾ ಸಭೆಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ಮಡಿಲಿಗೆ ತೆಗೆದುಕೊಳ್ಳಲು ಇದು ಸುವರ್ಣಾವಕಾಶ ಇದ್ದು ಯಾರೇ ಅಭ್ಯರ್ಥಿಯಾಗಿ ಆಯ್ಕೆ ಯಾದರೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಟೊಂಕು ಕಟ್ಟಿ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳ …
Read More »ಬೆಳಗಾವಿ : ‘ಹೆಲ್ಮೆಟ್’ ಧರಿಸದಿದ್ದಕ್ಕೆ ಅಪಘಾತದಲ್ಲಿ ‘ASI’ ಸಾವು : ‘PSI’ ಅಮಾನತುಗೊಳಿಸಿ SP ಆದೇಶ
ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ನಡೆದಿದೆ. ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲಾಯಿಸಿ ಹಂಪ್ ಜಿಗಿಸಿದಕ್ಕೆ ಅಪಘಾತ ಸಂಭವಿಸಿದೆ. ಇದೀಗ ಹೆಲ್ಮೆಟ್ ಧರಿಸಿ ಕಡ್ಡಾಯ ಆದೇಶವನ್ನು ನಿರ್ಲಕ್ಷ ವಹಿಸಿದಕ್ಕೆ ದೊಡವಾಡ ಠಾಣೆ ಪಿಎಸ್‌ಐ ನಂದೀಶ್‌ರನ್ನು ಅಮಾನತ್ತು ಮಾಡಿ ಅದೇಶಿಸಲಾಗಿದೆ.
Read More »ರೈತನ ಬಾಳು ಬೆಳಗಿದ ‘ಕೃಷಿ ಹೊಂಡ’
ಸವದತ್ತಿ: ಈ ಹಿಂದೆ ನೀರಿನ ಕೊರತೆಯಿಂದ ಕೃಷಿ ಕಾಯಕದಲ್ಲಿ ಹಿನ್ನಡೆ ಅನುಭವಿಸುತ್ತಿದ್ದ ತಾಲ್ಲೂಕಿನ ಗೊಂತಮಾರದ ರೈತ ಬಸವರಾಜ ನೇಕಾರ, ಈಗ ಕೃಷಿ ಹೊಂಡದ ನೆರವಿನಿಂದ ಸಮೃದ್ಧವಾಗಿ ಕೃಷಿ ಮಾಡುತ್ತಿದ್ದಾರೆ. ಹೊಂಡದಲ್ಲಿ ಸಂಗ್ರಹವಾದ ಮಳೆ ನೀರನ್ನು ಬೇಡಿಕೆಯನುಸಾರ ವಿವಿಧ ಬೆಳೆಗಳಿಗೆ ಉಣಿಸಿ ಉತ್ತಮ ಆದಾಯ ಗಳಿಸುತ್ತಿದ್ದಾರೆ. 13 ಎಕರೆ ಜಮೀನು ಹೊಂದಿರುವ ಬಸವರಾಜ ಓದಿದ್ದು 9ನೇ ತರಗತಿಯಷ್ಟೇ. ಆದರೆ, ಕೃಷಿಯಲ್ಲಿ ಏನನ್ನಾದರೂ ಸಾಧಿಸುವ ತವಕ ಅವರಲ್ಲಿತ್ತು. ಮಳೆಗಾಲದಲ್ಲೇನೂ ಹೆಚ್ಚಿನ ಸಮಸ್ಯೆಯಾಗುತ್ತಿರಲಿಲ್ಲ. …
Read More »ನೀರಿಗಾಗಿ ಉಮರಾಣಿ ಗ್ರಾಮಸ್ಥರು ಹೈರಾಣ
ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉಮರಾಣಿ ಹಾಗೂ ಇಟ್ನಾಳ್ ಗ್ರಾಮಗಳಲ್ಲಿ, ಬೇಸಿಗೆ ಆರಂಭದಿಂದಲೇ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ಬಂದಿದೆ. ದಿನ ಬೆಳಗಾದರೆ ಮಹಿಳೆಯರು ಕೊಡಗಳನ್ನು ಹೊತ್ತು ಅಲೆಯುವುದು ಅನಿವಾರ್ಯವಾಗಿದೆ. ಉಮರಾಣಿ ಗ್ರಾಮದಲ್ಲಿ 6,000 ಜನಸಂಖ್ಯೆ ಇದೆ. 12 ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ. ಗ್ರಾಮದ ತೋಟಪಟ್ಟಿ ವಸತಿಗಳಲ್ಲಿ ಕಳೆದ 10 ದಿನಗಳಿಂದ 4 ಟ್ಯಾಂಕರ್‌ನಿಂದ ಸರದಿಯಂತೆ ನೀರು ಪೂರೈಸಲಾಗುತ್ತಿದೆ. ಪರಿಶಿಷ್ಟ ಜಾತಿ ಕಾಲೊನಿ, ಬಾಗೇವಾಡಿ ತೋಟ, …
Read More »ಬೆಳಗಾವಿ: ಡಿಸಿಪಿ ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ
ಬೆಳಗಾವಿ: ಬೆಳಗಾವಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ ಅವರ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು, ಅವರ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣ ಕೇಳಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ‘ರೋಹನ್ ಜಗದೀಶ ಐಪಿಎಸ್’ ಹೆಸರಲ್ಲಿ ರೋಹನ್ ಅವರ ಭಾವಚಿತ್ರಗಳನ್ನು ಬಳಸಿ, ವೈಯಕ್ತಿಕ ಮಾಹಿತಿ ಮೂಲಕ ಫೇಸ್‌ಬುಕ್ ಖಾತೆ ತೆರೆಯಲಾಗಿದೆ. ಇದರ ಮೂಲಕ ಮೆಸೆಂಜರ್‌ನಲ್ಲಿ ಸಂದೇಶ ರವಾಣಿಸಿ ಹಣದ ನೆರವು ನೀಡುವಂತೆ ಕೇಳಿದ್ದಾರೆ. ಬೆಳಗಾವಿ ಸಿಇಎನ್ …
Read More »ಕಾಡಿನ ಕೂಸು’ಗಳಿಗೂ ತಪ್ಪದ ನೀರಿನ ಬವಣೆ
ಖಾನಾಪುರ: ಈಚಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ತಾಲ್ಲೂಕಿನಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದೆ. ಕಾರಣ ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಪ್ರಮುಖ ಜಲಮೂಲಗಳಾದ ಮಲಪ್ರಭಾ, ಪಾಂಡರಿ ನದಿಗಳು, ಕೆರೆಗಳು ಮತ್ತು ಹಳ್ಳಕೊಳ್ಳಗಳು ಸಂಪೂರ್ಣ ಬತ್ತಿವೆ. ಇದು ಸದ್ಯದ ಬರದ ಪರಿಸ್ಥಿತಿಗೆ ಜ್ವಲಂತ ಸಾಕ್ಷಿ. ತಾಲ್ಲೂಕಿನ ಪ್ರಮುಖ ಜಲಮೂಲಗಳು ಬತ್ತಿರುವ ಕಾರಣ ಕುಡಿಯುವ ನೀರಿಗಾಗಿ ಕೊಳವೆಬಾವಿಗಳನ್ನು ಅವಲಂಬಿಸಬೇಕಾಗಿದೆ. ದಟ್ಟ ಅರಣ್ಯವನ್ನು ಸುತ್ತುವರಿದ ತಾಲ್ಲೂಕಿನ ಪಶ್ಚಿಮ ಭಾಗದ ಕರ್ನಾಟಕ- ಗೋವಾ ಗಡಿಯಲ್ಲಿರುವ …
Read More »ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಪೊಲೀಸರು ಅಲರ್ಟ್: ಬೆಳಗಾವಿಯಲ್ಲಿ ‘2 ಲಕ್ಷ ಸೀಜ್’
ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತ್ರ, ಚುರುಕಾಗಿರೋ ಪೊಲೀಸರು ದಾಖಲೆಯಿಲ್ಲದೇ ಗೋಣಿಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪೊಲೀಸರು ಲೋಕಸಭಾ ಚುನಾವಣೆ ಘೋಷಣೆಯ ನಂತ್ರ, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮವಹಿಸಿದ್ದಾರೆ. ಬೆಳಗಾವಿಯ ಹಳ್ಳೂರು ಚೆಕ್ ಪೋಸ್ಟ್ ನಲ್ಲಿ ಆಲ್ಟೋ ಕಾರಿನಲ್ಲಿ ದಾಖಲೆಯಿಲ್ಲದೇ ಗೋಣಿಚೀಲದಲ್ಲಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಪುಲಗಡ್ಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ಗಜಾನನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ …
Read More »