Breaking News

ಬೆಳಗಾವಿ

ಘಟಪ್ರಭಾ-ಮಣಗುತ್ತಿ ವಿವಾದ ಸೌಹಾರ್ದತೆ ಕಾಪಾಡುವಂತೆ ಪೋಲಿಸ್ ಕಮೀಶನರ್ ಗೆ ಕನ್ನಡ ಸೇನೆ ವತಿಯಿಂದ ಮನವಿ

ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮತ್ತು ಸ್ಥಳಾಂತರ ಪ್ರಕರಣವನ್ನು ಶಿವಸೇನೆ ಮತ್ತು ಹೊರಗಿನಿಂದ ಬಂದ ಇತರೆ ಸಂಘಟನೆಗಳು ವಿವಾದ ಸೃಷ್ಟಿ ಮಾಡಿ ಸೌಹಾರ್ದತೆ ಹಾಳು ಮಾಡಲು ಪ್ರಯತ್ನಿಸುತ್ತಿರುವ ಕಿಡಗೇಡಿಗಳನ್ನು ಕೂಡಲೇ ಅವರನ್ನು ಬಂದಿಸಬೇಕು. ಅದರಂತೆ ಅಲ್ಲಿಯ ಜನರಿಗೆ ಸೌಹಾರ್ದತೆಯಿಂದ ಬಾಳಲು ಅನುಮಾಡಿ ಕೊಡಬೇಕು ಎಂದು ಕನ್ನಡ ಸೇನೆ ಮತ್ತು ಕರವೇ ಸಂಘಟನೆ ವತಿಯಿಂದ ಪೋಲಿಸ್ ಕಮೀಶನರ್ ಮನವಿ ಸಲ್ಲಿಸಲಾಯಿತು. ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ …

Read More »

ಅಂಜಲಿ ನಿಂಬಾಳ್ಕರ್ ಮಾಡಿರುವ ಟ್ವಿಟ್ ವೊಂದು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. 

ಬೆಳಗಾವಿ:  ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ವಿಧಾನ ಸಭೆ ಮತಕ್ಷೇತ್ರದಲ್ಲಿ ಬರುವ ಮಣಗುತ್ತಿ ಗ್ರಾಮದಲ್ಲಿಯ ಶಿವಾಜಿ ಪ್ರತಿಮೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಮಾಡಿರುವ ಟ್ವಿಟ್ ವೊಂದು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.  ಮಣಗುತ್ತಿಯಲ್ಲಿಯ ಶಿವಾಜಿ ಪ್ರತಿಮೆಯನ್ನು ತೆರವು ಮಾಡಿದ್ದನ್ನು ಆಕ್ಷೇಪಿಸಿದ ಶಾಸಕಿ ನಿಂಬಾಳ್ಕರ್ ಅವರು, ಸಕಲ ಸರಕಾರಿ ಗೌರವದೊಂದಿಗೆ ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸಬೇಕು ಮತ್ತು ರಾಜ್ಯ ಸರ್ಕಾರ ಕ್ಷಮೆಯನ್ನು ಕೇಳಬೇಕು ಎಂದು  ಟ್ವೀಟ್ ಮೂಲಕ ಆಗ್ರಹಿಸಿದ್ದು ಕನ್ನಡಿಗರ …

Read More »

ಜಿಲ್ಲೆಯಲ್ಲಿ ಇಂದು 54 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಬಲಿ

ಬೆಳಗಾವಿ: ಜಿಲ್ಲೆಯಲ್ಲಿ ಇಂದು 54 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಬಲಿಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ‌ ನೀಡಿದ್ದು, ಇಂದು ಒಂದೇ ದಿನ 90 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿಯ ಇಬ್ಬರು ಹಾಗೂ ಸವದತ್ತಿ ತಾಲೂಕಿನ ಒಬ್ಬ ಒಟ್ಟು ಮೂವರು ಸಾವನ್ನಪ್ಪಿದ್ದು, ಇದವರೆಗೆ ಜಿಲ್ಲೆಯಲ್ಲಿ ಬೆಳಗಾವಿ ತಾಲೂಕಿನಲ್ಲಿ 20, ಗೋಕಾಕನಲ್ಲಿ 10, …

Read More »

ಜಲಪಾತದಲ್ಲಿ ಮಂಜಿನೊಂದಿಗೆ ಶರಾವತಿ ಕಣ್ಣ ಮುಚ್ಚಾಲೆ

ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಜೋಗ ಜಲಪಾತಕ್ಕೆ ಸಾಕಷ್ಟು ಪ್ರಮಾಣದಲ್ಲಿ ಮಳೆ ನೀರು ಹರಿದು ಬರುತ್ತಿದ್ದು, ಪ್ರಕೃತಿಯ ಸುಂದರ ಮಡಿಲಲ್ಲಿ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದ್ದಾಳೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದಾಳೆ. ಮಲೆನಾಡಿನ ಬೆಟ್ಟ, ಗುಡ್ಡ ಹಸಿರು ಕಾನನದ ನಡುವೆ ಬಳುಕುತ್ತಾ ಹರಿಯುವ ಶರಾವತಿ ನದಿ ಜೋಗದಲ್ಲಿ ಸುಮಾರು 950 …

Read More »

ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಅವರು ರಾಜಕೀಯವಾಗಿ  ಒಗ್ಗಟ್ಟಾಗುತ್ತಿದ್ದಾರೆ……..?:ಸತೀಶ ಜಾರಕಿಹೊಳಿ

ಬೆಳಗಾವಿ: ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಅವರು ರಾಜಕೀಯವಾಗಿ  ಒಗ್ಗಟ್ಟಾಗುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಅದು ಅಸಾಧ್ಯದ ಮಾತು ಎಂದು ಹೇಳಿದ್ದಾರೆ. ರಾಜಕೀಯವಾಗಿ ಅವರ ಸಿದ್ಧಾಂತಗಳು, ವಿಚಾರ, ಹೋರಾಟವೇ ಬೇರೆಯಾಗಿದೆ.ಅವ್ರು ಹಾಸ್ಪಿಟಲ್ ನಲ್ಲಿ ಒಂದಾಗಬಹದು ಆದ್ರೆ ರಾಜಕೀಯವಾಗಿ ಅದು ಅಸಾಧ್ಯದ ಮಾತು ಎಂದು ವ್ಯಂಗ್ಯವಾಡಿದ ಅವರು ರಾಜಕೀಯವಾಗಿ ಯಾವಾಗಲೂ ಕೂಡಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ರಾಜಕೀಯವಾಗಿ 24 …

Read More »

ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗಿಕರಣ ಎಪಿಎಂಸಿ ಕಾನೂನು ತಿದ್ದುಪಡಿ

ಅಥಣಿ: ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗಿಕರಣ ಎಪಿಎಂಸಿ ಕಾನೂನು ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪಟ್ಟಣದಲ್ಲಿ  ಪ್ರತಿಭಟನೆ ನಡೆಸಿದರು. ಇಲ್ಲಿನ ಮಿನಿ ವಿಧಾನಸೌಧದ ಎದುರು ಸೇರಿದ ರೈತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ಬಳಿಕ  ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕ  ಮಹೇಶ ಕುಮಟಳ್ಳಿ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘ ಹಾಗೂ …

Read More »

ಸರ್ಕಾರ ವಿಧವಾ, ಅಂಗ್ಯವಿಕಲ, ವೃದ್ಯಾಪ್ಯ ವೇತನ ನೀಡದಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ತಕ್ಷಣ ಪರಿಹಾರ ಕೊಡಿಸುವಂತೆ ಅಗಸಗಿ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ: ಕಳೆದ 10 ತಿಂಗಳಿನಿಂದ  ಸರ್ಕಾರ  ವಿಧವಾ, ಅಂಗ್ಯವಿಕಲ, ವೃದ್ಯಾಪ್ಯ ವೇತನ ನೀಡದಿರುವುದರಿಂದ ಜೀವನ ನಡೆಸುವುದು  ಕಷ್ಟವಾಗಿದೆ. ತಕ್ಷಣ ಪರಿಹಾರ ಕೊಡಿಸುವಂತೆ ಅಗಸಗಿ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ  ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.  ಇಲ್ಲಿನ ಕಾಂಗ್ರೆಸ್ ನೂತನ ಕಚೇರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಗ್ರಾಮಸ್ಥರು ತಮ್ಮ ಅಳಲುತೋಡಿಕೊಂಡರು. ಕೊರೊನಾ ಲಾಕ್ ಡೌನ್ ನಿಂದಾಗಿ  ಸಾಕಷ್ಟು ತೊಂದರೆಯಾಗಿದೆ. ಜೀವನಕ್ಕೆ ಆಧಾರವಾಗಿದ್ದ ಪಿಂಚಣಿ ಹಣ ಕಳೆದ …

Read More »

ಹಿಡಕಲ್ ಡ್ಯಾಂ ಶೇ 95 ರಷ್ಟು ಭರ್ತಿ:

ಬೆಳಗಾವಿ:  ಹಿಡಕಲ್ ಜಲಾಶಯ ಭಾಗಶಃ ಶೇ. 95 ರಷ್ಟು ಭರ್ತಿಯಾದ ಹಿನ್ನೆಲೆಯಲ್ಲಿ 10 ಕ್ರಸ್ಟ್ ಗೇಟ್ ಗಳ ಮೂಲಕ 5 ಸಾವಿ ಕ್ಯೂಸೆಕ್ ನೀರು ಘಟಪ್ರಭಾ ನದಿಗೆ ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕ ಜಲಾಯನ ಪ್ರದೇಶದಲ್ಲಿ  ಮತ್ತೆ ಮಳೆ ಆರಂಭವಾದ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಒಳ ಹರಿವು ಹೆಚ್ಚಳವಾಗಿದೆ.  ಘಟಪ್ರಭಾ ನದಿಯ ಗೋಕಾಕ ಹಾಗೂ ಹುಕ್ಕೇರಿ ತಾಲೂಕಿನ ಗ್ರಾಮದ ನದಿ ಪಾತ್ರದ ಜನರಿಗೆ ಸುರಕ್ಷಿತ ಇರುವಂತೆ ಸೂಚನೆ ನೀಡಲಾಗಿದೆ. …

Read More »

ಎಸ್ಎಸ್ಎಲ್ ಸಿ ಫಲಿತಾಂಶ: ಚಿಕ್ಕೋಡಿ 30, ಬೆಳಗಾವಿಗೆ 31 ನೇ ಸ್ಥಾನ

ಬೆಳಗಾವಿ:  ಬಹುನಿರೀಕ್ಷಿತ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 30 ನೇ ಸ್ಥಾನ ಲಭಿಸಿದರೆ, ಬೆಳಗಾವಿ ಜಿಲ್ಲೆಗೆ 31 ನೇ ಸ್ಥಾನ ಪಡೆದಿದೆ.  ಕೊರೊನಾ ಸೋಂಕು ಭೀತಿಯ ಮಧ್ಯೆಯೂ ವಿದ್ಯಾರ್ಥಿಗಳು  ಎಸ್ಎಸ್ ಎಲ್ ಸಿ ಪರೀಕ್ಷೆ ಎದುರಿಸಿದ್ದರು.  ಚಿಕ್ಕೋಡಿಯ ಎಂ.ಕೆ. ಕವಟಗಿಮಠ ಕನ್ನಡ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡರ,  ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಘಟಪ್ರಭಾದ ಕೆ.ಆರ್. ಹುಕ್ಕೇರಿ ಪ್ರೌಢಶಾಲೆಯ ಶ್ರುತಿ ಬಸಗೌಡ ಪಾಟೀಲ …

Read More »

ಗೋಕಾಕ್ ಫಾಲ್ಸ್ ಬಳಿ ಯುವಕರ ಸೆಲ್ಫಿ ಹುಚ್ಚಾಟ………

ಗೋಕಾಕ್: ಜಿಲ್ಲೆಯ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ನೀರಿನ ಭಯವಿಲ್ಲದೆ ಯುವಕರು ತಮ್ಮ ಹುಚ್ಚಾಟ ಮೆರೆಯುತ್ತಿದ್ದಾರೆ.ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದೆ. 180 ಅಡಿಯಿಂದ ಧುಮ್ಮುಕ್ಕುತ್ತಿರುವ ಜಲಪಾತದ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಯುವಕರು ಮಜಾ ಮಾಡುತ್ತಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ …

Read More »