Breaking News

ಬೆಳಗಾವಿ

ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ ಮಳೆ ದಾಖಲು : 24 ಗಂಟೆಯಲ್ಲಿ ಘಟಪ್ರಭೆಗೆ ಹರಿದು ಬಂತು 4 ಟಿಎಂಸಿ ನೀರು..!

ಬೆಂಗಳೂರು/ಉಡುಪಿ/ಬೆಳಗಾವಿ : ರಾಜ್ಯದಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಘಟ್ಟಪ್ರದೇಶಗಳಲ್ಲಿ ಈಗಲೂ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ 208.5 ಮಿಮೀ ನಷ್ಟು ಮಳೆ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇದು ರಾಜ್ಯದಲ್ಲೇ ಅತ್ಯಂತ ಹೆಚ್ಚು ಮಳೆಯಾದ ಪ್ರದೇಶವಾಗಿದೆ. …

Read More »

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ವಿಜಯಪುರ‌ದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ನಗರದ ಕೆ‌ಎಲ್‌ಇ ಆಸ್ಪತ್ರೆಗೆ ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು. ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಶುಕ್ರವಾರ ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ. ಆ. 8ರಂದು ಹುಬ್ಬಳ್ಳಿಯಲ್ಲಿ …

Read More »

ಪ್ರವಾಹದೊಂದಿಗೆ ಬಂದ ಬೃಹತ್ ಮೀನು; ಅಚ್ಚರಿಗೊಂಡ ಬೆಳಗಾವಿ ಜನ

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಭೂಮಿ ಮೇಲೆ ಇರುವ ಪ್ರಾಣಿಗಳಿಗೆ ಮಾತ್ರ ಸಂಕಷ್ಟಕ್ಕೆ ಒಳಗಾಗಿಲ್ಲ, ಜಲಚರ ಜೀವಿಗಳೂ ಆಘಾತಕ್ಕೆ ಒಳಗಾಗಿವೆ. ಹುಕ್ಕೇರಿ ತಾಲೂಕಿನ ಬಸಾಪೂರ ಬಳಿ ಮಾರ್ಕಂಡಯ್ಯ ನದಿ ಪ್ರವಾಹದ ಜೊತೆ ದೊಡ್ಡದಾದ ಮೀನು ಒಂದು ಈಜಿಕೊಂಡು ಬಂದಿದೆ. ಸ್ಧಳೀಯರು ಈ ಮೀನಿನ ಫೋಟೋವನ್ನು ಮೊಬೈಲ್​ನಲ್ಲಿ ತೆಗೆದು ಸೋಶಿಯಲ್​ ಮೀಡಿಯಾದಲ್ಲಿ ಹಾಕಿದ್ದಾರೆ. ಆ ವೀಡಿಯೋ ಸಖತ್ ವೈರಲ್ ಆಗಿದೆ.

Read More »

ನೋಟುಗಳಂತೆ ಕಾಣುವ ಬಂಡಲ್ ತಯಾರಿಕೆ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ: ಖೋಟಾ ನೋಟಿನ ಬಂಡಲ್‌ಗಳನ್ನು ಸಿದ್ಧಪಡಿಸಿದ್ದ ಹಾಗೂ ಜನರಿಗೆ ಮೋಸ ಮಾಡಲು ಯೋಜಿಸಿದ್ದ ಆರೋಪದ ಮೇಲೆ ನಾಲ್ವರನ್ನು ಜಿಲ್ಲೆಯ ಘಟಪ್ರಭಾ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಗೋಕಾಕ ತಾಲ್ಲೂಕು ದೂಪದಾಳದ ಮಹಮದಇಸಾಕ ದೇಸಾಯಿ, ಮುನಾಫ ರಫೀಕ, ರಾಯಬಾಗ ತಾಲ್ಲೂಕು ಸಿದ್ದಾಪೂರದ ಗುಂಡು ಸದಾಶಿವ ಪಾಟೀಲ ಮತ್ತು ಗೋಕಾಕದ ಆದಿಜಾಂಬವ ನಗರದ ಮಲ್ಲಿಕಾರ್ಜುನ ಕನ್ಮಡ್ಡಿ ಬಂಧಿತರು. ಅವರಿಂದ ಪೇಪಲ್‌ ಬಂಡಲ್‌ಗಳು, ತಲಾ 2 ಕಾರ್‌ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು …

Read More »

ಬೆಳಗಾವಿ: ಮತ್ತೆ 392 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 392 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,498ಕ್ಕೆ ಏರಿದೆ. ಇಲ್ಲಿನ ವಿವಿಧ ಬಡಾವಣೆಗಳು ಮತ್ತು ತಾಲ್ಲೂಕಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ನಗರದ ಗುರುಪ್ರಸಾದ ಕಾಲೊನಿ, ವಿಶ್ವಕರ್ಮ ಕಾಲೊನಿ, ತಾಲ್ಲೂಕಿನ ಕೆಎಸ್‌ಆರ್‌ಪಿ ಮಚ್ಚೆ, ಸಾಂಬ್ರಾದ ಏರ್‌ಮನ್‌ ತರಬೇತಿ ಶಾಲೆ, ರಾಮದುರ್ಗ, ಗೋಕಾಕ, ಅಥಣಿ, ರಾಯಬಾಗ, ಖಾನಾಪುರ, ಸವದತ್ತಿ, ಬೈಲಹೊಂಗಲ ತಾಲ್ಲೂಕುಗಳಲ್ಲಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ. ಅಂಕಲಗಿ ಪೊಲೀಸ್ ಠಾಣೆಯ ಮೂವರಿಗೆ ದೃಢ‍ಪಟ್ಟಿದೆ. …

Read More »

ಬೆಳಗಾವಿ: ಪ್ರಾಣಾಪಾಯಕ್ಕೆ ಸಿಲುಕಿದ ಶ್ವಾನಗಳು

ಬೆಳಗಾವಿ: ಸತತ ಮಳೆಯಿಂದಾಗಿ ಇಲ್ಲಿನ ಬಳ್ಳಾರಿ ನಾಲಾ (ದೊಡ್ಡ ಚರಂಡಿ) ಉಕ್ಕಿ ಹರಿಯುತ್ತಿರುವುದರಿಂದ ತಾಲ್ಲೂಕಿನ ಹಲಗಾ ಸಮೀಪದ ಗದ್ದೆಯೊಂದರಲ್ಲಿನ ಶೆಡ್‌ ಜಲಾವೃತವಾಗಿದ್ದು, ಅಲ್ಲಿದ್ದ 45ಕ್ಕೂ ಹೆಚ್ಚಿನ ನಾಯಿಗಳಿಗೆ ಪ್ರಾಣಾಪಾಯ ಎದುರಾಗಿದೆ. ನಗರದ ಪ್ರಾಣಿ ಪ್ರೇಮಿಗಳಾದ ಶಂಕರ ಹಾಗೂ ಅವರ ಪುತ್ರಿ ಶ್ವೇತಾ ದೊಡ್ಡಮನಿ ಅವರು ಬೀದಿ ನಾಯಿಗಳನ್ನು ಹಿದಿಡು ತಂದು ಅಲ್ಲಿ ಸಾಕುತ್ತಿದ್ದರು. ಈಚೆಗೆ ಕೋವಿಡ್ ಲಾಕ್‌ಡೌನ್‌ ಸಂದರ್ಭದಲ್ಲಿ ಅನ್ನ-ಆಹಾರ ಸಿಗದೆ ಕಂಗಾಲಾಗಿದ್ದ ಕೆಲವು ನಾಯಿಗಳನ್ನು ಕೂಡ ಅಲ್ಲಿ ತಂದು …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ೮೭ ಕೊರೋನಾ ವರದಿಗಳು ದೃಢ

ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ೮೭ ಕೊರೋನಾ ವರದಿಗಳು ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಅವರು, ಗೋಕಾಕ ನಗರದಲ್ಲಿಯೆ ಇಂದು ಒಂದೇ ದಿನದಲ್ಲಿ ಹಾಪ್ ಸೆಂಚುರಿ ಸಮೀಪಿಸಿದ್ದು, ನಗರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದೇ ದಿನ ೪೭ ಕ್ಕೆ ಬಂದು ತಲುಪಿದೆ. ಗ್ರಾಮೀಣ ಪ್ರದೇಶ ಅಂಕಲಗಿಯಲ್ಲಿ ೧೮ ಪ್ರಕರಣಗಳು ವರದಿಯಾಗಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಮೂಡಲಗಿ …

Read More »

ಆರ್ ಟಿ ಓ ಕಚೇರಿ ರಸ್ತೆಯ ಎರಡೂ ಬದಿಗೆ ವಾಹನಗಳ ಪಾರ್ಕಿಂಗ್ ಶುಲ್ಕ ವಸೂಲಿ……

ಬೆಳಗಾವಿ- ವಾಹನಗಳ ಪಾರ್ಕಿಂಗ್ ಗೆ ಸ್ಥಳವಿಲ್ಲ,ಆದರೂ ಆರ್ ಟಿ ಓ ಕಚೇರಿ ರಸ್ತೆಯ ಎರಡೂ ಬದಿಗೆ ವಾಹನಗಳ ಪಾರ್ಕಿಂಗ್ ಮಾಡಲು ಬೆಳಗಾವಿಯ ಕಾಂಟೋನ್ಮೆಂಟ್ ಬೋರ್ಡ್ ಅನುಮತಿ ನೀಡಿದೆ. ಈ ರಸ್ತೆಯಲ್ಲಿ ಪಾರ್ಕಿಂಗ್ ಮಾಡುವ ವಾಹನಗಳಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಗುತ್ತಿಗೆದಾರನನ್ನು ನೇಮಿಸಿ.ಯಾವ ವಾಹನಕ್ಕೆ ಎಷ್ಟು ಶುಲ್ಕ ಎನ್ನುವದರ ಬಗ್ಗೆ ಆರ್ ಟಿ ಓ ಕಚೇರಿಯ ಬಳಿ ಕಾಂಟೋನ್ಮೆಂಟ್ ಬೋರ್ಡ್ ದೊಡ್ಡ ಫಲಕ ಹಾಕಿದೆ. ರಸ್ತೆಯ ಇಕ್ಕೆಲುಗಳಲ್ಲಿ ವಾಹನಗಳು ಪಾರ್ಕಿಂಗ್ …

Read More »

ಸವದತ್ತಿ ಬಳಿಯ ನವಿಲುತೀರ್ಥ ಆಣೆಕಟ್ಟೆಗೆ ಹರಿದುಬರುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಗುರುವಾರ ಧಿಡೀರ್ ಕುಸಿತ ಎಚ್ಚರಿಕೆಯಿಂದರಲೂ ಮುನ್ಸೂಚನೆ

ಬೆಳಗಾವಿ: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ ಆಣೆಕಟ್ಟೆಗೆ  ಹರಿದುಬರುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಗುರುವಾರ ಧಿಡೀರ್ ಕುಸಿತ ಉಂಟಾಗಿದೆ. ಖಾನಾಪುರ ಮತ್ತು ಬೈಲಹೊಂಗಲದ ಸುತ್ತಮುತ್ತಲೂ  ಮಳೆಯು ನಿಂತಿದ್ದು, ಬಿಸಿಲಿನ ವಾತಾವರಣ ಉಂಟಾಗಿದ್ದರಿಂದ ಒಳಹರಿವಿನಲ್ಲಿ ಗಮನಾರ್ಹ ಬದಲಾವಣೆಯಾಗಿದೆ.    ಒಟ್ಟು 37.7 ಟಿ ಎಮ್ ಸಿ  ಸಾಮರ್ಥ್ಯದ ಆಣೆಕಟ್ಟಿನಲ್ಲಿ ಸದ್ಯ 22 ಟಿ ಎಮ್ ಸಿ ನೀರಿನ ಸಂಗ್ರಹವಿದೆ.ಒಟ್ಟು 2079.5 …

Read More »

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ

ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್‍ಶಾದ್ ಮಹಾತ್ ಶ್ಲಾಘಿಸಿದರು. ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ ತಮ್ಮ ಅನನ್ಯ ಸೇವೆ ನೀಡುವ ಮೂಲಕ ಅವರ ಪ್ರೀತಿಗೆ …

Read More »