ಬೆಳಗಾವಿ

ಬೆಳಗಾವಿ; ತವರಿಗೆ ಹೋದ ಪತ್ನಿ; ಇಬ್ಬರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ಬೆಳಗಾವಿ, : ಪತ್ನಿ ತಮ್ಮನ್ನು ಬಿಟ್ಟು ತವರಿಗೆ ಹೋಗಿದ್ದರಿಂದ ಮನನೊಂದು ಇಬ್ಬರು ಮಕ್ಕಳ ಜೊತೆಗೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮ್ಮಣ್ಣ ಗಿಡ್ಡಾಳೆ (35) ಎಂಬುವರು ತಮ್ಮ ಮಕ್ಕಳಾದ ಚಿನ್ನು (2), ನಿರಂಜನ್ (10) ಅವರಿಗೆ ವಿಷ ಉಣಿಸಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ; ಉದ್ಯೋಗ ನಷ್ಟ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಹೆಂಡತಿ …

Read More »

ಲಕ್ಷ್ಮಣ ಸವದಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ: ರಮೇಶ ಜಾರಕಿಹೊಳಿ

ಬೆಳಗಾವಿ: ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ‘ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂದು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲಾಗುತ್ತಿದೆಯಲ್ಲಾ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಅಭಿಯಾನದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯಾದರೆ ಆಗಲಿ ಪಾಪ’ ಎಂದರು. ‘ಹೈಕಮಾಂಡ್‌ನವರು ಹಾಗೂ ಮುಖ್ಯಮಂತ್ರಿ ಚರ್ಚಿಸಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ‌ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ …

Read More »

ಬೆಳಗಾವಿ | ಕೋವಿಡ್-19: ‘ನೆಗೆಟಿವ್’ ಪ್ರಮಾಣವೂ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣದಿಂದಾಗಿ 29 ದಿನಗಳಲ್ಲಿ 51 ಮಂದಿ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಕ್ಯಾನ್ಸರ್, ಮಧುಮೇಹ, ವಿಷಮ ಶೀತಜ್ವರ ಮಾದರಿ ಅನಾರೋಗ್ಯ ಮೊದಲಾದ ಸಮಸ್ಯೆಗಳಿರುವವರು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಯ ಪ್ರಮಾಣ ಜಾಸ್ತಿಯಾಗಿದೆ. ಇದರೊಂದಿಗೆ ಸೋಂಕು ದೃಢಪಡುವ ಸಂಖ್ಯೆಯೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ನೆಗೆಟಿವ್ ಪ್ರಕರಣಗಳ ಸಂಖ್ಯೆಯೂ ದೊಡ್ಡ ಮಟ್ಟದಲ್ಲಿಯೇ ಇದೆ. ಸೋಮವಾರದವರೆಗೆ 40,173 ಮಂದಿಯಿಂದ ಗಂಟಲು ಅಥವಾ ಮೂಗಿನ …

Read More »

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ ಬೆಳಗಾವಿ ಜಿಲ್ಲೆಯ …

Read More »

ಕೆ.ವಿ. ರಾಜೇಂದ್ರ ವರ್ಗಾವಣೆ…

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ. ಅವರಿಂದ ತೆರವಾದ ಸ್ಥಾನಕ್ಕೆ ಎಚ್‌.ವಿ. ದರ್ಶನ್‌ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

Read More »

ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಆಗ ವೈದ್ಯರು ಕೊವಿಡ್-19 ನಿಯಮಗಳ ಪ್ರಕಾರ ಗರ್ಭಿಣಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಕೊರೊನಾ ಸೋಂಕು …

Read More »

ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ಸೋಂಕಿತರ ಮಾಹಿತಿ

ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ವೈರಸ್ ಕ್ರೌರ್ಯ ಮುಂದುವರೆದಿದೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 155 ಸೊಂಕಿತರು ಪತ್ತೆಯಾಗಿದ್ದಾರೆ.ಆದರೆ ಇವತ್ತು ಒಂದೇ ದಿನ 38 ಜನ ಡಿಸ್ಚಾರ್ಜ್. ಇಂದು ಮಹಾಮಾರಿ ವೈರಸ್ ಗೆ 6 ಜನ ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರುಗಟ್ಟಲೇ ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಸಿಂಗಲ್ ,ಡಬಲ್,ತ್ರಿಬಲ್ ಸೆಂಚ್ಯುರಿ ಬಾರಿಸಿರುವ ಈ ಒಂದೇ ದಿನ 155 ಜನರಿಗೆ ವಕ್ಕರಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿಗೆ ಸೊಂಕಿತರ ಸಂಖ್ಯೆ 2304, ಮರಣದ ಸಂಖ್ಯೆ …

Read More »

ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…

ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ‌ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …

Read More »

ಸ್ಮಾರ್ಟ್‍ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ

ಬೆಳಗಾವಿ : ಸ್ಮಾರ್ಟ್‍ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾಮಗಾರಿ ವ್ಯಾಪ್ತಿಯ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ …

Read More »

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …

Read More »