ಬೆಳಗಾವಿ: ಜಿಲ್ಲೆಯ ವಿವಿಧ 29 ಕೇಂದ್ರಗಳಲ್ಲಿ ಶುಕ್ರವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ 1,998 ವಿದ್ಯಾರ್ಥಿಗಳು ಗೈರು ಹಾಜರಾದರು. ಬೆಳಗಾವಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೆ ಒಳಪಡುವ ನಗರದ 11, ರಾಮದುರ್ಗದ ಸ್ಟೇಟ್ ಪಿಯು ಕಾಲೇಜು, ಸವದತ್ತಿಯ ಎಸ್.ಕೆ. ಪಿಯು ಕಾಲೇಜು ಹಾಗೂ ಬೈಲಹೊಂಗಲದ ಜಿಜಿಡಿ ಪಿಯು ಕಾಲೇಜಿನ ಕೇಂದ್ರಗಳಲ್ಲಿ ಬೆಳಿಗ್ಗೆ ಭೌತವಿಜ್ಞಾನ ಮತ್ತು ಮಧ್ಯಾಹ್ನ ರಸಾಯನವಿಜ್ಞಾನ ವಿಷಯದ ಪರೀಕ್ಷೆಗಳು ನಡೆದವು. ಭೌತವಿಜ್ಞಾನಕ್ಕೆ 5,316 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ …
Read More »ಕೋವಿಡ್ ನಿಯಂತ್ರಣಕ್ಕೆ ಬಿಡುಗಡೆಯಾಗಿದ್ದು ಕೇವಲ ₹ 230 ಕೋಟಿ!
ಬೆಳಗಾವಿ: ಕೋವಿಡ್ ರೋಗವನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸರ್ಕಾರ ಇದುವರೆಗೆ ಒಟ್ಟು ₹ 230.73 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಗೆ ₹ 13.97 ಕೋಟಿ ದೊರೆತಿದೆ. ಮಾಹಿತಿ ಹಕ್ಕು ಕಾರ್ಯಕರ್ತ (ಆರ್ಟಿಐ) ಸುರೇಂದ್ರ ಉಗಾರೆ ಅವರು ಮಾಹಿತಿ ಹಕ್ಕಿನಡಿ ಪಡೆದುಕೊಂಡ ಮಾಹಿತಿಯಿಂದ ಇದು ಬೆಳಕಿಗೆ ಬಂದಿದೆ. ‘ರಾಜ್ಯ ಸರ್ಕಾರ ಹೇಳುವಂತೆ ₹ 2,000 ಕೋಟಿ ಬಿಡುಗಡೆಯಾಗಿಲ್ಲ. ಇದಲ್ಲದೇ, ವಿರೋಧ ಪಕ್ಷದವರು ಹೇಳುವಂತೆ ಸಾವಿರಾರು ಕೋಟಿ ರೂಪಾಯಿಯ …
Read More »ಸತ್ಯಂಪೇಟ ಮೇಲಿನ ಪ್ರಕರಣ ರದ್ದುಪಡಿಸಲು ಆಗ್ರಹ
ಬೆಳಗಾವಿ: ‘ಕಲಬುರ್ಗಿ ಜಿಲ್ಲೆಯ ಶಹಾಪುರದ ಶರಣ ಸಾಹಿತಿ ವಿಶ್ವರಾಧ್ಯ ಸತ್ಯಂಪೇಟ ಅವರ ಮೇಲೆ ದಾಖಲಿಸಲಾದ ಪ್ರಕರಣವನ್ನು ತಕ್ಷಣ ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವ ಸೇನೆ ಹಾಗೂ ಬಸವಪರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಬಸವ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ‘ಅನುಭವಿ ಪತ್ರಕರ್ತ, ವೈಚಾರಿಕ ಚಿಂತಕ ಹಾಗೂ ಶರಣ ಸಾಹಿತಿ ವಿಶ್ವರಾಧ್ಯ ಅವರ ಮೇಲೆ ದುರುದ್ದೇಶದಿಂದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್ …
Read More »ಸುಮಾರು 5 ಗಂಟೆಗೂ ಹೆಚ್ಚು ಸಮಯ ಕೊರೋನಾ ಸೋಂಕಿತನ ಮೃತ ದೇಹವನ್ನು ಹೊರಗಿಟ್ಟು ಗೋಕಾಕ ಸರ್ಕಾರಿ ಆಸ್ಪತ್ರೆ ನಿರ್ಲಕ್ಷ
ಗೋಕಾಕ: ಸುಮಾರು 5 ಗಂಟೆಗೂ ಹೆಚ್ಚು ಸಮಯ ಕೊರೋನಾ ಸೋಂಕಿತನ ಮೃತ ದೇಹವನ್ನು ಹೊರಗಿಟ್ಟು ಗೋಕಾಕ ಸರ್ಕಾರಿ ಆಸ್ಪತ್ರೆ ನಿರ್ಲಕ್ಷ ತೋರಿದ್ದಾರೆ. ಗೋಕಾಕದಲ್ಲಿ ಇದು ಮತ್ತೊಂದು ಹೃದಯ ಕಳುಕುವ ಘಟನೆಯಾಗಿದ್ದು, ಎರಡು ದಿನಗಳ ಹಿಂದೆ ಗೋಕಾಕ ಸರಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಮೂಡಲಗಿ ಪುರಸಭೆಯ ಸಿಬ್ಬಂದಿಯಾಗಿದ್ದು ಮೃತ ದೇಹವನ್ನು ಹೊರಗಡೆ ಇಟ್ಟಿದ್ದಾರೆ. ಮೃತ ದೇಹವನ್ನು ಬೇಗನೆ ಅಂತ್ಯ ಸಂಸ್ಕಾರ ಮಾಡದೆ ಬೇಕಾಬಿಟ್ಟಿಯಾಗಿ ಮುಂಜಾನೆ …
Read More »ಕೊರೊನಾ ಸೋಂಕಿತರಿಗಾಗಿ 110 ವೆಂಟಿಲೆಟರ್ :ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಸೇಠ
ಬೆಳಗಾವಿ: ಕೊರೊನಾ ಸೋಂಕಿತರ ಆಕ್ಸಿಜನ್ ಕೊರತೆಯಿಂದ ಸಾವೀಗಿಡಾಗುತ್ತಿರುವುದರಿಂದ ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಸೇಠ 110 ಆಕ್ಸಿಜನ್ ಸಿಲಿಂಡರ್ ಗಳ ವ್ಯವಸ್ಥೆ ಮಾಡಿದ್ದು, ಜನರ ಮೆಚ್ಚುಗೆ ವ್ಯಕ್ತ ವಾಗುತ್ತಿದೆ. ನಗರದಲ್ಲಿ ಕೊರೊನಾ ಸೋಂಕಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿ.ಪಿ., ಶುಗರ್ ಕಾಯಿಲೆಯಿಂದ ಬಳಲುತ್ತಿರುವ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಡುತ್ತಿದ್ದು, ಇದರಿಂದ ಸಮಸ್ಯೆ ಅರಿತ ರಾಜು ಸೇಠ ವಿಶೇಷವಾದ ಸೌಲಭ್ಯವನ್ನು ಒದಗಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಲ್ಲಿನ ಅಂಜುಮನ್ ಹಾಲ್ ನಲ್ಲಿ 110 …
Read More »ಜಿಲ್ಲೆಯ ಸಚಿವರ ವಿರುದ್ಧ ‘ಮಂತ್ರಿಗಳು ಎಲ್ಲಿದೀರಿ ಹುಡುಕಿಕೊಡಿ’ ಎಂಬ ಅಭಿಯಾನ ಆರಂಭಿಸುವಂತೆ ಮಾಧ್ಯಮಗಳಿಗೆ ಸತೀಶ್ ಜಾರಕಿಹೊಳಿ ಸಲಹೆ
ಬೆಳಗಾವಿ: ಬೆಳಗಾವಿಯಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜಿಲ್ಲೆಯ ಸಚಿವರ ವಿರುದ್ಧ ‘ಮಂತ್ರಿಗಳು ಎಲ್ಲಿದೀರಿ ಹುಡುಕಿಕೊಡಿ’ ಎಂಬ ಅಭಿಯಾನ ಆರಂಭಿಸುವಂತೆ ಮಾಧ್ಯಮಗಳಿಗೆ ಸತೀಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು ಮಂತ್ರಿಗಳು ಎಷ್ಟು ಸಭೆ ನಡೆಸಬೇಕಾಗಿತ್ತೋ ಅಷ್ಟು ಮಾಡಿಲ್ಲ, ಜನರಿಗೆ ಸ್ಪಂದಿಸಿಲ್ಲ. ಬಹಳಷ್ಟು ಮಂತ್ರಿಗಳು ಇನ್ನೂ ಬೆಂಗಳೂರಿನಲ್ಲಿಯೇ ಇದ್ದಾರೆ. ತಮ್ಮ ಕ್ಷೇತ್ರಕ್ಕೂ ಬಂದಿಲ್ಲ, ತಮ್ಮ ಜಿಲ್ಲೆಗೂ ಬಂದಿಲ್ಲ ಇದೆಲ್ಲಾ ಜನರಿಗೂ ಗೊತ್ತು, ಜನ ತೀರ್ಮಾನ …
Read More »ಕೊರೊನಾ ನಿರ್ವಹಣೆ ಬಗ್ಗೆ ಲೆಕ್ಕ ಕೊಡುವ ವಿಚಾರದಲ್ಲಿ ಸರ್ಕಾರ ಮರೆ ಮಾಚುತ್ತಿದೆ:ಸತೀಶ್ ಜಾರಕಿಹೊಳಿ
ಬೆಳಗಾವಿ: ಕೊರೊನಾ ನಿರ್ವಹಣೆ ಬಗ್ಗೆ ಲೆಕ್ಕ ಕೊಡುವ ವಿಚಾರದಲ್ಲಿ ಸರ್ಕಾರ ಮರೆ ಮಾಚುತ್ತಿದೆ. ಈ ಬಗ್ಗೆ ಅಧಿವೇಶನದಲ್ಲಿ ಪ್ರಶ್ನಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಕೋವಿಡ್ ನಿರ್ವಹಣೆಗೆ ಕಾಂಗ್ರೆಸ್ ಕೊಡುಗೆ ಶುನ್ಯ ಎಂಬ ಸಚಿವ ಆರ್. ಅಶೋಕ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಕೊಡುಗೆ ಏನಿದೆ ಎಂಬುದಕ್ಕೆ ಉದಾಹರಣೆ ನಾನೂ ಸೇರಿ ನಮ್ಮ ಶಾಸಕರೇ ಇದ್ದಾರೆ. ಕೆಪಿಸಿಸಿ ಕೊವಿಡ ನಿರ್ವಹಣೆಯಲ್ಲಿ ತೊಡಗಿಕೊಂಡಿದೆ. ಇದೆಲ್ಲ ಅವರು ಹೇಳುವುದು ಅವಶ್ಯಕತೆಯಿಲ್ಲ. …
Read More »ಸ್ಮಾರ್ಟ್ ಇಂಡಿಯಾ ಹ್ಯಾಕ್ಥಾನ್ ಫಿನಾಲೆಗೆ ಆಯ್ಕೆ
ಚಿಕ್ಕೋಡಿ: ನಿಪ್ಪಾಣಿ ವಿ.ಎಸ್.ಎಂ. ಸೋಮಶೇಖರ್ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಎರಡು ಯೋಜನೆಗಳು ಸ್ಮಾರ್ಟ್ ಇಂಡಿಯಾ ಹ್ಯಾಕ್ಥಾನ್ 2020ರ ಗ್ರ್ಯಾಂಡ್ ಫಿನಾಲೆಗೆ ಆಯ್ಕೆಯಾಗಿವೆ. ಭಾರತ ಸರಕಾರ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಹೊಸ ದೆಹಲಿಯ ಎಐಸಿಟಿಇ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸಸ ಸ ಸ ಸಸಾಫ್ಟ್ವೇರ್ನ ವಿಶ್ವದ ಅತಿ ದೊಡ್ಡ ಮುಕ್ತ ನಾವಿನ್ಯತೆ ಮಾದರಿ ಸ್ಪರ್ಧೆಯಲ್ಲಿ ವಿಎಸ್ಎಂಎಸರ್ ಆರ್ಕೆಐಟಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದ್ದಾರೆ. ಪ್ರೊ| ಮಹಾದೇವ ಹರಕುಡೆ ಮಾರ್ಗದರ್ಶನದಲ್ಲಿ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಾದ …
Read More »ಬೆಳಗಾವಿ: ಕೊರೋನಾ ಸೋಂಕಿತರ ಅಂತ್ಯಕ್ರಿಯೆ ವೇಳೆ ಕಣ್ಣೀರು ಹಾಕಿದ ಪಾಲಿಕೆ ಅಧಿಕಾರಿ!
ಬೆಳಗಾವಿ: ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹದ ಅಂತ್ಯಕ್ರಿಯೆ ಪ್ರಕ್ರಿಯೆ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಬಸವರಾಜ ದಬಾಡೆ ಕಣ್ಣೀರು ಹಾಕಿದ ಪ್ರಸಂಗ ಇಲ್ಲಿನ ಸದಾಶಿವ ನಗರದ ಸ್ಮಶಾನಭೂಮಿಯಲ್ಲಿ ಗುರುವಾರ ನಡೆದಿದೆ. ಯಾವ ಜನ್ಮದ ಋುಣವೂ ಇಲ್ಲದ ಮೃತರ ಅಂತ್ಯಕ್ರಿಯೆಯನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದು, ಎಲ್ಲರ ಮನಕಲಕುವಂತಿದೆ. ಮೃತರ ಕುಟುಂಬಸ್ಥರು ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಂತ್ಯಕ್ರಿಯೆ ಮಾಡುವಂತೆ ಮನವಿ ಮಾಡಿದ್ದರು. ಬೆಳಗಾವಿ: ಕೊರೋನಾ ವಾರಿಯರ್ಸ್ಗೂ …
Read More »ಕೊರೊನಾ ನಿಯಂತ್ರಣಕ್ಕೆ ಜಿಲ್ಲಾವಾರು ಬಿಡುಗಡೆಯಾದ ಹಣದ ಲೆಕ್ಕ ಕೊಟ್ಟ ಸರ್ಕಾರ
ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕವನ್ನು ಸರ್ಕಾರ ಇಂದು ಬಹಿರಂಗಪಡಿಸಿದೆ. ನ್ಯಾಯವಾದಿ ಸುರೇಂದ್ರ ಉಗಾರೆ ಕೊರೊನಾ ಸಂದರ್ಭದಲ್ಲಿ ಖರ್ಚಾದ ಹಣದ ಕುರಿತು ಮಾಹಿತಿ ಕೇಳಿದ್ದರು. ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆರೋಪ ಮಾಡಿದ್ದವು. ಈ ಹಿನ್ನೆಲೆ ಸರ್ಕಾರ ಇಂದು ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕ ಕೊಟ್ಟಿದೆ. ಇದುವರೆಗೆ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲಾ …
Read More »