Breaking News

ಬೆಳಗಾವಿ

ಸವದತ್ತಿ: ತಾಲ್ಲೂಕಿನ ಹೂಲಿ ಅಜ್ಜನ ಅದ್ದೂರಿ ರಥೋತ್ಸವ

ಸವದತ್ತಿ: ತಾಲ್ಲೂಕಿನ ಹೂಲಿ ಗ್ರಾಮದ ಗುರು ಬಾಲಲೀಲಾ ಸಂಗಮೇಶ್ವರ ಸ್ವಾಮೀಜಿ 91ನೇ ಪುಣ್ಯ ಸ್ಮರಣೋತ್ಸವ ಹಾಗೂ ಹೂಲಿ ಅಜ್ಜನ ಮಠದ ಜಾತ್ರಾ ಮಹೋತ್ಸವದ ನಿಮಿತ್ತ ಗುರುವಾರ ರಥೋತ್ಸವ ಜರುಗಿತು. ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಅಲಂಕೃತ ರಥದಲ್ಲಿ ಬಾಲಲೀಲಾ ಸಂಗಮೇಶ್ವರರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ, ವಿವಿಧ ವಾದ್ಯ ಮೇಳದೊಂದಿಗೆ ಅದ್ಧೂರಿ ರಥೋತ್ಸವ ಜರುಗಿತು. ಸುತ್ತಲಿನ ಗ್ರಾಮಗಳ ಅಜ್ಜನ ಭಕ್ತರು ಆಗಮಿಸಿದ್ದರು. ಇಷ್ಟಾರ್ಥ ಸಿದ್ಧಿಗಾಗಿ ಉತ್ತತ್ತಿ, ಬಾಳೆಹಣ್ಣು ರಥಕ್ಕೆ ಎಸೆದು ಭಕ್ತಿ …

Read More »

ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿಯಲ್ಲಿ ಐದು ಕೋಟಿ ರೂಪಾಯಿ ವೆಚ್ಚದ ಚರ್ಚ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಚರ್ಚ್ ನಿರ್ಮಾಣಕ್ಕೆ ೧೭ ಗುಂಟೆ ನಿವೇಶನ ದಾನ ಮಾಡಿದ ಮರೆಪ್ಪ ಮರೆಪ್ಪಗೋಳ ದಂಪತಿ   ಮೂಡಲಗಿ- ದಿನೇ ದಿನೇ ಅಭಿವೃದ್ಧಿ ಹೊಂದುತ್ತಿರುವ ಮೂಡಲಗಿಯಂತಹ ಪಟ್ಟಣ ಪ್ರದೇಶದಲ್ಲಿ ದುಡ್ಡು ನೀಡಿದರೂ ನಿವೇಶನಗಳು ಸಿಗದ ಇಂದಿನ ದಿನಗಳಲ್ಲಿ ಚರ್ಚ ನಿರ್ಮಾಣಕ್ಕೆ ೧೭ …

Read More »

ಮೋದಿ ಮತ್ತೇ ಪ್ರಧಾನಿಯಾದರೆ ಭಾರತ ಪ್ರಪಂಚದಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವಾಗಲಿದೆ

ಗೋಕಾಕದಲ್ಲಿಂದು ಜರುಗಿದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಭಾರತವು ಮತ್ತಷ್ಟು ಗಟ್ಟಿಯಾಗಲು ನರೇಂದ್ರ ಮೋದಿಯವರು ಮತ್ತೋಮ್ಮೆ ನಮ್ಮ ರಾಷ್ಟ್ರದ ಪ್ರಧಾನಿಯಾಗಬೇಕು. ಮತ್ತೋಮ್ಮೆ ಮೋದಿಯವರಿಗಾಗಿ ಕಾರ್ಯಕರ್ತರು ಪ್ರತಿ ಮನೆ-ಮನೆ ಬಾಗಿಲಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ವಿವರಿಸಬೇಕು. ಬರುವ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು …

Read More »

ಕೃಷಿ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ

ಗೋಕಾಕ: ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಕರಕುಚ್ಚಿ ಗ್ರಾಮದಲ್ಲಿ ಮಾಡಿದರು. ವಿದ್ಯಾರ್ಥಿಗಳು ರೈತರಿಗೆ ಅಜೋಲಾ ಸಸ್ಯದ ಮಹತ್ವ ಹಾಗೂ ವಿವಿಧ ತಳಿಗಳು, ಬೆಳೆಯುವ ಹಂತಗಳು ಕುರಿತು ಮಾಹಿತಿಯನ್ನು ನೀಡಿದರು. ಪಶುವಿನ ಉತ್ತಮ ಹಾಲಿನ ಇಳುವರಿಗಾಗಿ ಪಶುಗಳಿಗೆ ಹಾಕುವ ಹಿಂಡಿಯೊಂದಿಗೆ ಅಜೋಲಾ ಮಿಶ್ರಣ ಮಾಡಿ ಉಪಯೋಗಿಸಬೇಕು.ಅಜೋಲಾ ಬೆಳೆಯುವ ವಿಧಾನ ಹಾಗೂ …

Read More »

ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕ

ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕ!! ಸ್ಥಿತಿ ಗಂಭೀರ!!! ಘಟಪ್ರಭಾ : ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕನ ಸ್ಥಿತಿ ಗಂಭೀರ ವಾಗಿದ ಘಟನೆ ಘಟಪ್ರಭಾ ರೈಲು ನಿಲ್ದಾಣದ ಮೊದಲನೆಯ ಗೆಟ್ ಹತ್ತಿರ ಸಂಭವಿಸಿದೆ.   ಹೌದು ಬೆಳಗಾವಿ ಇಂದ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ರೈಲಿನಲ್ಲಿ ಘಟಪ್ರಭಾ ಕ್ಕೆ ಹೊರಟಿದ್ದ ಪಾಮಲದಿನ್ನಿ ಗ್ರಾಮದ ಯುವಕ ವಿಠ್ಠಲ್ ಗುಜನಟ್ಟಿ (18) ಎಂಬ ಯುವಕ ರೈಲಿನಲ್ಲಿ ನಿದ್ದೆಗೆ ಜಾರಿದ್ದು ಕಣ್ಣು ತೆಗೆಯುವಷ್ಟರಲ್ಲಿ ಘಟಪ್ರಭಾ ರೈಲುನಿಲ್ದಾಣ ದಿಂದ …

Read More »

‘ವಚನ ಕಟ್ಟು ರಕ್ಷಿಸಿದ ಮಾಚಿದೇವ’

ಸವದತ್ತಿ: ‘ಹನ್ನೆರಡನೇ ಶತಮಾನದ ಬಸವಣ್ಣನವರ ಕಾಲದಲ್ಲಿನ ವಚನ ಕಟ್ಟುಗಳನ್ನು ರಕ್ಷಿಸುವಲ್ಲಿ ಮಾಚಿದೇವ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಸಕಲ ಶರಣರ ವಸ್ತ್ರಗಳನ್ನು ಶುಚಿಗೊಳಿಸುವಲ್ಲಿ ತಲ್ಲೀನರಾಗಿದ್ದರು’ ಎಂದು ತಹಶೀಲ್ದಾರ್‌ ಎಂ.ಎನ್.ಹೆಗ್ಗನ್ನವರ ಹೇಳಿದರು.‌ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಿ ಮಾತನಾಡಿದ, ವಚನಗಳ ರಕ್ಷಣೆ ವೇಳೆ ಮಾಚಿದೇವರು ವೀರಭದ್ರನ ಅವತಾರ ತಾಳಿದ್ದು ವಿಶೇಷ. ಇಂದು ಮಡಿವಾಳ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಶ್ಲಾಘನೀಯವೆಂದರು. ಶಾಸಕರ ಸಹೋದರ ಅಶ್ವತ್ ವೈದ್ಯ …

Read More »

ಇ ಗ್ರಂಥಾಲಯದಲ್ಲಿ ರೈತ ಆತ್ಮಹತ್ಯೆ

ಹುಕ್ಕೇರಿ: ಸ್ಥಳೀಯ ಕೋರ್ಟ್ ಆವರಣದಲ್ಲಿರುವ ಇ- ಗ್ರಂಥಾಲಯದ ಸಂಗ್ರಹ ಕೊಠಡಿಯಲ್ಲಿ ವಕೀಲೆಯೊಬ್ಬರ ಪತಿ, ರೈತ ಲಗಮಪ್ಪ ಹೊಸೂರಿ(48) ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ತಾಲ್ಲೂಕಿನ ನೇರ್ಲಿ ಗ್ರಾಮದವರಾದ ಲಗಮಪ್ಪ ಜಾಬಾಪುರದಲ್ಲಿ ವಾಸಿಸುತ್ತಿದ್ದರು. ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದ ಅವರು, ವಿವಿಧ ಸಂಘ ಸಂಸ್ಥೆಗಳಲ್ಲಿ ಮತ್ತು ಕೈಗಡವಾಗಿ ₹5.20 ಲಕ್ಷ ಸಾಲ ಮಾಡಿದ್ದರು’ ಎಂದು ಅವರ ಪತ್ನಿ ಅನಿತಾ ಕುಲಕರ್ಣಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ‘ಸಾಲ ತೀರಿಸಲಾಗದೆ ಬೇಸತ್ತು ಮಧ್ಯಾಹ್ನದ ವೇಳೆ …

Read More »

‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನು ಫುಟ್‌ಬಾಲ್‌ ಅಲ್ಲ: ಪ್ರಕಾಶ ಹುಕ್ಕೇರಿ

ಚಿಕ್ಕೋಡಿ: ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಇರುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನು ಫುಟ್‌ಬಾಲ್ ಅಲ್ಲ’ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಪ್ರಶ್ನಿಸಿದರು.   ತಾಲ್ಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘2014ರಲ್ಲಿ ರಾಜ್ಯದಲ್ಲಿ ಸಚಿವನಾಗಿದ್ದ ವೇಳೆ ಒಮ್ಮೆ ಒದ್ದರು, ದೆಹಲಿಗೆ ಹೋಗಿ ಬಿದ್ದೆ. ಅಲ್ಲಿಂದ ಒದ್ದರು, ವಿಧಾನ ಪರಿಷತ್‌ಗೆ ಬಂದೆ. ಈಗ ಮತ್ತೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರು ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು. ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು …

Read More »

ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಟಾಪನೆಯಾಗಿದ್ದು,ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ ಎಂದು ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ಮೂಡಲಗಿ ತಾಲ್ಲೂಕಿನ ಕಲ್ಲೋಳಿ ಪಟ್ಟಣದ ರಾಮ ಮಂದಿರ ಮತ್ತು ಮಾರುತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು, ಇಂದು ಭಾರತದ ಚರಿತ್ರೆಯಲ್ಲಿಯೇ ಈ ದಿನ ಸುವರ್ಣಾಕ್ಷರಗಳಿಂದ ಬರೆದಿಡುವ ಐತಿಹಾಸಿಕ ದಿನವಾಗಿದೆ ಎಂದು …

Read More »