Breaking News
Home / ಜಿಲ್ಲೆ / ಬೆಳಗಾವಿ (page 460)

ಬೆಳಗಾವಿ

ಲಾಕ್‌ಡೌನ್ ಸಂಕಷ್ಟದಲ್ಲಿರುವ ಜನರಿಗೆ ಆಹಾರ ಧಾನ್ಯ ಕಿಟ್ ವಿತರಣಾ ಕಾರ್ಯಕ್ರಮ: ಶಾಸಕ ಸತೀಶ ಜಾರಕಿಹೊಳಿ

ಯಮಕನಮರಡಿ: ಲಾಕ್‌ಡೌನ್ ಸಂಕಷ್ಟದಲ್ಲಿರುವ ಜನರಿಗೆ ಆಹಾರ ಧಾನ್ಯ ಕಿಟ್ ವಿತರಣಾ ಕಾರ್ಯಕ್ರಮವನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಸತೀಶ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಸುಮಾರು ಏಳು ನೂರು ಬಡಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಿಸುವ ಕಾರ್ಯಕ್ರವನ್ನು ಇಲ್ಲಿನ ಗುರುಸಿದ್ಧ ಮಹಾಸ್ವಾಮಿಗಳ‌ ಸಭಾಭವನದಲ್ಲಿ ಶ್ರೀ ರಾಚ್ಯೋಟಿ ಶ್ರೀಗಳ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬಡಜನರ ಸಂಕಷ್ಟಕ್ಕೆ ನೆರವಾಗುವ ಈ ಕಾರ್ಯಕ್ಕೆ ಜನ ಕೆಪಿಸಿಸಿ ಕಾರ್ಯಾಧ್ಯಕ್ಷ ಕೂಡ ಆದ ಸತೀಶ …

Read More »

ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಸುಮಾರು 84500 ಕುಟುಂಬಗಳಿಗೆ ಹಸಿದವರಿಗೆ ಅನ್ನ ನೀಡಿದ ಮಹಾನ್ ದಾನಿಯಾಗಿದ್ದಾರೆ.

ಗೋಕಾಕ : ಜಗತ್ತಿನಾದ್ಯಂತ ಕಾಡುತ್ತಿರುವ ಕೊರೊನಾ ವಿರುದ್ಧ ಸಮರ ಸಾರುತ್ತಿರುವ ಕೊರೊನಾ ವಾರಿಯರ್ಸ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸುವಂತೆ ಯುವ ಮುಖಂಡ ನಾಗೇಶ ಶೇಖರಗೋಳ ಹೇಳಿದರು. ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತ ವಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಗ್ರಾಮಸ್ಥರು ಹಮ್ಮಿಕೊಂಡಿದ್ದ ಕೊರೊನಾ ವೈರಸ್ ವಾರಿಯರ್ಸ್ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ- ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ …

Read More »

ಇದೀಗ ಇಂದು ಮಧ್ಯಾಹ್ನದ ಹೆಲ್ತ್ ಬುಲಿಟಿನ್ ಬಿಡುಗಡೆ ಬೆಳಗಾವಿ ರಿಲೀಫ್..

ಬೆಂಗಳೂರು – ಇದೀಗ ಇಂದು ಮಧ್ಯಾಹ್ನದ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು 19 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಬಾಗಲಕೋಟೆಯ ಬಾದಾಮಿಯಲ್ಲಿ 13, ದಕ್ಷಿಣ ಕನ್ನಡದಲ್ಲಿ 3 ಜನರಿಗೆ ಹಾಗೂ ಬೆಂಗಳೂರಿನಲ್ಲಿ ಇಬ್ಬರಿಗೆ, ಕಲಬುರಗಿಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಮಂಗಳೂರಿನಲ್ಲಿ 16 ವರ್ಷದ ಯುವತಿ ಹಾಗೂ ಆಕೆಯ ತಾಯಿಗೆ ಸೋಂಕು ಪತ್ತೆಯಾಗಿದೆ. ಬಾದಾಮಿಯಲ್ಲಿ ಒಬ್ಬರಿಂದಲೇ 12 ಜನರಿಗೆ ಸೋಂಕು ಹರಡಿದೆ

Read More »

ಜಿಲ್ಲಾಧಿಕಾರಿ ನಿವಾಸದ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಜಿಲ್ಲಾಧಿಕಾರಿ ನಿವಾಸದ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದ ಮುಖ್ಯದ್ವಾರದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೋಲೀಸ್ ಪೇದೆಯೊಬ್ಬ ಸಕ್ಯುರಿಟಿಗೆ ನೀಡಲಾಗಿದ್ದ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪ್ರಕಾಶ ಗುರುವಣ್ಣವರ (35) ಆತ್ಮತ್ಯೆ ಮಾಡಿಕೊಂಡ ಪೇದೆಯಾಗಿದ್ದು. ಕಿತ್ತೂರು ಸಮೀಪದ ಅಂಬಡಗಟ್ಟಿ ಗ್ರಾಮದವರಾಗಿದ್ದಾರೆ. ಇವರು ಮನೋವ್ಯಾದಿಯಿಂದ ಬಳಲುತ್ತಿದ್ದರು,ಅದರ ಉಪಚಾರವನ್ನು ಪಡೆಯುತ್ತಿದ್ದರು. ನಿನ್ನೆ ರಾತ್ರಿ ಇವರ ಮನೆಯವರು ಸ್ಮಾರ್ಟ್ ಫೋನ್ ಕಸಿದುಕೊಂಡು ಸಾದಾ ಫೋನ್ ನೀಡಿದ್ದಕ್ಕಾಗಿ …

Read More »

ಬೆಳಗಾವಿ:ಸರ್ಕಾರ ಮಾಡಲಾಗದ ಕೆಲಸಕ್ಕೆ ಗ್ರಾಮಸ್ಥರು ಕೈ ಹಾಕಿದ್ದು, ರಸ್ತೆ ಕೆಲಸ ಮುಗಿಸಿ ಇತರರಿಗೂ ಮಾದರಿ ಆಗಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ತಬ್ಲಿಘಿಗಳಿಂದಾಗಿ ಒಮ್ಮಿಂದೊಮ್ಮೆಲೆ ಕೊರೊನಾ ಸೋಂಕಿತರ ಸಂಖ್ಯೆ ಡಬಲ್ ಆಗಿದೆ. ಆದರೆ ಇದರ ನಡುವೆ ಬೆಳಗಾವಿಯಲ್ಲಿ ಸಂತಸದ ಸುದ್ದಿಯೊಂದಿದೆ. ಹೌದು. ಒಂದು ತಿಂಗಳ ಲಾಕ್ ಡೌನ್ ಸಮಯವನ್ನು ಉಪಯೋಗಿಸಿಕೊಂಡ ಬೆಳಗಾವಿಯ ಮಾರಿಹಾಳ ಗ್ರಾಮಸ್ಥರಿಗೆ ರಸ್ತೆ ನಿರ್ಮಿಸೋದು ಅವಶ್ಯಕವಿತ್ತು. ಆದರೆ ಹಳ್ಳಿಯನ್ನೂ ಬಿಡದ ಈ ಮಹಾಮಾರಿ ಕೊರೊನಾದಿಂದ ಯಾವುದೇ ಕೆಲಸ ಆಗ್ತಿರಲಿಲ್ಲ. ಇದೀಗ ಸರ್ಕಾರ ಮಾಡಲಾಗದ ಕೆಲಸಕ್ಕೆ ಗ್ರಾಮಸ್ಥರು ಕೈ ಹಾಕಿದ್ದು, ರಸ್ತೆ ಕೆಲಸ ಮುಗಿಸಿ ಇತರರಿಗೂ ಮಾದರಿ ಆಗಿದ್ದಾರೆ. …

Read More »

ಆಸ್ಪತ್ರೆ ಆರಂಭಿಸಿ ಚಿಕಿತ್ಸೆ ನೀಡದಿದ್ದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ

ಬೆಳಗಾವಿ, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೆ.ಪಿ.ಎಂ.ಇ. ಕಾಯ್ದೆ ಅಡಿ ನೋಂದಣಿಯಾಗಿರುವ ಎಲ್ಲ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳು ತಕ್ಷಣವೇ ಆಸ್ಪತ್ರೆಗಳನ್ನು ಆರಂಭಿಸಿ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು. ಒಂದು ವೇಳೆ ಜನರಿಗೆ ವೈದ್ಯಕೀಯ ಸೇವೆ ನೀಡದಿದ್ದರೆ ಲೈಸೆನ್ಸ್ ರದ್ದುಪಡಿಸುವುದರ ಜತೆಗೆ ಸೂಕ್ತ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಕೋವಿಡ್ ಹೊರತುಪಡಿಸಿ ಇತರೆ …

Read More »

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 34 ಜನರು ಗುಣಮುಖ

ಬೆಳಗಾವಿ: ಕೊರೊನಾ ಸೋಂಕು ತಗುಲಿದ್ದ  ಒಬ್ಬ ಮಹಿಳೆಯು ಸೇರಿದಂತೆ ಒಟ್ಟು 8 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ರಾಯಬಾಗ ತಾಲ್ಲೂಕು ಕುಡಚಿಯ 5 ಜನರು ಮತ್ತು ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ:  ಪಿ-224 ಪಿ-225 ಪಿ-243 ಪಿ-244 ಪಿ-245 ಪಿ-289 ಪಿ-294 …

Read More »

ಚಿಕ್ಕೋಡಿ:ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ

ಚಿಕ್ಕೋಡಿ: ತಾಲ್ಲೂಕಿನ ಯಕ್ಸಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಅವರಿಗೆ ಮನವಿ ಸಲ್ಲಿಸಿದರು. ಯಕ್ಸಂಬಾದ ಸಮೂದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ ಪೂಗತ್ಯಾನಟ್ಟಿ ಇವರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಬಂದ ಶಮನೇವಾಡಿಯ ಸಂಜೀವಕುಮಾರ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನಾಳೆಯಿಂದ ಜಿಲ್ಲೆಯಾದ್ಯಂತ ಸಂಚರಿಸಿ ಜನರ ಅಹವಾಲು ಸ್ವೀಕರಿಸಲಿದ್ದಾರೆ.

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನಾಳೆಯಿಂದ ಜಿಲ್ಲೆಯಾದ್ಯಂತ ಸಂಚರಿಸಿ ಜನರ ಅಹವಾಲು ಸ್ವೀಕರಿಸಲಿದ್ದಾರೆ. ನಾಳೆ ದಿ. 6 ರಂದು ಸ್ವ ಕ್ಷೇತ್ರ ಯಮಕನಮರಡಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಭೇಟಿ ನೀಡಲಿದ್ದಾರೆ. ದಿ.7 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ ಲಭ್ಯವಿರುವ ಅವರು ಖಾನಾಪೂರ ತಾಲೂಕಿನ ಇಟಗಿಯಲ್ಲಿ ಬೆಳಿಗ್ಗೆ 11 ಗಂಟೆಗೆ, ಹಿರೇಮುನ್ನೋಳ್ಳಿಯಲ್ಲಿ 11.30 ಗಂಟೆಗೆ, ಪಾರೀಶ್ವಾಡದಲ್ಲಿ12 ಗಂಟೆಗೆ ಮತ್ತು 12.30. ಗಂಟೆಗೆ ಹಿರೇಹಟ್ಟಿಹೋಳಿಯಲ್ಲಿ ಭೇಟಿ ನೀಡಿ ಜನರ …

Read More »

ಲಕ್ಷ್ಮಿ ತಾಯಿ ಫೌಂಡೇಶನ್ನಿಂದ ನಿರಂತರ ಸೇವೆ..:ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಲಕ್ಷ್ಮಿ ತಾಯಿ ಫೌಂಡೇಶನ್ ಹಿಂದಿನಿಂದಲೂ ಬಡವರ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದು, ಇದು ನಿರಂತರವಾಗಿ ಮುಂದುವರಿಯಲಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರ್ಕಂಡೇಯ ನಗರ, ವಾಲ್ಮೀಕಿ ನಗರ ಹಾಗೂ ಕಲ್ಯಾಣಹಟ್ಟಿ ಪ್ರದೇಶಗಳ ಕೂಲಿ ಕಾರ್ಮಿಕರಿಗೆ, ಬಡ ಜನರಿಗೆ ಹಾಗೂ ನಿರ್ಗತಿಕರಿಗೆ ರೇಷನ್ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.  ಲಕ್ಷ್ಮಿ ತಾಯಿ ಫೌಂಡೇಶನ್ ಕೇವಲ ಕೊರೋನಾ ಸಂದರ್ಭದಲ್ಲಿ ಜನರ ಸೇವೆ ಮಾಡುತ್ತಿಲ್ಲ. ಈ …

Read More »