.ನವದೆಹಲಿ: ಕಳೆದ ಎರಡು ದಿನಗಳಿಂದ ಯುವತಿಯ ಬ್ಯಾಕ್‍ಫ್ಲಿಪ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಸೀರೆ ಧರಿಸಿ ಮಾಡಿರುವ ಕಸರತ್ತು ಕಂಡ ನೆಟ್ಟಿಗರು ಮೆಚ್ಚುಗೆ ಸೂಚಿಸಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಕ್‍ಫ್ಲಿಪ್ ಮಾಡಿರುವ ಯುವತಿಯ ಹೆಸರು ಮಿಲಿ ಸರ್ಕಾರ. ಈ ಬ್ಯಾಕ್‍ಫ್ಲಿಪ್ ಸೇರಿದಂತೆ ಹಲವು ಕಸರತ್ತಿನ ವೀಡಿಯೋಗಳನ್ನು ಮಿಲಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಮಿಲಿ ಓರ್ವ ಯೋಗಾಪಟು, ಕಟೆಂಪರಿ, ಡ್ಯಾನ್ಸರ್ ಆಗಿದ್ದಾರೆ. ಬಾಲಿವುಡ್ ನಟ ಟೈಗರ್ ಶ್ರಾಫ್ ಸಹ …
Read More »ಗೋಕಾಕ್ ಫಾಲ್ಸ್ ಬಳಿ ನವಜಾತ ಗಂಡು ಶಿಸುವೊಂದು ಪತ್ತೆ
ಗೋಕಾಕ್: ಗೋಕಾಕ್ ಫಾಲ್ಸ್ ಬಳಿ ನವಜಾತ ಗಂಡು ಶಿಸುವೊಂದು ಪತ್ತೆಯಾಗಿದೆ. ಗೋಕಾಕ ಫಾಲ್ಸ್ ಸಮೀಪದ ರಸ್ತೆ ಪಕ್ಕದಲ್ಲಿ ಅಂದಾಜು 3 ದಿನದ ನವಜಾತ ಗಂಡು ಶಿಶುವನ್ನು ಬಿಟ್ಟು ಹೋಗಲಾಗಿದೆ. ನವ್ಹೆಂಬರ್ 26 ರಂದು, ಗುರುವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಶಿಶು ಪತ್ತೆಯಾಗಿದೆ. ಶಿಶುವನ್ನು ಸ್ಥಳಿಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿ ರಕ್ಷಣೆ ಮಾಡಿ ಬೆಳಗಾವಿಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ …
Read More »B.S.Y. ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟವಾಗಿದೆ. ಶುಕ್ರವಾರ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆ ಮತ್ತು ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಆಗಮಿಸಲಿದ್ದಾರೆ. ಶುಕ್ರವಾರ ಮಧ್ಯಾಹ್ನ 3.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, ರಾತ್ರಿ 7.30ಕ್ಕೆ ಯು.ಕೆ.27 ಹೊಟೆಲ್ ನಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು. ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿರುವ ಯಡಿಯೂರಪ್ಪ ಶನಿವಾರ ಬೆಳಗ್ಗೆ 10 …
Read More »ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ
ಬೆಳಗಾವಿ: ‘ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ ಕೇಳಿ ಬಂದಿದೆ. ಕೊರೊನಾ ಕಾರಣದಿಂದ ಹೊರಗಿನ ಆಹಾರ ಪೂರೈಸದಂತೆ ಸರ್ಕಾರ ನಿರ್ದೇಶನ ನೀಡಿದೆ. ಸಂಬಂಧಿಕರ ಭೇಟಿಗೂ ಸಹ ಅವಕಾಶ ವಿಲ್ಲ. ಆದೆರ ಕೈದಿಗಳಿಗೆ ಹೊರಗಿನವರು ಅಧಿಕಾರಿಗಳ ಸಹಾಯದಿಂದ ಆಹಾರ ತಂದು ಕೊಡಲಾಗುತ್ತದೆ ಎಂದು ದೂರು …
Read More »ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಇತ್ತೀಚೆಗೆ ಕೋವಿಡ್ ಗೆ ಬಲಿಯಾದ ಬೆಳಗಾವಿ ಜಿಲ್ಲೆಯ ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಈ ನೆರವು ಮಂಜೂರು ಮಾಡಲಾಗಿದೆ. ಪತ್ರಕರ್ತ ಮಲ್ಲಪ್ಪ ರಾಮದುರ್ಗ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಬೆಳಗಾವಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ರಾಜ್ಯ ಸಂಘದ ಉಪಾಧ್ಯಕ್ಷ ಪುಂಡಲಿಕ …
Read More »ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಎಂದು ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿ
ಖಾನಾಪುರ: ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೀಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೆಹೇಕ್ ಶಕೀಲ್ ಸಂಗೊಳ್ಳಿ (19) ಮೃತ ವಿದ್ಯಾರ್ಥಿನಿ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಮಾಡುತ್ತಿದ್ದ ಮೆಹೇಕ್ ಶಕೀಲ್ ಪ್ರಥಮ ವರ್ಷ ಮುಗಿಸಿದ್ದರು. ‘ಕೂಲಿ ಮಾಡುತ್ತಿರುವ ನಾವು ಈ ವರ್ಷ ಕೋವಿಡ್-19 ಸಂಕಷ್ಟದಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದ್ದರಿಂದ ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಇದರಿಂದ ನೊಂದು …
Read More »ರಮೇಶ್ ಜಾರಕಿಹೊಳಿ ಅವರ ಸವಾಲಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿರುಗೇಟು
ಬೆಳಗಾವಿ: ಮಹದಾಯಿ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾನೂನುಬಾಹಿರವಾಗಿ ನಡೆದುಕೊಂಡಿಲ್ಲ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸವಾಲಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿರುಗೇಟು ನೀಡಿದ್ದಾರೆ. ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕ ಕಾನೂನು ಬಾಹಿರವಾಗಿ ನಡೆದುಕೊಂಡಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ದೂರಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಗೋವಾ ಸಿಎಂ, ಮಹದಾಯಿ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಕಾಮಗಾರಿ ಆರಂಭಿಸಿದ ಬಗ್ಗೆ …
Read More »ರಾಜ್ಯದ ಹಿತದಿಂದ ಈ ಕುರಿತು ಮಾಧ್ಯಮಗಳಲ್ಲಿ ಮಾತನಾಡುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ
ಬೆಳಗಾವಿ : ಮಹದಾಯಿ ವಿಚಾರದಲ್ಲಿ ಕಾನೂನು ಬದ್ಧವಾಗಿ ನಾವು ನಮ್ಮ ಸರ್ಕಾರ ತಯಾರಿದ್ದು, ನಮ್ಮ ರಾಜ್ಯದ ಹಿತದಿಂದ ಈ ಕುರಿತು ಮಾಧ್ಯಮಗಳಲ್ಲಿ ಮಾತನಾಡುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರ ಹೇಳಿಕೆ ಕುರಿತು ಮಂಗಳವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಗೋವಾದವರು ಯಾವುದೇ ರೂಪದಲ್ಲಿ ಬಂದರೂ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ. ಪಾಪ ಅವರಿಗೆ ಅನಿವಾರ್ಯವಿದೆ. …
Read More »ಬೆಳಗಾವಿಯಲ್ಲಿ ಎಲ್ಲರ ಗಮನ ಸೆಳೆದ ಪೊಲೀಸರ ಸೈಕಲ್ ಜಾಥಾ
ಬೆಳಗಾವಿ: ಕೆಎಸ್‍ಆರ್ ಪಿ ಉತ್ಸವದ ಅಂಗವಾಗಿ ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ನಡೆಯಿತು. ಹಿರಿಯ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಸೈಕಲ್ ಓಡಿಸಿ ಎಲ್ಲರ ಗಮನ ಸೆಳೆದರು. ಅನೇಕ ಪೊಲೀಸ್ ಅಧಿಕಾರಿಗಳು ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದರು. ಇಂದು ಬೆಳಗ್ಗೆ ಬೆಳಗಾವಿಯ ಸುವರ್ಣ ಸೌಧದಿಂದ ಪ್ರಾರಂಭವಾದ ಸೈಕಲ್ ಜಾಥಾ ಬೆಳಗಾವಿಯ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆಯಿತು. ಸೈಕಲ್ ಜಾಥಾದಲ್ಲಿ ಬೆಳಗಾವಿ ಪೊಲೀಸ್ …
Read More »ನೆಲಸಮಗೊಳಿಸಿರುವ ಬಡವರ ಮನೆ ನಿರ್ಮಿಸಿ ಕೊಡಿ : ಅಶೋಕ ಪೂಜಾರಿ
ಗೋಕಾಕ : ತಾಲ್ಲೂಕಿನ ಧುಪದಾಳ ಗ್ರಾಮದಲ್ಲಿ ನೆಲಸಮ ಮಾಡಿದ ಬಡವರ ಮನೆಗಳನ್ನು ಸರ್ಕಾರದಿಂದ ಶೀಘ್ರದಲ್ಲಿ ಮರು ನಿರ್ಮಾಣ ಮಾಡಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧುಪದಾಳ( ನವಿಲಮಾಳ) ಸಮೀಪದಲ್ಲಿರುವ ಸರ್ವೆ ನಂ.173/1ರಲ್ಲಿ 140 ಎಕರೆ ಜಮೀನು ಪಾಳು ಬಿದ್ದಿದೆ. ಈ ಜಾಗದಲ್ಲಿ ವಸತಿ ರಹಿತ ಬಡವರು, ಕೂಲಿ ಕಾರ್ಮಿಕರು , ಗೋಕಾಕ್ ಮಿಲ್ ಕಾರ್ಮಿಕರು ಸುಮಾರು 8 ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದಾರೆ. …
Read More »
Laxmi News 24×7